ಉಡುಪಿ
ಗಂಡ ಹೆಂಡತಿ ಜಗಳದಿಂದ ಸಾವಿರಕ್ಕೂ ಮಿಕ್ಕಿ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನ ಅತಂತ್ರ..! ಶಿಕ್ಷಣ ಕ್ರಾಂತಿಯ ತುಳುನಾಡಿನಲ್ಲೊಂದು ವಿಚಿತ್ರ ಘಟನೆ
ಉಡುಪಿ : ಗಂಡ ಹೆಂಡತಿ ನಡುವೆ ನಡೆಯುತ್ತಿರುವ ಜಗಳದಿಂದಾಗಿ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ ವಿಚಿತ್ರ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಕರಾವಳಿ ಜಿಲ್ಲೆ ಉಡುಪಿಯಲ್ಲಿ, ಸಾಂಸಾರಿಕ ಗದ್ದಲವೊಂದು ಶಿಕ್ಷಣ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಪ್ರತಿಷ್ಠಿತ ಸಂಸ್ಥೆಯನ್ನು ನಡೆಸುತ್ತಿರುವ ಕೇರಳ ದಂಪತಿಗಳ ನಡುವೆ ಉಂಟಾದ ಸಾಂಸಾರಿಕ ಗಲಾಟೆಗೆ ಇದೀಗ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಂಕು ಕವಿದಂತಾಗಿದೆ. ಕಾಲೇಜಿನ ಮುಖ್ಯಸ್ಥರು ಯಾರು? ಎಂಬ ವಿಷಯ ಇತ್ಯರ್ಥಕ್ಕಾಗಿ ಶುರುವಾಗಿರುವ ಗಲಾಟೆ ತಾರಕಕ್ಕೇರಿ ಇಂದು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಭಾರಿ ಗದ್ದಲ ಉಂಟಾಯಿತು. ಕೇರಳದಲ್ಲಿ ನೋಂದಣಿ ಮಾಡಿಕೊಂಡಿರುವ ಈ ಸಂಸ್ಥೆ ಸದ್ಯ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಸಾಯ್ಬರಕಟ್ಟೆ ಸಮೀಪದ ಮಧುವನದಲ್ಲಿ 18 ಎಕರೆ ವಿಸ್ತಾರದಲ್ಲಿ ಕಾರ್ಯನಿರ್ವಹಿಸುತ್ತಿದೆ.
ಒಂದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ನರ್ಸಿಂಗ್, ಏವಿಯೇಷನ್ ಸೇರಿದಂತೆ ಹಲವು ಪದವಿಗಳನ್ನು ಕಲಿಯುತ್ತಿದ್ದಾರೆ. ಆದರೆ ದಂಪತಿಯ ನಡುವಿನ ಕಚ್ಚಾಟ ಆರಂಭವಾದ ನಂತರ, ಮಕ್ಕಳ ಭವಿಷ್ಯ ಮಂಕಾಗಿದೆ. ಕಾಲೇಜಿನಲ್ಲಿ ಹೆಚ್ಚು ಶುಲ್ಕ ತೆಗೆದುಕೊಳ್ಳುತ್ತಾರೆ. ಪಾಠದ ವ್ಯವಸ್ಥೆ ಸರಿಯಾಗಿಲ್ಲ, ಸಂಸ್ಥೆ ಬಿಟ್ಟು ಹೋದರೆ ಟಿ ಸಿ ಕೊಡಲ್ಲ ಎಂದು ಊರು ಮತ್ತು ಪರ ಊರಿನ ವಿದ್ಯಾರ್ಥಿಗಳು ದೂರಿಕೊಂಡಿದ್ದಾರೆ. ಇನ್ನೂಈ ಕಾಲೇಜಿಗೆ ನಾನೇ ಅಧ್ಯಕ್ಷೆ, ವಿದ್ಯಾರ್ಥಿಗಳಿಂದ ಲಕ್ಷಾಂತರ ರೂಪಾಯಿ ಕಸಿದುಕೊಂಡು ಸೂಕ್ತ ಸಿಬ್ಬಂದಿ ವ್ಯವಸ್ಥೆ ಮಾಡದೆ ಮಕ್ಕಳ ಭವಿಷ್ಯದ ಜೊತೆ ಮಧು ಚೆಲ್ಲಾಟವಾಡುತ್ತಿದ್ದಾನೆ ಎಂದು ಮಹಿಮಾ ಆರೋಪಿಸಿದರು.
ನಾನು ಈ ಸಂಸ್ಥೆ ಬಿಟ್ಟು ಹೋಗಲ್ಲ ಎಂದು ಪಟ್ಟು ಹಿಡಿದಿರುವ ಈ ಮಹಿಳೆಯ ಹೆಸರು ಮಹಿಮಾ, ಮೂಲತಃ ಮುಸ್ಲಿಂ ಆದರೂ, ಮಧು ಎಂಬವರ ಜೊತೆ ಮದುವೆಯಾದ ಬಳಿಕ ತಮ್ಮ ಹೆಸರನ್ನು ಮಹಿಮಾ ಎಂದು ಬದಲಾಯಿಸಿಕೊಂಡಿದ್ದಾರೆ. ಎರಡು ದಶಕದ ದಾಂಪತ್ಯ ಜೀವನದ ಜೊತೆಗೆ, ಒಂದುವರೆ ದಶಕದಿಂದ ಜಂಟಿಯಾಗಿ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ದುರಾದೃಷ್ಟವಷಾತ್ ಕಳೆದ ಎರಡು ವರ್ಷಗಳಿಂದ ಇವರ ದಾಂಪತ್ಯದಲ್ಲಿ ಬಿರುಕು ಕಂಡು ಬಂದಿದೆ. ಪತಿಗೆ ಅಕ್ರಮ ಸಂಬಂಧ ಇರುವುದೇ ಇದಕ್ಕೆ ಕಾರಣ ಎಂದು ಮಹಿಮಾ ಆರೋಪಿಸಿದ್ದಾರೆ. ಹಾಗಾಗಿ ಆತನನ್ನು ಕಾಲೇಜು ಚೇರ್ಮನ್ ಹುದ್ದೆಯಿಂದ ಹೊರ ಹಾಕಿರುವುದಾಗಿ ಹೇಳುತ್ತಾರೆ.
ಈ ಸಂಸ್ಥೆಗೆ ನಾನೇ ಅಧ್ಯಕ್ಷೆ, ಹೊಸ ಆಡಳಿತ ಮಂಡಳಿಯ ಮೂಲಕ ಕಾಲೇಜು ನಡೆಸುತ್ತೇನೆ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಇಂದು ಕಾಲೇಜಿನ ನೂರಾರು ವಿದ್ಯಾರ್ಥಿಗಳ ಬೆಂಬಲದೊಂದಿಗೆ, ಕ್ಯಾಂಪಸ್ ಗೆ ಬಂದ ಮಹಿಮಾಗೆ ಪೊಲೀಸರು ಅಡ್ಡಿಪಡಿಸಿದರು. ಈ ವೇಳೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಪೊಲೀಸರು ತಡೆದರು. ಈ ವೇಳೆ ಕ್ಯಾಂಪಸ್ ನಲ್ಲಿ ಗೊಂದಲದ ವಾತಾವರಣ ಉಂಟಾಯಿತು.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
-
ಅಪರಾಧ9 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್6 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಮಂಗಳೂರು7 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ಸ್ಥಳೀಯ6 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಅಂತರ ರಾಜ್ಯ7 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್‌ಐಆರ್ ದಾಖಲು..!
-
ಸ್ಥಳೀಯ7 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
-
ಮಂಗಳೂರು8 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಅಂತರ ರಾಜ್ಯ7 hours agoWhatsApp Web: WhatsApp Web ಬಳಕೆದಾರರೇ ಎಚ್ಚರ..! ಟ್ಯಾಬ್ ಮುಚ್ಚಿದರೆ ಸಾಲದು, ಲಾಗೌಟ್ ಆಗದಿದ್ದರೆ ನಿಮ್ಮ ಖಾಸಗಿ ಚಾಟ್ ಬೇರೆಯವರ ಪಾಲು; ಕೇಂದ್ರ ಸರಕಾರದಿಂದ ಮಹತ್ವದ ಎಚ್ಚರಿಕೆ















