ದಕ್ಷಿಣ ಕನ್ನಡ
Social media Adverse Effect ವಿಟ್ಲ : ಇನ್ಸ್ಟಾಗ್ರಾಂ ಮೂಲಕ ಸಂಪರ್ಕ ಸಾಧಿಸಿ ಬಾಲಕಿಯರಿಬ್ಬರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ
Social media Adverse Effect ವಿಟ್ಲ: ಇನ್ಸ್ಟಾ ಗ್ರಾಮ್ ನಲ್ಲಿ ಫೇಕ್ ಐಡಿ ಸೃಷ್ಟಿಸಿ ಪರಸ್ಪರ ಸಂಬಂಧಿಗಳು ಆಗಿರುವ ಬಾಲಕಿಯರಿಬ್ಬರನ್ನು ಬಲೆಗೆ ಕೆಡವಿ ಅವರ ಮೇಲೆ ಕೇರಳ ಮೂಲದ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ವರದಿಯಾಗಿದೆ. ಈ ಯುವಕನನ್ನು ಪೋಕ್ಸೋ ಪ್ರಕರಣದಡಿ ಬಂದಿಸಲಾಗಿದೆ ಎಂದು ಹೇಳಲಾಗುತ್ತಿದೆಯಾದರೂ ಪೊಲೀಸ್ ಇಲಾಖೆ ಇದನ್ನು ದೃಢಪಡಿಸಿಲ್ಲದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆ ಹುಟ್ಟು ಹಾಕಿದೆ
ಆರೋಪಿ ಯುವಕ ಕೇರಳದ ಆಗರ್ಭ ಸಿರಿವಂತ ಕುಟುಂಬಕ್ಕೆ ಸೇರಿದವನಾಗಿದ್ದಾನೆ ಎನ್ನಲಾಗುತ್ತಿದೆ. ವಿಟ್ಲ ಠಾಣಾ ವ್ಯಾಪ್ತಿಯ ಗ್ರಾಮಾಂತರ ಪ್ರದೇಶದ ಪರಸ್ಪರ ಸಂಬಂಧಿಕರಾಗಿರುವ ಅಪ್ರಾಪ್ತೆಯಾರಾದ ಬಾಲಕಿಯರು ಸಂತ್ರಸ್ತೆಯರು. ಇವರಿಬ್ಬರ ಮನೆ ಕೂಗಳತೆ ದೂರದಲ್ಲಿದೆ. ಇಬ್ಬರಲ್ಲೂ ತನ್ನು ಗುರತನ್ನು ಮುಚ್ಚಿಟ್ಟು ಕೃತ್ಯ ಎಸಗಿದ್ದಾನೆಂದು ತಿಳಿದು ಬಂದಿದೆ
ಆರೋಪಿ ಯುವಕ ಹುಡುಗಿಯರ ಹೆಸರಿನಲ್ಲಿ ಸೇರಿದಂತೆ ಸಾಮಾಜಿಕ ಜಾಲತಾಣ Instagram ನಲ್ಲಿ ಮೂರು ನಕಲಿ ಐಡಿ ಸೃಷ್ಟಿಸಿದ್ದ. ಆ ಐಡಿಯ ಮೂಲಕ ಸಂತ್ರಸ್ತ ಬಾಲಕಿಯರ ಸಂಪರ್ಕ ಸಾಧಿಸಿ ಅವರ ಗೆಳೆತನ ಹಾಗೂ ಆತ್ಮೀಯತೆ ಸಂಪಾದಿಸಿದ್ದ . ಬಳಿಕ ಆರೋಪಿ ತಡರಾತ್ರಿ ಆಕೆ ಮನೆ ಸಮೀಪ ಬಂದು, ಲೈಂಗಿಕ ದೌರ್ಜನ್ಯ ಎಸಗಿದ್ದನೆಂದು ತಿಳಿದುಬಂದಿದೆ.
ಇಬ್ಬರು ಬಾಲಕಿಯರ ಮನೆಗೂ ಹಲವು ಬಾರಿ ಆರೋಪಿ ತಡರಾತ್ರಿ ಆಗಮಿಸಿ ದೈಹಿಕ ಸಂಪರ್ಕ ಬೆಳೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಇಬ್ಬರಿಂದಲೂ ದೂರನ್ನು ಪಡೆದುಕೊಂಡಿರುವ ಪೊಲೀಸರು ಪ್ರತ್ಯೇಕ ಎರಡು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಹಾಗೂ ಆತನಿಗೆ ನ್ಯಾಯಾಂಗ ಬಂದನ ವಿಧಿಸಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಅಪರಾಧ
Mangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅ.8ರಂದು ರಾತ್ರಿ ಸುಮಾರು 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಸಮೀಪ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳು:
ಅಬ್ದುಲ್ ಹಾಪೀಲ್ (25) ಮಂಗಳಪಾಡಿ, ಕಾಸರಗೋಡು
ಜಿಯಾವುಲ್ ಹಕ್ (30) ಕಸಬಾ ಬೆಂಗ್ರೆ, ಕೂಳೂರು, ಮಂಗಳೂರು
ಅಲ್ತಾಫ್ (28) ಪಾಂಡೇಶ್ವರ, ಮಂಗಳೂರು
ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಬಚ್ಚಿಟ್ಟು ಸಾಗಾಟಕ್ಕೆ ಸಂಚು
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಪಂಜಾಬ್‌ನ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್‌ನ ನೀರು ಸಂಗ್ರಹಿಸುವ ಭಾಗದಲ್ಲಿ ಭದ್ರವಾಗಿ ಬಚ್ಚಿಡುತ್ತಿದ್ದರು. ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ಇಲ್ಲಿಂದ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.
ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ವಿರುದ್ಧ ಈ ಹಿಂದೆಯೂ ಪ್ರಕರಣ
ಬಂಧಿತ ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಜಿಯಾವುಲ್ ಹಕ್ ದುಬೈನ ರಾಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಅಲ್ತಾಫ್ ವಿರುದ್ಧವೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಗ್ಲಿಷ್ ಭಾಷಣ ಸ್ಪರ್ಧೆ
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.
ಪುತ್ತೂರು, ಅ.8: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.
“ಎಮೋಷನಲ್ ಇಂಟೆಲಿಜೆನ್ಸ್, ಎಮೋಷನಲ್ ಲೈಫ್, ಎಮೋಷನಲ್ ಕೋಶಂಟ್ ಮತ್ತು ಎಮೋಷನಲ್ ಮ್ಯಾನೇಜ್ಮೆಂಟ್” ಎಂಬ ವಿಷಯದ ಕುರಿತು ನಡೆದ ಈ ಸ್ಪರ್ಧೆಯನ್ನು ಪ್ರಾಂಶುಪಾಲರಾದ ರೆ| ಡಾ| ಆಂಟನಿ ಪ್ರಕಾಶ್ ಮೊಂತೇರೊ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಭಾವನಾತ್ಮಕ ಬುದ್ಧಿವಂತಿಕೆ ಮತ್ತು ಭಾವನಾತ್ಮಕ ನಿರ್ವಹಣೆಯ ಪ್ರಸ್ತುತತೆಯನ್ನು ಎತ್ತಿ ತೋರಿಸಿದರು. ಯಶಸ್ಸಿಗೆ ಕೇವಲ ಶೈಕ್ಷಣಿಕ ಜ್ಞಾನವೊಂದೇ ಸಾಕಾಗುವುದಿಲ್ಲ; ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ನಿರ್ವಹಿಸುವ, ಇತರರೊಂದಿಗೆ ಸಹಾನುಭೂತಿ ಹೊಂದುವ, ಸವಾಲುಗಳನ್ನು ಎದುರಿಸುವ ಮತ್ತು ಆರೋಗ್ಯಕರ ಸಂಬಂಧಗಳನ್ನು ಕಾಪಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು” ಎಂದು ಅವರು ಅಭಿಪ್ರಾಯಪಟ್ಟರು.
ಭಾಷಣ ಸ್ಪರ್ಧೆಗಳಂತಹ ವೇದಿಕೆಗಳು ವಿದ್ಯಾರ್ಥಿಗಳು ತಮ್ಮ ಆಲೋಚನೆಗಳನ್ನು ಆತ್ಮವಿಶ್ವಾಸದಿಂದ ವ್ಯಕ್ತಪಡಿಸಲು, ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಲು ಮತ್ತು ತಮ್ಮ ಆಲೋಚನೆಗಳನ್ನು ಪರಿಣಾಮಕಾರಿಯಾಗಿ ಸಂವಹನ ಮಾಡಲು ಕಲಿಯಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು.
