Uncategorized
ಉಡುಪಿ-ನೇಜಾರು ನಾಲ್ವರ ಕಗ್ಗೊಲೆ – ಶಂಕಿತ ಎರಡು ಮಕ್ಕಳ ತಂದೆ; ಸುಳಿವೇ ಇಲ್ಲದ ಪ್ರಕರಣದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದು ಹೇಗೆ ? ಇಲ್ಲಿದೆ ಕೊಲೆಯ ಹಿಂದಿನ ಕಾರಣ
ಮಲ್ಪೆ ಠಾಣಾ ವ್ಯಾಪ್ತಿಯಲ್ಲಿರುವ ನೆಜಾರುವಿನಲ್ಲಿ ತೃಪ್ತಿ ಲೇಔಟ್ ನಲ್ಲಿರುವ ಮೊಹಮ್ಮದ್ ನೂರ್ ಎಂಬುವರ ಮನೆಯ ಒಳಹೊಕ್ಕು ನಾಲ್ವರ ಹತ್ಯೆ ಮಾಡಿದ ಪ್ರಕರಣವನ್ನು ಕೇವಲ 36 ಗಂಟೆಯಲ್ಲಿ ಪೊಲೀಸರು ಭೇದಿಸಿದ್ದಾರೆ. ಯಾವುದೇ ಸುಳಿವು ಬಿಟ್ಟುಕೊಡದೆ ಅತ್ಯಂತ ಚಾಣಕ್ಷ್ಯತನದಿಂದ ಆರೋಪಿ ಈ ಕೃತ್ಯ ಎಸಗಿದರೂ, ತಾಂತ್ರಿಕ ಸಾಕ್ಷ್ಯಗಳನ್ನು ಕಲೆ ಹಾಕಿದ ತನಿಖಾ ತಂಡ ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿ ಅಡಗಿ ಕೂತಿದ ಆರೋಪಿಯನ್ನು ತನ್ನ ವಶಕ್ಕೆ ಪಡೆದಿದ್ದ.
ಪೊಲೀಸ್ ವಶದಲ್ಲಿರುವ ಶಂಕಿತನನ್ನು ಪ್ರವೀಣ್ ಚೌಗಲೆ (35) ಎಂದು ಗುರುತಿಸಲಾಗಿದೆ. ತೃಪ್ತಿ ಲೇಔಟ್ ನಲ್ಲಿರುವ ಮೊಹಮ್ಮದ್ ನೂರ್ ಎಂಬುವರ ಮನೆಗೆ ನ. 12ರ ಬೆಳಗ್ಗೆ 8.30ರ ಸುಮಾರಿಗೆ ನುಗ್ಗಿದ್ದ ವ್ಯಕ್ತಿಯೊಬ್ಬ (ಆರೋಪಿ ಪ್ರವೀಣ್) ಆ ಮನೆಯಲ್ಲಿದ್ದ ನೂರ್ ಪತ್ನಿ ಹಸೀನಾ ಹಾಗೂ ಅವರ ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಅಸೀಮ್ (14) ಎಂಬುವರನ್ನು ಕೊಂದು ಹಾಕಿದ್ದ.
2 ಮಕ್ಕಳ ತಂದೆ
ಪ್ರವೀಣ್ ಹತ್ಯೆ ನಡೆಸಿದ ಬಳಿಕ ವಿವಿಧ ಖಾಸಗಿ / ಸಾರ್ವಜನಿಕ ವಾಹನಗಳ ಬಳಸಿ ಪರಾರಿಯಾಗಿದ್ದು ಕುಡಚಿಯ ಸರಕಾರಿ ಅಧಿಕಾರಿಯೊಬ್ಬರ ಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಎಂದು ಹೇಳಲಾಗುತ್ತಿದೆ. ಶಂಕಿತ ಆರೋಪಿ ಮಂಗಳೂರು ಏರ್ ಪೋರ್ಟ್ ನಲ್ಲಿ ಉದ್ಯೋಗಿಯಾಗಿದ್ದು, ಖಾಸಗಿ ಕಂಪನಿಯ ಕ್ಯಾಬಿನ್ ಕ್ರ್ಯೂ ಆಗಿ ಕೆಲಸ ಮಾಡುತ್ತಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅದೇ ಏರ್ ಪೋರ್ಟ್ ನಲ್ಲಿ ಹತ್ಯೆಯಾದ ಯುವತಿಯು ಕೆಲಸ ಮಾಡಿಕೊಂಡಿದ್ದು ಹೀಗಾಗಿ ಈತ ಮೃತರ ಕುಟುಂಬಕ್ಕೆ ಪರಿಚಿತನಾಗಿದ್ದ ಎನ್ನಲಾಗುತ್ತಿದೆ. ಮೂತ: ಈತ, ಮಹಾರಾಷ್ಟ್ರದ ಸಾಂಗ್ಲಿಯವನು ಎಂದು ಗೊತ್ತಾಗಿದೆ. ಈತನಿಗೆ ಈಗಾಗಲೇ ಮದುವೆ ಆಗಿ 2 ಮಕ್ಕಳಿದ್ದಾರೆ.

