ವಿಧಾನಸಭೆ ಚುನಾವಣೆಯಲ್ಲಿ ಜನಮತ ಕಳೆದುಕೊಂಡಿರಬಹುದು. ಆದರೆ ಲೋಕಸಭೆ ಚುನಾವಣೆಯಲ್ಲಿ ದುಪ್ಪಟ್ಟು ಗಳಿಸುತ್ತೇವೆ. ಕಾರ್ಯ ಕರ್ತರು ಉತ್ಸಾಹದಿಂದ […]" /> ವಿಧಾನಸಭೆ ಚುನಾವಣೆಯಲ್ಲಿ ಜನಮತ ಕಳೆದುಕೊಂಡಿರಬಹುದು. ಆದರೆ ಲೋಕಸಭೆ ಚುನಾವಣೆಯಲ್ಲಿ ದುಪ್ಪಟ್ಟು ಗಳಿಸುತ್ತೇವೆ. ಕಾರ್ಯ ಕರ್ತರು ಉತ್ಸಾಹದಿಂದ […]"> ಪಕ್ಷದ ಯಾವುದೇ ಒಬ್ಬ ಕಾರ್ಯಕರ್ತ ನೀವು ಸರಿಯಿಲ್ಲ ಎಂದು ಬೊಟ್ಟು ಮಾಡಿ ಹೇಳುವಂತಹ ಕೆಲಸ ಮಾಡಿಲ್ಲ -ಡಿವಿ - Nikhara News | Kannada News Website
Connect with us

ಬೆಂಗಳೂರು

ಪಕ್ಷದ ಯಾವುದೇ ಒಬ್ಬ ಕಾರ್ಯಕರ್ತ ನೀವು ಸರಿಯಿಲ್ಲ ಎಂದು ಬೊಟ್ಟು ಮಾಡಿ ಹೇಳುವಂತಹ ಕೆಲಸ ಮಾಡಿಲ್ಲ -ಡಿವಿ

Published

on

Ad Widget

Ad Widget

Ad Widget

Ad Widget

ಬೆಂಗಳೂರು: ವಿಧಾನಮಂಡಲ ಪ್ರತಿಪಕ್ಷ ನಾಯಕರ ಸ್ಥಾನಗಳನ್ನು ದೀರ್ಘಾವಧಿಗೆ ಖಾಲಿ ಬಿಡುವುದು ರಾಜ್ಯ, ಪಕ್ಷ ಹಾಗೂ ಕಾರ್ಯಕರ್ತರ ಹಿತದೃಷ್ಟಿಯಿಂದ ಸರಿಯಲ್ಲ ಎಂದು ಸಂಸದ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ಪಕ್ಷದ ಕೇಂದ್ರ ನಾಯಕರು ಭೇಟಿ ನೀಡದೆ, ಪ್ರತಿಪಕ್ಷ ನಾಯಕ ಹುದ್ದೆಗಳನ್ನು ತುಂಬದೆ ಹಾಗೆಯೇ ಉಳಿಸಿದ್ದಾರೆ. ವರಿಷ್ಠರು ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮನವಿ ಮಾಡುವೆ ಎಂದರು.

Ad Widget

Ad Widget alt="Ad Widget"/>

Ad Widget

ವಿಧಾನಸಭೆ ಚುನಾವಣೆಯಲ್ಲಿ ಜನಮತ ಕಳೆದುಕೊಂಡಿರಬಹುದು. ಆದರೆ ಲೋಕಸಭೆ ಚುನಾವಣೆಯಲ್ಲಿ ದುಪ್ಪಟ್ಟು ಗಳಿಸುತ್ತೇವೆ. ಕಾರ್ಯ ಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಚುನಾವಣೆ ರಾಜಕೀಯದಿಂದ ನಿವೃತ್ತಿ ಬಗ್ಗೆ ಕುಟುಂಬ ಸದಸ್ಯರೊಂದಿಗೆ ಮಾತ್ರ ಚರ್ಚಿಸಿರುವೆ. ಯಾರೊಬ್ಬರೂ ಒತ್ತಡ ತಂದಿಲ್ಲ ಎಂದರು.

