ಮಂಗಳೂರು
Dowry case ಬಂಟ್ವಾಳ : ಪ್ರೇಮ ವಿವಾಹವಾದರೂ ತಪ್ಪದ ವರದಕ್ಷಿಣೆ ಕಿರುಕುಳ – ನವ ವಿವಾಹಿತೆ ಆತ್ಮ*ಹತ್ಯೆ
ಬಂಟ್ವಾಳ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದು ನವ ವಿವಾಹಿತೆಯೋರ್ವಳು ತವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22) ಮೃತಪಟ್ಟ ಮಹಿಳೆ.
ನೌಸೀನ್ ಅವರ ವಿವಾಹ ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ನಡೆದಿತ್ತು. ಸಜೀಪ ಮೂಡ ನಿವಾಸಿ ಕೆ.ಎಮ್ ಬಾವ ಅವರ ಮಗಳು ನೌಸೀನ್ ಅವರು ಉಳ್ಳಾಲ ಮೂಲದ ಅಜ್ಮಾನ ಎಂಬವರಿಗೆ ಇನ್ಸ್ಟಾ ಗ್ರಾಂ ಮೂಲಕ ಪರಿಚಯವಾಗಿ ಪರಸ್ಪರ ಪ್ರೀತಿ ಉಂಟಾಗಿತ್ತು. ಬಳಿಕ ಎರಡು ಕುಟುಂಬಗಳ ಒಪ್ಪಿಗೆ ಮುಖಾಂತರ ಅಗಸ್ಟ್ . 14 ರಂದು ಮದುವೆಯಾಗಿತ್ತು.
ತಂಗಿಯ ಸಾವಿಗೆ ಗಂಡನ ಮನೆಯವರ ವರದಕ್ಷಿಣೆ ಕಿರುಕುಳ ಕಾರಣವೆಂದು ನೌಸೀನ್ ಸಹೋದರ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರೇಮ ವಿವಾಹವಾದರೂ ವಧುವಿನ ಮನೆಯವರು ವರನಿಗೆ ವಿವಾಹದ ವೇಳೆ 18 ಪವನ್ ಚಿನ್ನವನ್ನು ಉಡುಗೂರೆಯಾಗಿ ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆದರೆ ಹುಡುಗಿ ಕಡೆಯವರು ನೀಡಿದ ವರದಕ್ಷಿಣೆ ಕಡಿಮೆಯಾಗಿದೆ, ಲವ್ ಮಾಡಿ ಮದುವೆಯಾದರಿಂದ ಒಳ್ಳೆ ಹುಡುಗಿ ಸಿಗಲಿಲ್ಲ, ಇಲ್ಲದಿದ್ದರೆ ಒಳ್ಳೆಯ ಹುಡುಗಿ ಸಿಗಬಹುದಿತ್ತು ಎಂದು ಅತ್ತೆ ಝೂಬೈದಾ, ಮಗಳು ಅಜ್ಮೀಯಾ ಮತ್ತು ಗಂಡ ಸೇರಿಕೊಂಡು ಹೀಯಾಳಿಸಿದ್ದಲ್ಲದೆ, ಮಾನಸಿಕ ಕಿರುಕುಳ ಕೊಡುತ್ತಿದ್ದರು. ಈ ಕಾರಣಕ್ಕಾಗಿ ತಂಗಿ ಉಳ್ಳಾಲದ ಗಂಡನ ಮನೆಯಿಂದ ಸಜೀಪ ತಾಯಿ ಮನೆಗೆ ಬಂದಿದ್ದಳು.ಮಾನಸಿಕವಾಗಿ ನೊಂದಿದ್ದ ತಂಗಿ ನೌಸೀನ ಆ.25 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ,ಈ ಸಾವಿನ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ನಾಸೀರ್ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಮಗಳ ಮದುವೆಗಾಗಿ ತಂದೆ 18 ಪವನ್ ಚಿನ್ನವನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ ಅಜ್ಮಾನ ಮದುವೆಯಾದ ಕೆಲವೇ ದಿನಗಳಲ್ಲಿ ನೌಸೀನ್ ಳ ಒಡವೆಗಳನ್ನು ಮಾರಿದ್ದಾನೆ. ಜೊತೆಗೆ ಇನ್ನಷ್ಟು ಒಡೆವೆಗಳನ್ನು ತರುವಂತೆ ಪೀಡಿಸುತ್ತಿದ್ದ. ಇದು ಅಲ್ಲದೆ,ಅತ್ತೆ ಮತ್ತು ನಾದಿನಿಯವರು ಲವ್ ಮ್ಯಾರೇಜ್ ಆಗಿರುವ ಕಾರಣಕ್ಕಾಗಿ ಮಾನಸಿಕವಾಗಿ ಹಿಂಸೆಯನ್ನು ನೀಡುತ್ತಿದ್ದರು. ಈ ವಿಚಾರವನ್ನು ಮನೆಯವರಲ್ಲಿ ತಿಳಿಸಿದ್ದಳು.
ಮನೆಯವರ ಕಿರುಕುಳ ತಾಳಲಾರದೆ ನೌಸೀನ್ ಅ.24 ರಂದು ತಾಯಿ ಮನೆಗೆ ಬಂದಿದ್ದಳು. ಮರುದಿನ ಮನೆಯವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಇವಳು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಇವಳ ಸಾವಿಗೆ ಗಂಡ ಮತ್ತು ಅತ್ತೆ,ನಾದಿನಿಯವರೇ ಕಾರಣವಾಗಿದೆ. ಹಾಗಾಗಿ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ನೌಸೀನ್ ಳ ಸಾವಿಗೆ ನ್ಯಾಯ ಒದಗಿಸಬೇಕು ಎಂದು ನೌಸೀನ್ ಳ ಸಂಬಂಧಿ ಸಿದ್ದೀಕ್ ಒತ್ತಾಯ ಮಾಡಿದ್ದಾರೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ನಿಧನ ವಾರ್ತೆ12 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು10 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು8 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ12 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ12 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ11 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ11 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ13 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