ಸ್ಪರ್ಧೆಯಲ್ಲಿ ಕಾಲೇಜಿನ ನಿವೃತ್ತ ಉಪ-ಪ್ರಾಂಶುಪಾಲರಾದ ಡಾ| ಎ. ಪಿ. ರಾಧಾಕೃಷ್ಣ ಮತ್ತು ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ| ಈಶ್ವರ ಗೌಡ ಪಿ. ಅವರು ತೀರ್ಪುಗಾರರಾಗಿ ಭಾಗವಹಿಸಿದ್ದರು
ಸ್ಪರ್ಧೆಯ ಫಲಿತಾಂಶ:
ತೀವ್ರ ಪೈಪೋಟಿಯಿಂದ ನಡೆದ ಈ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಎಂ.ಸಿ.ಎ ತರಗತಿಯ ಡೆಲಿಶಾ ಲೋಬೋ ಪ್ರಥಮ ಸ್ಥಾನ, ತೃತೀಯ ಬಿ.ಕಾಂನ ಅಪೂರ್ವ ಡಿ. ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಬಿ.ಸಿ.ಎ ತರಗತಿಯ ಪ್ರತ್ಯಕ್ಷ ಪಿ. ಎ. ತೃತೀಯ ಸ್ಥಾನ ಪಡೆದರು. ಜೆನಿಶಾ ಕುಟಿನ್ಹಾ (ದ್ವಿತೀಯ ಬಿ.ಎಸ್ಸಿ) ಮತ್ತು ಕೃಷ್ಣ ವಂಶಿ (ದ್ವಿತೀಯ ಬಿ.ಬಿ.ಎ) ಸಮಾಧಾನಕರ ಬಹುಮಾನಗಳನ್ನು ಪಡೆದುಕೊಂಡರು.
ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಸಂಯೋಜಕರಾದ ಪ್ರಶಾಂತ್ ರೈ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕರಾದ ಅಬ್ದುಲ್ ರೆಹಮಾನ್ ಜಿ. ವಂದನಾರ್ಪಣೆ ಮಾಡಿದರು ಸನ್ನಿಧಿ (ಪ್ರಥಮ ಬಿ.ಬಿ.ಎ.) ಮತ್ತು ಮಾನಸ (ತೃತೀಯ ಬಿ.ಎಸ್ಸಿ.) ಪ್ರಾರ್ಥಿಸಿದರು.
ಸ್ನಾತಕೋತ್ತರ ವಿಭಾಗದ ಗ್ರಂಥಪಾಲಕ ಮನೋಹರ್ ಎಸ್. ಜಿ. ಹಾಗೂ ಎಂ.ಸಿ.ಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅಕ್ಷತಾ ಬಿ. ಸಹಕರಿಸಿದರು.
ಶಿಕ್ಷಣ
Philomena-ಎತ್ತರ ಜಿಗಿತ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಸುಫೈ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಪುತ್ತೂರು: ತುಮಕೂರು ಡಿಸ್ಟ್ರಿಕ್ಟ್ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು, ಅ 23 ಮತ್ತು 27ರಂದು ತಮಿಳುನಾಡಿನ ಜೆ. ಎನ್ ಕ್ರೀಡಾಂಗಣ ಚೆನ್ನೈ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎತ್ತರ ಜಿಗಿತ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಇವರು ಬಪ್ಪಳಿಗೆ ನಿವಾಸಿ ಇಸ್ಮೈಲ್ ಪಿ ಎಂ ಹಾಗೂ ಕಮರುನ್ನಿಸಾ ದಂಪತಿಗಳ ಪುತ್ರನಾಗಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
-
ಬಿಗ್ ನ್ಯೂಸ್24 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ23 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ23 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ22 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಸ್ಥಳೀಯ5 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಅಪರಾಧ5 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಬಿಗ್ ನ್ಯೂಸ್5 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಮಂಗಳೂರು21 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