ಯಾರೂ ಬೊಟ್ಟು ಮಾಡಲ್ಲ: ಚುನಾವಣೆ ರಾಜಕೀಯದಿಂದ 2019ರಲ್ಲೇ ನಿವೃತ್ತಿಯಾಗಲು ಬಯಸಿದ್ದೆ. ಆದರೆ ಪಕ್ಷದ ವರಿಷ್ಠರು ಮತ್ತು ಸಂಘದವರ ಒತ್ತಾಯದ ಮೇರೆಗೆ ಸ್ಪರ್ಧಿಸಿದೆ. 32 ಲಕ್ಷ ಜನರುಳ್ಳ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರ ಪ್ರತಿನಿಧಿಸುತ್ತಿರುವೆ. ಪಕ್ಷದ ಯಾವುದೇ ಒಬ್ಬ ಕಾರ್ಯಕರ್ತ ನೀವು ಸರಿಯಿಲ್ಲ ಎಂದು ಬೊಟ್ಟು ಮಾಡಿ ಹೇಳುವಂತಹ ಕೆಲಸ ಮಾಡಿಲ್ಲ ಎಂದು ಸದಾನಂದ ಗೌಡ ಹೇಳಿದರು.

Ad Widget

Ad Widget

ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾದರೆ ಸ್ವಾಗತಿಸುವೆ. ಅವರ ಗೆಲುವಿಗೆ ಶ್ರಮಿಸುವೆ. ಚುನಾವಣೆ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದರೂ ರಾಜಕಾರಣದಲ್ಲಿ ಸಕ್ರಿಯವಾಗಿರುವೆ. ಎಲ್ಲವನ್ನೂ ಪಕ್ಷ ಕೊಟ್ಟಿದೆ, ಪಕ್ಷಕ್ಕಾಗಿ ದುಡಿವೆ. ಪಕ್ಷ ತೊರೆಯುವ ಪ್ರಶ್ನೆಯೇ ಉದ್ಭವಿಸಲ್ಲ ಎಂದರು.

Ad Widget
Click to comment

Leave a Reply

ರಾಜಕೀಯ

Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

Ad Widget

Ad Widget <> Ad Widget

ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.

1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Ad Widget

Ad Widget

2018ರಲ್ಲಿ ರೈತರ ಸಾಲಮನ್ನಾ ಮಾಡುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನೂ 1,000 ರೂ. ಹೆಚ್ಚಳ ಮಾಡಿದ್ದೆ ಎಂದು ಸ್ಮರಿಸಿದ ಅವರು, ‘ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು ಎಂದು ಮುಖ್ಯಮಂತ್ರಿಗಳು ಕೇಳುತ್ತಾರೆ. ನನ್ನ ಸಾಕ್ಷಿಗುಡ್ಡೆ ಇರಲಿ, ನಿಮ್ಮ ಸಾಕ್ಷಿಗುಡ್ಡೆ ಎಲ್ಲಿ?’ ಎಂದು ಪ್ರಶ್ನಿಸಿದರು.

Ad Widget
Continue Reading

ಅಪರಾಧ

Gym protein powder-ಸ್ಟೆರಾಯ್ಡ್, ಹಾನಿಕಾರಕ ರಾಸಾಯನಿಕ ಬೆರೆಸಿರುವ ಶಂಕೆ; ಜಿಮ್ ಪ್ರೊಟೀನ್ ಪೌಡರ್ ಗುಣಮಟ್ಟ ಪರೀಕ್ಷೆಗೆ ಸರ್ಕಾರ ಸಿದ್ಧತೆ

Published

on

Ad Widget

Ad Widget

Ad Widget

Ad Widget

ಜಿಮ್‌ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು, ನ.25: ಜಿಮ್‌ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಮಾತನಾಡಿದ ಅವರು, ಜಿಮ್‌ಗೆ ಹೋಗುವವರು ಸೇವಿಸುವ ಪ್ರೊಟೀನ್ ಉತ್ಪನ್ನಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಲಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಪ್ರೊಟೀನ್ ಉತ್ಪನ್ನಗಳು ಗುಣಮಟ್ಟದಿಂದ ಕೂಡಿದ್ದರೆ, ಇನ್ನು ಕೆಲವು ಉತ್ಪನ್ನಗಳು ಎಲ್ಲಿಂದ ಪೂರೈಕೆಯಾಗುತ್ತವೆ ಎಂಬುದೇ ಸ್ಪಷ್ಟವಾಗಿಲ್ಲ. ಹೀಗಾಗಿ ರಾಜ್ಯಾದ್ಯಂತ ಮಾರಾಟವಾಗುತ್ತಿರುವ ಪ್ರೊಟೀನ್ ಪೌಡರ್ ಮತ್ತು ಸಪ್ಲಿಮೆಂಟ್‌ಗಳನ್ನು ಪರೀಕ್ಷಿಸಲು ನಿರ್ಧರಿಸಲಾಗಿದೆ. ಮೆಡಿಕಲ್ ಸ್ಟೋರ್‌ಗಳು, ಜಿಮ್ ಕೇಂದ್ರಗಳು ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

