Uncategorized
Love Pain ಮಂಗಳೂರು : ಲವ್ ಮಾಡುತ್ತಿದ್ದ ಹುಡುಗಿ ಸುತ್ತಾಡಲು ಬಂದಿಲ್ಲ ಎಂದು ಅವಳಿದ್ದ ಪಿಜಿಗೆ ಕಲ್ಲೆಸೆದ ಭೂಪ
ಪುತ್ತೂರು : ತಾನು ಪ್ರೀತಿಸುತ್ತಿದ್ದ ಯುವತಿ ತನ್ನೊಂದಿಗೆ ಸುತ್ತಾಡಲು ಬಂದಿಲ್ಲ ಎಂದು ಕೋಪಗೊಂಡ ಯುವಕನೊಬ್ಬ ಪಿಜಿ ಹಾಸ್ಟೆಲ್ ಕಟ್ಟಡಕ್ಕೆ ಕಲ್ಲೆಸೆದು ಹಾನಿಗೊಳಿಸಿದ ವಿಚಿತ್ರ ಘಟನೆಯೊಂದಕ್ಕೆ ಬಂದರು ನಗರಿ ಮಂಗಳೂರು ಸಾಕ್ಷಿಯಾಗಿದೆ.
ಆರೋಪಿ ಸುಳ್ಯದ ವಿವೇಕ್ (18) ಕಲ್ಲೆಸೆದ ಆರೋಪಿ . ಎಲೆಕ್ಟ್ರಿಕ್ ಕೆಲಸ ಮಾಡುತ್ತಿದ್ದ ಈತ ಪಿಜಿಯಲ್ಲಿದ್ದ ಯುವತಿಯನ್ನು ಪ್ರೀತಿಸುತ್ತಿದ್ದ. ನಗರದ ಸಂತ ಆಯಗ್ನೆಸ್ ಕಾಲೇಜು ಸಮೀಪದ ಪಿಜಿಯಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ.
ಗುರುವಾರ ಸಂಜೆ ಆಕೆಯನ್ನು ಯುವಕನು ಸುತ್ತಾಡಲು ಕರೆದಿದ್ದ. ಆದರೆ ಆಕೆ ಅದಕ್ಕೆ ಒಪ್ಪದ ಕಾರಣ ಸಿಟ್ಟಾದ ವಿವೇಕ್ ಆಕೆ ಕೆಲಸ ಮಾಡುತ್ತಿದ್ದ ಪಿಜಿ ಹಾಸ್ಟೆಲ್ ಕಟ್ಟಡದ ಗಾಜುಗಳಿಗೆ ಕಲ್ಲೆಸೆದ ಎಂದು ಆರೋಪಿಸಲಾಗಿದೆ. ಈತನ ವರ್ತನೆ ನೋಡಿ ಆಕ್ರೋಶಿತ ಸಾರ್ವಜನಿಕರು ಯುವಕನಿಗೆ ಹಲ್ಲೆಗೈದು ಬಳಿಕ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
Uncategorized
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ

ಪುತ್ತೂರು: ಮುಂಬೈ ಪೊಲೀಸ್ ಹಾಗೂ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು, ಬಂಧನದ ಭೀತಿ ಹುಟ್ಟಿಸಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ₹1.31 ಕೋಟಿ ವಂಚಿಸಿರುವ ಘಟನೆ ನಡೆದಿದೆ.
ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ಸುಳ್ಳು ಆರೋಪ ಹೊರಿಸಿದ ವಂಚಕರು, ವಾಟ್ಸ್‌ಆ್ಯಪ್ ವಿಡಿಯೋ ಕರೆಗಳ ಮೂಲಕ ನಿರಂತರವಾಗಿ ಬೆದರಿಸಿದ್ದಾರೆ. ಬ್ಯಾಂಕ್ ಖಾತೆಗಳ ಪರಿಶೀಲನೆ ಮತ್ತು ಹಣದ ದೃಢೀಕರಣದ ನೆಪದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಆರ್‌ಟಿಜಿಎಸ್ ಮೂಲಕ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.
ಇದನ್ನು ನಂಬಿದ ದೂರುದಾರರು 2026ರ ಸೆ.2ರಿಂದ ಅ.6ರವರೆಗೆ ಹಂತ ಹಂತವಾಗಿ ಒಟ್ಟು ₹1,31,50,000 ಹಣವನ್ನು ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ವಂಚನೆಗೊಳಗಾಗಿದ್ದಾರೆ.
