Uncategorized
Kantara: ಕಾಂತಾರ ಸಿನಿಮಾ ತಂಡಕ್ಕೆ ಬಿಗ್ ರಿಲೀಫ್ ! ನ್ಯಾಯಾಲಯದ ಬಾಗಿಲಲ್ಲಿ ಅಂತ್ಯ ಕಂಡ “ವರಹರೂಪಂ” ಹಾಡಿನ ಹಕ್ಕುಸ್ವಾಮ್ಯ ವಿವಾದ
Kantara Varaha Roopam Controversy: ‘ಕಾಂತಾರ’ ಕನ್ನಡ ಸಿನೆಮಾದಲ್ಲಿ ಬಳಸಿದ್ದ ‘ವರಾಹರೂಪಂ’ ಹಾಡಿನ ಕುರಿತಾಗಿ ಕೇರಳದ ಠಾಣೆಯೊಂದರಲ್ಲಿ ದಾಖಲಾಗಿದ್ದ ಪ್ರಕರಣ ಹೈಕೋರ್ಟು ಬಾಗಿಲಿನಲ್ಲಿ ವಿದ್ಯುಕ್ತವಾಗಿ ಅಂತ್ಯಗೊಂಡಿದೆ. ಅದಕ್ಕೂ ಮೊದಲು ವಾದಿಗಳು ಹಾಗೂ ಪ್ರತಿವಾದಿಗಳು ಪ್ರಕರಣವನ್ನು ನ್ಯಾಯಾಲಯದ ಹೊರಗಡೆ , ಪರಸ್ಪರ ಮಾತುಕತೆಯಲ್ಲಿ ಸೌಹಾರ್ದಯುತವಾಗಿ ಮುಗಿಸಿಕೊಂಡಿದ್ದರು.
ಇದಾದ ಬಳಿಕ ದೂರುದಾರರು ಮತ್ತು ಸಿನಿಮಾ ನಿರ್ಮಾಪಕರು ಪ್ರಕರಣವನ್ನು ತಮ್ಮೊಳಗೆ ಇತ್ಯರ್ಥ್ಯಗೊಳಿಸಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ ಹಿನ್ನಲೆಯಲ್ಲಿ ಏಕಸದಸ್ಯ ಪೀಠ ಅರ್ಜಿ ವಜಾಗೊಳಿಸಿ, ವಿಚಾರಣೆ ಕೊನೆಗೊಳಿಸಿತ್ತು. ಈ ಮೂಲಕ ಕಳೆದ ಸಾಲಿನ ಕನ್ನಡ ಬ್ಲಾಕ್ ಬ್ಲಾಸ್ಟರ್ ಸಿನಿಮಾ ತಂಡಕ್ಕೆ ಬಿಗ್ ರಿಲೀಫ್ ಸಿಕಿದ್ದು, ತನ್ನ ಮೇಲೆ ತೂಗುತ್ತಿದ್ದ ಕಾನೂನಿನ ಕುಣಿಕೆಯಿಂದ ಪಾರಾಗಿದೆ
ಕಾಂತಾರ’ ಸಿನಿಮಾದ ಸೂಪರ್ ಹಿಟ್ ಹಾಡು ‘ವರಾಹ ರೂಪಂ’ ಹಾಡಿನ ಟ್ಯೂನ್ ಅನ್ನು ಕದಿಯಲಾಗಿದೆ ಎಂದು ಮಲಯಾಳಂನ ತೈಕ್ಕುಡಂ ಬ್ರಿಡ್ಜ್ ಆರೋಪಿಸಿ ದೂರು ನೀಡಿತ್ತು. ಅದು ತಮ್ಮ ‘ನವರಸಂ’ ಹಾಡಿನದ್ದು ಎನ್ನುವುದನ್ನು ಸಾಕ್ಷ್ಯ ಸಮೇತ ಕೋಯಿಕ್ಕೋಡ್ ನ ಠಾಣೆಯಲ್ಲಿ ದೂರು ದಾಖಲಿಸಿತ್ತು

1957ರ ಹಕ್ಕುಸ್ವಾಮ್ಯ ಕಾಯ್ದೆಯ ಸೆಕ್ಷನ್ 63ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳನ್ನು ಉಲ್ಲೇಖಿಸಿ ದಾಖಲಾಗಿರುವ ಈ ಎಫ್‌ಐಆರ್ ರದ್ದುಗೊಳಿಸುವಂತೆ ಕಾಂತಾರ ತಂಡವು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಪಿ.ವಿ.ಕುಂಞಿಕೃಷ್ಣನ್ ನೇತೃತ್ವದ ಹೈಕೋರ್ಟ್ ಏಕ ಸದಸ್ಯ ನ್ಯಾಯ ಪೀಠ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯನ್ನು ವಜಾಗೊಳಿಸಿ ವಿಚಾರಣೆಯನ್ನು ಕೊನೆಗೊಳಿಸಿದೆ.

ಪ್ರಕರಣದಲ್ಲಿ ಇತ್ತಂಡಗಳ ವಾದ ಆಲಿಸಲಾಗಿದೆ. ಕಕ್ಷಿದಾರರು ಸಲ್ಲಿಸಿದ ದಾಖಲೆಗಳನ್ನು ಪರಿಶೀಲಾಗಿದೆ. ಹಾಡಿನ ವಿವಾದವು ಖಾಸಗಿ ಸ್ವರೂಪದ್ದಾಗಿದೆ. ಈ ಎಲ್ಲಾ ಆಧಾರದ ಮೇಲೆ ವಾದಿ ಹಾಗೂ ಪ್ರತಿವಾದಿಗಳ ನಡುವಿನ ಇತ್ಯರ್ಥವನ್ನು ಅಂಗೀಕರಿಸಲಾಗುವುದು ಎಂದು ನ್ಯಾಯಮೂರ್ತಿ ಪಿ.ವಿ.ಕುಂಞಿಕೃಷ್ಣನ್ ಹೇಳಿದ್ದಾರೆ.

ಅರ್ಜಿದಾರರ ಪರ ಹಿರಿಯ ವಕೀಲ ಜೋಸೆಫ್ ಕೊಡಿಯಂದರ ವಾದ ಮಂಡಿಸಿದ್ದಾರೆ. ಪ್ರತಿವಾದಿ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಸನಲ್ ಪಿ.ರಾಜ್, ದಿನುಪ್ ಪಿ.ಡಿ. ಮತ್ತು ಎಂ.ಉಮಾದೇವಿ ವಾದ ಮಂಡಿಸಿದ್ದರು.

“ವರಾಹರೂಪಂ ಹಾಡನ್ನು ಬಳಸದೆ ಕಾಂತಾರ ಸಿನಿಮಾ ಪ್ರದರ್ಶನ ಮಾಡಬೇಕೆಂಬ ಕೇರಳ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಫೆಬ್ರವರಿಯಲ್ಲಿ ತಡೆ ನೀಡಿತ್ತು. ಈ ಹಾಡನ್ನು ಕೃತಿ ಚೌರ್ಯ ಮಾಡಿದ ಆರೋಪದ ಮೇಲೆ ಕೋಝಿಕ್ಕೋಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ನಿರ್ದೇಶಕ ಮತ್ತು ನಿರ್ಮಾಪಕರಿಗೆ ಈ ಹಿಂದೆಯೇ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ವರಾಹರೂಪಂ ಮಲಯಾಳಂ ಮ್ಯೂಸಿಕ್ ಚಾನೆಲ್ ಕಪ್ಪ ಟಿವಿಯಲ್ಲಿ “ಥೈಕುಡಂ ಬ್ರಿಡ್ಜ್” ಎಂಬ ಮ್ಯೂಸಿಕ್ ಬ್ಯಾಂಡ್ ಪ್ರದರ್ಶಿಸಿದ “ನವರಸಂ” ಹಾಡಿನ ನಕಲು ಎಂದು ದೂರುದಾರರು ಆರೋಪಿಸಿದ್ದರು.
ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಗೆ ಸಂಬಂಧಿಸಿದಂತೆ ಮಲಯಾಳಂ ಭಾಷಾಂತರದ ವರಾಹರೂಪಂ ಸಿನಿಮಾದ ಕೇರಳದ ವಿತರಕ ಮಲಯಾಳಂ ಸಿನಿಮಾ ನಟ ಪೃಥ್ವಿರಾಜ್ ವಿರುದ್ಧದ ಎಫ್‌ಐಆರ್ ಗೂ ಹೈಕೋರ್ಟ್ ತಡೆ ನೀಡಿತ್ತು. ಸಿನಿಮಾ ವಿತರಕರನ್ನು ಪ್ರಕರಣಕ್ಕೆ ಎಳೆದು ತರುವಂತಿಲ್ಲ ಎಂದು ನ್ಯಾಯಾಲಯ ಈ ಹಿಂದೆ ಹೇಳಿದೆ.
Uncategorized
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ

ಮಂಗಳೂರು, ಅ.4: ಸಣ್ಣ ವಿಚಾರಕ್ಕೆ ಸಹಪಾಠಿಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಯೊಬ್ಬನ ಮೇಲೆ ಸಹಪಾಠಿ ಸೇರಿದಂತೆ ಆರು ಮಂದಿ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಮಹಮ್ಮದ್ ಉನೈಸ್ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಮಂಗಳೂರು ನಗರದ ಸರ್ಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಅ.3ರಂದು ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿರುವ ಉನೈಸ್ ಅವರು ಬೆಳಿಗ್ಗೆ 11.30ರ ಸುಮಾರಿಗೆ ಕಾಲೇಜಿನ ಸಮೀಪದ ಟರ್ಫ್‌ಗೆ ಕಬಡ್ಡಿ ಆಡಲು ತೆರಳಿದ್ದರು. ಈ ವೇಳೆ ಟರ್ಫ್ ಎದುರಿನ ರಸ್ತೆಯಲ್ಲಿ ಅವರ ಸ್ನೇಹಿತ ಹಾಗೂ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ ರಾಯಿಝ್ ಮತ್ತು ಅದೇ ಕಾಲೇಜಿನ ಬಿಕಾಂ ವಿದ್ಯಾರ್ಥಿ, ಕಾಟಿಪಳ್ಳ ನಿವಾಸಿ ರಿಯಾನ್ ನಡುವೆ ಸಣ್ಣ ವಿಚಾರಕ್ಕೆ ಜಗಳ ನಡೆದಿದೆ ಎನ್ನಲಾಗಿದೆ.
ಜಗಳ ಬಿಡಿಸಲು ಉನೈಸ್ ಸೇರಿದಂತೆ ಕೆಲ ವಿದ್ಯಾರ್ಥಿಗಳು ಮಧ್ಯಪ್ರವೇಶಿಸಿದಾಗ ರಿಯಾನ್ ಉನೈಸ್‌ಗೆ ಕೈಯಿಂದ ಹೊಡೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ಉನೈಸ್ ಹಾಗೂ ಇತರ ವಿದ್ಯಾರ್ಥಿಗಳು ಕಾಲೇಜಿಗೆ ವಾಪಸಾಗಿದ್ದರು.
ಮಧ್ಯಾಹ್ನ 1.45ರ ಸುಮಾರಿಗೆ ಉನೈಸ್ ಕಾಲೇಜಿನ ಕ್ಯಾಂಟೀನ್ ಬಳಿ ನಿಂತಿದ್ದಾಗ ರಿಯಾನ್ ಹಾಗೂ ಐವರು ಸಹಚರರು ಎರಡು ದ್ವಿಚಕ್ರ ವಾಹನಗಳಲ್ಲಿ ಅಲ್ಲಿಗೆ ಬಂದಿದ್ದಾರೆ ಎನ್ನಲಾಗಿದೆ. ಆರೋಪಿಗಳು ಉನೈಸ್ ಅವರನ್ನು ಸುತ್ತುವರಿದು ಹಲ್ಲೆ ನಡೆಸಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.
ಈ ವೇಳೆ ಚೂರಿಯಿಂದ ಉನೈಸ್ ಅವರ ತಲೆ, ಬೆನ್ನು, ಎಡ ಕಿವಿ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಇರಿದು ಗಾಯಗೊಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.
ಗಾಯಗೊಂಡ ಉನೈಸ್ ಅವರನ್ನು ತಕ್ಷಣ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.
Uncategorized
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ

ಪುತ್ತೂರು: ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಹೈಕೋರ್ಟ್ ವಕೀಲ ಮೊಹಿತ್ ಕುಮಾರ್ ಅವರ ತಾಯಿ, ಕೊಳ್ತಿಗೆ ಗ್ರಾಮದ ಕುಂಡಡ್ಕ ನಿವಾಸಿ ಪಾರ್ವತಿ ಕುಂಡಡ್ಕ ಅವರು ಅಲ್ಪಕಾಲದ ಅಸ್ವಸ್ಥತೆಯಿಂದ ಅ.3ರಂದು ಸ್ವಗೃಹದಲ್ಲಿ ನಿಧನರಾದರು.
ಪಾರ್ವತಿ ಅವರು ಚಾರ್ವಕ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ಹಾಗೂ ಪುತ್ತೂರಿನ ಪಶುವೈದ್ಯ ಧರ್ಮಪಾಲ ಕರಂದ್ಲಾಜೆ ಅವರ ಸಹೋದರಿ.
ಮೃತರು ಪುತ್ರರಾದ ತೀರ್ಥಪ್ರಸಾದ್ ಕೆ., ಚಿತ್ರಶೇಖರ್, ಮೋಹಿತ್ ಕುಮಾರ್ ಹಾಗೂ ಚಿರಣ್ ಕುಮಾರ್ ಅವರನ್ನು ಅಗಲಿದ್ದಾರೆ.
ವಕೀಲ ಮೋಹಿತ್ ಕುಮಾರ್ ಅವರು ಸೌಜನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ಪರ ಸಿಬಿಐ ವಿಶೇಷ ನ್ಯಾಯಾಲಯ, ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು. ಸೌಜನ್ಯ ಪ್ರಕರಣದ ನ್ಯಾಯಾಂಗ ಹೋರಾಟದಲ್ಲಿ ಅವರು ಪ್ರಮುಖವಾಗಿ ಗುರುತಿಸಿಕೊಂಡಿದ್ದರು.
ಸೌಜನ್ಯ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಹಲವು ನಾಯಕರು ಅಂತಿಮ ನಮನ ಸಲ್ಲಿಸಿದರು.
Uncategorized
Dharmasthala-28ನೇ ವರ್ಷದ ಭಜನಾ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ಸಾಮರಸ್ಯದ ಸಂಕೇತವೇ ಈ ಭಜನೆ : ಪ್ರೊ. ಪವನ್ ಕಿರಣಕೆರೆ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಅ.02, ಶುಕ್ರವಾರದಂದು ನಡೆದ 28ನೇ ವರ್ಷದ ಭಜನಾ ಕಮ್ಮಟದ ಐದನೇ ದಿನ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕ ನೆಲೆಯಲ್ಲಿ ಆಸೆಮ್ಸ್ ಶಿಕ್ಷಣ ಸಂಸ್ಥೆ ಕಲ್ಮಾಡಿ, ಉಡುಪಿ ಇಲ್ಲಿನ ಪ್ರಾಂಶುಪಾಲ ಪ್ರೊ. ಪವನ್ ಕಿರಣಕೆರೆ ಮಾತನಾಡಿದರು.

ಧರ್ಮಸ್ಥಳ, ಅ.02 : ಯಾವುದೇ ಮತ ಪಂಥಗಳ ತಾರತಮ್ಯವಿಲ್ಲದೆ ಸಾಮರಸ್ಯದಿಂದ ದೇವರನ್ನು ಸ್ಮರಿಸುವ ಏಕೈಕ ಮಾರ್ಗವೇ ಭಜನೆಯಾಗಿದ್ದು, ಇಡೀ ಸಮಾಜಕ್ಕೆ ಸಾಮರಸ್ಯವನ್ನು ಸಾರುವ ಕಾರ್ಯವನ್ನು ಈ ಭಜನಾ ಕಮ್ಮಟ ಮಾಡುತ್ತಿದೆ ಎಂದು ಪ್ರಸಂಗಕರ್ತರು, ಅರ್ಥಧಾರಿಗಳು ಹಾಗೂ ಆಸೆಮ್ಸ್ ಶಿಕ್ಷಣ ಸಂಸ್ಥೆ ಕಲ್ಮಾಡಿ, ಉಡುಪಿ ಇಲ್ಲಿನ ಪ್ರಾಂಶುಪಾಲ ಪ್ರೊ. ಪವನ್ ಕಿರಣಕೆರೆ ಅಭಿಪ್ರಾಯಪಟ್ಟರು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಅ.02, ಶುಕ್ರವಾರದಂದು ನಡೆದ 28ನೇ ವರ್ಷದ ಭಜನಾ ಕಮ್ಮಟದ ಐದನೇ ದಿನ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕ ನೆಲೆಯಲ್ಲಿ ಮಾತನಾಡಿದರು.
ಮನುಷ್ಯನ ಮನಸ್ಸಿನಲ್ಲಿರುವ ಅಸೂಯೆ, ಮತ್ಸರಗಳೇ ದುಃಖದ ಮೂಲವಾಗಿದ್ದು, ಅವೆಲ್ಲವನ್ನೂ ಕಳೆಯಲು ಭಜನೆ ಹಾಗೂ ಆಧ್ಯಾತ್ಮದಿಂದ ಮಾತ್ರ ಸಾಧ್ಯ. ಸುಖದಲ್ಲಿ ಹಿಗ್ಗದೆ, ಕಷ್ಟ ಬಂದಾಗ ಕುಗ್ಗದೆ ಎಲ್ಲವನ್ನೂ ಸಮಚಿತ್ತವಾಗಿ ಸ್ವೀಕರಿಸುವ ಮೂಲಕ ಸಾಮರಸ್ಯದ ಬದುಕನ್ನು ಭಜನೆಯಿಂದ ಕಂಡುಕೊಳ್ಳಬಹುದಾಗಿದೆ. ಭಗವಂತನ ದೃಷ್ಟಿಯಲ್ಲಿ ಭಕ್ತಿಗೆ ಪ್ರಾಧಾನ್ಯತೆಯೇ ಹೊರತು ಯಾವುದೇ ಆಡಂಬರದ ಆಚರಣೆಗಳಿಗಲ್ಲ. ಭಗವಂತನನ್ನು ಒಲಿಸಿಕೊಳ್ಳಲು ಶ್ರದ್ಧೆಯೇ ಅತ್ಯಂತ ಉತ್ತಮ ಹಾದಿಯಾಗಿದೆ ಎಂದು ಎಲ್ಲಾ ಶಿಬಿರಾರ್ಥಿಗಳಿಗೆ ಭೋದಿಸಿದರು.
ರಾಜ್ಯಾದ್ಯಂತ ಎಲ್ಲಾ ಭಕ್ತರನ್ನು ಒಗ್ಗೂಡಿಸಿ ಎಲ್ಲರ ಮಾನಸಿಕ ಶುದ್ಧತೆಯನ್ನು ಕಾಪಾಡುವ ಮೂಲಕ ಭಜನಾ ಕಮ್ಮಟವು ಅತಿ ಮುಖ್ಯ ಪಾತ್ರ ವಹಿಸಿದ್ದು, ಈ ಕಮ್ಮಟವನ್ನು ಪರ್ವವಾಗಿಸುವಲ್ಲಿ ಕಾರಣಿಭೂತರಾದ ಹೆಗ್ಗಡೆ ದಂಪತಿಗಳ ಪರಿಶ್ರಮ ಬಲು ದೊಡ್ಡದು ಎಂದು ಶ್ಲಾಘಿಸಿದರು.
-
Uncategorized7 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized6 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ
-
ದಕ್ಷಿಣ ಕನ್ನಡ9 minutes ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು


















