ಪುತ್ತೂರು
ಚಿಣ್ಣರ ಬಣ್ಣ – 2023: ಅ 29ರಂದು ಒಂದರಿಂದ 10ನೇ ತರಗತಿ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ
ಉದಯವಾಣಿ ಪತ್ರಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ ಆರ್ಟಿಸ್ಟ್ ಫೋರಂ (ರಿ.), ಉಡುಪಿ ಒಂದರಿಂದ ಎಸ್‌ಎಸ್‌ಎಲ್‌ಸಿಯವರೆಗಿನ ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ ಚಿಣ್ಣರ ಬಣ್ಣ – 2023 ಅನ್ನು ಆಯೋಜಿಸಿದೆ. ಅಕ್ಟೋಬರ್ 29 ರಂದು ಪುತ್ತೂರಿನ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸಭಾಭವನದಲ್ಲಿ ಸಂಜೆ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ.
ಸ್ಪರ್ಧೆಯ ವಿಷಯ :
1 ರಿಂದ 3ನೇ ತರಗತಿ – ಐಚ್ಚಿಕ
4ರಿಂದ 7ನೇ ತರಗತಿ – ಐಚ್ಚಿಕ
8ರಿಂದ 10ನೇ ತರಗತಿ – ಸ್ಥಳದಲ್ಲಿ ತಿಳಿಸಲಾಗುವುದು.
*ಸ್ಪರ್ಧೆಗೆ ಸ್ಥಳದಲ್ಲೇ ನೊಂದಾವಣೆ
*ಡ್ರಾಯಿಂಗ್ ಶೀಟ್ ಒದಗಿಸಲಾಗುವುದು
*ಚಿತ್ರಕಲೆಗೆ ಸಂಬಂಧಪಟ್ಟ ಪರಿಕರಗಳನ್ನು ಸ್ಪರ್ಧಿಗಳೇ ತರಬೇಕು.
*ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಸ್ಪರ್ಧಾ ಪ್ರಮಾಣ ಪತ್ರದೊಂದಿಗೆ ಗಿಫ್ಟ್ ಹ್ಯಾಂಪರ್ ನೀಡಲಾಗುವುದು.
ಪ್ರತಿ ವಿಭಾಗಗಳಲ್ಲೂ ಪ್ರಥಮ, ದ್ವಿತೀಯ, ತೃತೀಯ ಹಾಗೂ ಪ್ರೋತ್ಸಾಹಕ ಬಹುಮಾನ ನೀಡಲಾಗುವುದು.
*ಬಹುಮಾನ ನಗದು, ಫಲಕ ಹಾಗೂ ಪ್ರಶಸ್ತಿ ಪತ್ರಗಳನ್ನು ಒಳಗೊಂಡಿರುತ್ತದೆ.

*ತಾಲೂಕು ಮಟ್ಟದ ಸ್ಪರ್ಧೆಗಳ ಫಲಿತಾಂಶ ಹಾಗೂ ಬಹುಮಾನ ವಿಜೇತರ ಚಿತ್ರಗಳನ್ನು ಉದಯವಾಣಿ’ ದಿನಪತ್ರಿಕೆಯಲ್ಲಿ ಪ್ರಕಟಿಸಲಾಗುವುದು.
ಮಾಹಿತಿಗಾಗಿ:
9902013647, 9900447874
ಬಿಗ್ ನ್ಯೂಸ್
Puttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು: ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು ಸರ್ಕಾರಿ ವೈದ್ಯಕೀಯ ಕಾಲೇಜಿನ ಜತೆಗೆ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಘಟಕಗಳನ್ನೂ ಸ್ಥಾಪಿಸುವ ಮೂಲಕ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಬೇಕು ಎಂಬುದು ಸಮಿತಿಯ ಆಶಯವಾಗಿದೆ.
ಈ ಕುರಿತು ಸೋಮವಾರ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅಭಿಯಾನದ ಉದ್ದೇಶ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಲಾಯಿತು.
120 ಎಕರೆ ಸರ್ಕಾರಿ ಜಮೀನಿನತ್ತ ಗಮನ
ಆಸ್ಪತ್ರೆಗಳ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ಜಮೀನು ಗುರುತಿಸುವ ಪ್ರಕ್ರಿಯೆಗೆ ಸಮಿತಿ ಆದ್ಯತೆ ನೀಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿರುವ ಸೇಡಿಯಾಪು ಪ್ರದೇಶದ ಸಮೀಪ ಸುಮಾರು 120 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಆರ್ಯಾಪು ಗ್ರಾಮದಲ್ಲಿಯೂ ಸುಮಾರು 88 ಎಕರೆ ಜಾಗ ಗುರುತಿಸಲಾಗಿದೆ. ಸೂಕ್ತ ಸ್ಥಳ ಆಯ್ಕೆ ಮಾಡಿ ಆಸ್ಪತ್ರೆಗಳ ಘಟಕಗಳಿಗೆ ಜಮೀನು ಮೀಸಲಿಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಸಮಿತಿಯ ಸಂಚಾಲಕ ಅಮಳ ರಾಮಚಂದ್ರ ತಿಳಿಸಿದ್ದಾರೆ.
