Connect with us

ದಕ್ಷಿಣ ಕನ್ನಡ

Tiger Fight: ಮೆಲ್ಕಾರ್‌ ಸೇತುವೆ ಬಳಿ ಹುಲಿ ವೇಷದ ತಂಡಗಳ ಕಾದಾಟ ಪ್ರಕರಣ – ಮೂವರ ಬಂಧನ

Published

on



Ad Widget

Ad Widget

Ad Widget

Ad Widget

ಮೆಲ್ಕಾರ್‌ ಸೇತುವೆ ಬಳಿ ಹುಲಿವೇಷದ ಬ್ಯಾನರಗಳನ್ನು ತೆರೆವುಗೊಳಿಸುತ್ತಿದ್ದಾಗ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂದಿಸಿದ್ದಾರೆ. ಬಂಟ್ವಾಳ ತಾಲೂಕು ಪಾಣೆಮಂಗಳೂರು ಗ್ರಾಮದ ನಿವಾಸಿ ಶೋಧನ್, ಬಂಟ್ವಾಳ ನರಿಕೊಂಬು ಗ್ರಾಮದ ನಿವಾಸಿಯಾದ ಪ್ರಕಾಶ್ ಹಾಗೂ ಕೃತ್ಯಕ್ಕೆ ಸಹಕರಿಸಿದ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ. ತನಿಖೆ ಮುಂದುವರಿದಿದ್ದು ಉಳಿದ ಆರೋಪಿಗಳಿಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಚೂರಿ ಇರಿತದಿಂದ ಮೂವರಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಗಂಬೀರವಾಗಿದೆ. ಗಂಭೀರ ಗಾಯಗೊಂಡ ದೇವದಾಸ್‌ ಮಂಗಳೂರಿನ ಎಜೆ ಆಸ್ಫತ್ರೆಯಲ್ಲಿ ಒಳ ರೋಗಿಯಾಗಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ಘಟನೆಗೆ ಕಾರಣವೇನು?:

Ad Widget

Ad Widget <> Ad Widget

ಕೆಲ ವರ್ಷಗಳ ಹಿಂದೆ ಜೊತೆಯಾಗಿ ಹುಲಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕುತ್ತಿದ್ದ ಯುವಕರ ತಂಡ ಯಾವುದೋ ವಿಚಾರಕ್ಕೆ ಇಬ್ಬಾಗವಾಗಿದ್ದು, ಇದೀಗ ಎರಡು ತಂಡಗಳಾಗಿ ಹುಲಿ ವೇಷವನ್ನು ಹಾಕುತ್ತಿದ್ದಾರೆ. ಬುಧವಾರ ರಾತ್ರಿ ಪಾಣೆಮಂಗಳೂರು ಶಾರದೋತ್ಸವ ಮೆರವಣಿಗೆ ವೇಳೆ ಎರಡು ತಂಡಗಳು ಹುಲಿ ಕುಣಿತ ಪ್ರದರ್ಶನ ನೀಡಿದ್ದು, ಈ ವೇಳೆ ಇತ್ತಂಡಗಳು ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಪರಚಾಡಿಕೊಂಡಿವೆ.



Ad Widget

ಇದರ ಮುಂದುವರಿದ ಭಾಗವಾಗಿ ಗುರುವಾರ ರಾತ್ರಿ ಮೆಲ್ಕಾರ್ ಸೇತುವೆಯ ಬಳಿ, ವೈಭವ್‌ ಜ್ಯುವೆಲ್ಲರ್‌ ಮುಂಭಾಗ ಒಂದು ಹುಲಿ ತಂಡದ ಸದಸ್ಯರು ಬ್ಯಾನರ್‌ ತೆರವು ಮಾಡುತ್ತಿದ್ದ ವೇಳೆ ಇನ್ನೊಂದು ತಂಡ ಸ್ಥಳಕ್ಕೆ ಬಂದು ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.

Ad Widget

Ad Widget

ದೂರಿನಲ್ಲಿ ಏನಿದೆ ?

ಆರೋಪಿ ಶೋಧನ್ ಪ್ರಕರಣದ ದೂರುದಾರ ಸಂದೀಪ್‌ ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಿಂದ ಹಲ್ಲೆ ಮಾಡಿರುತ್ತಾನೆ. ಈ ವೇಳೆ ಗಲಾಟೆ ತಡೆಯಲು ಬಂದ ಸಂದೀಪ್‌ ಸಹೋದರ ದೇವದಾಸನಿಗೆ ಆರೋಪಿ ಶೋಧನ ಚೂರಿಯಿಂದ ತಿವಿದಿದ್ದು‌, ಸಂದೀಪ್‌ ಗೂ ಚೂರಿಯಿಂದ ಗಾಯಗೊಳಿಸಿರುತ್ತಾನೆ. ಮತ್ತೋರ್ವ ಆರೋಪಿ ಪ್ರಸನ್ನ ಎಂಬಾತನು, ದೇವದಾಸ್‌ ಗೆ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಸಂದೀಪ್‌ ಜೊತೆಗಿದ್ದ ಶಂಕರ ಎಂಬಾತನಿಗೆ ಕೂಡಾ ಆರೋಪಿ ಪ್ರಸನ್ನ ಕಲ್ಲಿನಿಂದ ಹಲ್ಲೆ ನಡೆಸಿರುತ್ತಾನೆ

ಅರೋಪಿಗಳ ಪೈಕಿ ಪ್ರಕಾಶ್ ಯಾನೆ ಮುನ್ನ ಎಂಬಾತನು ಕೂಡಾ ಹಲ್ಲೆಗೆ ಸಾಥ್‌ ನೀಡಿದ್ದು , ಸ್ಥಳದಲ್ಲಿದ್ದವರು ಬೊಬ್ಬೆ ಹಾಕಿದಾಗ ಆರೋಪಿಗಳು ಓಡಿ ಪರಾರಿಯಾಗಿರುತ್ತಾರೆ.

Ad Widget
Click to comment

Leave a Reply

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading