ದಕ್ಷಿಣ ಕನ್ನಡ
ಶ್ರೀಕ್ಷೇತ್ರ ಧರ್ಮಸ್ಥಳದಿಂದ ಕನ್ನಡ ಮಾಧ್ಯಮ ಶಾಲೆಗಳ ಉಳಿಸಿ ಬೆಳೆಸುವ ಯೋಜನೆಯನ್ವಯ 404 ಶಾಲೆಗಳಿಗೆ 3472 ಜೊತೆ ಡೆಸ್ಕ್-ಬೆಂಚುಗಳ ವಿತರಣೆ
ಉಜಿರೆ: ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಲು ಧರ್ಮಸ್ಥಳದ ವತಿಯಿಂದ ಪೂರ್ಣ ಸಹಕಾರ, ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಲಾಗುವುದು. ತನ್ಮೂಲಕ ಕನ್ನಡ ನಾಡು-ನುಡಿ, ಸಂಸ್ಕೃತಿ ರಕ್ಷಣೆ ಬಗ್ಗೆ ಅರಿವು, ಜಾಗೃತಿ ಮೂಡಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಶನಿವಾರ ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಾಸನ, ಮಂಡ್ಯ, ಮೈಸೂರು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ 404 ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚುಗಳನ್ನು ವಿತರಿಸಿ ಮಾತನಾಡಿದರು. ಇದಕ್ಕಾಗಿ ಎರಡೂವರೆ ಕೋಟಿ ರೂ. ವಿನಿಯೋಗಿಸಿದ್ದು ಸುಮಾರು ಹದಿನೆಂಟು ಸಾವಿರ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.
ಜ್ಞಾನದೀಪಶಿಕ್ಷಣ ಕಾರ್ಯಕ್ರಮದಡಿಯಲ್ಲಿ 1003 ಸ್ವಯಂ-ಸೇವಕ ಶಿಕ್ಷಕರು/ಶಿಕ್ಷಕಿಯರನ್ನು ಶಾಲೆಗಳಿಗೆ ನಿಯೋಜನೆ ಮಾಡಲಾಗಿದೆ. ಅಲ್ಲದೆ ಶಾಲಾ ಕಟ್ಟಡ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಶೌಚಾಲಯ ರಚನೆ, ಆಟದ ಮೈದಾನ ಮೊದಲಾದವುಗಳಿಗೆ ಈ ವರೆಗೆ 13,01 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಹೆಗ್ಗಡೆಯವರು ಪ್ರಕಟಿಸಿದರು.
ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಉಜಿರೆಯ ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಮತ್ತು ಸಮಾಜ ಸೇವಕ ಚಾರ್ಮಾಡಿ ಹಸನಬ್ಬ ಅವರನ್ನು ಧರ್ಮಸ್ಥಳದ ವತಿಯಿಂದ ಗೌರವಿಸಿ ಆಭಿನಂದಿಸಲಾಯಿತು, ಸನ್ಮಾನಿತರು ಅಭಿನಂದನೆಗೆ ಕೃತಜ್ಞತೆ ವ್ಯಕ್ತಪಡಿಸಿದರು.

ಹೇಮಾವತಿ ವೀ, ಹೆಗ್ಗಡೆ, ಎಸ್.ಡಿ.ಎಂ, ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಸ್ಥಾಪಕ ವೈದ್ಯಾಧಿಕಾರಿ ಡಾ. ರುದ್ರಪ್ಪ, ಡಾ. ದೀಪಿಕಾ ಶೆಟ್ಟಿ, ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಮುಖ್ಯನಿರ್ವಹಣಾಧಿಕಾರಿ ಅನಿಲ್‌ಕುಮಾರ್, ಪ್ರಾದೇಶಿಕ ಹಣಕಾಸು ನಿರ್ದೇಶಕ ಶಾಂತರಾಮ ಪೈ ಉಪಸ್ಥಿತರಿದ್ದರು.ಯೋಜನಾಧಿಕಾರಿ ಜಯಾನಂದ ಸ್ವಾಗತಿಸಿದರು. ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಧನ್ಯವಾದವಿತ್ತರು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.
-
ರಾಜಕೀಯ21 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ22 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಬಿಗ್ ನ್ಯೂಸ್5 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಅಂತರ ರಾಜ್ಯ22 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಕಾರ್ಯಕ್ರಮಗಳು22 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ22 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಮಂಗಳೂರು5 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಬಿಗ್ ನ್ಯೂಸ್5 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್