ಸಮನ್ವಯದ ಚಿಕಿತ್ಸೆಗೆ ಅವಕಾಶ
ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಸಾಮೆತ್ತಡ್ಕದ ಡಾ. ಸಂದೀಪ್ ನಾಯಕ್ ಮಾತನಾಡಿ, ‘ಒಂದೇ ಆವರಣದಲ್ಲಿ ಹಲವು ಸಂಸ್ಥೆಗಳು, ಸಮನ್ವಯದ ಚಿಕಿತ್ಸೆ’ ಎಂಬ ಪರಿಕಲ್ಪನೆಯೊಂದಿಗೆ ಅಭಿಯಾನ ರೂಪಿಸಲಾಗಿದೆ ಎಂದರು.
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ತಜ್ಞರು ಸಮನ್ವಯದಿಂದ ಕಾರ್ಯನಿರ್ವಹಿಸಲು ಇಂತಹ ವ್ಯವಸ್ಥೆ ನೆರವಾಗಲಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ದೂರದ ನಗರಗಳಿಗೆ ಕರೆದೊಯ್ಯುವ ಅಗತ್ಯವೂ ಕಡಿಮೆಯಾಗಬಹುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಣತಿ ಗಳಿಸಲು ಅವಕಾಶ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ವೈದ್ಯಕೀಯ ಕಾಲೇಜಿನೊಂದಿಗೆ ಸಂಶೋಧನಾ ಕೇಂದ್ರ, ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ವೃದ್ಧಾಪ್ಯ ಆರೈಕೆ ಕೇಂದ್ರಗಳನ್ನೂ ಸ್ಥಾಪಿಸಬೇಕು. ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಸೀಟು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.
ಸರ್ಕಾರಿ ಸ್ವಾಮ್ಯಕ್ಕೆ ಒತ್ತು
ವೈದ್ಯಕೀಯ ಕಾಲೇಜು ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರಿಯಬೇಕು. ಅಗತ್ಯ ಅನುದಾನ, ವೈದ್ಯಕೀಯ ಸೌಲಭ್ಯ ಹಾಗೂ ಸಿಬ್ಬಂದಿ ನೇಮಕಾತಿಯನ್ನು ಸರ್ಕಾರ ಖಚಿತಪಡಿಸಬೇಕು. ಹೋರಾಟ ರಾಜಕೀಯೇತರ ಮತ್ತು ಜಾತ್ಯತೀತ ನೆಲೆಯಲ್ಲಿ ಮುಂದುವರಿಯಬೇಕು ಎಂಬುದು ಸಮಿತಿಯ ನಿಲುವಾಗಿದೆ.
ಹಿರಿಯ ವೈದ್ಯಕೀಯ ಕಾಲೇಜು ಹೋರಾಟಗಾರ ದಿನೇಶ್ ಭಟ್ ಕೆ. ಮಾತನಾಡಿ, ಪುತ್ತೂರಿನಲ್ಲಿ ಉನ್ನತ ಆರೋಗ್ಯ ಸೇವೆಗಳ ಅಭಿವೃದ್ಧಿ ಅಗತ್ಯ ಎಂದರು. ಸುಳ್ಯ, ವಿಟ್ಲ, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬ ಭಾಗದ ಜನರಿಗೂ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂಬುದು ಸಮಿತಿಯ ಆಶಯವಾಗಿದೆ.
