Connect with us

Uncategorized

Bank Fraud: ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ಸೌದಿಯಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಸ್ವದೇಶಕ್ಕೆ : ಭರವಸೆಗೆ ಸೀಮಿತವಾದ ಜನಪ್ರತಿನಿಧಿಗಳು – ಗೆಳೆಯರ ಪ್ರಯತ್ನದ ಫಲದಿಂದ ಬಿಡುಗಡೆ

ಅಗಷ್ಟ್‌ ತಿಂಗಳ ಮಧ್ಯ ಭಾಗದಲ್ಲಿ ಕನ್ನಡದ ಪ್ರತಿಷ್ಟಿತ ಚಾನೆಲ್‌ʼನ ಸುದ್ದಿ ನಿರೂಪಕರೊಬ್ಬರು ಘಟನೆಯ ಕುರಿತು ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರ ಗಮನ ಸೆಳೆದಿದ್ದರು. ಈ ವೇಳೆ ಸಂಸದರು ಟ್ವಿಟ್ ಮಾಡಿ ವಾರದೊಳಗೆ ಯುವಕನನ್ನು ಕರೆ ತರುವುದಾಗಿ ಕುಟುಂಬಸ್ಥರಿಗೆ ಭರವಸೆ ನೀಡಿದ್ದರು. ಆದರೇ ಅವರ ಪ್ರಯತ್ನ ಕೇವಲ ಟ್ವೀಟ್‌ ಗೆ ಸೀಮಿತವಾಗಿತ್ತು ಬಿಟ್ಟರೆ ಬೇರಾವುದೇ ಪ್ರಯತ್ನ ಮಾಡಿಲ್ಲ ಎಂದು ಚಂದ್ರಶೇಖರ್ ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ

Published

on

Ad Widget

Ad Widget

Ad Widget

Ad Widget

ಕಡಬ, ನ. 19: ಮಾಡದ ತಪ್ಪಿಗೆ 11 ತಿಂಗಳುಗಳ ಕಾಲ ರಿಯಾದ್‌ನಲ್ಲಿ ಜೈಲು ಶಿಕ್ಷೆಗೆ ಒಳಗಾದ ಕಡಬದ ಅಮಾಯಕ ಯುವಕ ಕೊನೆಗೂ ಜೈಲಿನಿಂದ ಬಿಡುಗಡೆಯಾಗಿದ್ದು, ಸೋಮವಾರ (ನ. 20) ಸ್ವದೇಶಕ್ಕೆ ಆಗಮಿಸಲಿದ್ದಾರೆ. ತಾನು ಉದ್ಯೋಗ ಮಾಡುತ್ತಿದ್ದ ಸಂಸ್ಥೆಯಲ್ಲಿ ಪದೋನ್ನತಿ ಹೊಂದಿ ಸೌದಿ ಅರೇಬಿಯಾದ ರಿಯಾದ್‌ ಗೆ ತೆರಳಿದ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಅಲ್ಲಿ ಜೈಲುಪಾಲಾಗಿದ್ದರು.

Ad Widget

Ad Widget

Ad Widget

Ad Widget

11 ತಿಂಗಳು ಸೆರೆವಾಸ ಅನುಭವಿಸಿದ ಬಳಿಕ ಇದೀಗ ರಿಯಾದ್‌ನ ಪೊಲೀಸರು ಚಂದ್ರಶೇಖರ್ ಅವರನ್ನು ವಿಮಾನ ದಲ್ಲಿ ಮುಂಬಯಿಗೆ ಕಳುಹಿಸಲಿದ್ದು ಅಲ್ಲಿಂದ ಅವರು ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಶೇಖರ್ ಅಲ್ಲಿನ ಕೋರ್ಟ್ ಆದೇಶದಂತೆ ದಂಡ ಪಾವತಿಸಿದ ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget alt="Ad Widget"/>

Ad Widget

ಪದೋನ್ನತಿ ಪಡೆದು ವಿದೇಶಕ್ಕೆ ತೆರಳಿದ್ದರು

Ad Widget

Ad Widget <> Ad Widget

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್ ಕೆಲಸದಲ್ಲಿ ಪದೋನ್ನತಿ ಪಡೆದು 2022ರಲ್ಲಿ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಅಲ್ಲಿ ಅಲ್ಪಾನರ್‌ ಸೆರಾಮಿಕ್ಸ್‌ ಎಂಬ ಕಂಪೆನಿಯಲ್ಲಿದ್ದರು. 2022ರ ನವೆಂಬರ್‌ನಲ್ಲಿ ಮೊಬೈಲ್ ಮತ್ತು ಸಿಮ್ ಖರೀದಿಗೆ ರಿಯಾದ್‌ನ ಅಂಗಡಿಯೊಂದಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅರ್ಜಿಯೊಂದಕ್ಕೆ ಎರಡು ಬಾರಿ ಹೆಬ್ಬೆಟ್ಟು (ತಂಬ್) ಸಹಿ ನೀಡಿದ್ದರು. ವಾರದ ಬಳಿಕ ಅವರಿಗೆ ಅರೇಬಿಕ್ ಭಾಷೆಯಲ್ಲಿ ಹೊಸ ದೂರವಾಣಿ ಸಂಖ್ಯೆಗೆ ಸಂದೇಶ ಬಂದಿತ್ತು. ಅದನ್ನು ತೆರೆದು ಚಂದ್ರಶೇಖರ್ ನೋಡಿದ್ದರು. 2 ದಿನಗಳ ಬಳಿಕ ದೂರವಾಣಿ ಕರೆ ಬಂದು ಸಿಮ್‌ನ ಬಗ್ಗೆ ಮಾಹಿತಿ ಕೇಳಲಾಗಿತ್ತು. ಒಟಿಪಿ ತಿಳಿಸಿದ್ದರು. ವಾರದ ಬಳಿಕ ಅಲ್ಲಿನ ಪೊಲೀಸರು ಬಂದು ಚಂದ್ರಶೇಖರ್ ಅವರನ್ನು ಬಂಧಿಸಿದ್ದರು

ಚಂದ್ರಶೇಖರ್‌ಗೆ ತಿಳಿಯದಂತೆ ಅಲ್ಲಿನ ಬ್ಯಾಂಕೊಂದರಲ್ಲಿ ಅವರದೇ ಹೆಸರಿನಲ್ಲಿ ಹ್ಯಾಕ‌ರ್‌ ಗಳು ಖಾತೆ ತೆರೆದಿದ್ದರು. ಅಲ್ಲಿನ ಮಹಿಳೆಯೊಬ್ಬರ ಖಾತೆಯಿಂದ ಚಂದ್ರಶೇಖರ್ ಹೆಸರಿನಲ್ಲಿ ಹ್ಯಾಕರ್‌ ಗಳು ತೆರೆದ ಖಾತೆಗೆ 22 ಸಾವಿರ ಜಮೆ ಮಾಡಲಾಗಿತ್ತು. ಅಲ್ಲಿಂದ ಆ ಹಣ ಕೂಡಲೇ ಬೇರೆ ಯಾವುದೋ ದೇಶದ ಖಾತೆಯೊಂದಕ್ಕೆ ವರ್ಗಾವಣೆಯಾಗಿತ್ತು. ಹಣ ಕಳೆದುಕೊಂಡ ಮಹಿಳೆಯು ಚಂದ್ರಶೇಖರ್‌ ಅವರ ಖಾತೆಗೆ ಹಣ ಜಮೆಯಾಗಿರುವುದನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು.

Ad Widget

Ad Widget

ಬಂಧನವಾಗಿರುವ ಬಗ್ಗೆ ಚಂದ್ರಶೇಖರ್ ಅವರ ಗೆಳೆಯರು ಕಡಬದಲ್ಲಿರುವ ಅವರ ಮನೆಯವರಿಗೆ ತಿಳಿಸಿದ್ದರು. ಜೈಲಿನಲ್ಲಿ ದಿನದಲ್ಲಿ ಕೇವಲ2 ನಿಮಿಷ ಮಾತ್ರ ದೂರವಾಣಿ ಕರೆ ಮಾಡಲು ಚಂದ್ರಶೇಖ‌ರ್‌ ಅವರಿಗೆ ಅವಕಾಶ ನೀಡಲಾಗಿತ್ತು. ಸ್ನೇಹಿತರಿಗೂ ಅವರನ್ನು ಭೇಟಿಯಾಗಲು ಅವಕಾಶವಿರಲಿಲ್ಲ

ಐತ್ತೂರು ಗ್ರಾಮದ ಮೂಜೂರು ನಿವಾಸಿ ದಿ| ಕೆಂಚಪ್ಪ ಗೌಡ ಹಾಗೂ ಹೇಮಾವತಿ ದಂಪತಿಗೆ ಚಂದ್ರಶೇಖ‌ರ್ ಕೊನೆಯ ಪುತ್ರ. ಅವರಿಗೆ ಜನವರಿಯಲ್ಲಿ‌ ಊರಿನಲ್ಲಿ ಮದುವೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಮದುವೆಯ ದಿನಾಂಕವೂ ಅಂತಿಮವಾಗಿತ್ತು. ಆ ಸಿದ್ಧತೆಯಲ್ಲಿ ಇರುವಾಗಲೇ ಅವರ ಬಂಧನವಾಗಿತ್ತು.

ಜನಪ್ರತಿನಿಧಿಗಳು ಭರವಸೆಗೆ ಸೀಮಿತ

ಬಂಧಿಯಾದ ವಿಚಾರವನ್ನು ಅಲ್ಲಿಯ ವಕೀಲರ ಸೂಚನೆಯಂತೆ ಆರಂಭದಲ್ಲಿ ಬಹಿರಂಗಪಡಿಸಿರಲಿಲ್ಲ. ಕಳೆದ ಜೂನ್‌ ತಿಂಗಳಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ತಿಳಿಸಿದ್ದರೂ, ಅವರು ವಿದೇಶಾಂಗ ಇಲಾಖೆಗೆ ಪತ್ರ ಬರೆದಿರುವುದು ಹೊರತುಪಡಿಸಿ ಇಲಾಖೆಗೆ ಒತ್ತಡ ಹೇರುವ ಕೆಲಸ ಮಾಡಿಲ್ಲ. ವಿದೇಶಾಂಗ ಇಲಾಖೆಯಿಂದ ಸೌದಿ ಅರೇಬಿಯಾಕ್ಕೆ ಯಾವುದೇ ಪತ್ರವೂ ಹೋಗಿಲ್ಲ. ಅಗಷ್ಟ್‌ ತಿಂಗಳ ಮಧ್ಯ ಭಾಗದಲ್ಲಿ ಕನ್ನಡದ ಪ್ರತಿಷ್ಟಿತ ಚಾನೆಲ್‌ʼನ ಸುದ್ದಿ ನಿರೂಪಕರೊಬ್ಬರು ಘಟನೆಯ ಕುರಿತು ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರ ಗಮನ ಸೆಳೆದಿದ್ದರು. ಈ ವೇಳೆ ಸಂಸದರು ಟ್ವಿಟ್ ಮಾಡಿ ವಾರದೊಳಗೆ ಯುವಕನನ್ನು ಕರೆ ತರುವುದಾಗಿ ಕುಟುಂಬಸ್ಥರಿಗೆ ಭರವಸೆ ನೀಡಿದ್ದರು. ಆದರೇ ಅವರ ಪ್ರಯತ್ನ ಕೇವಲ ಟ್ವೀಟ್‌ ಗೆ ಸೀಮಿತವಾಗಿತ್ತು ಬಿಟ್ಟರೆ ಬೇರಾವುದೇ ಪ್ರಯತ್ನ ಮಾಡಿಲ್ಲ ಎಂದು ಚಂದ್ರಶೇಖರ್ ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಗೆಳೆಯರ ಪ್ರಯತ್ನ

ಚಂದ್ರಶೇಖ‌ರ್ ಅವರ ಸ್ನೇಹಿತರು 10 ಲಕ್ಷ ರೂ. ಸಂಗ್ರಹಿಸಿ ಅಲ್ಲಿನ ವಕೀಲರಿಗೆ ನೀಡಿದ್ದರು. ಹಣ ಕಳೆದುಕೊಂಡ ಮಹಿಳೆಗೆ ಸುಮಾರು 6 ಲಕ್ಷರೂ. ನೀಡಲಾಗಿತ್ತು. ಆದರೂ ಬಿಡುಗಡೆ ಸಾಧ್ಯವಾಗಿರಲಿಲ್ಲ. ಮಾಧ್ಯಮ ವರದಿಯ ಬಳಿಕ ಅಲ್ಲಿನ ಕಂಪೆನಿ ಎಚ್ಚೆತ್ತುಕೊಂಡು ನಿರಪರಾಧಿ ಚಂದ್ರಶೇಖರ್ ಬಿಡುಗಡೆಗೆ ಕೈ‌ ಜೋಡಿಸಿತ್ತು. ಚಂದ್ರಶೇಖರ್ ಬಿಡುಗಡೆಗೆ ಮಡಿಕೇರಿಯ ಬಿ ಆರ್‌ ಅರುಣ್ ಕುಮಾರ್ ಹಾಗೂ ಮಂಗಳೂರಿನ ಕಬೀರ್ ನಿರಂತರ ಶ್ರಮಿಸಿದ್ದರು.

Ad Widget
Click to comment

Leave a Reply

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!