ಬೆಂಗಳೂರು
ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಉಜಿರೆ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿಯವರಿಗೆ ರಾಜ್ಯ ರಾಜ್ಯೋತ್ಸವ
ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಅವರಿಗೆ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ
ಪರಿಚಯ : ಡಾ. ಪ್ರಶಾಂತ್ ಶೆಟ್ಟಿ ಮೂಲತಃ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಹೆಬ್ರಿಯ ಮಾಬ್ಳಿಯಲ್ಲಿ ಜನಿಸಿದರು.
ಅಲ್ಲಿಯೆ ಪ್ರಾಥಮಿಕ ಶಾಲಾ ಮತ್ತು ಪ್ರೌಢಶಾಲಾ ಶಿಕ್ಷಣ ಪಡೆದರು.
1994 ರಲ್ಲಿ ಉಜಿರೆಯಲ್ಲಿರುವ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಪ್ರಥಮ ಬ್ಯಾಚಿನ ವಿದ್ಯಾರ್ಥಿಯಾಗಿ ಬಿ.ಎನ್.ವೈ.ಎಸ್. ಪದವಿ ಪಡೆದರು. ಅದೇ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ವೈದ್ಯಾಧಿಕಾರಿಯಾಗಿ ವೃತ್ತಿ ಜೀವನ ಪ್ರಾರಂಭಿಸಿದರು.
೨೦೦೬ರಲ್ಲಿ ಬೆಂಗಳೂರಿನಲ್ಲಿ ಎಸ್.ವ್ಯಾಸ ಯೋಗ ವಿಶ್ವವಿದ್ಯಾಲಯದಲ್ಲಿ ಯೋಗ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ೨೦೧೪ರಲ್ಲಿ ಅದೇ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ. ಪದವಿ ಪಡೆದರು.
ಪ್ರಸ್ತುತ ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ಟಾಸ್ಕ್ಫೋರ್ಸ್ ಸದಸ್ಯರಾಗಿ, ಅಭಿವೃದ್ಧಿ ಮಂಡಳಿ ಸದಸ್ಯರಾಗಿ, ಹಾಗೂ ರಾಜ್ಯದ ರಾಜೀವ್ ಗಾಂಧಿ ಆರೋಗ್ಯ ವಿ.ವಿ.ಯಲ್ಲಿ ಸೆನೆಟ್ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಸ್ತುತ ಕರ್ನಾಟಕ ಸರ್ಕಾರದ ಪ್ರಕೃತಿ ಚಿಕಿತ್ಸೆ ಮತ್ತು ಯೋಗದ ಸಲಹಾ ಮಂಡಳಿ ಸದಸ್ಯರಾಗಿ, ರಾಜೀವ್ ಗಾಂಧಿ ವಿ.ವಿ.ಯ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರ ಸೇವೆ, ಸಾಧನೆಯನ್ನು ಮನ್ನಿಸಿ, ಪ್ರಮುಖ ಶಿಕ್ಷಕರ ಪ್ರಶಸ್ತಿ, ಡಾ. ಬಿ.ಸಿ. ರಾಯ್ ರಾಷ್ಟ್ರೀಯ ಪ್ರಶಸ್ತಿ, ವಸಿಷ್ಠ ಪ್ರಶಸ್ತಿ, ಅತ್ಯುತ್ತಮ ಆಯುಷ್ ವೈದ್ಯ ಪ್ರಶಸ್ತಿ ಇತ್ಯಾದಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಪ್ರಶಸ್ತಿಗಳು ಮತ್ತು ಮನ್ನಣೆಗಳು:
ಡಾ.ಪ್ರಶಾಂತ ಶೆಟ್ಟಿ, ಪ್ರಾಂಶುಪಾಲರು ಆಯುಷ್ ಸರ್ಕಾರದ ಪ್ರಾಯೋಜಕತ್ವ ಸಚಿವಾಲಯ ಭಾರತದ ವಾರಣಾಸಿಯಲ್ಲಿ ನಡೆದ ಆಯುರ್ಯೋಗ್ ಎಕ್ಸ್ಪೋ 2023 ರ ಸಂದರ್ಭದಲ್ಲಿ ‘ನೈಸರ್ಗಿಕ ಚಿಕಿತ್ಸೆ ಮತ್ತು ಯೋಗದಲ್ಲಿ ಜೀವಮಾನದ ಸಾಧನೆ’ ಪ್ರಶಸ್ತಿಯನ್ನು ನೀಡಿದರು.
ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕ್ಷೇತ್ರದಲ್ಲಿ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಅವರ ಅತ್ಯುತ್ತಮ ಸೇವೆಗಳನ್ನು ಗುರುತಿಸಿ 2018 ರ ಸೆಪ್ಟೆಂಬರ್ 5 ರಂದು ಕರ್ನಾಟಕದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ‘ಪ್ರಮುಖ ಶಿಕ್ಷಕರ ಪ್ರಶಸ್ತಿ’ ಯನ್ನು ನೀಡಲಾಗಿದೆ.
ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಗಾಗಿ ಡಾ. ಬಿ.ಸಿ. ರಾಯ್ ರಾಷ್ಟ್ರೀಯ ಪ್ರಶಸ್ತಿ 2010-2011 ರಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ, GOKಕರ್ನಾಟಕದ 48 ಸ್ಥಳಗಳಲ್ಲಿ ಯೋಗ ತರಗತಿಗಳನ್ನು ಆಯೋಜಿಸಿದ್ದಕ್ಕಾಗಿ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಅನ್ನು ನಮೂದಿಸಲಾಗಿದೆ.
ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದಿಂದ ವಸಿಷ್ಠ ಪ್ರಶಸ್ತಿ, 2006.
ಗೌರವಾನ್ವಿತ ವೈದ್ಯಕೀಯ ಶಿಕ್ಷಣ ಸಚಿವರು, GOK ಅವರಿಂದ ಜಿಲ್ಲೆಯ ಅತ್ಯುತ್ತಮ ಪ್ರದರ್ಶನ ನೀಡಿದ ಯುವಕ.
ಕರ್ನಾಟಕದ ಗೌರವಾನ್ವಿತ ಆರೋಗ್ಯ ಸಚಿವರು, AYSUH ಫೌಂಡೇಶನ್ ಅವರಿಂದ 2016 ರ ಅತ್ಯುತ್ತಮ ಆಯುಷ್ ವೈದ್ಯರು.
ನ್ಯಾಷನಲ್ ಕಾನ್ಸರನ್ಸ್, INI, ಬೆಂಗಳೂರು ನಲ್ಲಿ ಅತ್ಯುತ್ತಮ ಪೇಪರ್ ಪ್ರಶಸ್ತಿ,
ಶಿಕ್ಷಣ
RTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
ಬಿಗ್ ನ್ಯೂಸ್
Transfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ಆರ್. ಹಿತೇಂದ್ರ, ಸೀಮಂತ್ ಕುಮಾರ್ ಸಿಂಗ್, ಹೇಮಂತ್ ಎಂ. ನಿಂಬಾಳ್ಕರ್ ಸೇರಿದಂತೆ 32 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ಆರ್. ಹಿತೇಂದ್ರ, ಸೀಮಂತ್ ಕುಮಾರ್ ಸಿಂಗ್, ಹೇಮಂತ್ ಎಂ. ನಿಂಬಾಳ್ಕರ್ ಸೇರಿದಂತೆ 32 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ವ್ಯವಸ್ಥೆಯಲ್ಲಿ ಹೊಸ ಆಯುಕ್ತರ ಹುದ್ದೆಗಳ ರಚನೆಯೊಂದಿಗೆ ಹಿರಿಯ ಅಧಿಕಾರಿಗಳ ಜವಾಬ್ದಾರಿಗಳಲ್ಲೂ ಬದಲಾವಣೆ ಮಾಡಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿಯಾಗಿದ್ದ ಆರ್. ಹಿತೇಂದ್ರ ಅವರನ್ನು ಬೆಂಗಳೂರು ನಗರದ ಮುಖ್ಯ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಎಡಿಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಸಿಐಡಿಯ ಎಡಿಜಿಪಿಯಾಗಿದ್ದ ಬಿಜಯ್ ಕುಮಾರ್ ಸಿಂಗ್ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಹುದ್ದೆಗೆ ಹಾಗೂ ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಎಡಿಜಿಪಿಯಾಗಿದ್ದ ಎಸ್. ಮುರುಗನ್ ಅವರನ್ನು ಲೋಕಾಯುಕ್ತ ಎಡಿಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿರೀಕ್ಷೆಯಲ್ಲಿದ್ದ ಹೇಮಂತ್ ಎಂ. ನಿಂಬಾಳ್ಕರ್ ಅವರನ್ನು ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಜೊತೆಗೆ ರೌಡಿ ನಿಗ್ರಹ ಪಡೆಯ ಆಯುಕ್ತರ ಹೆಚ್ಚುವರಿ ಹೊಣೆಗಾರಿಕೆಯನ್ನೂ ನೀಡಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಎನ್. ಶಶಿಕುಮಾರ್ ಅವರನ್ನು ಪಶ್ಚಿಮ ವಲಯದ ಐಜಿಪಿಯಾಗಿ ಹಾಗೂ ಅನುಪಮ್ ಅಗರ್ವಾಲ್ ಅವರನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್ಆರ್ಪಿ) ಐಜಿಪಿಯಾಗಿ ನೇಮಿಸಲಾಗಿದೆ.