ಸಭೆಯಲ್ಲಿ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಉಪಾಧ್ಯಕ್ಷ ವಿಶ್ವಪ್ರಸಾದ್ ಸೇಡಿಯಾಪು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಫುಡೀಪ್ರಿನಿಯರ್’: ಆಹಾರದಿಂದ ಉದ್ಯಮದತ್ತ ವಿದ್ಯಾರ್ಥಿಗಳ ಹೆಜ್ಜೆ; ‘ಟೇಸ್ಟ್ ದಿ ಫ್ಯೂಚರ್’ ಮೂಲಕ ಸೃಜನಶೀಲತೆ, ರುಚಿ ಮತ್ತು ಉದ್ಯಮಶೀಲತೆಯ ಸಂಗಮ
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ವತಿಯಿಂದ ‘ಫುಡೀಪ್ರಿನಿಯರ್–ಟೇಸ್ಟ್ ದಿ ಫ್ಯೂಚರ್’ ಎಂಬ ವಿಶಿಷ್ಟ ಉದ್ಯಮಶೀಲತಾ ಕಾರ್ಯಕ್ರಮವನ್ನು ಅ. 6 ರಂದು ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಪುತ್ತೂರು: ಆಹಾರವನ್ನು ಕೇವಲ ರುಚಿಯ ಅನುಭವಕ್ಕೆ ಸೀಮಿತಗೊಳಿಸದೆ, ಸೃಜನಶೀಲತೆ, ನವೀನತೆ ಹಾಗೂ ಉದ್ಯಮಶೀಲತೆಯ ಅವಕಾಶವಾಗಿ ಪರಿವರ್ತಿಸುವ ಉದ್ದೇಶದಿಂದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ವತಿಯಿಂದ ‘ಫುಡೀಪ್ರಿನಿಯರ್–ಟೇಸ್ಟ್ ದಿ ಫ್ಯೂಚರ್’ ಎಂಬ ವಿಶಿಷ್ಟ ಉದ್ಯಮಶೀಲತಾ ಕಾರ್ಯಕ್ರಮವನ್ನು ಅ. 6 ರಂದು ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಆಹಾರ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಉದ್ಯಮಾವಕಾಶಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದರೊಂದಿಗೆ, ಸಣ್ಣ ಆಲೋಚನೆಯನ್ನು ಉತ್ಪನ್ನವಾಗಿ, ಉತ್ಪನ್ನವನ್ನು ಬ್ರ್ಯಾಂಡ್ ಆಗಿ ಹಾಗೂ ಬ್ರ್ಯಾಂಡ್ ಅನ್ನು ಯಶಸ್ವಿ ಉದ್ಯಮವಾಗಿ ರೂಪಿಸುವ ಚಿಂತನೆ ಬೆಳೆಸುವ ಉದ್ದೇಶದಿಂದ. ಆಹಾರ ತಯಾರಿಕೆ, ಪ್ರಸ್ತುತಿ, ಗ್ರಾಹಕರ ಆಕರ್ಷಣೆ, ಮಾರುಕಟ್ಟೆ ಹಾಗೂ ಉದ್ಯಮದ ಸಾಧ್ಯತೆಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಒದಗಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಉದ್ಯೋಗಕ್ಕಾಗಿ ಕಾಯದೆ, ತಮ್ಮ ಜ್ಞಾನ ಮತ್ತು ಸೃಜನಶೀಲತೆಯನ್ನು ಬಳಸಿಕೊಂಡು ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು ಎಂದು ಕರೆ ನೀಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಉದ್ಯಮಶೀಲ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದರು.
ಮುಖ್ಯ ಅತಿಥಿಯಾಗಿದ್ದ ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ಪುತ್ತೂರಿನ ಹೋಟೆಲ್ ವಿಶ್ವ ರಂಜಿನಿಯ ವ್ಯವಸ್ಥಾಪಕ ಪಾಲುದಾರ ವಿ.ಜೆ. ಪುನೀತ್ ಮಾತನಾಡಿ, ಆಹಾರ ಮತ್ತು ಆತಿಥ್ಯ ಕ್ಷೇತ್ರದಲ್ಲಿ ಯುವಜನರಿಗೆ ಲಭ್ಯವಿರುವ ವಿವಿಧ ಉದ್ಯಮಾವಕಾಶಗಳ ಕುರಿತು ಮಾಹಿತಿ ನೀಡಿದರು. ಸ್ಥಳೀಯ ಸಂಪನ್ಮೂಲಗಳು, ಹೊಸ ಆಲೋಚನೆಗಳು ಹಾಗೂ ಗುಣಮಟ್ಟದ ಉತ್ಪನ್ನಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಸಣ್ಣ ಪ್ರಯತ್ನವನ್ನೂ ಯಶಸ್ವಿ ಉದ್ಯಮವನ್ನಾಗಿ ಬೆಳೆಸಬಹುದು ಎಂದು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.

