ಆರೋಗ್ಯ
Throat Infection :ಗಂಟಲು ನೋವಿಗೆ ಈ ಮನೆಮದ್ದುಗಳನ್ನು ಬಳಸಿ ಪ್ರಯೋಜನ ಪಡೆಯಿರಿ
ಚಳಿಗಾಲದ ಸಂದರ್ಭದಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳಿಗೆ ಹೊಂದಿಕೊಂಡಂತೆ ಗಂಟಲು ನೋವು ಬಹುತೇಕ ಜನರಲ್ಲಿ ಸಾಮಾನ್ಯವಾಗಿರುತ್ತದೆ.
ಆದರೆ ಇದಕ್ಕೆ ಭಯಪಡುವ ಅಗತ್ಯವಿಲ್ಲ. ಏಕೆಂದರೆ ಇಂತಹ ಸಣ್ಣಪುಟ್ಟ ಸಮಸ್ಯೆಗಳಿಗೆ ಹಲವಾರು ಮನೆಮದ್ದುಗಳು ಪರಿಹಾರದ ರೂಪದಲ್ಲಿ ಕೆಲಸ ಮಾಡುತ್ತವೆ.
*ಕರಿಮೆಣಸು ಮತ್ತು ಜೇನುತುಪ್ಪ
ಕರಿಮೆಣಸು ಮತ್ತು ಜೇನುತುಪ್ಪದ ಮಿಶ್ರಣವು ನೋಯುತ್ತಿರುವ ಗಂಟಲು, ಶೀತ ಮತ್ತು ಕೆಮ್ಮುವಿಗೆ ಚಿಕಿತ್ಸೆಯಾಗಿ ಬಳಸಲಾಗುತ್ತದೆ. ಜೇನುತುಪ್ಪವು ನೈಸರ್ಗಿಕ ಕೆಮ್ಮು ನಿವಾರಕವಾಗಿದೆ ಮತ್ತು ನಿಮಗೆ ತ್ವರಿತ ಪರಿಹಾರವನ್ನು ನೀಡುತ್ತದೆ. ಕರಿಮೆಣಸು ಮತ್ತು ಜೇನುತುಪ್ಪದ ಮಿಶ್ರಣದಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಅನೇಕ ಸೋಂಕುಗಳ ವಿರುದ್ಧ ಹೋರಾಡುತ್ತವೆ.
*ಆಪಲ್ ವಿನೆಗರ್
ಆಪಲ್ ಸೈಡರ್ ವಿನೆಗರ್ ಕುಡಿಯುವುದರಿಂದ ಗಂಟಲು ನೋವು ನಿವಾರಣೆಯಾಗುವುದು ಮಾತ್ರವಲ್ಲದೆ ತೂಕ ಇಳಿಸಲು ಸಹಾಯ ಮಾಡುತ್ತದೆ. 1 ಗ್ಲಾಸ್ ಬೆಚ್ಚಗಿನ ನೀರಿನಲ್ಲಿ 1 ಚಮಚ ಆಪಲ್ ಸೈಡರ್ ವಿನೆಗರ್ ಮಿಶ್ರಣ ಮಾಡಿ. ಸ್ವಲ್ಪ ತಣ್ಣಗಾಗಲು ಬಿಡಿ, ಬಳಿಕ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ
*ಶುಂಠಿ:
ಶುಂಠಿಯು ಜಿಂಜರಾಲ್ ಅನ್ನು ಹೊಂದಿರುತ್ತದೆ. ಇದು ಶಕ್ತಿಯುತ ಔಷಧೀಯ ಗುಣಗಳನ್ನು ಹೊಂದಿದೆ. ಇದಕ್ಕೆ 1 ಇಂಚಿನ ಶುಂಠಿಯನ್ನುಈ ತುರಿದು ಬಾಣಲೆಗೆ ಹಾಕಿ. ನಂತರ ಅದಕ್ಕೆ 1 ಲೋಟ ನೀರು ಹಾಕಿ ಕುದಿಸಿ. ಸುಮಾರು 5 ನಿಮಿಷಗಳ ಕಾಲ ಕುದಿಸಿ ನಂತರ ಶುಂಠಿ ನೀರನ್ನು ಸೋಸಿ ಸೇವಿಸಿ.