ಲೋಕಾಯುಕ್ತ ಎಡಿಜಿಪಿಯಾಗಿದ್ದ ಮನೀಶ್ ಖರ್ಬಿಕರ್ ಅವರನ್ನು ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಎಡಿಜಿಪಿಯಾಗಿ, ಕಲಬುರಗಿ ನಗರ ಪೊಲೀಸ್ ಆಯುಕ್ತ ಹಾಗೂ ಡಿಐಜಿಪಿಯಾಗಿದ್ದ ಡಾ. ಶರಣಪ್ಪ ಎಸ್.ಡಿ. ಅವರನ್ನು ರೈಲ್ವೆ ಡಿಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರದ ಜಂಟಿ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಕಲಬುರಗಿ ನಗರ ಡಿಐಜಿಪಿ ಹಾಗೂ ಪೊಲೀಸ್ ಆಯುಕ್ತರಾಗಿ ನೇಮಿಸಲಾಗಿದೆ.
ಕಲಬುರಗಿ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲ ಎಂ. ಪುಟ್ಟಮಾದಯ್ಯ ಅವರನ್ನು ಮೈಸೂರು ದಕ್ಷಿಣ ವಲಯದ ಡಿಐಜಿಪಿಯಾಗಿ, ಜಲಸಂಪನ್ಮೂಲ ಇಲಾಖೆಯ ಜಾಗೃತ ದಳದ ಡಿಐಜಿಪಿ ಡಾ. ಎಂ. ಅಶ್ವಿನಿ ಅವರನ್ನು ನೇಮಕಾತಿ ವಿಭಾಗದ ಡಿಐಜಿಪಿಯಾಗಿ ಹಾಗೂ ರೈಲ್ವೆ ಡಿಐಜಿಪಿಯಾಗಿದ್ದ ಜೆ.ಕೆ. ರಶ್ಮಿ ಅವರನ್ನು ಜಲಸಂಪನ್ಮೂಲ ಇಲಾಖೆಯ ಜಾಗೃತ ದಳದ ಡಿಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಪೊಲೀಸ್ ವ್ಯವಸ್ಥೆಯಲ್ಲಿ ಹೊಸ ಆಯುಕ್ತರ ನೇಮಕ
ಬೆಂಗಳೂರು ನಗರದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಪುನರ್ರಚಿಸುವ ಹಿನ್ನೆಲೆಯಲ್ಲಿ ವಿವಿಧ ವಿಭಾಗಗಳಿಗೆ ಹೊಸ ಆಯುಕ್ತರನ್ನು ನೇಮಕ ಮಾಡಲಾಗಿದೆ.
- ಲಾಭೂ ರಾಮ್: ಕೇಂದ್ರ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ.
- ಡಾ. ಪಿ.ಎಸ್. ಹರ್ಷ: ಪೂರ್ವ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ.
- ವಿಕಾಸ್ ಕುಮಾರ್ ವಿಕಾಸ್: ಪಶ್ಚಿಮ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ.
- ಡಾ. ಎಂ.ಬಿ. ಬೋರಲಿಂಗಯ್ಯ: ಉತ್ತರ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ.
- ಸಿ. ವಂಶಿಕೃಷ್ಣ: ಬೆಂಗಳೂರು ನಗರದ ಜಂಟಿ ಪೊಲೀಸ್ ಆಯುಕ್ತರಾಗಿ ನೇಮಕ. ಜೊತೆಗೆ ದಕ್ಷಿಣ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
- ಬೆಂಗಳೂರು ನಗರದ ಸಂಚಾರ ವಿಭಾಗದ ಪಶ್ಚಿಮ ಡಿಸಿಪಿಯಾಗಿದ್ದ ಡಾ. ಅನೂಪ್ ಎ. ಶೆಟ್ಟಿ ಅವರನ್ನು ಪೂರ್ವ ಬೆಂಗಳೂರು ನಗರದ ಸಂಚಾರ ವಿಭಾಗದ ಡಿಸಿಪಿಯಾಗಿ, ವಿಜಯಪುರದ ಪೊಲೀಸ್ ಸೂಪರಿಂಟೆಂಡೆಂಟ್ ಲಕ್ಷ್ಮಣ್ ನಿಂಬರಗಿ ಅವರನ್ನು ಕೇಂದ್ರ ಬೆಂಗಳೂರು ನಗರದ ಸಿಟಿ ಆರ್ಮ್ಡ್ ರಿಸರ್ವ್ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.
