ಕೊಡಗು
ಕೊಡಗಿನ ಟಾಟಾ ಕಾಫಿ ಎಸ್ಟೇಟ್ ನಲ್ಲಿ ಚಿನ್ನಾಭರಣವುಳ್ಳ ನಿಧಿ ಪತ್ತೆ
ಕೊಡಗು : ಪುರಾತನ ಕಾಲದ ಚಿನ್ನಾಭರಣವುಳ್ಳ ನಿಧಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರದ ಅಮ್ಮತಿ ಮುಖ್ಯ ರಸ್ತೆಯಲ್ಲಿರುವ ಆನಂದಪುರ ಗ್ರಾಮದಲ್ಲಿ ನಡೆದಿದೆ.
ಆನಂದಪುರ ಗ್ರಾಮದಲ್ಲಿ ಟಾಟಾ ಕಾಫಿ ಸಂಸ್ಥೆಗೆ ಸೇರಿದ ತೋಟದಲ್ಲಿ ಪುರಾತನ ಕಾಲದ ಈಶ್ವರ ದೇವಸ್ಥಾನವಿದ್ದು, ಕಾರ್ಮಿಕರು ದೇವಾಲಯ ಸಮೀಪ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಭೂಮಿಯ ಅಡಿಯಲ್ಲಿ ಪ್ರಾಚೀನ ಕಾಲದ ಕೆಲ ವಸ್ತುಗಳು ಪತ್ತೆಯಾದವು.
ಪತ್ತೆಯಾದ ವಸ್ತುಗಳ ಒಳಗೆ ಚಿನ್ನದ ಆಭರಣಗಳು, ಹಳೆಯ ಕಾಲದ ಉಂಗುರ, ಖಡ್ಗ ಸೇರಿದಂತೆ ಪುರಾತನ ಕಾಲದ ಆಭರಣಗಳು ಪತ್ತೆಯಾಗಿವೆ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಹಾಗೂ ತಹಸೀಲ್ದಾರ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪತ್ತೆಯಾದ ಆಭರಣಗಳನ್ನು ವಿರಾಜಪೇಟೆ ತಹಸೀಲ್ದಾರ್ ವಶಕ್ಕೆ ನೀಡಲಾಗಿದ್ದು, ಪ್ರಾಚ್ಯವಸ್ತು ಇಲಾಖೆಗೆ ನೀಡಿ ಸಂಶೋಧನೆಯ ಬಳಿಕ ಇದು ಎಷ್ಟು ವರ್ಷಗಳ ಹಿಂದಿನ ಆಭರಣಗಳೆಂಬುದು ಬೆಳಕಿಗೆ ಬರಲಿದೆ.
ಕೊಡಗು
Madikeri-ಮಡಿಕೇರಿ: ಅಡಿಕೆ ಹಾಳೆ ತಟ್ಟೆ, ಪೇಪರ್ ಕಪ್ ನಿಷೇಧ: ನಗರಸಭೆ ಆದೇಶಕ್ಕೆ ವ್ಯಾಪಾರಸ್ಥರು ಶಾಕ್..!
ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್‌ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ಮಡಿಕೇರಿ: ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್‌ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ನಿಷೇಧಕ್ಕೆ ಕಾರಣವೇನು?:
ನಗರಸಭೆಯ ಮಾಹಿತಿ ಪ್ರಕಾರ, ಪೇಪರ್ ಕಪ್ ಮತ್ತು ಅಡಿಕೆ ಹಾಳೆ ತಟ್ಟೆಗಳು ನೈಸರ್ಗಿಕವಾಗಿ ಕರಗುವ ವಸ್ತುಗಳೇ ಆದರೂ, ಅವುಗಳು ಸಂಪೂರ್ಣವಾಗಿ ಮಣ್ಣಿನಲ್ಲಿ ವಿಲೀನವಾಗಲು ದೀರ್ಘ ಸಮಯ ತೆಗೆದುಕೊಳ್ಳುತ್ತವೆ. ಇದರಿಂದ ನಗರದ ಕಸ ವಿಲೇವಾರಿ ಪ್ರಕ್ರಿಯೆಯಲ್ಲಿ ಸಮಸ್ಯೆಗಳು ಉಂಟಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಗರಸಭೆಯ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಂಡು ಈ ನಿಷೇಧ ಜಾರಿಗೊಳಿಸಲಾಗಿದೆ. ಇತ್ತೀಚೆಗಷ್ಟೇ ನಗರಸಭೆಯು ಒಂದು ಮತ್ತು ಅರ್ಧ ಲೀಟರ್ ನೀರಿನ ಬಾಟಲಿಗಳನ್ನು ನಿಷೇಧಿಸಿ ಗಮನ ಸೆಳೆದಿತ್ತು.
ಸಾರ್ವಜನಿಕರ ಮತ್ತು ವ್ಯಾಪಾರಸ್ಥರ ಆಕ್ರೋಶ:
ನಗರಸಭೆಯ ಈ ಹೊಸ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ನೀರಿನ ಬಾಟಲಿ ನಿಷೇಧಕ್ಕೆ ಬೆಂಬಲ ನೀಡಿದ್ದ ಜನತೆ, ಅಡಿಕೆ ಹಾಳೆ ಮತ್ತು ಪೇಪರ್ ತಟ್ಟೆಗಳ ನಿಷೇಧವನ್ನು ಖಂಡಿಸಿದ್ದಾರೆ.
