ಉಡುಪಿ
ಉಡುಪಿ ನಾಲ್ವರ ಕಗ್ಗೊಲೆ : ತನಿಖೆಯ ದಾರಿ ತಪ್ಪಿಸಲು ಯತ್ನಿಸುತ್ತಿರುವ ಹಂತಕ ಬಾಯ್ಬಿಡುತ್ತಿಲ್ಲ..! ಕೊಲೆಯ ಮೋಟಿವ್ ಕುರಿತು ಬಗೆ ಹರಿಯದ ಅನುಮಾನ
ಮಂಗಳೂರು: ಉಡುಪಿಯ ನೇಜಾರಿನ ಮನೆಯೊಂದರಲ್ಲಿದ್ದ ನಾಲ್ವರ ಹತ್ಯೆಗೈದ ಆರೋಪಿ ಏರ್ ಇಂಡಿಯಾ ಕ್ಯಾಬಿನ್ ಕ್ರೂ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆ ಪೊಲೀಸರ ತನಿಖೆಗೆ ಸಹಕಾರ ನೀಡುತ್ತಿಲ್ಲ, ಪೊಲೀಸರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆತ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾದ್ಯಮಗಳಿಗೆ ಮಾಹಿತಿ ನೀಡಿದ್ದರು. ಅದರ ಹೊರತು ಕೊಲೆ ಮಾಡಿದ ಉದ್ದೇಶ ಹಾಗೂ ಕೃತ್ಯ ನಡೆಸಿದ ಘಟನಾವಳಿಗಳ ಮಾಹಿತಿಯನ್ನು ಇವರೆಗೆ ಒದಗಿಸಿಲ್ಲ ಎಂದು ತಿಳಿದು ಬಂದಿದೆ.
ಆರೋಪಿಯ ಎರಡು ಕೈ ಬೆರಳಿಗೆ ಗಾಯವಾಗಿದ್ದು, ಇದು ಹೇಗೆ ಆಯಿತು ಎನ್ನುವ ವಿಚಾರವನ್ನು ಆತ ಪೊಲೀಸರಿಗೆ ತಿಳಿಸಿಲ್ಲ ಎನ್ನಲಾಗಿದೆ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿದ ವೇಳೆ ಹತ್ಯೆ ನಡೆಸುವ ವೇಳೆ ಕೈಗಾದ ಗಾಯ ಎಂದು ಪೊಲೀಸರು ನ್ಯಾಯದೀಶರಿಗೆ ಸಮಜಾಯಿಷಿ ನೀಡಿದ್ದರು. ಆದರೇ ಅದನ್ನು ಆರೋಪಿ ಅಲ್ಲೆ ನಿರಾಕರಿಸಿದ್ದ. ಇನ್ನೂ ಹತ್ಯೆಗೆ ಬಳಸಿದ ಆಯುಧವು ಇವರೆಗೆ ಪತ್ತೆಯಾಗಿಲ್ಲ. ಒಂದು ಬಾರಿ ಅದನ್ನು ತಾನು ಮೂಲ್ಕಿ ಬಳಿ ನದಿಯಲ್ಲಿ ಬೀಸಾಡಿರುವುದಾಗಿ ತಿಳಿಸಿದರೇ, ಇನ್ನೊಮ್ಮೆ ಬೇರೆಲ್ಲೂ ಎಸೆದಿರುವುದಾಗಿ ತಿಳಿಸಿರುವುದಾಗಿ ವರದಿಯಾಗಿದೆ.

ಕೃತ್ಯಕ್ಕೆ ಬಳಸಿದ ಆಯುಧ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದು, ಪ್ರಾಷಿಕ್ಯೂಷನ್ ಗೆ ಆರೋಪವನ್ನು ಸಾಬೀತುಪಡಿಸಲು ಇದು ಬಲವಾದ ಆಧಾರವಾಗಿದೆ. ಇದು ಸಿಗದೇ ಹೋದರೆ ಅಷ್ಟರಮಟ್ಟಿಗೆ ಕೇಸಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಕುಟುಂಬದ ಯಜಮಾನ ನೂರ್ ಮಹಮ್ಮದ್ ಅವರ 70 ವರ್ಷದ ತಾಯಿ, ಕೃತ್ಯದ ವೇಳೆ ಗಂಭೀರ ಗಾಯಗೊಂಡ ಮಹಿಳೆ ಈ ಪ್ರಕರಣದ ಏಕೈಕ ಪ್ರತ್ಯಕ್ಷ ಸಾಕ್ಷಿ. ಬೊಬ್ಬೆ ಕೇಳಿ ಹೊರ ಬಂದ ನೋಡಿದ್ದಾಳೆ. ಆರೋಪಿಯನ್ನು ಮನೆಯವರೆಗೆ ಬಿಟ್ಟ ಆಟೋ ರಿಕ್ಷಾ ಚಾಲಕ ಹಾಗೂ ಹಂತಕ ಹತ್ಯಕಾಂಡ ನಡೆಸಿ ಮನೆಯಿಂದ ಹೊರ ಹೋಗುವದನ್ನು ನೋಡಿದ ಪಕ್ಕದ ಮನೆಯ ಯುವತಿ ( ನೂರ್ ಮಹಮ್ಮದ್ ಅವರ ಅಣ್ಣನ ಮಗಳು) ಪ್ರಕರಣದ ಪರೋಕ್ಷ ಸಾಕ್ಷಿಗಳು, ಆದರೆ ಇವರಿಬ್ಬರು ನೋಡಿದಾಗ ಹಂತಕ ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದ
ಇನ್ನು ಕೃತ್ಯ ಎಸಗಿದ ಬಳಿಕ ಪರಾರಿಯಾದ ಮಾರ್ಗ, ಬಳಸಿದ ವಾಹನಗಳ ಬಗ್ಗೆಯೂ ಮಾಹಿತಿ ನೀಡುವಾಗಲೂ ಪೊಲೀಸರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದನೆಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಆತ ಕೃತ್ಯ ಎಸಗಿದ ಬಳಿಕ ಬೈಕ್ ವೊಂದರಲ್ಲಿ ರಿಕ್ಷಾ ಸ್ಟ್ಯಾಂಡ್ ಬಳಿ ಬಂದು ಅಲ್ಲಿಂದ ತುಸು ದೂರ ಆಟೋ ರಿಕ್ಷಾದಲ್ಲಿ ತೆರಲ್ಲಿ ಅಲ್ಲಿಂದ ಉದ್ಯಾವರದವರೆಗೆ ಬೈಕ್ ನಲ್ಲಿ ಹೋಗಿರುವುದು ಸಿಸಿಟಿವಿ ಪರಿಶೀಲನೆ ವೇಳೆ ಬೆಳಕಿಗೆ ಬಂದಿತ್ತು. ಆದರೇ ಯಾವುದೇ ಸಿಸಿಟಿವಿಯಲ್ಲೂ ಆತನ ಮುಖ ಕಾಣಿಸಿಲ್ಲ. ಹೀಗಾಗಿ ಪ್ರಕರಣವನ್ನು ಸಾಬೀತು ಪಡಿಸಲು ಪರಾರಿಯ ವೇಳೆ ಆರೋಪಿಯನ್ನು ನೋಡಿದವರ ಸಾಂದರ್ಭಿಕ ಸಾಕ್ಷ್ಯದ ಅನಿವಾರ್ಯತೆ ಪ್ರಾಷಿಕ್ಯೂಷನ್ ಗೆ ಬೀಳಬಹುದು. ಇದೇ ಉದ್ದೇಶದಿಂದ ಆರೋಪಿ ಸರಿಯಾದ ಮಾಹಿತಿ ನೀಡದೆ ಪೊಲೀಸರ ದಾರಿ ತಪ್ಪಿಸುತ್ತಿದ್ದ ಎನ್ನಲಾಗಿದೆ.

ಆರೋಪಿ ಅಲ್ಲಿಂದ ಮಂಗಳೂರಿಗೆ ಹೇಗೆ ಹೋದ? ಎನ್ನುವ ಬಗ್ಗೆ ಪೊಲೀಸರಿಗೆ ಇನ್ನೂ ಸ್ಪಷ್ಟ ಮಾಹಿತಿ ದೊರಕಿಲ್ಲ ಎನ್ನಲಾಗುತ್ತಿದೆ. ಆರೋಪಿ ಮೂಲ್ಕಿಯಿಂದ ತನ್ನ ಕಾರಿನಲ್ಲಿ ಮಂಗಳೂರಿಗೆ ಹೋಗಿರಬಹುಎಂದು ಹೇಳಲಾಗುತ್ತಿದ್ದು, ಇನ್ನೊಂದು ಮೂಲದ ಪ್ರಕಾರ ಆತ ಉದ್ಯಾವರದಿಂದ ಮಂಗಳೂರಿಗೆ ಬಸ್ಸಿನಲ್ಲಿ ಹೋಗಿ ಅಲ್ಲಿಂದ ತನ್ನ ಹೆಕ್ಟರ್ ಕಾರಿನಲ್ಲಿ ಬೆಳಗಾವಿಯ ಸಂಬಂಧಿಕರ ಮನೆಗೆ ಕುಟುಂಬ ಸಮೇತ ಹೋಗಿರುವುದಾಗಿ ಹೇಳಲಾಗುತ್ತಿದೆ. ಈ ಕುರಿತ ನಿಖರ ಮಾಹಿತಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಇನ್ನೂ ಲಭಿಸಿಲ್ಲ ಎನ್ನಲಾಗುತ್ತಿದೆ.
ಮಹಜರು ವೇಳೆಯೂ 25 ನಿಮಿಷಗಳ ಕಾಲ ಕೃತ್ಯ ನಡೆಸಿದ ರೀತಿ, ಆ ಕೊಲೆಗಳನ್ನು ಹೇಗೆ ಮಾಡಿದ ಎಂಬ ಬಗ್ಗೆಯೂ ತನಿಖೆಯ ದಾರಿ ತಪ್ಪಿಸುವ ರೀತಿಯಲ್ಲೆ ವರ್ತಿಸಿದ್ದಾನೆ ಎನ್ನಲಾಗುತ್ತಿದೆ. ಹೀಗಾಗಿ ಇನ್ನೊಂದು ಆರೋಪಿಯನ್ನು ಕೃತ್ಯ ನಡೆದ ಸ್ಥಳಕ್ಕೆ ಮಹಜರಿಗೆ ಕರೆದುಕೊಂಡು ಬರುವ ಸಾದ್ಯತೆಯೂ ಇದೆ.

ಗಗನ ಸಖಿಯಾಗಿರುವ ಹತ್ಯೆಯಾದ ಐನಾಝ್ ಕುರಿತಾಗಿ ಚೌಗ್ಲೆ ವಿಪರೀತವಾಗಿ ಪೊಸೆಸಿವ್ ಆಗಿದ್ದ. ಆಕೆ ಇತನನ್ನು ಅವಾಯ್ಡ್ ಮಾಡುತ್ತಿದ್ದದ್ದೆ ಕೊಲೆಗೆ ಕಾರಣ ಎನ್ನುವ ವಾದ ಸರಣಿಯನ್ನು ಹಲವು ಮಾದ್ಯಮಗಳು ಹೊರ ಬಿಡುತ್ತಿವೆ. ಆರೋಪಿ ಕೊಲೆಗೆ ಎರಡು ಮೂರು ಕಾರಣ ತಿಳಿಸಿದ್ದು, ಆತ ಐನಾಝ್ ಳನ್ನು ಅತಿಯಾಗಿ ಹಚ್ಚಿಕೊಂಡಿದ್ದು ಆಕೆ ತನ್ನ ನಿಯಂತ್ರಣದಲ್ಲಿರಬೇಕು ಮನಸ್ಥಿತಿಯಿಂದ ಕೊಲೆ ಮಾಡಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಕೆ. ಅರುಣ್ ಕುಮಾರ್ ತಿಳಿಸಿದ್ದಾರೆ.

ಆದರೇ ಕೇವಲ ಆಕೆಯ ಮೇಲೆ ದ್ವೇಷ ಇದ್ದರೇ ಅವಳು ಒಬ್ಬಂಟಿಯಾಗಿ ಸಿಗುವ ಸ್ಥಳದಲ್ಲಿ ಕೃತ್ಯ ಎಸಗುತ್ತಿದ್ದ. ಮನೆಯವರೆಗೂ ಹುಡುಕಿಕೊಂಡು ಹೋಗಿ ಅಲ್ಲಿ ಕೊಲೆ ಮಾಡುವ ರಿಸ್ಕ್ ಯಾಕೇ ತೆಗೆದುಕೊಳ್ಳುತ್ತಿದ್ದ. ಅದು ಮನೆಯಲ್ಲಿ ಅಷ್ಟು ಜನರಿರುವಾಗ ಎನ್ನುವ ಸಂಶಯ ಜನರನ್ನು ಕಾಡುತ್ತಿದೆ. ಇಡಿ ಉಡುಪಿ ಬೆಚ್ಚಿ ಬೀಳುವ ರೀತಿ ಬಾಲಕನ ಸಹಿತ ನಾಲ್ವರ ಕೊಲೆ ಮಾಡಿದ ಭಯಾನಕ ಹಂತಕ ಯಾವುದೇ ಕಾರಣಕ್ಕೂ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಬಾರದು, ಸಾಕ್ಷ್ಯದ ಕೊರತೆಯಿಂದ ಹೊರ ಬರಬಾರದು. ಹಾಗಾಗಿ ಪೊಲೀಸ್ ಇಲಾಖೆ ಸಮರ್ಪಕ ತನಿಖೆ ನಡೆಸಬೇಕು ಹಾಗೂ ಕೊಲೆಯ ಹಿಂದಿನ ಕಾರಣಗಳು ಬಯಲು ಮಾಡಬೇಕು. ಸಾಕ್ಷ್ಯ ಸಂಗ್ರಹದಲ್ಲಿ ಲೋಪ ಆಗಬಾರದು . ಇದೆ ವೇಳೆ ಹತ್ಯೆಯಾದವರ ಚಾರಿತ್ರಹರಣವು ನಡೆಯಬಾರದು ಎನ್ನುವುದು ಸಾರ್ವಜನಿಕರ ಬೇಡಿಕೆ
ಅಪರಾಧ
Udupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಡುಪಿ, ಅ.8: ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೊಲೆಯಾದ ಉದ್ಯಮಿ ಡೇವಿಡ್ ಡಿಸೋಜಾ ಅವರ ಪುತ್ರನಿಗೆ ವಾಟ್ಸಾಪ್ ಕರೆ ಮಾಡಿರುವ ಅಪರಿಚಿತ ವ್ಯಕ್ತಿಯೊಬ್ಬ, ₹5 ಕೋಟಿ ನೀಡುವಂತೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
“ನಿನ್ನ ತಂದೆಯಿಂದ ನನ್ನ ಸಹೋದರನಿಗೆ ಸಾಕಷ್ಟು ನಷ್ಟವಾಗಿತ್ತು. ಆ ಕಾರಣಕ್ಕೆ ನಾನೇ ಕೊಲೆ ಮಾಡಿಸಿದ್ದೆ. ನಮಗಾಗಿರುವ ನಷ್ಟವನ್ನು ತುಂಬಿಕೊಡಲು ₹5 ಕೋಟಿ ನೀಡಬೇಕು” ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಬ್ಬ ಉದ್ಯಮಿ ಹಾಗೂ ಖಾಸಗಿ ಸಂಸ್ಥೆಯ ವ್ಯಕ್ತಿಗೂ ಹೇಮಂತ್ ಪೂಜಾರಿ ಹೆಸರಿನಲ್ಲಿ ವಾಟ್ಸಾಪ್ ಕರೆಗಳು ಬಂದಿದ್ದು, ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿವೆ.
25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಆರೋಪಿ
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಹೇಮಂತ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಆತನ ಸಹೋದರ ಹಾಗೂ ಇತರ ಸಹಚರರ ನೆರವಿನಿಂದ ಹೊರರಾಜ್ಯದ ಶೂಟರ್‌ಗಳನ್ನು ಕರೆಸಿ ಕೊಲೆ ಮಾಡಿಸಲಾಗಿದೆ ಎಂಬ ಆರೋಪ ಪ್ರಕರಣದಲ್ಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಪೂಜಾರಿಯನ್ನು ಹೊರತುಪಡಿಸಿ ಉಳಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಕಳೆದ 25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಹೇಮಂತ್ ಪೂಜಾರಿ ಬಗ್ಗೆ ಇದುವರೆಗೂ ಸ್ಪಷ್ಟ ಸುಳಿವು ಲಭ್ಯವಾಗಿಲ್ಲ. ಈ ನಡುವೆ ಆತನ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬಂದಿರುವುದು ಪೊಲೀಸರ ಗಮನ ಸೆಳೆದಿದೆ.
ಕರೆ ಮಾಡುತ್ತಿರುವವರು ಯಾರು?
ಹೇಮಂತ್ ಪೂಜಾರಿಯೇ ಕರೆ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಬೇರೆಯವರು ಬೆದರಿಕೆ ಹಾಕುತ್ತಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕರೆಗಳ ಮೂಲ, ಹಣದ ಬೇಡಿಕೆಯ ಹಿಂದಿನ ಉದ್ದೇಶ ಹಾಗೂ ಪ್ರಕರಣಗಳ ನಡುವಿನ ಸಂಬಂಧದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Mangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಉಡುಪಿ: ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
2011ರ ಡಿಸೆಂಬರ್ 3ರಂದು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜಾರು ಗ್ರಾಮದ ಉಡುಪಿ ಜಿಲ್ಲಾ ಕಾರಾಗೃಹದ ಮೊದಲ ಬ್ಯಾರಕ್ ಎದುರಿನ ವರಾಂಡದಲ್ಲಿ ಘಟನೆ ನಡೆದಿತ್ತು. ಜೈಲ್ ವಾರ್ಡನ್ ಅವರು ಪ್ರಭಾರ ವಹಿಸಿಕೊಳ್ಳುವ ಸಲುವಾಗಿ ಬಂಧಿಗಳ ಲೆಕ್ಕ ತೆಗೆದುಕೊಳ್ಳಲು ತಮ್ಮ ತಮ್ಮ ಬ್ಯಾರಕ್‌ಗಳಿಗೆ ತೆರಳುವಂತೆ ಸೂಚಿಸಿದ್ದರು. ಈ ವೇಳೆ ಅಡುಗೆ ಕೋಣೆಯ ಎದುರುಗಡೆ ಇದ್ದ ವಿಚಾರಣಾ ಬಂಧಿ ಸಫಾನ್ ಹುಸೈನ್ ಅಲಿಯಾಸ್ ರಜಾಕ್ ಎಂಬಾತ ಜೈಲ್ ವಾರ್ಡನ್ ಅವರನ್ನು ಉದ್ದೇಶಿಸಿ ಅವಾಚ್ಯವಾಗಿ ನಿಂದಿಸಿ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ್ದ.
ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು 2012ರ ಜನವರಿ 10ರಂದು ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ನ್ಯಾಯಾಲಯ ಆರೋಪಿಗೆ 2013ರ ಮೇ 29ರಂದು ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣೆಗೆ ಹಾಜರಾಗದೆ ಆರೋಪಿ ತಲೆಮರೆಸಿಕೊಂಡಿದ್ದರಿಂದ ಪ್ರಕರಣವು 2022ರ ಜೂನ್ 24ರಂದು ಎಲ್‌ಪಿಸಿ ನಂ.02/2022ರಂತೆ ದಾಖಲಾಗಿತ್ತು.
ತಲೆಮರೆಸಿಕೊಂಡಿದ್ದ ಸಫಾನ್ ಹುಸೈನ್‌ನನ್ನು 2026ರ ಏಪ್ರಿಲ್ 23ರಂದು ಬಾಡಿ ವಾರಂಟ್ ಮೂಲಕ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆರೋಪಿಗೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40,000 ದಂಡ ವಿಧಿಸಿ ತೀರ್ಪು ನೀಡಿದೆ
ಉಡುಪಿ
Malpe-ಮಲ್ಪೆ: ದಸರಾ ರಜೆಗೂ ಮುನ್ನವೇ ಬೀಚ್‌ನಲ್ಲಿ ಪ್ರವಾಸಿಗರ ಮಹಾಪೂರ : ಕಿಮೀ ಉದ್ದ ಟ್ರಾಫಿಕ್ ಜಾಮ್ – ಪಾರ್ಕಿಂಗ್ ಗಿಲ್ಲ ಸ್ಥಳ..!
ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಮಲ್ಪೆ: ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಬಿಸಿಲಿನ ತೀವ್ರತೆ ಹೆಚ್ಚಿದ್ದರೂ ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಭಾಗಗಳಿಂದ ಕುಟುಂಬ ಸಮೇತರಾಗಿ ಪ್ರವಾಸಿಗರು ಮಲ್ಪೆಗೆ ಆಗಮಿಸುತ್ತಿದ್ದಾರೆ. ಬೀಚ್‌ನ ಮುಖ್ಯ ಭಾಗದಿಂದ ಸೀವಾಕ್‌ವರೆಗೂ ಕಡಲತೀರದಲ್ಲಿ ಜನಜಂಗುಳಿ ಕಂಡುಬರುತ್ತಿದೆ.
ಶುಕ್ರವಾರ ಬೆಳಗ್ಗೆಯಿಂದಲೇ ಮಲ್ಪೆಯತ್ತ ಪ್ರವಾಸಿಗರ ಆಗಮನ ಹೆಚ್ಚಾಗಿದ್ದು, ಅಪರಾಹ್ನದ ವೇಳೆಗೆ ವಾಹನ ನಿಲುಗಡೆಗೂ ಜಾಗವಿಲ್ಲದಷ್ಟು ಒತ್ತಡ ನಿರ್ಮಾಣವಾಗಿತ್ತು. ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳನ್ನು ನಿಲ್ಲಿಸಿದ್ದರಿಂದ ಸುಗಮ ಸಂಚಾರಕ್ಕೂ ಅಡ್ಡಿಯಾಯಿತು.