Ad Widget

Ad Widget <> Ad Widget

ಯಾಕೆ ಈ ಪರೀಕ್ಷೆ?
ಮಾರುಕಟ್ಟೆಯಲ್ಲಿ ಅನಧಿಕೃತವಾಗಿ ಮಾರಾಟವಾಗುವ ಕೆಲವು ಪ್ರೊಟೀನ್ ಪೌಡರ್‌ಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪ್ರೊಟೀನ್ ಅಂಶವಿರುವುದು ಹಾಗೂ ಅವುಗಳಿಗೆ ಸ್ಟೆರಾಯ್ಡ್‌ಗಳು ಮತ್ತು ಹಾನಿಕಾರಕ ರಾಸಾಯನಿಕಗಳನ್ನು ಬೆರೆಸುವ ಸಾಧ್ಯತೆಗಳ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಈ ಹಿಂದೆಯೇ ಕಳವಳ ವ್ಯಕ್ತಪಡಿಸಿತ್ತು.

ಅಲ್ಲದೆ, ಅಗತ್ಯ ಪರವಾನಗಿ ಇಲ್ಲದೆ ಜಿಮ್‌ಗಳಲ್ಲಿ ನೇರವಾಗಿ ಸಪ್ಲಿಮೆಂಟ್‌ಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾಗಿದೆ. ಹಲವು ಪ್ರೊಟೀನ್ ಸಪ್ಲಿಮೆಂಟ್‌ಗಳ ಪ್ಯಾಕೆಟ್‌ಗಳ ಮೇಲೆ ನಮೂದಿಸಿರುವ ಪ್ರೊಟೀನ್ ಪ್ರಮಾಣಕ್ಕೂ, ಉತ್ಪನ್ನದಲ್ಲಿರುವ ನೈಜ ಪ್ರಮಾಣಕ್ಕೂ ವ್ಯತ್ಯಾಸವಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಉತ್ಪನ್ನಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ.

Continue Reading

ಬಿಗ್ ನ್ಯೂಸ್

Tulu language-ತುಳು ಭಾಷೆ ಅನುಷ್ಠಾನಕ್ಕೆ ಸರ್ಕಾರದಿಂದ ಅಧಿಕೃತ ಆದೇಶ; ಸರ್ಕಾರಿ ಕಚೇರಿಗಳಲ್ಲೂ ತುಳುವಿಗೆ ಮನ್ನಣೆ..!

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ.

Ad Widget

Ad Widget alt="Ad Widget"/>

Ad Widget

ಕಳೆದ ತಿಂಗಳು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ ನೀಡಲು ಅನುಮೋದನೆ ನೀಡಲಾಗಿತ್ತು. ಇದರ ಮುಂದುವರಿದ ಭಾಗವಾಗಿ ಬುಧವಾರ ಸರ್ಕಾರ ಅನುಷ್ಠಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

Ad Widget

Ad Widget <> Ad Widget

ಹೊಸ ಆದೇಶದ ಪ್ರಕಾರ, ತುಳು ಭಾಷೆಯನ್ನು ಕನ್ನಡ ಲಿಪಿಯಲ್ಲಿ ಬಳಸಬೇಕಾಗಿದೆ. ಜಿಲ್ಲಾಡಳಿತ ಕಚೇರಿಗಳಲ್ಲಿ ತುಳು ಭಾಷೆ ಅನುಷ್ಠಾನಕ್ಕಾಗಿ ಪ್ರತ್ಯೇಕ ಘಟಕ ಸ್ಥಾಪಿಸುವುದರ ಜೊತೆಗೆ ತುಳು ಭಾಷಾಂತರಕಾರರನ್ನು ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.

ಇದಲ್ಲದೆ, ಸಾರ್ವಜನಿಕರು ಸಲ್ಲಿಸುವ ಮನವಿ ಹಾಗೂ ಅರ್ಜಿಗಳನ್ನು ತುಳು ಭಾಷೆಯಲ್ಲಿಯೂ ಸ್ವೀಕರಿಸಬೇಕು. ಅವುಗಳಿಗೆ ನೀಡುವ ಉತ್ತರಗಳನ್ನು ಕನ್ನಡದ ಜೊತೆಗೆ ತುಳು ಭಾಷೆಯಲ್ಲಿಯೂ ಒದಗಿಸಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

Ad Widget

Ad Widget

ಈ ಮೂಲಕ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆಡಳಿತ ವ್ಯವಸ್ಥೆಯಲ್ಲೂ ತುಳು ಭಾಷೆಯ ಬಳಕೆಗೆ ಅಧಿಕೃತವಾಗಿ ಅವಕಾಶ ಕಲ್ಪಿಸಿದಂತಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!