ಪುತ್ತೂರು
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಬಂಧಿತ ಕಾಂಗ್ರೇಸ್ ಎಸ್.ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್ ಹುದ್ದೆಯಿಂದ ಅಮಾನತು
ಪುತ್ತೂರು ನ 09 : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಪುತ್ತೂರು ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಹುದ್ದೆಯಿಂದ ಉಚ್ಚಾಟನೆ ಮಾಡಲಾಗುವುದು ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಹೇಳಿದ್ದಾರೆ.
ಅವರು ಈ ಬಗ್ಗೆ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಕೇಶವ ಪಡೀಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ.
ಹೀಗಾಗಿ ಅದನ್ನು ಸಮರ್ಥಿಸುವ ಅಥವಾ ಬೆಂಬಲಿಸುವ ಪ್ರಶ್ನೆಯೇ ಇಲ್ಲ, ಕೊಲೆ ಆರೋಪ ಬಂದಿರುವ ಕಾರಣ ತಕ್ಷಣವೇ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ವಿಷಯ ತಿಳಿಸಿ ಎಸ್.ಸಿ. ಘಟಕದ ಅಧ್ಯಕ್ಷ ಹುದ್ದೆಯಿಂದ ತೆರವು ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.
ಬಿಗ್ ನ್ಯೂಸ್
Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
-
ರಾಜಕೀಯ20 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ20 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ20 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕ್ರೀಡೆ24 hours agoIPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
-
ಕಾರ್ಯಕ್ರಮಗಳು20 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ20 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಶಿಕ್ಷಣ24 hours agoGovernment schools-ಎಲ್ಕೆಜಿ, ಯುಕೆಜಿ ತರಗತಿಗಳಿಗೆ ನಿರೀಕ್ಷೆಗೂ ಮೀರಿದ ಬೇಡಿಕೆ; ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಕ್ಕೆ ಸರ್ಕಾರ ಚಿಂತನೆ..!