ಬಂಧಿಸಿದ್ದು ಹೀಗೆ
ಆರೋಪಿಯು ಅತ್ಯಂತ ಚಾಲಕಿತನದಿಂದ ಯಾವುದೇ ಸುಳಿವು ಬಟ್ಟಕೊಡದೇ ನಾಲ್ವರ ಹತ್ಯೆ ಮಾಡಿ ಪರಾರಿಯಾಗಿದ್ದ. ಮುಖಕ್ಕೆ ಮಾಸ್ಕ್ ಧರಿಸಿ ಉಡುಪಿಯ ಸಂತೆಕಟ್ಟೆಯಿಂದ ಆಟೋದಲ್ಲಿ ಬಂದ ಹಂತಕ ಮನೆಯೊಳಗೆ ನುಗ್ಗಿ ನಾಲ್ವರ ಹತ್ಯೆಗೈದು ಮನೆಯಲ್ಲಿದ್ದ 70ರ ಹರೆಯದ ನೂರು ಅವರ ತಾಯಿಗೆ ಗಾಯಗೊಳಿಸಿದ್ದ. ಬಳಿಕ ಅಲ್ಲಿಂದ ಬೈಕ್ ವೊಂದರಲ್ಲಿ ಸಂತೆ ಕಟ್ಟೆಯವರೆಗೆ ಅಲ್ಲಿಂದ ರಿಕ್ಷಾದಲ್ಲಿ ಉಡುಪಿಗೆ, ಉಡುಪಿಯಿಂದ ಉದ್ಯಾವರದವರೆಗೆ ಮತ್ತೊಂದು ಬೈಕ್ ನಲ್ಲಿ ಸಹ ಸವಾರನಾಗಿ ಸಾಗಿರುವುದು ಸಿಸಿಟಿವಿಯಲ್ಲಿ ಬೆಳಕಿಗೆ ಬಂದಿತ್ತು. ಅಲ್ಲದೇ ಹತ್ಯೆಯ ಬಳಿಕ ರಕ್ತಸಿಕ್ತ ಬಟ್ಟೆಯನ್ನು ಬದಲಿಸಿದ್ದ ಹಾಗೂ ಕೃತ್ಯಕ್ಕೆ ಬಳಸಿದ ಆಯುಧವನ್ನು ತನ್ನ ಜತೆ ತೆಗೆದುಕೊಂಡು ಹೋಗಿದ್ದ. ಹೀಗಾಗಿ ಇದು ಕ್ಲೂ ಲೆಸ್ ಪ್ರಕರಣ ಎಂದೇ ಭಾವಿಸಲಾಗಿತ್ತು.

ಪ್ರಕರಣ ಭೇದಿಸಿದ್ದು ಹೀಗೆ
ಮೂಲಗಳ ಪ್ರಕಾರ, ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಲೇ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದರು. ಹಂತಕ ಯಾವುದೇ ಅಂಜಿಕೆಯಿಲ್ಲದೇ ಮನೆಯೊಳಗೆ ಒಳಹೊಕ್ಕಿರುವುದರಿಂದ ಆತ ಮನೆಯ ಒಂದಲ್ಲ ಒಂದು ಸದಸ್ಯನಿಗೆ ಪರಿಚಿತನೇ ಆಗಿರಬೇಕು ಎಂಬ ಸಂಶಯ ಪೊಲೀಸರನ್ನೆ ಕಾಡಿದೆ. ಹೀಗಾಗಿ ಮನೆಯ ಸದಸ್ಯರು ಉದ್ಯೋಗ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ಪೊಲೀಸರು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದ್ದಾರೆ . ಈ ವೇಳೆ ಮಂಗಳೂರು ಏರ್ ಪೋರ್ಟ್ ನಲ್ಲಿ ಉದ್ಯೋಗಿಯಾಗಿದ್ದ ಪ್ರವೀಣ್ ಚೌಗಲೆ ಎಂಬಾತ ಕೆಲಸಕ್ಕೆ ರಜೆ ಮಾಡಿರುವುದು ಗೊತ್ತಾಗಿದೆ. ಹಾಗೂ ಆತ ಹತ್ಯೆಯಾದ ಯುವತಿಯೊಂದಿಗೆ ಸಲುಗೆಯಿಂದ ಇದ್ದ ಎಂಬ ಮಾಹಿತಿ ಲಭಿಸಿದೆ ಎನ್ನಲಾಗಿದೆ.
ಆತನ ಫೋಟೊ ಮತ್ತು ಸಿಸಿಟಿವಿಯಲ್ಲಿ ಕಾಣಿಸಿದ ಶಂಕಿತನ ಫೊಟೊಗೆ ಸಾಮ್ಯತೆ ಕಂಡು ಬಂದ ಹಿನ್ನಲೆಯಲ್ಲಿ ಪೊಲೀಸರು ಅತನ ಬೆನ್ನ ಹಿಂದೆ ಬಿದ್ದಿದ್ದಾರೆ. ಮಂಗಳವಾರ ಸಂಜೆ ಆತನ ಮೊಬೈಲ್ ಬೆಳಗಾವಿಯ ಕುಡಚಿ ಬಳಿ ಒಮ್ಮೆ ಆನ್ ಆಗಿತ್ತು. ಈ ಲೊಕೇಶನ್ ಆಧಾರದಲ್ಲಿ , ಅಲ್ಲಿ ಆತನಿಗೆ ಸಂಪರ್ಕವಿರುವ ಮನೆಯಲ್ಲಿ ಸಂಶಯದ ಮೇರೆಗೆ ದಾಳಿ ನಡೆಸಿದಾಗ ಆರೋಪಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ.

ಕೊಲೆ ಯಾತಕ್ಕಾಗಿ ?
ಆರೋಪಿ ಪ್ರವೀಣ್, ಭಾನುವಾರ ಈತನ ಕೈಯ್ಯಿಂದ ಕೊಲೆಯಾದ ಮೃತ ಅಯ್ನಾಝ್ ಎಂಬಾಕೆಗೆ ಪರಿಚಿತವಾಗಿದ್ದ. ಆಕೆ, ಮಂಗಳೂರು ವಿಮಾನ ನಿಲ್ದಾಣದಲ್ಲಿಯೇ ಗಗನಸಖಿಯಾಗಿ ಸೇವೆ ಸಲ್ಲಿಸುತ್ತಿದ್ದಳು. ಈಕೆಯ ಮೂಲಕವೇ ಪ್ರವೀಣ್, ಈ ಕುಟುಂಬಕ್ಕೆ ನಂಟು ಉಂಟಾಗಿತ್ತು. ಅಯ್ನಾಝ್ ನೊಂದಿಗೆ ಯಾವುದೋ ದೊಡ್ಡದಾದ ಮನಸ್ತಾಪ ಹಾಗೂ ದ್ವೇಷದಿಂದಲೇ ಈ ಕೊಲೆ ಆಗಿರಬಹುದು ಎಂದು ಶಂಕಿಸಲಾಗಿದೆ.
ಆತ್ಮೀಯತೆಯೇ ಮುಳುವಾಯಿತೇ?
ಇನ್ನೊಂದು ಮೂಲಗಳ ಪ್ರಕಾರ, ಇಬ್ಬರು ಪರಸ್ಪರ ಆತ್ಮೀಯವಾಗಿದ್ದರು. ಆದರೆ ನಂತರ ಅಯ್ನಾಜ್ ಆತನಿಂದ ದೂರವಾಗಿದ್ದಳು. ಇದರಿಂದ ಕುಪಿತನಾಗಿದ್ದ ಪ್ರವೀಣ್ ಆಕೆಯನ್ನು ಕೊಲೆ ಮಾಡುವ ನಿರ್ಧಾರ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.

ಗೋಲ್ಡ್ ಸ್ಮಗ್ಲಿಂಗ್ ?
ಇನ್ನೂ ಒಂದು ಮೂಲಗಳ ಪ್ರಕಾರ ಆರೋಪಿಯು ಗೋಲ್ಡ್ ಸ್ಮಗ್ಲಿಂಗ್ ನಲ್ಲಿ ತೊಡಗಿಸಿಕೊಂಡಿದ್ದು ಇದು ಆಯ್ನಾಜ್ ಗಮನಕ್ಕೆ ಬಂದಿದ್ದು ಆಕೆ ಅದನ್ನು ಸಂಬಂಧಪಟ್ಟವರಿಗೆ ತಿಳಿಸಿದ್ದಾರೆ ಅಥಾವ ತಿಳಿಸುವ ಭೀತಿಯಲ್ಲಿ ಈ ಕೊಲೆ ನಡೆದಿರಬಹುದು ಎನ್ನಲಾಗುತ್ತಿದೆ. ಈ ಊಹೆ ನಿಜವಾಗಿದ್ದರೇ ಇದರ ಹಿಂದೆ ಹಲವು ಕಾಣದ ಕೈಗಳು ಕೆಲಸ ಮಾಡಿರುವ ಸಾಧ್ಯತೆಯಿದೆ. ಇದನ್ನು ಮರೆ ಮಾಚಲು ಅನೈತಿಕ ಸಂಬಂಧದ ಕಟ್ಟು ಕಥೆಯನ್ನು ಮಾಧ್ಯಮಗಳಿಗೆ ನೀಡಲಾಗುತ್ತಿದೆ ಎಂಬ ಆರೋಪವು ಕೇಳಿ ಬರುತ್ತಿದೆ.
ಯುವತಿಯ ಮನೆಯವರ ಹಾಗೂ ಮನೆಯವರಿಗೂ ಈತನ ಪರಿಚಯವಿದ್ದ ಕಾರಣ ಭಾನುವಾರ ಬೆಳಗ್ಗೆ ರಿಕ್ಷಾದಲ್ಲಿ ಬಂದು ನೇರವಾಗಿ ಮನೆಗೆ ಹೋಗಿದ್ದು, ಮನೆಯವರು ಬರ ಮಾಡಿಕೊಂಡಿದ್ದಾರೆ. ಆದರೆ ಯುವತಿಗೆ ಚೂರಿಯಿಂದ ಇರಿದು ಹತ್ಯೆ ಮಾಡುವುದಕ್ಕೆ ಮುಂದಾಗಿರುವುದನ್ನು ಗಮನಿಸಿದ ತಾಯಿ ಹಸೀನಾ ಹಾಗೂ ಸಹೋದರಿ ಅಫ್ನಾನ್ ಅವರು ರಕ್ಷಿಸುವುದಕ್ಕೆ ಮುಂದಾಗಿದ್ದರು. ಈ ಕೊಲೆಯ ಬಗ್ಗೆ ಪೊಲೀಸರಿಗೆ ಬಾಯಿ ಬಿಟ್ಟರೆ ಶಿಕ್ಷೆಯಾಗಬಹುದೆನ್ನುವ ಭೀತಿ ಹಾಗೂ ಸಾಕ್ಷ್ಯ ನಾಶ ಮಾಡಬೇಕೆಂಬ ಉದ್ದೇಶದಿಂದ ಉಳಿದ ಮೂವರನ್ನು ಹತ್ಯೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬುಧವಾರ ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಆರೋಪಿಯ ಬಂಧನದಿಂದಾಗಿ ಈ ಪ್ರಕರಣ ಬಹುಮುಖ್ಯ ತಿರುವನ್ನು ಪಡೆದುಕೊಂಡಿದೆ.
Uncategorized
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್‌ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ
ಘಟನೆ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!
ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.
ದೂರು ದಾಖಲಿಸಲು ಹಿಂದೇಟು?
ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ
ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.
ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.
Uncategorized
Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.
ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.
ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.
ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.
ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.
ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
-
ಅಪರಾಧ21 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್18 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ18 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು19 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ15 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ19 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು20 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಸ್ಥಳೀಯ19 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