ಮೈಸೂರು ಕರ್ನಾಟಕ ಪೊಲೀಸ್ ಅಕಾಡೆಮಿಯ ಉಪನಿರ್ದೇಶಕ ಚನ್ನಬಸವಣ್ಣ ಲಂಗೋಟಿ ಅವರನ್ನು ಕೇಂದ್ರ ಬೆಂಗಳೂರು ನಗರದ ಇಂದಿರಾನಗರ ಡಿಸಿಪಿಯಾಗಿ, ಬೆಂಗಳೂರು ನಗರದ ವಾಯುವ್ಯ ವಿಭಾಗದ ಡಿಸಿಪಿ ನಾಗೇಶ್ ಡಿ.ಎಲ್. ಅವರನ್ನು ಉತ್ತರ ಬೆಂಗಳೂರು ನಗರದ ಯಶವಂತಪುರ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಸಿಐಡಿ-2ರ ಪೊಲೀಸ್ ಸೂಪರಿಂಟೆಂಡೆಂಟ್ ಲೋಕೇಶ್ ಭರಮಪ್ಪ ಜಗಲಾಸರ್ ಅವರನ್ನು ಕೇಂದ್ರ ಬೆಂಗಳೂರು ನಗರದ ಸಂಚಾರ ವಿಭಾಗದ ಡಿಸಿಪಿಯಾಗಿ, ಬೆಂಗಳೂರು ನಗರದ ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಎನ್. ಅವರನ್ನು ಪಶ್ಚಿಮ ಬೆಂಗಳೂರು ನಗರದ ಕೆಂಗೇರಿ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.
ವೈಟ್ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಸೂಪರಿಂಟೆಂಡೆಂಟ್ ಆಗಿ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಶ್ರೀಹರಿ ಬಾಬು ಬಿ.ಎಲ್. ಅವರನ್ನು ವೈಟ್ಫೀಲ್ಡ್ ವಿಭಾಗದ ಡಿಸಿಪಿಯಾಗಿ ಹಾಗೂ ರಂಜಿತ್ ಕುಮಾರ್ ಬಂಡಾರು ಅವರನ್ನು ಬೆಂಗಳೂರು ನಗರದ ಆಡಳಿತ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬಿಎಂಟಿಎಫ್ನ ಎಸ್ಪಿಯಾಗಿದ್ದ ಡಾ. ಗೀತಾ ಎಂ.ಎಸ್. ಅವರನ್ನು ಪೂರ್ವ ಬೆಂಗಳೂರು ನಗರದ ಡಿಸಿಪಿಯಾಗಿ, ತುಮಕೂರು ಎಸ್ಪಿ ಅಶೋಕ್ ಕೆ.ವಿ. ಅವರನ್ನು ಪಶ್ಚಿಮ ಬೆಂಗಳೂರು ನಗರದ ಪೀಣ್ಯ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿಯೋಜನೆ ನಿರೀಕ್ಷೆಯಲ್ಲಿದ್ದ ಲಕ್ಷ್ಮೀ ಗಣೇಶ್ ಕೆ. ಅವರನ್ನು ಕೇಂದ್ರ ಬೆಂಗಳೂರು ನಗರದ ಗಾಂಧಿನಗರ ಡಿಸಿಪಿಯಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರದ ಪೂರ್ವ ವಿಭಾಗದ ಡಿಸಿಪಿಯಾಗಿದ್ದ ಅಮಟೆ ವಿಕ್ರಮ್ ಅವರನ್ನು ಉತ್ತರ ಬೆಂಗಳೂರು ನಗರದ ಡಿಸಿಪಿಯಾಗಿ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ಲೋಕಾಯುಕ್ತ ಎಸ್ಪಿ ಪಿ.ವಿ. ಸ್ನೇಹಾ ಅವರನ್ನು ಪಶ್ಚಿಮ ಬೆಂಗಳೂರು ನಗರದ ಸಂಚಾರ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.
ಕ್ರೀಡೆ
IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.
ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.
ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.
ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.
10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2
ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.
2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.
ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.
-
ರಾಜಕೀಯ22 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಸಿನೆಮಾ23 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ23 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
Uncategorized5 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಅಂತರ ರಾಜ್ಯ23 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಮಂಗಳೂರು6 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು















