ಉಡುಪಿ
Udupi Murder: ಉಡುಪಿ : ನಾಲ್ವರ ಕೊಲೆ ಆರೋಪಿಗೆ 14 ದಿನ ಪೊಲೀಸ್ ಕಸ್ಟಡಿ ; ತನಿಖಾಧಿಕಾರಿ ಮುಂದೆ ಹಂತಕ ಪ್ರವೀಣ್ ಚೌಗಲೆ ಬಾಯ್ಬಿಟ್ಟ ಮಹತ್ವದ ವಿಚಾರ
ಉಡುಪಿ, ನ.15: ಉಡುಪಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ (Udupi 4 Murder) ಸಂಬಂಧಪಟ್ಟಂತೆ ಬಂಧಿತ ಆರೋಪಿ ಪ್ರವೀಣ್ ಚೌಗಲೆಯನ್ನು ನ್ಯಾಯಾಲಯಕ್ಕೆ ಇಂದು ಸಂಜೆ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರಾದ ಶ್ಯಾಮ್ ಪ್ರಕಾಶ್ಅವರು ಆರೋಪಿಯನ್ನು ಹದಿನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.
ಪ್ರಕರಣದ ಕುರಿತು ಮಾಹಿತಿ ನೀಡಿರುವ, ಉಡುಪಿ ಎಸ್ .ಪಿ ಡಾ. ಅರುಣ್ ಕೆ. ಪ್ರವೀಣ್ ಚೌಗುಲೆ ಕೊಲೆಯನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ. ಕೊಲೆಯ ಹಿಂದಿನ ಮೋಟಿವ್ ಅನ್ನು ಮುಂದಿನ ಹಂತದ ವಿಚಾರಣೆ ಪಡೆದುಕೊಳ್ಳುವುದಾಗಿ ತಿಳಿಸಿರುವ ಅವರು, ಕೊಲೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆ ಇದೆ ಎಂದಿದ್ದಾರೆ.
ಪ್ರಕರಣದ ಹಾಗೂ ಆರೋಪಿಯ ಸಂಪೂರ್ಣ ತನಿಖೆ ನಡೆಯದ ಹೊರತು ಸ್ಪಷ್ಟ ಮಾಹಿತಿ ಹೇಳಲು ಅಸಾಧ್ಯ. ಆದರೇ ಆರೋಪಿ ತಪ್ಪೊಪ್ಪಿಗೆ ಹೇಳಿಕೆ ಹೇಳಿಕೆ ನೀಡಿದ್ದು ಕೃತ್ಯ ನಡೆಸಿರುವುದನ್ನು ಒಪ್ಪಿಕೊಂಡಿರುತ್ತಾನೆ. ಅವನ ಉದ್ದೇಶ ಅಯ್ನಾಝ್ ಕೊಲೆ ಮಾಡುವುದಾಗಿತ್ತು. ಆರೋಪಿ ತಪ್ಪಿಸಿಕೊಳ್ಳಲು ಮತ್ತು ಸಾಕ್ಷಿ ನಾಶ ಮಾಡಲು ಇತರರ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಗೆಯಲ್ಲಿ ಹೇಳಿಕೊಂಡಿದ್ದಾನೆ ಎಂದು ಕೂಡ ಅವರು ಉಡುಪಿ ಎಸ್ಪಿ ತಿಳಿಸಿದರು.
ಆರೋಪಿ ಪ್ರವೀಣ್ ಚೌಗುಲೆಗೆ ಮದುವೆಯಾಗಿತ್ತು. ತಾಂತ್ರಿಕ ಸಾಕ್ಷಿಗಳ ಸಂಗ್ರಹ ಮಾಡಿ ಬಂಧಿಸಿದ್ದೇವೆ.
ಮೃತ ರ ಕುಟುಂಬ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದೆ. ಕೊಲೆಗೆ ಕಾರಣ ಏನು ಎನ್ನುವುದು ಕಂಡು ಹಿಡಿಯುವುದು ಅತ್ಯಂತ ಪ್ರಮುಖ ವಿಚಾರ. ಅಯ್ನಾಝ್ ಮತ್ತು ಪ್ರವೀಣ್ ಚೌಗುಲೆ ನಡುವಿನ ಸಂಬಂಧಗಳ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದು ಉಡುಪಿ ಎಸ್ ಪಿ ಡಾ ಅರಣ್ ಹೇಳಿಕೆ ನೀಡಿದ್ದಾರೆ
ಪೊಲೀಸರು ಬಂಧಿಸಿ ಕೊಲೆ ಮಾಡಿ ಉಡುಪಿಯಿಂದ ಪರಾರಿಯಾಗಿದ್ದ ಆರೋಪಿ ಬೆಳಗಾವಿಯ ಕುಡಚಿಯ ಸಂಬಂಧಿ ಮನೆಯಲ್ಲಿ ಆಶ್ರಯ ಪಡೆದಿದ್ದ. ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಉಡುಪಿ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದರು. ಆರೋಪಿ ಪ್ರವೀಣ್ ಚೌಗಲೆ ಈ ಹಿಂದೆ ಪೊಲೀಸ್ ಇಲಾಖೆಯಲ್ಲಿದ್ದ. ಮಹಾರಾಷ್ಟ್ರದ ಪುಣೆಯಲ್ಲಿ ಪೊಲೀಸ್ ಆಗಿದ್ದ ಪ್ರವೀಣ್ ಕೆಲಸಕ್ಕೆ ಸೇರಿದ್ದ ಮೂರೇ ತಿಂಗಳಲ್ಲಿ ರಾಜೀನಾಮೆ ನೀಡಿ ಏರ್ ಇಂಡಿಯಾ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದ. 10 ವರ್ಷದಿಂದ ಏರ್ ಇಂಡಿಯಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ
ಮಂಗಳೂರು ಏರ್ ಪೋರ್ಟ್ ನಲ್ಲಿ ಏರ್ ಇಂಡಿಯಾ ಸಿಬ್ಬಂದಿಯಾಗಿದ್ದ ಹಂತಕ ಪ್ರವೀಣ್ ಹತ್ಯೆಯಾದ ಅಯ್ನಾಜ್ ಸಹೋದ್ಯೋಗಿಯಾಗಿದ್ದ. ಅಯ್ನಾಜ್ ಮತ್ತು ಪ್ರವೀಣ್ ಗೆ ಹಲವು ವರ್ಷಗಳ ಪರಿಚಯವಿತ್ತು. ಭಾನುವಾರ ಮುಂಜಾನೆ ಮಂಗಳೂರಿನಿಂದ ಉಡುಪಿಗೆ ಬಂದು. ಅಯ್ನಾಜ್ ಮನೆಯಲ್ಲಿ ರೆಸ್ಟ್ ಮಾಡುತ್ತಿದ್ದಾಗ ಮನೆಗೆ ನುಗ್ಗಿದ ಕೊಲೆ ಮಾಡಿದ್ದಾನೆ. ಅಯ್ನಾಜ್ ಮೃತ ಹಸೀನಾಳ ಎರಡನೇ ಮಗಳು. ಮೊದಲಿಗೆ ಹಂತಕ ಅಯ್ನಾಜ್ ಕೊಲೆ ಮಾಡಿ ಬಳಿಕ ಉಳಿದ ಮೂವರ ಹತ್ಯೆ ಮಾಡಿದ್ದಾನೆ ಎನ್ನಲಾಗುತ್ತಿದೆ
ಇತ್ತ ತನಿಖೆ ಆರಂಭಿಸಿದ್ದ ಉಡುಪಿ ಪೊಲೀಸರು ಅಯ್ನಾಜ್ ಸಹೋದ್ಯೋಗಿಗಳ ಪೈಕಿ ಪ್ರವೀಣ್ ಮೊಬೈಲ್ ಮಾತ್ರ ಸ್ವಿಚ್ ಆಫ್ ಆಗಿದ್ದನ್ನು ಗಮನಿಸಿ ಪ್ರವೀಣ್ ಬಗ್ಗೆಯೇ ಜಾಸ್ತಿ ಗಮನ ಹರಿಸಿದ್ರು. ಅವನ ನಡಿಗೆಯ ಶೈಲಿ, ಅವನ ಚಹರೆ, ಅವನಿಗೆ ಅಯ್ನಾಜ್ ಜತೆಯಿದ್ದ ಅನ್ಯೂನತೆ ಇವೆಲ್ಲವು ಪ್ರವೀಣ್ ಬಗ್ಗೆ ಅನುಮಾನ ಹೆಚ್ಚಿಸುವಂತೆ ಮಾಡಿತ್ತು.
ಮಂಗಳವಾರ ಮಧ್ಯಾಹ್ನ ಪ್ರವೀಣ್ ಮೊಬೈಲ್ ಆನ್ ಮಾಡುತ್ತಿದ್ದಂತೆಯೇ ಪೊಲೀಸರು ಕಾರ್ಯಾಚರಣೆಗೆ ಸಹಾಯವಾಗಿದ್ದು ಬೆಳಗಾವಿ ಮತ್ತು ಉಡುಪಿ ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ನರಹಂತಕ ಪ್ರವೀಣ್ ಲಾಕ್ ಆಗಿದ್ದಾನೆ.
ಅಪರಾಧ
Mangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಉಡುಪಿ: ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
2011ರ ಡಿಸೆಂಬರ್ 3ರಂದು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜಾರು ಗ್ರಾಮದ ಉಡುಪಿ ಜಿಲ್ಲಾ ಕಾರಾಗೃಹದ ಮೊದಲ ಬ್ಯಾರಕ್ ಎದುರಿನ ವರಾಂಡದಲ್ಲಿ ಘಟನೆ ನಡೆದಿತ್ತು. ಜೈಲ್ ವಾರ್ಡನ್ ಅವರು ಪ್ರಭಾರ ವಹಿಸಿಕೊಳ್ಳುವ ಸಲುವಾಗಿ ಬಂಧಿಗಳ ಲೆಕ್ಕ ತೆಗೆದುಕೊಳ್ಳಲು ತಮ್ಮ ತಮ್ಮ ಬ್ಯಾರಕ್‌ಗಳಿಗೆ ತೆರಳುವಂತೆ ಸೂಚಿಸಿದ್ದರು. ಈ ವೇಳೆ ಅಡುಗೆ ಕೋಣೆಯ ಎದುರುಗಡೆ ಇದ್ದ ವಿಚಾರಣಾ ಬಂಧಿ ಸಫಾನ್ ಹುಸೈನ್ ಅಲಿಯಾಸ್ ರಜಾಕ್ ಎಂಬಾತ ಜೈಲ್ ವಾರ್ಡನ್ ಅವರನ್ನು ಉದ್ದೇಶಿಸಿ ಅವಾಚ್ಯವಾಗಿ ನಿಂದಿಸಿ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ್ದ.
ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು 2012ರ ಜನವರಿ 10ರಂದು ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ನ್ಯಾಯಾಲಯ ಆರೋಪಿಗೆ 2013ರ ಮೇ 29ರಂದು ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣೆಗೆ ಹಾಜರಾಗದೆ ಆರೋಪಿ ತಲೆಮರೆಸಿಕೊಂಡಿದ್ದರಿಂದ ಪ್ರಕರಣವು 2022ರ ಜೂನ್ 24ರಂದು ಎಲ್‌ಪಿಸಿ ನಂ.02/2022ರಂತೆ ದಾಖಲಾಗಿತ್ತು.
ತಲೆಮರೆಸಿಕೊಂಡಿದ್ದ ಸಫಾನ್ ಹುಸೈನ್‌ನನ್ನು 2026ರ ಏಪ್ರಿಲ್ 23ರಂದು ಬಾಡಿ ವಾರಂಟ್ ಮೂಲಕ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆರೋಪಿಗೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40,000 ದಂಡ ವಿಧಿಸಿ ತೀರ್ಪು ನೀಡಿದೆ
ಉಡುಪಿ
Malpe-ಮಲ್ಪೆ: ದಸರಾ ರಜೆಗೂ ಮುನ್ನವೇ ಬೀಚ್‌ನಲ್ಲಿ ಪ್ರವಾಸಿಗರ ಮಹಾಪೂರ : ಕಿಮೀ ಉದ್ದ ಟ್ರಾಫಿಕ್ ಜಾಮ್ – ಪಾರ್ಕಿಂಗ್ ಗಿಲ್ಲ ಸ್ಥಳ..!
ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಮಲ್ಪೆ: ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಬಿಸಿಲಿನ ತೀವ್ರತೆ ಹೆಚ್ಚಿದ್ದರೂ ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಭಾಗಗಳಿಂದ ಕುಟುಂಬ ಸಮೇತರಾಗಿ ಪ್ರವಾಸಿಗರು ಮಲ್ಪೆಗೆ ಆಗಮಿಸುತ್ತಿದ್ದಾರೆ. ಬೀಚ್‌ನ ಮುಖ್ಯ ಭಾಗದಿಂದ ಸೀವಾಕ್‌ವರೆಗೂ ಕಡಲತೀರದಲ್ಲಿ ಜನಜಂಗುಳಿ ಕಂಡುಬರುತ್ತಿದೆ.
ಶುಕ್ರವಾರ ಬೆಳಗ್ಗೆಯಿಂದಲೇ ಮಲ್ಪೆಯತ್ತ ಪ್ರವಾಸಿಗರ ಆಗಮನ ಹೆಚ್ಚಾಗಿದ್ದು, ಅಪರಾಹ್ನದ ವೇಳೆಗೆ ವಾಹನ ನಿಲುಗಡೆಗೂ ಜಾಗವಿಲ್ಲದಷ್ಟು ಒತ್ತಡ ನಿರ್ಮಾಣವಾಗಿತ್ತು. ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳನ್ನು ನಿಲ್ಲಿಸಿದ್ದರಿಂದ ಸುಗಮ ಸಂಚಾರಕ್ಕೂ ಅಡ್ಡಿಯಾಯಿತು.
ಬೀಚ್‌ಗೆ ಆಗಮಿಸಿದ ಪ್ರವಾಸಿಗರು ಬನಾನಾ ರೈಡ್, ಸ್ಪೀಡ್ ಬೋಟ್ ಸೇರಿದಂತೆ ವಿವಿಧ ಜಲಸಾಹಸ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪ್ರಸಿದ್ಧ ಸೈಂಟ್ ಮೇರಿಸ್ ದ್ವೀಪಕ್ಕೂ ದೋಣಿ ಮೂಲಕ ತೆರಳುವ ಪ್ರವಾಸಿಗರ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ.
ಆದಿ ಉಡುಪಿ-ಮಲ್ಪೆ ರಸ್ತೆಯಲ್ಲಿ ಸಂಚಾರ ಸಂಕಷ್ಟ
ಪ್ರವಾಸಿಗರ ವಾಹನಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಮಲ್ಪೆಗೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಆದಿಉಡುಪಿಯಿಂದ ಮಲ್ಪೆ ಬೀಚ್‌ವರೆಗಿನ ರಸ್ತೆಯಲ್ಲಿ ಶುಕ್ರವಾರ ಸಂಜೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶನಿವಾರ ಕಲ್ಮಾಡಿ ಭಾಗದಲ್ಲೂ ಇದೇ ಪರಿಸ್ಥಿತಿ ಕಂಡುಬಂತು.
ಮಲ್ಪೆ ಭಾಗದ ಕಿರಿದಾದ ರಸ್ತೆಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ಮಂಜುಗಡ್ಡೆ ಹಾಗೂ ಮೀನಿನ ಲಾರಿಗಳ ಸಂಚಾರವೂ ಹೆಚ್ಚಿದ್ದು, ಪ್ರವಾಸಿಗರ ವಾಹನಗಳ ಒತ್ತಡದೊಂದಿಗೆ ಸಂಚಾರ ಮತ್ತಷ್ಟು ನಿಧಾನಗೊಂಡಿದೆ. ಇದರ ಜೊತೆಗೆ ಕಲ್ಮಾಡಿ ಸೇತುವೆ ಬಳಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ದಸರಾ ರಜೆಯಲ್ಲಿ ಮತ್ತಷ್ಟು ಪ್ರವಾಸಿಗರ ನಿರೀಕ್ಷೆ
ಶಾಲಾ-ಕಾಲೇಜುಗಳ ಪರೀಕ್ಷೆಗಳು ಮುಗಿದಿದ್ದು, ಅ.11ರಿಂದ ದಸರಾ ರಜೆ ಆರಂಭವಾಗಲಿದೆ. ಹೀಗಾಗಿ ರಜೆ ಅವಧಿಯಲ್ಲಿ ಮಲ್ಪೆ ಬೀಚ್‌ಗೆ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ.
ಪಾರ್ಕಿಂಗ್, ಸ್ವಚ್ಛತೆ, ಸುರಕ್ಷತೆಗೆ ಆದ್ಯತೆ ಅಗತ್ಯ
ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ವಾಹನ ಪಾರ್ಕಿಂಗ್ ಸ್ಥಳ ಸಾಕಾಗುತ್ತಿಲ್ಲ. ಕೆಲವರು ಪಾದಚಾರಿ ಮಾರ್ಗದಲ್ಲೇ ವಾಹನಗಳನ್ನು ನಿಲ್ಲಿಸುತ್ತಿದ್ದು, ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ ಹೇಳಿದ್ದಾರೆ.
ಬೀಚ್ ಸುತ್ತಮುತ್ತ ಸ್ವಚ್ಛತೆ ಹಾಗೂ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಬೀಚ್ ಪ್ರದೇಶದಲ್ಲಿ ಕಸದ ರಾಶಿ ಕಂಡುಬರುತ್ತಿದ್ದು, ಇದು ಪ್ರವಾಸಿಗರಿಗೆ ಅಸಹ್ಯ ಉಂಟುಮಾಡುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಉಡುಪಿ
Manipal-ಮಣಿಪಾಲ: ಕೆಎಂಸಿ ಆಸ್ಪತೆಯ 4ನೇ ಮಹಡಿಯಿಂದ ಬಿದ್ದ ವ್ಯಕ್ತಿಗೆ ಗಂಭೀರ ಗಾಯ
ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಉಡುಪಿ, ಸೆ.30: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಪತ್ನಿಯೊಂದಿಗೆ ನಡೆದ ಜಗಳದ ಬಳಿಕ ಕೆಲವು ದಿನಗಳ ಹಿಂದೆ ರಾಜೇಶ್ ವಿಷ ಸೇವಿಸಿದ್ದರು ಎನ್ನಲಾಗಿದ್ದು, ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಡಿಸ್‌ಚಾರ್ಜ್‌ಗೆ ಸಿದ್ಧತೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.
ಬುಧವಾರ ಆಸ್ಪತ್ರೆ ಸಿಬ್ಬಂದಿಯೊಂದಿಗೆ ವಾಕಿಂಗ್‌ಗೆ ತೆರಳುವುದಾಗಿ ಹೇಳಿ ಕೊಠಡಿಯಿಂದ ರಾಜೇಶ್ ಹೊರಬಂದಿದ್ದರು. ಬಳಿಕ ಕಿಟಕಿಯ ಬಳಿ ತೆರಳಿ ಗ್ರಿಲ್ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಜಾಲರಿಯನ್ನು ಹರಿದು ಕೆಳಗೆ ಇಳಿಯುತ್ತಿದ್ದಾಗ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
-
ಮಂಗಳೂರು18 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized15 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized13 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಅಂತರ ರಾಜ್ಯ17 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ19 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ23 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಬಿಗ್ ನ್ಯೂಸ್18 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಸ್ಥಳೀಯ22 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು


