ಬೀಚ್‌ಗೆ ಆಗಮಿಸಿದ ಪ್ರವಾಸಿಗರು ಬನಾನಾ ರೈಡ್, ಸ್ಪೀಡ್ ಬೋಟ್ ಸೇರಿದಂತೆ ವಿವಿಧ ಜಲಸಾಹಸ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪ್ರಸಿದ್ಧ ಸೈಂಟ್ ಮೇರಿಸ್ ದ್ವೀಪಕ್ಕೂ ದೋಣಿ ಮೂಲಕ ತೆರಳುವ ಪ್ರವಾಸಿಗರ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ.
ಆದಿ ಉಡುಪಿ-ಮಲ್ಪೆ ರಸ್ತೆಯಲ್ಲಿ ಸಂಚಾರ ಸಂಕಷ್ಟ
ಪ್ರವಾಸಿಗರ ವಾಹನಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಮಲ್ಪೆಗೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಆದಿಉಡುಪಿಯಿಂದ ಮಲ್ಪೆ ಬೀಚ್‌ವರೆಗಿನ ರಸ್ತೆಯಲ್ಲಿ ಶುಕ್ರವಾರ ಸಂಜೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶನಿವಾರ ಕಲ್ಮಾಡಿ ಭಾಗದಲ್ಲೂ ಇದೇ ಪರಿಸ್ಥಿತಿ ಕಂಡುಬಂತು.
ಮಲ್ಪೆ ಭಾಗದ ಕಿರಿದಾದ ರಸ್ತೆಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ಮಂಜುಗಡ್ಡೆ ಹಾಗೂ ಮೀನಿನ ಲಾರಿಗಳ ಸಂಚಾರವೂ ಹೆಚ್ಚಿದ್ದು, ಪ್ರವಾಸಿಗರ ವಾಹನಗಳ ಒತ್ತಡದೊಂದಿಗೆ ಸಂಚಾರ ಮತ್ತಷ್ಟು ನಿಧಾನಗೊಂಡಿದೆ. ಇದರ ಜೊತೆಗೆ ಕಲ್ಮಾಡಿ ಸೇತುವೆ ಬಳಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ದಸರಾ ರಜೆಯಲ್ಲಿ ಮತ್ತಷ್ಟು ಪ್ರವಾಸಿಗರ ನಿರೀಕ್ಷೆ
ಶಾಲಾ-ಕಾಲೇಜುಗಳ ಪರೀಕ್ಷೆಗಳು ಮುಗಿದಿದ್ದು, ಅ.11ರಿಂದ ದಸರಾ ರಜೆ ಆರಂಭವಾಗಲಿದೆ. ಹೀಗಾಗಿ ರಜೆ ಅವಧಿಯಲ್ಲಿ ಮಲ್ಪೆ ಬೀಚ್‌ಗೆ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ.
ಪಾರ್ಕಿಂಗ್, ಸ್ವಚ್ಛತೆ, ಸುರಕ್ಷತೆಗೆ ಆದ್ಯತೆ ಅಗತ್ಯ
ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ವಾಹನ ಪಾರ್ಕಿಂಗ್ ಸ್ಥಳ ಸಾಕಾಗುತ್ತಿಲ್ಲ. ಕೆಲವರು ಪಾದಚಾರಿ ಮಾರ್ಗದಲ್ಲೇ ವಾಹನಗಳನ್ನು ನಿಲ್ಲಿಸುತ್ತಿದ್ದು, ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ ಹೇಳಿದ್ದಾರೆ.
ಬೀಚ್ ಸುತ್ತಮುತ್ತ ಸ್ವಚ್ಛತೆ ಹಾಗೂ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಬೀಚ್ ಪ್ರದೇಶದಲ್ಲಿ ಕಸದ ರಾಶಿ ಕಂಡುಬರುತ್ತಿದ್ದು, ಇದು ಪ್ರವಾಸಿಗರಿಗೆ ಅಸಹ್ಯ ಉಂಟುಮಾಡುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
-
ಬಿಗ್ ನ್ಯೂಸ್21 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಬಿಗ್ ನ್ಯೂಸ್20 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್20 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ19 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ19 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ18 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಂತರ ರಾಜ್ಯ20 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
-
ಮಂಗಳೂರು17 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















