ಆರೋಗ್ಯ
Benefits of eating Early in Nights: ರಾತ್ರಿ ಬೇಗ ಊಟ ಮಾಡುವುದರಿಂದ ಇರುವ 5 ಪ್ರಯೋಜನಗಳು
ನಾವು ಪ್ರತಿನಿತ್ಯ ಸರಿಯಾದ ಸಮಯಕ್ಕೆ ಆಹಾರವನ್ನು ಸೇವಿಸುವುರಿಂದ ಉತ್ತಮ ಅರೋಗ್ಯವನ್ನು ಪಡೆಯಬಹುದು. ನಾವು ರಾತ್ರಿಯ ಸಮಯದಲ್ಲಿ ಬಹಳ ಬೇಗನೆ ಊಟ ಮಾಡಬೇಕು ಮತ್ತು ಬೇಗನೆ ಮಲಗಬೇಕು. ಬನ್ನಿ ಇಂದಿನ ಲೇಖನದಲ್ಲಿ ಬೇಗನೇ ಊಟ ಮಾಡಿ ಮಲಗುವುದರಿಂದ, ಏನೆಲ್ಲಾ ಆರೋಗ್ಯ ಪ್ರಯೋಜನಗಳು ಸಿಗುತ್ತದೆ ಎಂಬುದನ್ನು ನೋಡೋಣ..
*ತೂಕ ಇಳಿಸಿಕೊಳ್ಳಲು ಸಹಾಯಕ
ರಾತ್ರಿ ಬೇಗ ಊಟ ಮಾಡುವುದರಿಂದ ತೂಕ ಹೆಚ್ಚಾಗುವ ಸಮಸ್ಯೆ ಕಡಿಮೆಯಾಗುತ್ತದೆ. ಸಂಜೆಯ ಭೋಜನವು ನಿಮ್ಮ ಚಯಾಪಚಯವನ್ನು ವೇಗಗೊಳಿಸುತ್ತದೆ, ಇದರಿಂದಾಗಿ ನಿಮ್ಮ ಆಹಾರವು ಮಲಗುವ ಮೊದಲು ಹೆಚ್ಚಿನ ಪ್ರಮಾಣದಲ್ಲಿ ಜೀರ್ಣವಾಗುತ್ತದೆ. ರಾತ್ರಿಯಲ್ಲಿ ಆಹಾರಕ್ಕಾಗಿ ಹಂಬಲಿಸುವುದಿಲ್ಲ. ಇದರಿಂದಾಗಿ ನೀವು ಅತಿಯಾಗಿ ತಿನ್ನುವುದಿಲ್ಲ.
*ಉತ್ತಮ ನಿದ್ರೆ
ರಾತ್ರಿಯ ಊಟ ಮತ್ತು ನಿದ್ರೆಯ ನಡುವೆ ಹೆಚ್ಚು ಸಮಯ ಸಿಗುವುದರಿಂದ ನೀವು ಉತ್ತಮ ನಿದ್ರೆ ಮಾಡಬಹುದು. ಆಹಾರವು ಸುಲಭವಾಗಿ ಜೀರ್ಣವಾಗುವುದರಿಂದ ಉತ್ತಮ ನಿದ್ರೆ ಬರುತ್ತದೆ. ಹೌದು ಅಜೀರ್ಣ ಸಮಸ್ಯೆ ಕಡಿಮೆಯಾದ ಕಾರಣ ಒಳ್ಳೆಯ ನಿದ್ದೆ ಬರುತ್ತದೆ.
