ದಕ್ಷಿಣ ಕನ್ನಡ
ಕಲ್ಲೇಗ ಟೈಗರ್ಸ್ʼ ನ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ – ಒಟ್ಟು ನಾಲ್ಕು ಮಂದಿ ಠಾಣೆಗೆ ಶರಣು : ಕೊಲೆಯ ಸುತ್ತ ಅನುಮಾನದ ಹುತ್ತ
ಕಲ್ಲೇಗ ಟೈಗರ್ಸ್ ಹುಲಿ ವೇಷ ಕುಣಿತ ತಂಡದ ನಾಯಕ ಅಕ್ಷಯ್ ಕಲ್ಲೇಗ (26) ಹತ್ಯೆಯ ಮೂರನೇ ಪ್ರಮುಖ ಆರೋಪಿಯು ಇಂದು (ನ. 7) ಮುಂಜಾನೆ ಪೊಲೀಸರಿಗೆ ಶರಣಾಗಿದ್ದಾನೆ. ಈ ಮೂಲಕ ಈ ಹತ್ಯೆಯಲ್ಲಿ ನೇರವಾಗಿ ಭಾಗಿಯಾದ ಮೂವರು ಸದ್ಯ ಪೊಲೀಸ್ ವಶದಲ್ಲಿ ಇದ್ದಂತೆ ಆಗಿದೆ. ಇನ್ನೊರ್ವ ಆರೋಪಿಯು ಕೆಲವೇ ಕ್ಷಣಗಳಲ್ಲಿ ಪೊಲೀಸರಿಗೆ ಶರಣಾಗಲಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಬನ್ನೂರು ಜೈನರ ಗುರಿ ನಿವಾಸಿಗಳಾದ ಚೇತು ಅಲಿಯಾಸ್ ಚೇತನ್, ಮಂಜು ಯಾನೆ ಮಂಜುನಾಥ ಹಾಗೂ ಪಡೀಲು ನಿವಾಸಿ ಮನೀಶ್ ಮಣಿಯಾಣಿ ಪೊಲೀಸ್ ವಶದಲ್ಲಿರುವವರು. ಇನ್ನೊರ್ವ ಶಂಕಿತ ಕೇಶವ ಎಂಬಾತ ಇನ್ನಷ್ಟೆ ಪೊಲೀಸರಿಗೆ ಶರಣಾಗಬೇಕಿದೆ.
ಹತ್ಯೆ ಯಾತಕ್ಕೆ ?
ನ 6ರಂದು ತಡ ರಾತ್ರಿ 11.30ರ ಸುಮಾರಿಗೆ ಅಕ್ಷಯ್ ಹತ್ಯೆ ನಡೆದಿತ್ತು. ಮೂಲಗಳ ಪ್ರಕಾರ ನಿನ್ನೆ ಸಂಜೆ ನೆಹರೂ ನಗರ ಸಮೀಪ ಬೈಕೊಂದು ಪಾದಾಚಾರಿಗೆ ಢಿಕ್ಕಿ ಹೊಡೆದಿತ್ತು. ಬೈಕ್ ಸವಾರ ಆರೋಪಿ ಚೇತನ್ ಸ್ನೇಹಿತನಾಗಿದ್ದರು. ಗಾಯಾಳು ಅಕ್ಷಯ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗಿದೆ. ಗಾಯಾಳುವನ್ನು ಪುತ್ತೂರು ಆಸ್ಫತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸಾ ವೆಚ್ಚ ರೂ 1800 ಆಗಿತ್ತು ಎಂದು ಹೇಳಲಾಗುತ್ತಿದೆ. ಒಟ್ಟು 2 ಸಾವಿರ ರೂ ಪಾವತಿಸುವಂತೆ ಗಾಯಾಳು ಕಡಯಿಂದ ಆಕ್ಷಯ್ ಬೈಕ್ ಸವಾರನಿಗೆ ತಾಕೀತು ಮಾಡಿದ್ದರು ಎನ್ನಲಾಗಿದೆ. ಅಷ್ಟು ಹಣ ಪಾವತಿಸಲು ಒಪ್ಪದ ಚೇತನ್ ಕೇಸಿನಲ್ಲಿ ನೋಡುವ ಎಂದು ತಿಳಿಸಿದ್ದು, ಈ ವಿಚಾರವಾಗಿ ಈ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು ಎಂದು ತಿಳಿದು ಬಂದಿದೆ.