*ಉಪ್ಪು ನೀರು
ಬೆಚ್ಚಗಿನ ನೀರಿನಲ್ಲಿ ಉಪ್ಪು ಬೆರೆಸಿ ಗಂಟಲವರೆಗೆ ಗಾರ್ಗ್ಲಿಂಗ್ ಮಾಡಿದರೆ ಕೂಡಾ ಕಫ ಹಾಗೂ ಗಂಟಲು ನೋವು ಕಡಿಮೆ ಆಗುತ್ತದೆ. ಇದು ಗಂಟಲಿನ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ. ಗಂಟಲು ನೋವು ಬೇಗ ಗುಣವಾಗುತ್ತದೆ. ಒಂದು ಲೋಟ ಬೆಚ್ಚಗಿನ ನೀರಿಗೆ ಅರ್ಧ ಚಮಚ ಉಪ್ಪನ್ನು ಸೇರಿಸಿ ಅದು ಕರಗಿದ ನಂತರ ಬಾಯಿ ಮುಕ್ಕಳಿಸಿದರೆ ಗಂಟಲು ನೋವು ಕಡಿಮೆಯಾಗಿ ಗಂಟಲು ಸ್ವಚ್ಛವಾಗುತ್ತದೆ. ನೀವು ಗಂಟಲು ನೋವಿನಿಂದ ಬಳಲುತ್ತಿದ್ದರೆ. ದಿನಕ್ಕೆ ಎರಡು ಬಾರಿ ಹೀಗೆ ಮಾಡಿ. ನೀವು ತಡೆಯುವಷ್ಟು ಬಿಸಿ ನೀರು ಬಳಸಿ, ಪುಡಿ ಉಪ್ಪಿನ ಬದಲಿಗೆ ಹರಳು ಉಪ್ಪು ಬಳಸಿದರೆ ಸೂಕ್ತ.
*ಬೆಳ್ಳುಳ್ಳಿ:ಬೆಳ್ಳುಳ್ಳಿ ಆ್ಯಂಟಿಮೈಕ್ರೊಬಿಯಲ್ ಮತ್ತು ಆ್ಯಂಟಿ ಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿದೆ. ಇದರಲ್ಲಿರುವ ಆರ್ಗನೊಸಲ್ಫರ್ ರಾಸಾಯನಿಕವಾಗಿರುವ ಆಲಿಸಿನ್, ಸೋಂಕು ನಿವಾರಕ, ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ನಿವಾರಕ ಮತ್ತು ವೈರಸ್ ವಿರೋಧಿ ಗುಣಗಳನ್ನು ಹೊಂದಿದೆ. ನಿಮ್ಮ ಪ್ರತಿದಿನದಯ ಆಹಾರದಲ್ಲಿ ಬೆಳ್ಳುಳ್ಳಿ ಸೇವಿಸಿದರೆ ಶೀತ ಮತ್ತು ಜ್ವರಕ್ಕೆ ಕಾರಣವಾಗುವ ವೈರಸ್ಗಳನ್ನು ತಡೆಯಬಹುದು. ಬೆಳ್ಳುಳ್ಳಿ ಎಸಳನ್ನು 10-15 ನಿಮಿಷಗಳ ಕಾಲ ದವಡೆಯಿಂದ ಜಗಿದು ರಸವನ್ನು ನುಂಗಿದರೆ ಗಂಟಲು ನೋವು ನಿವಾರಣೆಯಾಗುತ್ತದೆ.
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
-
ಶಿಕ್ಷಣ21 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು21 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್23 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು22 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ5 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಅಪರಾಧ21 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಬಿಗ್ ನ್ಯೂಸ್4 hours agoPuttur-ಪುತ್ತೂರು: ದ.ಕ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ; ಪೇಟೆಯಲ್ಲಿ ಆಮಂತ್ರಣ ವಿತರಣೆ
-
ಬಿಗ್ ನ್ಯೂಸ್4 hours agoHigh Court notice-ಜಾರಿಯಾಗದ ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್