ನಂತರ ಇದು ಸೈಬರ್ ವಂಚನೆ ಎಂಬುದನ್ನು ಅರಿತ ದೂರುದಾರರು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಈ ಸಂಬಂಧ ದಕ್ಷಿಣ ಕನ್ನಡ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ನಡೆಸಲಾಗುತ್ತಿದೆ.
ಗಮನಿಸಿ: ಪೊಲೀಸ್ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ವಿಡಿಯೋ ಕರೆ ಮಾಡಿ ಬಂಧನದ ಬೆದರಿಕೆ ಒಡ್ಡಿ ಹಣ ವರ್ಗಾಯಿಸುವಂತೆ ಸೂಚಿಸುವುದು ಸೈಬರ್ ವಂಚನೆಯ ವಿಧಾನವಾಗಿದೆ. ಇಂತಹ ಕರೆಗಳನ್ನು ನಂಬದೆ, ತಕ್ಷಣವೇ 1930 ಸಹಾಯವಾಣಿಗೆ ದೂರು ನೀಡಬೇಕು.
Uncategorized
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಐಇಇಇ ಬೆಂಗಳೂರು ವಿಭಾಗ ಮತ್ತು ಐಇಇಇ ಮಂಗಳೂರು ಉಪವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್, ವಿಎಲ್‌ಎಸ್‌ಐ, ಇಲೆಕ್ಟಿçಕಲ್ ಸರ್ಕ್ಯೂಟ್ಸ್ ಮತ್ತು ರೊಬೋಟಿಕ್ಸ್ ವಿಷಯಗಳನ್ನೊಳಗೊಂಡ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನ ಡಿಸ್ಕವರ್ 2026ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಬ್ಲೂಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಇದರ ಸ್ಥಾಪಕ ಹಾಗೂ ಮುಖ್ಯ ತಂತ್ರಜ್ಞಾನ ಅಧಿಕಾರಿ ಸುದರ್ಶನ್ ಶೆನ್ವಿ ಮಾತಾಡಿದರು.

ಪುತ್ತೂರು: ನೀವು ವಿದ್ಯಾರ್ಥಿಯಾಗಿರಲಿ ಅಥವಾ ವೃತ್ತಿಪರರಾಗಿರಲಿ ಐಇಇಇ ಸದಸ್ಯತ್ವವು ನಿಮ್ಮನ್ನು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಜಾಗತಿಕ ಸಮುದಾಯಗಳೊಂದಿಗೆ ನೇರವಾಗಿ ಜೋಡಿಸುತ್ತದೆ ಎಂದು ಬೆಂಗಳೂರಿನ ಬ್ಲೂಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಇದರ ಸ್ಥಾಪಕ ಹಾಗೂ ಮುಖ್ಯ ತಂತ್ರಜ್ಞಾನ ಅಧಿಕಾರಿ ಸುದರ್ಶನ್ ಶೆನ್ವಿ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಐಇಇಇ ಬೆಂಗಳೂರು ವಿಭಾಗ ಮತ್ತು ಐಇಇಇ ಮಂಗಳೂರು ಉಪವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್, ವಿಎಲ್‌ಎಸ್‌ಐ, ಇಲೆಕ್ಟ್ರಿಕಲ್ ಸರ್ಕ್ಯೂಟ್ಸ್ ಮತ್ತು ರೊಬೋಟಿಕ್ಸ್ ವಿಷಯಗಳನ್ನೊಳಗೊಂಡ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನ ಡಿಸ್ಕವರ್ 2026ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು.
ಎಲ್ಲರೂ ಒಗ್ಗೂಡಿ ಕೆಲಸ ಮಾಡಿದರೆ ಯಾವುದನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಈ ಸಮ್ಮೇಳನವೇ ಸಾಕ್ಷಿ, ನಿಗದಿತ ಸಮಯದಲ್ಲಿ ಪ್ರತಿಯೊಂದು ಕೆಲಸಗಳು ಸಂಪನ್ನಗೊಂಡವು ಇದರ ಹಿಂದೆ ಸಹಕರಿಸಿದ ಎಲ್ಲರೂ ಅಭಿನಂದನಾರ್ಹರು ಎಂದು ನುಡಿದರು.

ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಐಇಇಇ ಬೆಂಗಳೂರು ವಿಭಾಗದ ತಾಂತ್ರಿಕ ಮತ್ತು ಸಮ್ಮೇಳನ ಪ್ರಾಯೋಜಕತ್ವ ಸಮಿತಿಯ ಸಹ ಅಧ್ಯಕ್ಷ ಡಾ.ವಾಸುದೇವ ಆಚಾರ್ಯ ಮಾತನಾಡಿ ಈ ಅಂತಾರಾಷ್ಟ್ರೀಯ ಸಮ್ಮೇಳನವು ಅತ್ಯಂತ ಉತ್ತಮ ರೀತಿಯಲ್ಲಿ ನಡೆಯಿತು. ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿದ್ದತೆಗಳು ಯಾವರೀತಿಯಲ್ಲಿ ನಡೆಯುತ್ತಿತ್ತು ಎನ್ನುವುದಕ್ಕೆ ಇದರ ಯಶಸ್ಸೇ ಸಾಕ್ಷಿ ಎಂದರು. ಕರ್ನಾಟಕದ ಎಲ್ಲಾ ಜಿಲ್ಲೆಗಳನ್ನು ಐಇಇಇಯ ವ್ಯಾಪ್ತಿಗೆ ತರುವ ಮಿಷನ್-31 ಎನ್ನುವ ಪರಿಕಲ್ಪನೆಗೆ ಎಲ್ಲರೂ ಕೈಜೋಡಿಸಿ ಇದರ ಯಶಸ್ಸಿನಲ್ಲಿ ಪಾಲುದಾರರಾಗಬೇಕು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ ಮಾತನಾಡಿ ಇಂಜಿನಿಯರಿಂಗ್ ಕಾಲೇಜಿನ ಇತಿಹಾಸದಲ್ಲಿ ಇದೊಂದು ಮುಖ್ಯ ಕಾರ್ಯಕ್ರಮವಾಗಿ ಗುರುತಿಸಲ್ಪಡುವಂತಾಯ್ತು ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು. ನಮ್ಮ ಸಂಸ್ಥೆಯು ವಿದ್ಯಾರ್ಥಿಗಳ ಔನ್ನತ್ಯಕ್ಕಾಗಿ ಇಂತಹ ಕಾರ್ಯಕ್ರಮಗಳನ್ನು ಏರ್ಪಡಿಸುವುದಕ್ಕೆ ಉತ್ಸುಕವಾಗಿದೆ ಎಂದರು.
ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಐಇಇಇ ಮಂಗಳೂರು ಉಪವಿಭಾಗದ ಮುಖ್ಯಸ್ಥ ಡಾ.ವೇಣುಗೋಪಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ಸಂಯೋಜಕಿಯರಲ್ಲೊಬ್ಬರಾದ ಡಾ.ರಜನಿ ರೈ.ಬಿ ಎರಡು ದಿನಗಳ ಕಾಲ ನಡೆದ ಈ ಸಮ್ಮೇಳನದ ವರದಿಯನ್ನು ವಾಚಿಸಿದರು. ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ.ರೇಶ್ಮಾ ಪೈ ಅತಿಥಿಗಳನ್ನು ಪರಿಚಯಿಸಿದರು.
ಒಟ್ಟು ಆರು ವಿಭಾಗಗಳಲ್ಲಿ ನಡೆದ ಪ್ರಬಂಧ ಮಂಡನೆಯಲ್ಲಿ ಪ್ರತಿ ವಿಭಾಗದಲ್ಲಿಯೂ ಉತ್ತಮವಾದ ಪ್ರಬಂಧಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಎಂಸಿಎ ವಿಭಾಗದ ನಿರ್ದೇಶಕಿ ಡಾ.ಜೋತಿಮಣಿ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕಿ ಡಾ.ಜೀವಿತಾ.ಬಿ.ಕೆ ವಂದಿಸಿದರು. ಮೂಲ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ. ಶ್ರೀಶರಣ್ಯ ಕಾರ್ಯಕ್ರಮ ನಿರ್ವಹಿಸಿದರು.
Uncategorized
Sahyadri College-ಸಹ್ಯಾದ್ರಿ ಕಾಲೇಜು AICTE IDEA ಲ್ಯಾಬ್ ಉದ್ಘಾಟನೆ
ನೋಯ್ಡಾದ ಜೆಎಸ್‌ಎಸ್ (JSS) ವಿಶ್ವವಿದ್ಯಾಲಯದ ಮಾಜಿ ಕುಲಪತಿಗಳಾದ ಡಾ. ಎಚ್. ಆರ್. ಮಹಾದೇವಸ್ವಾಮಿ ಅವರು, ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ‘ಸಹ್ಯಾದ್ರಿ AICTE IDEA ಲ್ಯಾಬ್’ ಅನ್ನು 09-10-2026 (ಶುಕ್ರವಾರ) ರಂದು ಉದ್ಘಾಟಿಸಿದರು.

