ಮಂಗಳೂರು
Son Killed Mother ಮಂಗಳೂರು : ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯ ಕೊಂದ ಕಡುಪಾಪಿ ಮಗ – ಸುಶಿಕ್ಷಿತರ ಜಿಲ್ಲೆಯಲ್ಲೊಂದು ಮೃಗೀಯ ಕೃತ್ಯ
ಸುಶಿಕ್ಷಿತರ ಜಿಲ್ಲೆಯೆಂಬ ಹೆಗ್ಗಳಿಕೆಯಿರುವ ದಕ್ಷಿಣ ಕನ್ನಡ ಜಿಲ್ಲೆಯ ಕೇಂದ್ರ ಸ್ಥಾನವಾದ ಮಂಗಳೂರಿನಲ್ಲೊಂದು ಮೃಗೀಯ ಘಟನೆ ಬೆಳಕಿಗೆ ಬಂದಿದೆ. ತಾಯಿಯನ್ನೆ ಅತ್ಯಾಚಾರ ಮಾಡಲು ಯತ್ನಿಸಿದ ಮಗನೊಬ್ಬ, ತಾಯಿ ಅದನ್ನು ವಿರೋಧಿಸಿದಾಗ ಆಕೆಯನ್ನೆ ಹತ್ಯೆಗೈದ ಘಟನೆ ಮುಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ನಡೆದಿದೆ.
ಕೊಂಡೇಲಾ ಗ್ರಾಮದ ದುರ್ಗಾನಗರ ನಿವಾಸಿ ರತ್ನ ಶೆಟ್ಟಿ(62) ಹತ್ಯೆಯಾದವರು. ಆಕೆಯ ಪುತ್ರ ರವಿರಾಜ್ ಶೆಟ್ಟಿ ಕೃತ್ಯ ಎಸಗಿದ ಪಾಪಿ. ಅಕ್ಟೋಬರ್ 26 ರ ರಾತ್ರಿ ಈತ ತಾಯಿಯನ್ನು ಕೊಂದು ಬಳಿಕ ಮನೆಗೆ ಬೀಗ ಜಡಿದು ಪರಾರಿಯಾಗಿದ್ದ. ಮೂರು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು.
ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಬಜ್ಪೆಯಲ್ಲಿ ಈ ಪೈಶಾಚಿಕ ಕೃತ್ಯ ನಡೆದಿದ್ದು, ಮನೆಯ ಸುತ್ತಮುತ್ತಾ ನೋಣಗಳು ಮುತ್ತಿಕೊಂಡ ಕಾರಣ ಘಟನೆ ಬೆಳಕಿಗೆ ಬಂದಿತ್ತು. ಬಜಪೆ ಪೊಲೀಸರು ಆರೋಪಿಯನ್ನು ನಿನ್ನೆ ಸಂಜೆ ಬಂಧಿಸಿದ್ದರು.
ಪೊಲೀಸರ ವಿಚಾರಣೆ ವೇಳೆ ತಾನು ತಾಯಿ ಮೇಲೆ ಅತ್ಯಚಾರ ಮಾಡಲು ಯತ್ನಿಸಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಆಕೆ ಸಹಕರಿಸದಿದ್ದಾಗ ತಾನು ಆಕೆಯನ್ನು ಕೊಂದಿರುವುದಾಗಿ ಪಾಪಿ ಮಗ ಹೇಳಿಕೊಂಡಿದ್ದಾನೆ. ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಂಡಿರುವ ಬಜ್ಪೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
ಮಂಗಳೂರು
Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.
ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
-
ರಾಜಕೀಯ24 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್23 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ದಕ್ಷಿಣ ಕನ್ನಡ21 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ನಿಧನ ವಾರ್ತೆ23 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ಅಪರಾಧ22 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್7 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ನಿಧನ ವಾರ್ತೆ6 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಮಂಗಳೂರು22 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ















