Connect with us

Uncategorized

Heart Attack: ಹೆಲ್ತ್‌ ಚೆಕಪ್‌ ಗೆಂದು ಆಸ್ಫತ್ರೆಗೆ ಬಂದ ಖ್ಯಾತ ಮಲಯಾಳಿ ನಟಿ 8 ತಿಂಗಳ ಗರ್ಭಿಣಿ ಹೃದಯಘಾತದಿಂದ ನಿಧನ – ಐಸಿಯುನಲ್ಲಿ ಮಗುವಿಗೆ ಆರೈಕೆ

Published

on

Ad Widget

Ad Widget

Ad Widget

Ad Widget

ತಿರುವನಂತಪುರ : 8 ತಿಂಗಳು ಗರ್ಭಿಣಿಯಾಗಿದ್ದ ಮಲಯಾಳಂ ಡಾ. ಪ್ರಿಯಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ . 35ರ ಹರೆಯದ ಇವರು ಕರುತಮುತ್ತು ಧಾರಾವಾಹಿ ಮೂಲಕ ಖ್ಯಾತಿ ಗಳಿಸಿದ್ದರು. ಕೇರಳದ ಖಾಸಗಿ ಆಸ್ಪತ್ರೆಯಲ್ಲಿ ಈಕೆ ನಿನ್ನೆ (ಅ.31) ಕೊನೆಯುಸಿರೆಳೆದಿದ್ದು, ಆಕೆಯ ಮಗುವನ್ನು ಐಸಿಯುನಲ್ಲಿ ಇರಿಸಿಲಾಗಿದೆ ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

ಗರ್ಭಿಣಿಯಾದ ಬಳಿಕ ಪ್ರತಿ ತಿಂಗಳು ನಟಿ ಹೆಲ್ತ್‌ ಚೆಕಪ್‌ ಮಾಡಿಸುತ್ತಿದ್ದು , ಅದರಂತೆ ನಿನ್ನೆ ಕೂಡ ವೈದಕೀಯ ತಪಾಸಣೆಗೆಂದು ಆಸ್ಫತ್ರೆಗೆ ತೆರಳಿದ್ದರು. ಈ ವೇಳೆ ಡಾ ಪ್ರಿಯಾ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ವೈದ್ಯರು ನಟಿಗೆ ಸೀಸರಿನ್‌ ಮೂಲಕ ಡೆಲಿವರಿ ಮಾಡಿಸಿದ್ದು , ಸದ್ಯ ನವಜಾತ ಶಿಶುಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget

Ad Widget alt="Ad Widget"/>

Ad Widget

ವೃತ್ತಿಯಲ್ಲಿ ವೈದ್ಯೆಯಾಗಿದ್ದ ಡಾ. ಪ್ರಿಯಾ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿದ್ದರು. ವೈವಾಹಿಕ ಜೀವನಕ್ಕೆ ಕಾಲಿರಿಸಿದ ನಂತರ ನಟನೆಯಿಂದ ದೂರವಿದ್ದರು.ವರದಿಗಳ ಪ್ರಕಾರ, ಆಕೆ ಎಂಡಿ ವ್ಯಾಸಂಗ ಮಾಡುತ್ತಿದ್ದರು ಮತ್ತು ತಿರುವನಂತಪುರಂನ ಪಿಆರ್‌ಎಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.

Ad Widget

Ad Widget <> Ad Widget

ಬೇರೆ ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲದ ಪ್ರಿಯಾ ಅವರು ತಪಾಸಣೆಗಾಗಿ ಆಸ್ಪತ್ರೆಗೆ ಹೋಗಿದ್ದ ವೇಳೆಯೇ ಹೃದಯ ಸ್ತಂಭನವಾಗಿದ್ದು, ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

ಪ್ರಿಯಾ ಸಾವಿನ ಕುರಿತು ನಟ, ನಿರೂಪಕ ಕಿಶೋರ್ ಸತ್ಯ ಫೇಸ್‌ಬುಕ್ ಪೋಸ್ಟ್ ನಲ್ಲಿ ನೋವು ಹಂಚಿಕೊಂಡಿದ್ದು, ” ʼಮಲಯಾಳಂ ಕಿರುತೆರೆ ಕ್ಷೇತ್ರಕ್ಕೆ ಇನ್ನೊಂದು ಶಾಕಿಂಗ್‌ ನ್ಯೂಸ್‌. ಹೃದಯಾಘಾತದಿಂದ ಡಾ. ಪ್ರಿಯಾ ಸಾವನ್ನಪ್ಪಿದ್ದಾರೆ. ಅವರು 8 ತಿಂಗಳ ಗರ್ಭಿಣಿಯಾಗಿದ್ದರು. ಆಕೆಯ ಮಗು ಈಗ ಐಸಿಯುನಲ್ಲಿದೆ. ಪ್ರಿಯಾ ಅವರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇರಲಿಲ್ಲ. ನಾರ್ಮಲ್‌ ಚೆಕ್‌ಅಪ್‌ಗೆಂದು ಆಸ್ಪತ್ರೆಗೆ ಹೋಗಿದ್ದಾಗ ಅವರಿಗೆ ಹೃದಯಾಘಾತವಾಗಿದೆ. ತನ್ನ ಒಬ್ಬಳೇ ಮಗಳ ಸಾವಿನಿಂದ ಪ್ರಿಯಾಳ ತಾಯಿ ಕಂಗಾಲಾಗಿದ್ದಾರೆ. ಕಳೆದ ಆರು ತಿಂಗಳಿನಿಂದ ಪ್ರಿಯಾಳನ್ನು ಜೋಪಾನವಾಗಿ ನೋಡಿಕೊಳ್ಳುತ್ತಿದ್ದ ಆಕೆಯ ಪರಿಸ್ಥಿತಿಯಂತೂ ಕೇಳೋದು ಬೇಡ. ಕಳೆದ ರಾತ್ರಿ ನಾನು ಆಸ್ಪತ್ರೆಗೆ ಹೋದಾಗ ಅವರನ್ನು ಹೇಗೆ ಸಾಮಾಧಾನ ಮಾಡಬೇಕು ಎಂಬುದು ನನಗೆ ಅರಿವಾಗಿಲ್ಲ. ದೇವರು ಯಾಕೆ ಒಳ್ಳೆಯವರ ವಿಚಾರದಲ್ಲಿ ಕೆಟ್ಟದಾಗಿ ವರ್ತಿಸುತ್ತಾನೆ ಎಂಬುದು ಅರಿವಾಗುವುದಿಲ್ಲʼ ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ.

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!