ನೋಯ್ಡಾದ ಜೆಎಸ್‌ಎಸ್ (JSS) ವಿಶ್ವವಿದ್ಯಾಲಯದ ಮಾಜಿ ಕುಲಪತಿಗಳಾದ ಡಾ. ಎಚ್. ಆರ್. ಮಹಾದೇವಸ್ವಾಮಿ ಅವರು, ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ‘ಸಹ್ಯಾದ್ರಿ AICTE IDEA ಲ್ಯಾಬ್’ ಅನ್ನು 09-10-2026 (ಶುಕ್ರವಾರ) ರಂದು ಉದ್ಘಾಟಿಸಿದರು.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ (AICTE) ‘IDEA’ (ಐಡಿಯಾ, ಡೆವಲಪ್‌ಮೆಂಟ್, ಇವ್ಯಾಲ್ಯುಯೇಷನ್ ಮತ್ತು ಅಪ್ಲಿಕೇಶನ್ – ಅಂದರೆ ಕಲ್ಪನೆ, ಅಭಿವೃದ್ಧಿ, ಮೌಲ್ಯಮಾಪನ ಮತ್ತು ಅನ್ವಯ) ಯೋಜನೆಯು, ವಿದ್ಯಾರ್ಥಿಗಳು ಮತ್ತು ಬೋಧಕರಿಗೆ ತಮ್ಮ ಕಲ್ಪನೆಯನ್ನು ಕಾರ್ಯಸಾಧ್ಯವಾದ ಮಾದರಿಯಾಗಿ (ಪ್ರೊಟೊಟೈಪ್) ಪರಿವರ್ತಿಸಲು ಒಂದೇ ಸೂರಿನಡಿ ವೇದಿಕೆಯನ್ನು ಒದಗಿಸುತ್ತದೆ. ಈ ಪ್ರಯೋಗಾಲಯವು 3,817 ಚದರ ಅಡಿ ವಿಸ್ತೀರ್ಣವನ್ನು ಹೊಂದಿದ್ದು, ಇದರ ಯೋಜನಾ ವೆಚ್ಚ 90 ಲಕ್ಷ ರೂಪಾಯಿಗಳಾಗಿವೆ. ಇಲ್ಲಿನ ಸೌಲಭ್ಯಗಳಲ್ಲಿ 3D ಪ್ರಿಂಟರ್ ಮತ್ತು 3D ಸ್ಕ್ಯಾನರ್, CNC ರೂಟರ್, ವಿನೈಲ್ ಕಟ್ಟರ್, ಬಹುಪಯೋಗಿ ಲೇತ್ ಮತ್ತು ಮಿಲ್ಲಿಂಗ್ ಯಂತ್ರಗಳು, ಡ್ರಿಲ್ಲಿಂಗ್ ಮತ್ತು ವೆಲ್ಡಿಂಗ್ ಯಂತ್ರಗಳು, ಸೋಲ್ಡರಿಂಗ್ ಸ್ಟೇಷನ್‌ಗಳು, ಡಿಜಿಟಲ್ ಸೂಕ್ಷ್ಮದರ್ಶಕಗಳು (ಮೈಕ್ರೋಸ್ಕೋಪ್‌ಗಳು) ಮತ್ತು ಆಸಿಲೋಸ್ಕೋಪ್‌ಗಳು ಸೇರಿವೆ.

ಉದ್ಘಾಟನಾ ಭಾಷಣದಲ್ಲಿ, ಡಾ. ಮಹಾದೇವಸ್ವಾಮಿ ಅವರು ನಾವೀನ್ಯತೆ, ಬೌದ್ಧಿಕ ಆಸ್ತಿ ಹಕ್ಕುಗಳು (IPR) ಮತ್ತು ದೇಶದಲ್ಲಿ ಉದ್ಯಮಶೀಲತೆಯ ವ್ಯಾಪ್ತಿಯ ಕುರಿತು ಮಾತನಾಡಿದರು.
