ದುರದೃಷ್ಟವಶಾತ್ ತೆಂಗಿನ ಸಾಮಥ್ಯವನ್ನು […]" /> ದುರದೃಷ್ಟವಶಾತ್ ತೆಂಗಿನ ಸಾಮಥ್ಯವನ್ನು […]"> ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ… - Nikhara News | Kannada News Website
Connect with us

ಸ್ಥಳೀಯ

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ…

Published

on

Ad Widget

Ad Widget

Ad Widget

Ad Widget

ತೆಂಗಿನ ಕಾಯಿಯಿಂದ ಹಲವು ಉಪ ಉತ್ಪನ್ನಗಳು ದೊರೆಯುತ್ತಿದೆ. ನಾವು ತೆಂಗಿನ ಮರಗಳನ್ನು ಐದು ವರ್ಷಗಳ ಕಾಲ ಪೋಷಿಸಿದರೆ ಅದರ ಫಲ ನಮಗೆ ದೊರೆಯುವುದು ಮಾತ್ರವಲ್ಲ ಭವಿಷ್ಯದ ಪೀಳಿಗೆಗೂ ಮುಂದುವರಿಯುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಕಾವೂರು ಶಾಖಾ ಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ನಗರದ ಮರೋಳಿಯಲ್ಲಿ ಗುರುವಾರ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆ( ಸೌತ್ ಕೆನರಾ ಕೊಕೊನಟ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪೆನಿ ಲಿಮಿಟೆಡ್)ಯ ಪ್ರಾದೇಶಿಕ ಕಚೇರಿಯನ್ನು ಉದ್ಘಾಟಿಸಿದರು.

Ad Widget

Ad Widget alt="Ad Widget"/>

Ad Widget

ದುರದೃಷ್ಟವಶಾತ್ ತೆಂಗಿನ ಸಾಮಥ್ಯವನ್ನು ಗುರುತಿಸುವಲ್ಲಿ ಮತ್ತು ಪೋಷಿಸುವಲ್ಲಿ ನಮ್ಮಲ್ಲಿ ಮಾಹಿತಿಯ ಕೊರತೆ ಇದೆ. ತೆಂಗಿನ ಚಿಪ್ಪುಗಳನ್ನು ವಿವಿಧ ಉಪ ಉತ್ಪನ್ನಗಳಾಗಿ ಪರಿವರ್ತಿಸಬಹುದು ಮತ್ತು ಆದಾಯ ಮತ್ತು ಉದ್ಯೋಗಾವಕಾಶ ಗಳನ್ನು ಸೃಷ್ಟಿಸಲು ಸಾಧ್ಯವಿದೆ ಎಂದು ಸ್ವಾಮೀಜಿ ನುಡಿದರು.

Ad Widget

Ad Widget <> Ad Widget

ಸಮಾರಂಭದಲ್ಲಿ ಸ್ವಾಮೀಜಿ ಹಾಗೂ ಇತರ ಗಣ್ಯರು ತೆಂಗಿನ ಎಣ್ಣೆ, ಕೊಬ್ಬರಿ ಒಣ ಚಟ್ನಿ ಸೇರಿದಂತೆ ತೆಂಗಿನ ಉತ್ಪನ್ನಗಳನ್ನು ಅನಾವರಣಗೊಳಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget

ಸೌತ್ ಕೆನರಾ ಕೊಕೊನಟ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪೆನಿ ಲಿಮಿಟೆಡ್‌ನ ಸಿಇಒ ಚೇತನ್ ಎ ಅವರು ಭವಿಷ್ಯದ ಯೋಜನೆಗಳನ್ನು ವಿವರಿಸಿದರು, ಪುತ್ತೂರು ಶಾಖೆಯ ಮೇಲ್ವಿಚಾರಕಿ ನವ್ಯಶ್ರೀ ಅವರು ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಕಾಸರಗೋಡು ಐಸಿಎಆರ್ – ಸಿಪಿಸಿಆರ್‌ಐ ನಿರ್ದೇಶಕ ಡಾ.ಹೆಬ್ಬಾರ್ ಕೆ.ಬಿ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಎಚ್.ಆರ್.ನಾಯಕ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ಎಚ್, ಮರೋಳಿ ವಾರ್ಡ್‌ನ ಕಾರ್ಪೊರೇಟರ್ ಕೇಶವ ಮರೋಳಿ, ಮನಪಾ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ದಕ್ಷಿಣ ಕನ್ನಡ ಜಿಲ್ಲಾ ನಬಾರ್ಡ್ ವ್ಯವಸ್ಥಾಪಕ ಸಂಗೀತಾ ಎಸ್.ಕರ್ತಾ, ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಮತ್ತು ಹಿರಿಯ ವಿಜ್ಞಾನಿ ಡಾ.ರಮೇಶ್, ಭಾರತೀಯ ವಿಕಾಸ ಟ್ರಸ್ಟ್‌ನ ಜಿಲ್ಲಾ ಮುಖ್ಯಸ್ಥ ಜೀವನ್, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ, ಪುಣಚ, ಕರ್ನಾಟಕ ರಾಜ್ಯ ರೈತ ಹಸಿರು ಸೇನೆಯ ದ.ಕ. ಜಿಲ್ಲಾ ಸಂಚಾಲಕ ರೂಪೇಶ್ ರೈ ಅಲಿಮಾರ್, ಸೂರ್ಯನಾರಾಯಣ ದೇವಸ್ಥಾನದ ಟ್ರಸ್ಟಿ ಉಮೇಶ್ ರೈ ಭಾಗವಹಿಸಿದ್ದರು.

ಸೌತ್ ಕೆನರಾ ಕೋಕೋನಟ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪೆನಿ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಕುಸುಮಾಧರ್ ಎಸ್.ಕೆ , ನಿರ್ದೇಶಕರಾದ ಹರಿಪ್ರಸಾದ್ , ಲತಾ .ಪಿ, ತಿಮ್ಮಪ್ಪ , ವರ್ಧಮಾನ್ ಜೈನ್ ಉಪಸ್ಥಿತರಿದ್ದರು.

ಸಂಸ್ಥೆಯ ಉಪಾಧ್ಯಕ್ಷ ಗಿರೀಧರ ಸ್ಕಂದ ಸ್ವಾಗತಿಸಿದರು , ಸುಳ್ಯ ಶಾಖೆಯ ಮೇಲ್ವೀಚಾರಕಿ ಅಪರ್ಣಾ ವಂದಿಸಿದರು, ಡಾ.ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

Ad Widget
Click to comment

Leave a Reply

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಶಿಕ್ಷಣ

Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ

Published

on

Ad Widget

Ad Widget

Ad Widget

Ad Widget

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Ad Widget

Ad Widget <> Ad Widget

ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!