‘ಫುಡೀಪ್ರಿನಿಯರ್’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ, ತಂಡಕಾರ್ಯ, ವ್ಯವಹಾರಿಕ ಚಿಂತನೆ, ಸಂವಹನ ಕೌಶಲ ಹಾಗೂ ಮಾರುಕಟ್ಟೆ ಅರಿವನ್ನು ಪ್ರದರ್ಶಿಸಲು ಅವಕಾಶ ಪಡೆದು ,ಆಹಾರವನ್ನು ಕೇಂದ್ರವಾಗಿಟ್ಟುಕೊಂಡು ಹೊಸ ಆಲೋಚನೆಗಳನ್ನು ರೂಪಿಸುವ ಮೂಲಕ ಭವಿಷ್ಯದಲ್ಲಿ ಸ್ವಂತ ಉದ್ಯಮ ಆರಂಭಿಸುವ ಸಾಧ್ಯತೆಗಳ ಬಗ್ಗೆಯೂ ಅರಿವು ಪಡೆದರು.
ಕಾರ್ಯಕ್ರಮದ ಪ್ರಸ್ತಾವಿಕ ಮಾತುಗಳನ್ನು ಪ್ರಶಾಂತ್ ರೈ ಪಿ. ನೆರವೇರಿಸಿ, ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ತೃತೀಯ ಬಿಬಿಎ ವಿದ್ಯಾರ್ಥಿ ಪ್ರಕೃತ್ ಜಿ.ಕೆ. ಅತಿಥಿಗಳನ್ನು ಸ್ವಾಗತಿಸಿ, ತೃತೀಯ ಬಿಬಿಎ ವಿದ್ಯಾರ್ಥಿ ಭವತ್ ಬಿ.ಎಲ್. ವಂದನಾರ್ಪಣೆ ಸಲ್ಲಿಸಿ, ದ್ವಿತೀಯ ಬಿಬಿಎ (ಬಿಸಿನೆಸ್ ಅನಾಲಿಟಿಕ್ಸ್) ವಿದ್ಯಾರ್ಥಿನಿ ಸಮೃದ್ಧಿ ಚೌಟಾ ಕಾರ್ಯಕ್ರಮ ನಿರೂಪಿಸಿದರು.ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗದ ಡೀನ್ ಹಾಗೂ ಮುಖ್ಯಸ್ಥ ಡಾ. ರಾಧಾಕೃಷ್ಣ ಗೌಡ ವಿ. ಉಪಸ್ಥಿತರಿದ್ದರು.
‘ಟೇಸ್ಟ್ ದಿ ಫ್ಯೂಚರ್’ ಆಶಯದೊಂದಿಗೆ ನಡೆದ ‘ಫುಡೀಪ್ರಿನಿಯರ್’ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಆಹಾರದ ರುಚಿಯೊಂದಿಗೆ ಉದ್ಯಮದ ರುಚಿಯನ್ನೂ ಪರಿಚಯಿಸಿ, “ಒಂದು ಆಲೋಚನೆ, ಒಂದು ಪ್ರಯತ್ನ, ಒಂದು ಉದ್ಯಮ” ಎಂಬ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವಲ್ಲಿ ಯಶಸ್ವಿಯಾಯಿತು.
ಶಿಕ್ಷಣ
Vivekananda-ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ -ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯು ಪದವಿಪೂರ್ವ ಕಾಲೇಜು, ತುಂಬೆ ಇಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ಪಡೆದುಕೊಂಡಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯು ಪದವಿಪೂರ್ವ ಕಾಲೇಜು, ತುಂಬೆ ಇಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ಪಡೆದುಕೊಂಡಿರುತ್ತಾರೆ.
ಬಾಲಕಿಯರ ತಂಡದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಖುಷಿ ೪೪ ಕೆ.ಜಿ, ದ್ರಿಶ್ಯ 68 ಕೆ .ಜಿ ವಿಭಾಗ ಬೆಳ್ಳಿ ಪದಕ, ಪ್ರಥಮ ವಾಣಿಜ್ಯ ವಿಭಾಗದ ಸಾನ್ವಿ 64 ಕೆ. ಜಿ ವಿಭಾಗ ಕಂಚಿನ ಪದಕ. ಬಾಲಕರ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಘನಶ್ಯಾಮ್ ೫೦ ಕೆ.ಜಿ ವಿಭಾಗ ಬೆಳ್ಳಿ ಪದಕ ಪಡೆದಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
ನಿಧನ ವಾರ್ತೆ18 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ನಿಧನ ವಾರ್ತೆ12 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಸ್ಥಳೀಯ17 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು15 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ಸ್ಥಳೀಯ17 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
Uncategorized10 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಬಿಗ್ ನ್ಯೂಸ್12 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ಶಿಕ್ಷಣ12 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ


