ಪ್ರಾಂಶುಪಾಲರಾದ ಡಾ. ಎಸ್. ಎಸ್. ಇಂಜಗನೇರಿ ಅವರು ಸ್ವಾಗತ ಭಾಷಣ ಮಾಡಿದರು. ಸಂಯೋಜಕರಾದ ಡಾ. ಅಜಿತ್ ಬಿ. ಎಸ್. ಅವರು ಪ್ರಯೋಗಾಲಯದ ಕುರಿತು ಸಂಕ್ಷಿಪ್ತ ಪರಿಚಯವನ್ನು ನೀಡಿದರು ಹಾಗೂ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ನಿರ್ದೇಶಕರು (ಸಂಶೋಧನೆ ಮತ್ತು ಅಭಿವೃದ್ಧಿ) ಆದ ಡಾ. ಎಸ್. ಮಂಜಪ್ಪ ಅವರು, AICTE IDEA ಪ್ರಯೋಗಾಲಯದ ವ್ಯಾಪ್ತಿ ಮತ್ತು ಉದ್ದೇಶಗಳು, ಪ್ರಾಯೋಜಕ ಸಂಸ್ಥೆಗಳ ಪಾತ್ರ ಹಾಗೂ ಸಹ್ಯಾದ್ರಿಯಲ್ಲಿ ಕೈಗೊಂಡ ಅಭಿವೃದ್ಧಿಪರ ಉಪಕ್ರಮಗಳು ಸಂಸ್ಥೆಗೆ ತಂದುಕೊಟ್ಟಿರುವ ವಿವಿಧ ಮನ್ನಣೆಗಳ ಕುರಿತು ವಿವರಿಸಿದರು.
ಈ ಉಪಕ್ರಮಗಳು ಎಲ್ಲಾ ಪಾಲುದಾರರಿಗೆ ಹೇಗೆ ಪ್ರಯೋಜನಕಾರಿಯಾಗಿವೆ ಮತ್ತು ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಹೇಗೆ ಕೊಡುಗೆ ನೀಡುತ್ತವೆ ಎಂಬುದನ್ನು ಅವರು ಒತ್ತಿ ಹೇಳಿದರು. ಆಡಳಿತಾಧಿಕಾರಿ ಶ್ರೀ ಕೃಷ್ಣ ಹೆಗಡೆ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಪ್ರಾಯೋಗಿಕ ಕಲಿಕೆ ಮತ್ತು ಅನ್ವಯಿಕ ಅಭ್ಯಾಸಗಳ ಮೂಲಕ ಸಮಸ್ಯೆಗಳನ್ನು ಪರಿಹರಿಸುವ ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಮಹತ್ವವನ್ನು ತಿಳಿಸಿದರು. ಸಹ-ಸಂಯೋಜಕರಾದ ಡಾ. ದುದ್ದೆಲ ಸಾಯಿ ಪ್ರಶಾಂತ್ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವನ್ನು ಡಾ. ಆಯೇಷಾ ಶಬಾನಾ ಅವರು ನಿರೂಪಿಸಿದರು.

ಮುಂದಿನ ಎರಡು ವರ್ಷಗಳಲ್ಲಿ, ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮಗಳು, ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮಗಳು, ಹೊಸ ಆಲೋಚನೆಗಳನ್ನು ರೂಪಿಸುವ ಕಾರ್ಯಾಗಾರಗಳು (ideation workshops) ಮತ್ತು ಇಂಟರ್ನ್‌ಶಿಪ್‌ಗಳನ್ನು ಆಯೋಜಿಸಲು ಯೋಜಿಸಲಾಗಿದೆ. ಅಲ್ಲದೆ, ಇದು ಉದ್ಯಮ ವಲಯ, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗಾಗಿ ಸಂಪರ್ಕ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು (outreach programs) ನಡೆಸಲಿದೆ ಮತ್ತು AICTEಯ ‘IDEA ಲ್ಯಾಬ್’ಗಳ ರಾಷ್ಟ್ರೀಯ ಜಾಲದ ಭಾಗವಾಗಲಿದೆ. ಸಹ್ಯಾದ್ರಿ ಹಾಗೂ ಕರಾವಳಿ ಪ್ರದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.
-
ಮಂಗಳೂರು19 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್20 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
ಸುಳ್ಯ22 hours agoSullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
-
ಅಪರಾಧ22 hours agoUdupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
-
ಅಂತರ ರಾಜ್ಯ22 hours agoElon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್
-
Uncategorized15 hours ago
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
-
ಮಂಗಳೂರು20 hours agoABVP protest-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ
-
ಕ್ರೀಡೆ19 hours agoMCC:ಎಂಸಿಸಿಯಿಂದ ಕ್ರಿಕೆಟ್ ನಿಯಮಗಳ ಪರಿಷ್ಕರಣೆ: ಅ.1ರಿಂದ ಹೊಸ ಬದಲಾವಣೆಗಳು ಜಾರಿ


