ಇದರ ಮುಂದುವರಿದ ಭಾಗವಾಗಿ ನಿನ್ನೆ ತಡರಾತ್ರಿ ಚೇತನ್ ಸ್ನೇಹಿತ ಮನೀಶ್ ಅವರು ಅಕ್ಷಯ್ ಗೆ ಕರೆ ಮಾಡಿ ಮಾತುಕತೆಗೆ ನೆಹರೂ ನಗರಕ್ಕೆ ಬರಲು ತಿಳಿಸಿದ್ದರು. ಚೇತನ್ ಮತ್ತು ತಂಡದವರು ನ್ಯಾನೋ ಕಾರಿನಲ್ಲಿ ನಗರಕ್ಕೆ ಆಗಮಿಸಿದ್ದು ಆಕ್ಷಯ್ ಬೈಕಿನಲ್ಲಿ ಬಂದಿದ್ದರು ಎಂದು ಮೂಲಗಳು ತಿಳಿಸಿವೆ. ಅಕ್ಷಯ್ ಜತೆ ಇನ್ನಿಬ್ಬರು ಬಂದಿದ್ದರು, ಅವರು ದಾಳಿಯ ವೇಳೆ ಓಡಿ ತಪ್ಪಿಸಿಕೊಂಡರು ಎಂದು ಹೇಳಲಾಗುತ್ತಿದ್ದು ಇದು ಖಚಿತಗೊಂಡಿಲ್ಲ. ಅಕ್ಷಯ್ ಬೈಕ್ ನಲ್ಲಿ ಇದ್ದಾಗಲೇ ದಾಳಿ ನಡೆದಿದೆ ಎನ್ನಲಾಗುತ್ತಿದೆ.
ಮೊದಲು ಅಕ್ಷಯ್ ಕೈಗೆ ಮಾರಾಕಯುದ್ದ ದಿಂದ ದಾಳಿ ಮಾಡಿದ್ದಾರೆ. ದಾಳಿಯಿಂದ ತಪ್ಪಿಸಿಕೊಳ್ಳಲು ಅಕ್ಷಯ್ ನೋಡಿದಾಗ ಬೆನ್ನಟ್ಟಿದ್ದ ತಂಡ ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಕುತ್ತಿಗೆ ಹಾಗೂ ಕಾಲಿಗೆ ಕಡಿದು ಹತ್ಯೆ ಮಾಡಿರುವುದಾಗಿ ಹೇಳಲಾಗುತ್ತಿದೆ. ಪೊಲೀಸ್ ಠಾಣೆಯವರು ಆಳವಡಿಸಿದ ಸಿಸಿಟಿವಿ ಅಡಿಯಲ್ಲಿಯೇ ಹತ್ಯೆ ನಡೆದಿದ್ದು, ದುರ್ದೈವವೆಂದರೇ ಹಲವು ವರ್ಷಗಳಿಂದ ಸಿಸಿಟಿವಿ ಕೆಟ್ಟು ನಿಂತು ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ.

ಹಲವು ಅನುಮಾನ
ಆದರೇ ಕೇವಲ 2 ಸಾವಿರ ರೂಪಾಯಿ ವಿಚಾರವಾಗಿ ಎರಡು ತಂಡಗಳು ಗಲಾಟೆ ಮಾಡಿಕೊಂಡಿವೆ ಎಂಬ ವಿಚಾರವನ್ನು ನಂಬುವ ಸ್ಥಿತಿಯಲ್ಲಿ ಸಾರ್ವಜನಿಕರು ಹಾಗೂ ಎರಡು ತಂಡದ ಆಪ್ತ ಬಳಗ ತಯಾರಿಲ್ಲ. ಆರೋಪಿಗಳ ಪೈಕಿ ಓರ್ವ ಈ ಹಿಂದೆ ಅಕ್ಷಯ್ ಅವರ ಹುಲಿ ತಂಡದ ಜತೆ ಆತ್ಮೀಯ ಒಡನಾಟ ಹೊಂದಿದ್ದ ಎಂದು ಮೂಲಗಳು ತಿಳಿಸಿವೆ. ಆದರೇ ಈ ಬಾರಿ ಮಾತ್ರ ಆತ ಈ ತಂಡದಿಂದ ಬೆರ್ಪಟ್ಟಿದ್ದ ಎನ್ನಲಾಗಿದೆ. ಆರೋಪಿಗಳ ಪೈಕಿ ಇನ್ನೊರ್ವ ಇನ್ನೊಂದು ಹುಲಿ ತಂಡದ ಜತೆ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.


