“ಅಡಿಕೆ ಹಾಳೆ ಮತ್ತು ಪೇಪರ್ ಉತ್ಪನ್ನಗಳು ನೈಸರ್ಗಿಕವಾಗಿದ್ದು, ಮಣ್ಣಿನಲ್ಲಿ ಸುಲಭವಾಗಿ ಕರಗುತ್ತವೆ. ಮದುವೆ, ದೇವಸ್ಥಾನಗಳ ಉತ್ಸವ, ಕ್ರೀಡಾಕೂಟ ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಇವುಗಳ ಬಳಕೆಯೇ ಹೆಚ್ಚು. ಇವುಗಳನ್ನು ನಿಷೇಧಿಸುವುದು ಎಷ್ಟರ ಮಟ್ಟಿಗೆ ಸರಿ?” ಎಂದು ವ್ಯಾಪಾರಸ್ಥರು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, “ಸ್ಥಳೀಯವಾಗಿ ಮಾರಾಟ ನಿಷೇಧಿಸಿದರೂ ಪ್ರವಾಸಿಗರು ಹೊರಗಿನಿಂದ ಅಡಿಕೆ ತಟ್ಟೆ, ಪೇಪರ್ ಕಪ್‌ಗಳನ್ನು ತರುತ್ತಾರೆ, ಅವರನ್ನು ತಡೆಯುವುದು ಹೇಗೆ?” ಎಂದು ಜನರು ನಗರಸಭೆಯನ್ನು ಪ್ರಶ್ನಿಸುತ್ತಿದ್ದಾರೆ.
ಉಡುಪಿ
Helpline-ನೇಪಾಲ ಜಲಪ್ರಳಯ: ಉಡುಪಿ, ಕೊಡಗು ಯಾತ್ರಿಕರ ರಕ್ಷಣೆಗೆ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ
ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ/ಮಡಿಕೇರಿ: ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ ಜಿಲ್ಲೆಯವರಿಗೆ ಸೂಚನೆ:
ಉಡುಪಿ ಜಿಲ್ಲೆಯಿಂದ ಪ್ರವಾಸ ಅಥವಾ ಯಾತ್ರೆಗೆ ತೆರಳಿ ನೇಪಾಲದ ನೆರೆ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವವರ ವಿವರಗಳನ್ನು ತಕ್ಷಣವೇ ಜಿಲ್ಲಾಡಳಿತಕ್ಕೆ ನೀಡಲು ಕೋರಲಾಗಿದೆ. ಸಂಕಷ್ಟದಲ್ಲಿರುವವರ ಹೆಸರು, ವಿಳಾಸ, ಪ್ರಸ್ತುತ ಇರುವ ನಿಖರ ಸ್ಥಳ ಮತ್ತು ಮೊಬೈಲ್ ಸಂಖ್ಯೆಯನ್ನು ಕೆಳಗಿನ ಸಂಖ್ಯೆಗಳಿಗೆ ತಿಳಿಸಬಹುದು:
ಸಹಾಯವಾಣಿ: 1077
ದೂರವಾಣಿ: 0820-2574802
ಕೊಡಗು ಜಿಲ್ಲೆಯವರಿಗೆ ಸೂಚನೆ:
ಕೊಡಗು ಜಿಲ್ಲೆಯ ಯಾರಾದರೂ ಯಾತ್ರಿಕರು ನೇಪಾಲದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದರೆ, ಅವರ ಕುಟುಂಬದವರು ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕು. ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ:
ದೂರವಾಣಿ ಸಂಖ್ಯೆಗಳು: 08272-221077, 08272-221099
ಮೊಬೈಲ್/ವಾಟ್ಸಾಪ್ ಸಂಖ್ಯೆ: 8550001077
ಸಂಕಷ್ಟದಲ್ಲಿರುವವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಕೊಡಗು
Kodagu-ಕೊಡಗಿನಲ್ಲಿ ವರುಣನ ಅಬ್ಬರ: ಮರಳಿ ಮೈದುಂಬಿದ ಭಾಗಮಂಡಲದ ತ್ರಿವೇಣಿ ಸಂಗಮ..!
ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ವರುಣನ ಆರ್ಭಟ ಮರುಕಳಿಸಿದ್ದು, ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪವಿತ್ರ ಕ್ಷೇತ್ರ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಮೈದುಂಬಿ ಭರ್ತಿಯಾಗಿದೆ.
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ವರುಣನ ಆರ್ಭಟ ಮರುಕಳಿಸಿದ್ದು, ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪವಿತ್ರ ಕ್ಷೇತ್ರ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಮೈದುಂಬಿ ಭರ್ತಿಯಾಗಿದೆ.
ಜಲಾವೃತಗೊಂಡ ತಟದ ಪ್ರದೇಶಗಳು:
ನದಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ತಟದಲ್ಲಿರುವ ಪ್ರವಾಸಿ ಉದ್ಯಾನವನ ಹಾಗೂ ಸುತ್ತಮುತ್ತಲಿನ ಕೃಷಿ ಗದ್ದೆಗಳಿಗೆ ನೀರು ನುಗ್ಗಿದೆ. ನದಿ ಪಾತ್ರದ ನಿವಾಸಿಗಳು ಮತ್ತು ರೈತರಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಮಡಿಕೇರಿ, ವಿರಾಜಪೇಟೆ, ಬಿರುನಾಣಿ ಭಾಗದಲ್ಲಿ ಮಳೆ ಬಿರುಸಾಗಿದ್ದರೆ ಸೋಮವಾರಪೇಟೆ ಭಾಗದಲ್ಲಿ ನಿರಂತರ ಸಾಧಾರಣ ಮಳೆ ಸುರಿಯುತ್ತಿದೆ.
-
ನಿಧನ ವಾರ್ತೆ17 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು15 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು12 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ16 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ16 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ16 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ16 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ18 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?




















