Uncategorized
Udupi Murder ನೇಜಾರು ಹತ್ಯಾಕಾಂಡ – ಹತ್ಯೆಯ ಬಳಿಕ 2 ಬೈಕ್, ಒಂದು ಆಟೋ ಬಳಸಿ ಹಂತಕ ಪರಾರಿ – ಸುಫಾರಿ ಕಿಲ್ಲರ್ ಕೃತ್ಯ ? ಚಹರೆ ಮರೆಮಾಚಲು ಬೋಳು ತಲೆ..!
ಉಡುಪಿ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ಪ್ರಕರಣ ಭೇದಿಸಲು ಪೊಲೀಸರು ಆಹೋ ರಾತ್ರಿ ಅವಿರತ ಶ್ರಮ ಪಡುತ್ತಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪೊಲೀಸರ ಐದು ತಂಡ ರಚಿಸಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಕೌಟುಂಬಿಕ ಕಾರಣ, ಪೂರ್ವದ್ವೇಷ ಅಥವಾ ಹಣಕಾಸು ಅಥಾವ ಇನ್ನಿತ್ತರ ವ್ಯವಹಾರ ಸಂಬಂಧಿತ ಕಾರಣಗಳಿಗೆ ಕೊಲೆ ನಡೆದಿದ್ದೇಯೆ ಎಂಬ ಆಯಾಮಾಗಳಲ್ಲಿ ತನಿಖೆ ಸಾಗಿದೆ.
ಉಡುಪಿ ತಾಲೂಕಿನ ಕೆಮ್ಮಣ್ಣು ನೇಜಾರು ಸಮೀಪದ ಹಂಪನಕಟ್ಟೆಯ ತೃಪ್ತಿ ಲೇಔಟ್‌ನ ಮನೆಯೊಂದಕ್ಕೆ ರವಿವಾರ ಬೆಳಿಗ್ಗೆ ನುಗ್ಗಿದ ಹಂತಕ ಯದ್ವಾ ತದ್ವಾ ಮಾರಾಕಾಯುದ್ದ ಬೀಸಿ ಮನೆಯೊಳಗಿದ್ದ ಓರ್ವ ಮಹಿಳೆ, ಇಬ್ಬರು ಯುವತಿಯರು ಹಾಗೂ ಓರ್ವ ಬಾಲಕನನ್ನು ಹತ್ಯೆ ಮಾಡಿದ್ದ. ಈ ನಾಲ್ವರ ಅಂತ್ಯಕ್ರಿಯೆ ಸೋಮವಾರ ಕೋಡಿಬೆಂಗ್ರೆಯ ಜಾಮೀಯಾ ಮಸೀದಿಯಲ್ಲಿ ನೆರವೇರಿತು. ಮನೆ ಯಜಮಾನ ನೂರ್ ಮೊಹಮ್ಮದ್ ಮತ್ತು ಅವರ ಪುತ್ರ ಅಸದ್ ಈ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು
ಸದ್ಯ ತನಿಖೆಯಲ್ಲಿ ಕಂಡು ಬಂದ ಅಂಶದ ಪ್ರಕಾರ, ಯಾವುದೋ ಕಾರಣಕ್ಕೆ ಸಂಬಂಧಿಸಿ ಹಂತಕನ ಮೂಲಕ ಮನೆಯಲ್ಲಿದ್ದವರೆಲ್ಲರನ್ನೂ ಹತ್ಯೆ ಮಾಡಲು ಇನ್ಯಾರೋ ಸುಪಾರಿ ಕೊಟ್ಟಂತೆ ಕಂಡುಬರುತ್ತಿದೆ. ಹೀಗಾಗಿ ಹತ್ಯೆಯಾದ ದಿನ ಆ ಮನೆಗೆ ಆಟೋ ರಿಕ್ಷಾದಲ್ಲಿ ಬಂದ ವ್ಯಕ್ತಿ ಸುಫಾರಿ ಕಿಲ್ಲರ್ ಆಗಿರಬಹುದು ಎಂಬ ಅನುಮಾನ ಬಲವಾಗಿ ಕಂಡು ಬರುತ್ತಿದೆ.

ಬೋಳು ತಲೆಯ ವ್ಯಕ್ತಿ ಪೊಲೀಸರ ಮೊದಲ ಟಾರ್ಗೆಟ್
ಪ್ಯಾಂಟು-ಶರ್ಟು ಧರಿಸಿ, ಬ್ಯಾಗ್ ಹಿಡಿದುಕೊಂಡು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದಿದ್ದ ಬೋಳುತಲೆಯ ಹಂತಕನೆ ಸದ್ಯ ಪೊಲೀಸರ ಮೊದಲ ಟಾರ್ಗೆಟ್ . ಹಂತಕ ತನ್ನ ಚಹರೆ ಕಾಣಿಸದಂತೆ ಸಾಕಷ್ಟು ಎಚ್ಚರ ವಹಿಸಿದ್ದರೂ, ಆತನ ಬೋಳುತಲೆ ಮಾತ್ರ ಸಿಕ್ಕ ಎಲ್ಲ ಸಿಸಿ ಟಿವಿ ಕೆಮರಾಗಳಲ್ಲಿ ಎದ್ದು ಕಾಣುತ್ತಿದೆ ಅಷ್ಟೆ. ಆ ವ್ಯಕ್ತಿ ತನಿಖೆಯ ಹಾದಿ ತಪ್ಪಿಸಲು ವಿಗ್ ಬಳಸಿ ತಲೆಯನ್ನು ಬೋಳು ಮಾಡಿಕೊಂಡಿರುವ ಸಾಧ್ಯತೆಯೂ ಇದ್ದು, ಈ ಆಯಾಮದಲ್ಲೂ ತನಿಖೆ ನಡೆಯುತ್ತಿದೆ
ಹಂತಕ ಬಂದು ಸಾಗಿದ ಜಾಡು
ಹಂತಕ ಉಡುಪಿಯ ಸಂತೆ ಕಟ್ಟೆಯಿಂದ, ತೃಪ್ತಿ ಲೇ ಔಟ್ ಗೆ ಶ್ಯಾಮ್ ಎಂಬವರ ಆಟೋದಲ್ಲಿ ಬಂದಿದ್ದ. ಕೃತ್ಯ ಎಸಗಿದ ಬಳಿಕ ಆರೋಪಿ ಘಟನೆ ನಡೆದ ಸ್ಥಳದಿಂದ ಅನ್ಯರ ಬೈಕ್‌ವೊಂದರಲ್ಲಿ ಸಂತೆಕಟ್ಟೆಗೆ ಆಗಮಿಸಿದ್ದಾನೆ. ಸಾಮಾನ್ಯವಾಗಿ ಅಪರಿಚಿತರನ್ನು ಬೈಕ್ ನವರು ಕರೆದುಕೊಂಡು ಹೋಗುವುದಿಲ್ಲ. ಆದರೇ ಕೃತ್ಯ ನಡೆದ ಸ್ಥಳದಿಂದ ಆತ ಬೈಕ್ ವೊಂದರಲ್ಲಿ ಸಾಗಿರುವುದು, ಪೂರ್ವ ಯೋಜಿತ ಯೋಜನೆಯ ಭಾಗವಾಗಿರಬಹುದು ಎಂಬ ಅನುಮಾನ ಮೂಡಿಸಿದೆ. ಆ ಬೈಕ್ ಸವಾರನಿಗೆ ಹಂತಕನ ಪರಿಚಯ ಇರಬಹುದು, ಅಥಾವ ಆತನೂ ಈ ಹತ್ಯೆಯ ಒಂದು ಭಾಗವಾಗಿರಬಹುದು ಎಂಬ ಅನುಮಾನಕ್ಕೆ ಕಾರಣವಾಗಿದೆ.

ಹತ್ಯೆ ನಡೆದ ಸ್ಥಳದಿಂದ ಬೈಕ್ ನಲ್ಲಿ ಸಂತೆ ಕಟ್ಟೆ ರಿಕ್ಷಾ ಸ್ಟ್ಯಾಂಡ್ ಗೆ ಬಂದ ಹಂತಕ ಅಲ್ಲಿಂದ ಕರಾವಳಿ ಬೈಪಾಸ್‌ಗೆ ಆಟೋರಿಕ್ಷಾದಲ್ಲಿ ತೆರಳಿದ್ದ. ಅನಂತರ ಅಲ್ಲಿಂದ ಉದ್ಯಾವರದ ಟೊಯೋಟಾ ಶೋರೂಂವರೆಗೆ ಅನ್ಯರ ಬೈಕ್‌ವೊಂದರಲ್ಲಿ ಬಂದಿರುವ ದೃಶ್ಯಾವಳಿಗಳು ಸ್ಥಳೀಯ ಸಿಸಿ ಟಿವಿಗಳಲ್ಲಿ ಸೆರೆಯಾಗಿವೆ.
ಚಾಲಕಿ ಹಂತಕ
ಕೊಲೆಗಾರ ಯಾವುದೇ ಸುಳಿವು ಕೊಡಬಾರದೆಂಬ ಉದ್ದೇಶದಿಂದ ಜಾಗರೂಕತೆ ಹಾಗೂ ಚಾಣಕ್ಷ್ಯತೆಯಿಂದ ಕೃತ್ಯ ಎಸಗಿರುವುದು ಕಂಡು ಬರುತ್ತಿದೆ. ಹಂತಕ ಕೃತ್ಯ ಎಸಗಲು ಸ್ವಂತ ವಾಹನ ಬಳಸಿರಲಿಲ್ಲ. ಕೃತ್ಯ ಎಸಗಿದ ಬಳಿಕ ಪರಾರಿಯಾಗುವ ವೇಳೆ ದೂರ ಕ್ರಮಿಸಲು ಬೇರೆ ವಾಹನ ಬಳಸಿದ್ದು ಸಿಸಿಟಿವಿ ದೃಶ್ಯಗಳಲ್ಲಿ ಗೋಚರಿಸಿದೆ. ಇದರಲ್ಲಿ ಎರಡು ದ್ವಿ ಚಕ್ರ ವಾಹನ ಬಳಸಿರುವುದು ಗಮನಾರ್ಹ. ಅಲ್ಲದೇ ಹಂತಕ ಮುಖಕ್ಕೆ ಮಾಸ್ಕ್ ಬಳಸುವ ಮೂಲಕ ಎಲ್ಲಿಯೂ ಮುಖ ಪ್ರದರ್ಶನವಾಗದಂತೆ ಎಚ್ಚರ ವಹಿಸಿದ್ದಾನೆ. ಅಲ್ಲದೇ , ಆಟೋ ಚಾಲಕನಿಗೆ ದಾರಿ ತಪ್ಪಿದ ಸಂದರ್ಭ ಹಂತಕನೇ ಮನೆ ದಾರಿ ತಿಳಿಸಿದ್ದು ಹೀಗಾಗಿ ಒಂದೋ ಆತನಿಗೆ ಮನೆ ಚಿರಪರಿಚಿತ ಅಥಾವ ಹಲವು ಬಾರಿ ಬಂದು ಮನೆಯನ್ನು ಸ್ಟಡಿ ಮಾಡಿದಂತೆ ಗೋಚರಿಸುತ್ತದೆ.
ಇನ್ನೂ ಆರೋಪಿ ಕೃತ್ಯ ನಡೆಸಲು ಹೋಗುವ ವೇಳೆ ಹಾಗೂ ಹತ್ಯೆಯ ಬಳಿಕ ಬೇರೆ ಬೇರೆ ಬಣ್ಣದ ಅಂಗಿ ಧರಿಸಿರುವುದು ಕಂಡು ಬಂದಿದ್ದು, ಹತ್ಯೆ ನಡೆಸಿ ಅದೇ ಮನೆಯಲ್ಲಿ ಬಟ್ಟೆ ಬದಲಿಸಿದಂತೆ ಕಂಡು ಬರುತ್ತದೆ. ಆದರೇ ಹತ್ಯೆ ನಡೆದ ಮನೆಯಲ್ಲಾಗಲ್ಲಿ, ಸುತ್ತಲಿನ ಪರಿಸರದಲ್ಲಾಗಲ್ಲಿ ಆರೋಪಿಯ ರಕ್ತ ಸಿಕ್ತ ಬಟ್ಟೆಯಾಗಲಿ ಅಥಾವ ಕೃತ್ಯಕ್ಕೆ ಬಳಸಿದ ಆಯುಧವಾಗಲಿ ಪತ್ತೆಯಾಗಿಲ್ಲ. ಮೆಟಲ್ ಡಿಟೆಕ್ಟರ್ ಬಳಸಿ ಹುಡುಕಿದರೂ ಸಿಕ್ಕಿಲ್ಲ.
ಆರೋಪಿಯ ವಿವಿಧ ವಾಹನಗಳಲ್ಲಿ ಸಂಚರಿಸಿರುವುದು, ರಕ್ತದ ಕಲೆಗಳಿದ್ದ ಬಟ್ಟೆ ಬದಲಾಯಿಸಿರುವುದು, ಕೃತ್ಯ ನಡೆಸಿದ ಆಯುಧ ಹಾಗೂ ಯಾವುದೇ ಸಾಕ್ಷ್ಯ ಇಲ್ಲದಂತೆ ಎಚ್ಚರವಹಿಸಿರುವುದು ನೋಡಿದಾಗ ಇದೊಂದು ಪೂರ್ವನಿಯೋಜಿತ ಕೃತ್ಯದಂತೆ ಕಂಡುಬರುತ್ತಿದೆ.
ಹತ್ಯೆಯ ಹೊರಬಿದ್ದ ಬಳಿಕ ಆ ಮನೆಗೆ ಆಗಮಿಸಿದ ಪೊಲೀಸರು 48 ಗಂಟೆ ಕಳೆದರೂ ಮನೆಯನ್ನು ಸಂಪೂರ್ಣವಾಗಿ ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡಿದ್ದಾರೆ. .ಮನೆಮಂದಿ ಸೇರಿದಂತೆ ಯಾರೂ ಆ ಮನೆ ಪ್ರದೇಶಕ್ಕೆ ಬಾರದಂತೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ. ಮೃತರ ಎಲ್ಲ ಮೊಬೈಲ್ ಇನ್ನಿತರ ಸೊತ್ತುಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಮನೆ ಯಜಮಾನ ನೂರ್ ಮೊಹಮ್ಮದ್, ಅವರ ತಾಯಿ ಹಾಜಿರಾಬಿ ಮತ್ತು ನೂರ್ ಅವರ ಹಿರಿಯ ಪುತ್ರ ಅವರ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.
ನೂರ್ ಮೊಹಮ್ಮದ್ ಕುಟುಂಬ ಸಾಕಷ್ಟು ಸ್ಥಿತಿವಂತ ಕುಟುಂಬವಾಗಿತ್ತು . ನೂರು ಅವರು ಸ್ವತ: ವಿದೇಶದಲ್ಲಿ ಉದ್ಯೋಗ ಮಾಡಿಕೊಂಡು ಹಣ ಸಂಪಾದಿಸುತ್ತಿದ್ದು, ಇಬ್ಬರು ಪುತ್ರಿಯರು ಹಾಗು ಓರ್ವ ಪುತ್ರ ಕೂಡ ಉದ್ಯೋಗದಲ್ಲಿದ್ದು ಸಂಪಾದನೆ ಮಾಡುತ್ತಿದ್ದರು. ಈ ಹಣವನ್ನು ನೂರ್ ಪತ್ನಿ ಹಸಿನಾ ಅವರು ಬೇರೆ ಬೇರೆ ಕಡೆ ಹೂಡಿಕೆ ಮಾಡಿದ್ದು, ಈ ವ್ಯವಾಹರದಲ್ಲಿ ಉಂಟಾದ ಮನಸ್ತಾಪ ಈ ಕಗ್ಗೊಲೆಗೆ ಕಾರಣವಾಯಿತೇ ಎನ್ನುವ ಬಗ್ಗೆಯೂ ಚರಚೆ ನಡೆಯುತ್ತಿದೆ
ಅಣ್ಣನ ಮಗಳಿಂದ ದೂರು:
ಕೊಲೆಗೈದು ಪರಾರಿಯಾಗುತ್ತಿದ್ದ ಹಂತಕನನ್ನು ಪ್ರತ್ಯಕ್ಷದರ್ಶಿಯಾಗಿ ಕಂಡ ಮೃತ ಹಸೀನಾರ ಅಣ್ಣನ ಮಗಳು ಐಫಾ (24) ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ: 449, 302, 307, 324 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
ಮನೆಯಲ್ಲಿ ವರ್ಕ್ ಫ್ರಂ ಹೋಮ್ ಕೆಲಸ ಮಾಡಿಕೊಂಡಿದ್ದ ಐಫಾ, ಪಕ್ಕದಲ್ಲಿ ರುವ ಅತ್ತೆಯ ಮನೆಯಲ್ಲಿ ಬೊಬ್ಬೆ ಕೇಳಿ ಓಡಿ ಬಂದಿದ್ದು, ಈ ವೇಳೆ ಹಂತಕ ಅಲ್ಲಿಂದ ಪರಾರಿಯಾದನು. ಈ ಬಗ್ಗೆ ಹಂತಕನನ್ನು ಕಣ್ಣಾರೆ ಕಂಡಿರುವ ಇವರು ಈ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದಾರೆ.
Uncategorized
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು

ಪುತ್ತೂರು: ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಯುವಕನೊಬ್ಬ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿರುವುದು ಬುಧವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.
ಪಡುಬಿದ್ರಿ ನಿವಾಸಿ ಸುಂದರ ಪೂಜಾರಿ ಎಂಬವರ ಪುತ್ರ ವಿನೇಶ್ ಮೃತಪಟ್ಟವರು.ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ
ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದ ಅವರು ಪುತ್ತೂರಿನ ದರ್ಬೆ ಜಿನಸು ಸಾಮಗ್ರಿಗಳ ಮಳಿಗೆಯೊಂದರಲ್ಲಿ ಕಳೆದ ಕೆಲ ತಿಂಗಳಿಂದ ಆಡಿಟಿಂಗ್ ಕೆಲಸ ನಿರ್ವಹಿಸುತ್ತಿದ್ದರು. ಅವರು ಮಂಗಳೂರಿನ ಆಡಿಟಿಂಗ್ ಕಂಪೆನಿಯೊಂದು ಅವರನ್ನು ಇಲ್ಲಿಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿತ್ತು ಎನ್ನಲಾಗಿದೆ.
ಮಂಗಳವಾರ (ಅ.6) ಸಂಜೆ ಎಂದಿನಂತೆ ಕೆಲಸ ಮುಗಿಸಿ ಮನೆಗೆ ತೆರಳಿದ್ದ ವಿನೇಶ್, ಬುಧವಾರ (ಅ.7) ಕೆಲಸಕ್ಕೆ ಬಂದಿರಲಿಲ್ಲ. ಸಹೋದ್ಯೋಗಿಗಳು ಹಲವು ಬಾರಿ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿರಲಿಲ್ಲ. ಮಧ್ಯಾಹ್ನ ಊಟಕ್ಕೆ ತೆರಳುವ ವೇಳೆ ಕೂಡ ಸಹೋದ್ಯೋಗಿಗಳು ಕರೆ ಮಾಡಿದ್ದು, ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ.
ಅನುಮಾನಗೊಂಡ ಸಹೋದ್ಯೋಗಿಗಳು ಬಾಡಿಗೆ ಮನೆಗೆ ತೆರಳಿ ಪರಿಶೀಲಿಸಿದಾಗ, ಮನೆಯ ಬಾಗಿಲು ಒಳಗಿನಿಂದ ಚಿಲಕ ಹಾಕಿರುವುದು ಕಂಡುಬಂದಿದೆ. ಬಳಿಕ ಮೊಬೈಲ್‌ಗೆ ಕರೆ ಮಾಡಿದಾಗ ಮನೆಯೊಳಗಿನಿಂದ ರಿಂಗ್ ಆಗುವ ಶಬ್ದ ಕೇಳಿಸಿತ್ತು. ಮನೆಯ ಸ್ಲ್ಯಾಬ್‌ನ ಇನ್‌ಫ್ಲೇಟರ್ ಮೂಲಕ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿ ಪರಿಶೀಲಿಸಿದಾಗ ವಿನೇಶ್ ನಿಸ್ತೇಜ ಸ್ಥಿತಿಯಲ್ಲಿ ಮಲಗಿರುವುದು ಕಾಣಿಸಿದೆ ಎನ್ನಲಾಗಿದೆ.
ನಂತರ ಪೊಲೀಸರು ಹಾಗೂ ಮನೆಯವರಿಗೆ ಮಾಹಿತಿ ನೀಡಲಾಗಿದ್ದು, ಅವರ ಸಹೋದರ ಸಹಿತ ಸಂಬಂಧಿಕರು ಪುತ್ತೂರಿಗೆ ಆಗಮಿಸಿದ್ದಾರೆ.ಅವರು ಸ್ಥಳಕ್ಕೆ ಬಂದ ಬಳಿಕ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ವಿನೇಶ್ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಆತ ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ವೈದ್ಯರಲ್ಲಿ ಚಿಕಿತ್ಸೆ ಪಡೆದಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ವೇಳೆ ಮತ್ತೆ ಉಸಿರಾಟ ಸಮಸ್ಯೆ ಉಲ್ಬಣಿಸಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Uncategorized
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ

ಪುತ್ತೂರು: ನಗರದ ಆನೆಮಜಲು–ನ್ಯಾಯಾಲಯ ಸಂಕೀರ್ಣ–ಕಾಲನಿ ಸಂಪರ್ಕ ರಸ್ತೆ ಬದಿಯಲ್ಲಿರುವ ಹೊಸ ನ್ಯಾಯಾಲಯ ಸಂಕೀರ್ಣದ ತಡೆಗೋಡೆಯ ಒಂದು ಭಾಗ ಬುಧವಾರ ಸಂಜೆ ಸುರಿದ ಮಳೆಗೆ ಕುಸಿದು ಬಿದ್ದಿದೆ.
ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿ ಹತ್ತು ತಿಂಗಳಷ್ಟೇ ಕಳೆದಿದ್ದು, ಅಷ್ಟರಲ್ಲೇ ಗೋಡೆ ಕುಸಿದಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕಾಮಗಾರಿಯ ಗುಣಮಟ್ಟವನ್ನು ಟ್ರೋಲ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗಳು ಹರಿದಾಡುತ್ತಿವೆ. ಸಂಜೆ ಸುರಿದ ಮಳೆಯ ಸಂದರ್ಭದಲ್ಲಿ ತಡೆಗೋಡೆಯ ಒಂದು ಭಾಗ ಕುಸಿದಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಡೆ ಕುಸಿಯಲು ಕಾರಣ ಹಾಗೂ ಕಾಮಗಾರಿಯ ಗುಣಮಟ್ಟದ ಕುರಿತು ಪರಿಶೀಲನೆ ನಡೆಯುತ್ತಿದೆ.

ಇದೇ ವೇಳೆ ನ್ಯಾಯಾಲಯದ ಕ್ಯಾಂಟೀನ್‌ನ ಗೋಡೆಯಲ್ಲೂ ಬಿರುಕುಗಳು ಕಾಣಿಸಿಕೊಂಡಿವೆ ಎಂಬ ಆರೋಪ ಕೇಳಿಬಂದಿದೆ. ಹೊಸದಾಗಿ ನಿರ್ಮಾಣಗೊಂಡಿರುವ ನ್ಯಾಯಾಲಯ ಸಂಕೀರ್ಣದ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಈ ಘಟನೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Uncategorized
Maharashtra-ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ಜಾಲ: ಗರ್ಭಿಣಿಯ ವೇಷದಲ್ಲಿ ಬಾಗಲಕೋಟೆಯ ಮಹಿಳಾ ಅಧಿಕಾರಿಗಳ ರಹಸ್ಯ ಕಾರ್ಯಾಚರಣೆ; ಇಬ್ಬರ ಬಂಧನ – ಸ್ಕ್ಯಾನಿಂಗ್ ಯಂತ್ರ ಜಪ್ತಿ
ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ನಡೆಸಿ, ಬಳಿಕ ಕರ್ನಾಟಕದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಬಾಗಲಕೋಟೆ ಜಿಲ್ಲೆಯ ಮಹಿಳಾ ಅಧಿಕಾರಿಗಳ ತಂಡ ರಹಸ್ಯ ಕಾರ್ಯಾಚರಣೆ ನಡೆಸಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಜಾಡರ ಬಬಲಾದ ಗ್ರಾಮದಲ್ಲಿ ಅ.5ರಂದು ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಭ್ರೂಣ ಲಿಂಗ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಜಪ್ತಿ ಮಾಡಲಾಗಿದೆ.
ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ನಡೆಸಿ, ಬಳಿಕ ಕರ್ನಾಟಕದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಬಾಗಲಕೋಟೆ ಜಿಲ್ಲೆಯ ಮಹಿಳಾ ಅಧಿಕಾರಿಗಳ ತಂಡ ರಹಸ್ಯ ಕಾರ್ಯಾಚರಣೆ ನಡೆಸಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಜಾಡರ ಬಬಲಾದ ಗ್ರಾಮದಲ್ಲಿ ಅ.5ರಂದು ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಭ್ರೂಣ ಲಿಂಗ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಜಪ್ತಿ ಮಾಡಲಾಗಿದೆ.
ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ್ ಗರ್ಭಿಣಿಯ ವೇಷದಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶೋಭಾ ನಾದಿನಿ ಗರ್ಭಿಣಿಯ ಸಂಬಂಧಿಯಂತೆ ಹಾಗೂ ಡಿಎಚ್‌ಒ ಡಾ. ಸುವರ್ಣ ಕುಲಕರ್ಣಿ ಗರ್ಭಿಣಿಯ ತಾಯಿಯ ವೇಷದಲ್ಲಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಮಹಾರಾಷ್ಟ್ರದಲ್ಲಿ ಲಿಂಗ ಪತ್ತೆ, ಕರ್ನಾಟಕದಲ್ಲಿ ಹತ್ಯೆ ಆರೋಪ
ಮಹಾರಾಷ್ಟ್ರದ ಜತ್ತ ತಾಲೂಕಿನ ಜಾಡರ ಬಬಲಾದ ಗ್ರಾಮದಲ್ಲಿ ಭ್ರೂಣದ ಲಿಂಗ ಪತ್ತೆ ಮಾಡಿ, ಬಳಿಕ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಅಧಿಕಾರಿಗಳಿಗೆ ಲಭಿಸಿತ್ತು. ಈ ಜಾಲದ ಕುರಿತು ತನಿಖೆ ನಡೆಸಿದಾಗ ಮಹಾಲಿಂಗಪುರದಲ್ಲಿ ಈ ಹಿಂದೆ ಭ್ರೂಣ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕವಿತಾ ಬಾಡನವರ ಅವರ ಹೆಸರು ಕೂಡ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿಗಳ ತಂಡ ಗರ್ಭಿಣಿಯರಂತೆ ವೇಷ ಧರಿಸಿ ಕಾರ್ಯಾಚರಣೆಗೆ ಇಳಿದಿತ್ತು.
ರಹಸ್ಯ ಕಾರ್ಯಾಚರಣೆ ನಡೆದದ್ದು ಹೇಗೆ?
ಅ.5ರ ರಾತ್ರಿ ಜಾಡರ ಬಬಲಾದ ಗ್ರಾಮಕ್ಕೆ ತೆರಳಿದ ಅಧಿಕಾರಿಗಳು, ಭ್ರೂಣದ ಲಿಂಗ ಪತ್ತೆಗಾಗಿ ಮಧ್ಯವರ್ತಿ ನಿಖಿಲ್ ತೇಲಿ ಅವರನ್ನು ಸಂಪರ್ಕಿಸಿದರು. ಆತ ಅಧಿಕಾರಿಗಳನ್ನು ತೋಟದ ಮನೆಯೊಂದಕ್ಕೆ ಕರೆದೊಯ್ದಿದ್ದಾನೆ. ಬಳಿಕ ನಿಖಿಲ್‌ನ ತಾಯಿ ದಾನಕ್ಕ ತೇಲಿ ಅವರು ಸ್ಕ್ಯಾನಿಂಗ್ ಯಂತ್ರವು ಕರ್ಜಗಿ ಗ್ರಾಮದ ಕವಿತಾ ಗೋಡೆಕರ ಅವರ ಮನೆಯಲ್ಲಿದೆ ಎಂದು ತಿಳಿಸಿದ್ದಾರೆ.
ಅಧಿಕಾರಿಗಳು ಕವಿತಾ ಅವರ ಮನೆಗೆ ತೆರಳಿದಾಗ ಸ್ಕ್ಯಾನಿಂಗ್‌ಗೆ ಯಂತ್ರ ಸಿದ್ಧಪಡಿಸಲಾಗುತ್ತಿತ್ತು. ಈ ವೇಳೆ ಪೊಲೀಸರು ಆರೋಪಿಗಳನ್ನು ಹಾಗೂ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.
ಈ ಜಾಲದ ಪ್ರಮುಖ ಆರೋಪಿ ಎಂದು ಹೇಳಲಾಗಿರುವ ನಕಲಿ ವೈದ್ಯ ಸಂಜಯ್ ವಾಘ್ಮೋಡೆ ಅವರನ್ನು ಬಂಧಿಸಲು ಅಧಿಕಾರಿಗಳು ಮುಂದಾದಾಗ, ಆತ ಸ್ಥಳದಿಂದ ಪರಾರಿಯಾಗಿದ್ದಾನೆ.
ಕಾರ್ಯಾಚರಣೆಯಲ್ಲಿ ರಬಕವಿ-ಬನಹಟ್ಟಿ ತಾಲೂಕಿನ ತಹಸೀಲ್ದಾರ್ ಗಿರೀಶ ಸ್ವಾದಿ ಹಾಗೂ ಆರೋಗ್ಯ ಇಲಾಖೆಯ ಮನು ಕೂಡ ಭಾಗವಹಿಸಿದ್ದರು.
ಇಬ್ಬರ ಬಂಧನ; ಸ್ಕ್ಯಾನಿಂಗ್ ಯಂತ್ರ ಜಪ್ತಿ
ಭ್ರೂಣ ಲಿಂಗ ಪತ್ತೆ ಆರೋಪದಡಿ ನಿಖಿಲ್ ತೇಲಿ, ದಾನಕ್ಕ ತೇಲಿ, ಕವಿತಾ ಗೋಡೆಕರ ಹಾಗೂ ನಕಲಿ ವೈದ್ಯ ಸಂಜಯ್ ವಾಘ್ಮೋಡೆ ವಿರುದ್ಧ ಮಹಾರಾಷ್ಟ್ರದ ಉಮದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಈ ಪೈಕಿ ನಿಖಿಲ್ ತೇಲಿ ಹಾಗೂ ದಾನಕ್ಕ ತೇಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಂಜಯ್ ವಾಘ್ಮೋಡೆ ಪರಾರಿಯಾಗಿದ್ದಾನೆ. ಭ್ರೂಣ ಲಿಂಗ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಪಿಸಿಪಿಎನ್‌ಡಿಟಿ ಕಾಯ್ದೆಯಡಿ ವಶಪಡಿಸಿಕೊಂಡು ಮಹಾರಾಷ್ಟ್ರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಹಿಂದಿನ ಪ್ರಕರಣದ ಬೆನ್ನಲ್ಲೇ ಮತ್ತೊಂದು ಆರೋಪ
ಮಹಾಲಿಂಗಪುರದಲ್ಲಿ 2020 ಹಾಗೂ 2024ರಲ್ಲಿ ಕವಿತಾ ಬಾಡನವರ ವಿರುದ್ಧ ಭ್ರೂಣ ಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆ ಆರೋಪ ಕೇಳಿಬಂದಿತ್ತು. ಈ ಪೈಕಿ ಗರ್ಭಪಾತದ ವೇಳೆ ಮಹಾರಾಷ್ಟ್ರ ಮೂಲದ ಗರ್ಭಿಣಿಯೊಬ್ಬರು ಮೃತಪಟ್ಟ ಪ್ರಕರಣದಲ್ಲೂ ಕವಿತಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಂಧನದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಅವರ ವಿರುದ್ಧ ಮತ್ತೆ ಇದೇ ರೀತಿಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇದೀಗ ರಹಸ್ಯ ಕಾರ್ಯಾಚರಣೆ ನಡೆಸಲಾಗಿದೆ.
ಈ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಆರೋಗ್ಯ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇತ್ತೀಚೆಗೆ ಕವಿತಾ ಅವರಿಗೆ ಪೊಲೀಸರು ನೋಟಿಸ್ ಕೂಡ ಜಾರಿ ಮಾಡಿದ್ದರು.
ಮಹಿಳಾ ಅಧಿಕಾರಿಗಳ ಸುರಕ್ಷತೆಯ ದೃಷ್ಟಿಯಿಂದ ವಿಜಯಪುರ ಹಾಗೂ ಸಾಂಗ್ಲಿ ಪೊಲೀಸರಿಗೆ ಕಾರ್ಯಾಚರಣೆಯ ಮಾಹಿತಿ ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
ಮಂಗಳೂರು16 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized13 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ21 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ20 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು23 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಅಂತರ ರಾಜ್ಯ15 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ17 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
Uncategorized11 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು


