*ಹೃದಯದ ಆರೋಗ್ಯ ಚೆನ್ನಾಗಿ ವೃದ್ಧಿ ಆಗುತ್ತದೆ:
ದಿನನಿತ್ಯ ಸರಿಯಾಗಿ ಆಹಾರಪದ್ಧತಿ, ವ್ಯಾಯಾಮ, ಯೋಗ ಮಾಡುವುದನ್ನು ರೂಢಿ ಮಾಡಿಕೊಳ್ಳಬೇಕು. ಹೃದಯದ ಸಮಸ್ಯೆಯಿಂದ ದೂರ ಇರಬೇಕೆಂದರೆ, ಅತಿ ಹೆಚ್ಚು ಉಪ್ಪು ಮತ್ತು ಸಕ್ಕರೆ ಅಂಶಗಳನ್ನು ಒಳಗೊಂಡ ಆಹಾರ ಪದಾರ್ಥಗಳಿಂದ ಆದಷ್ಟು ದೂರವಿರಬೇಕು. ಅಷ್ಟೇ ಅಲ್ಲದೇ ರಾತ್ರಿ ಬೇಗನೆ ಆಹಾರ ಪದಾರ್ಥಗಳನ್ನು ಸೇವನೆ ಮಾಡಿ ನಿದ್ರೆ ಮಾಡುವುದರಿಂದ , ಜೀರ್ಣಶಕ್ತಿ ಹೆಚ್ಚಾಗಿ, ಪೌಷ್ಟಿಕಾಂಶಗಳು ಕೂಡ ಸರಿಯಾಗಿ ದೇಹಕ್ಕೆ ಸಿಗುವುದರಿಂದ, ನಿದ್ದೆಯ ಗುಣಮಟ್ಟ ಕೂಡ ಹೆಚ್ಚಾಗುತ್ತದೆ, ಇದರಿಂದ ಹೃದಯದ ಸಮಸ್ಯೆ ಕೂಡ ದೂರವಾಗುತ್ತದೆ.
*ಜೀರ್ಣಕ್ರಿಯೆಗೆ ಪ್ರಯೋಜನಕಾರಿ
ರಾತ್ರಿ ಊಟವು ಜೀರ್ಣಕ್ರಿಯೆಗೆ ತುಂಬಾ ಪ್ರಯೋಜನಕಾರಿಯಾಗಿದೆ. ಸಂಜೆ ಏಳರ ಸುಮಾರಿಗೆ ಊಟ ಮಾಡುವುದರಿಂದ ಮಲಗುವ ಮುನ್ನ ಸಾಕಷ್ಟು ಸಮಯ ಸಿಗುತ್ತದೆ, ಇದರಿಂದಾಗಿ ಆಹಾರ ಸರಿಯಾಗಿ ಜೀರ್ಣವಾಗುತ್ತದೆ. ತಡವಾಗಿ ರಾತ್ರಿಯ ಊಟ ಮಾಡುವುದರಿಂದ ಅಸಿಡಿಟಿ, ಗ್ಯಾಸ್, ಉಬ್ಬುವುದು ಮುಂತಾದ ಸಮಸ್ಯೆಗಳು ಉಂಟಾಗಬಹುದು. ಏಕೆಂದರೆ ಆಗ ನಮ್ಮ ದೇಹದ ಕಾರ್ಯಗಳು ನಿಧಾನವಾಗುತ್ತವೆ. ಆದ್ದರಿಂದ, ರಾತ್ರಿ ಬೇಗ ಊಟ ಮಾಡುವುದು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಪ್ರಯೋಜನಕಾರಿಯಾಗಿದೆ.
*ರಕ್ತದ ಸಕ್ಕರೆಯನ್ನು ನಿಯಂತ್ರಿಸುತ್ತದೆ
ರಾತ್ರಿ ಬೇಗನೆ ಊಟ ಮಾಡುವುದರಿಂದ ನಿಮ್ಮ ದೇಹವು ಆಹಾರವನ್ನು ಒಡೆಯಲು ಸಮಯವನ್ನು ನೀಡುತ್ತದೆ ಮತ್ತು ಎಲ್ಲಾ ಪೋಷಕಾಂಶಗಳು ಸರಿಯಾಗಿ ಹೀರಲ್ಪಡುತ್ತವೆ. ರಾತ್ರಿ ಬೇಗ ಊಟವನ್ನು ಮಾಡುವುದರಿಂದ, ನಿಮ್ಮ ದೇಹವು ಇನ್ಸುಲಿನ್ ಅನ್ನು ಉತ್ತಮವಾಗಿ ಬಳಸಲು ಸಾಧ್ಯವಾಗುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುವುದಿಲ್ಲ, ಇದರಿಂದಾಗಿ ಮಧುಮೇಹ , ಹೃದಯ ಕಾಯಿಲೆಗಳು ಇತ್ಯಾದಿಗಳ ಅಪಾಯವಿಲ್ಲ.
ಎಷ್ಟು ಗಂಟೆಗೆ ಊಟ ಮಾಡಬೇಕು?
ಹಾಗಾದರೇ ರಾತ್ರಿ ಎಷ್ಟು ಗಂಟೆಗೆ ಊಟ ಮಾಡಿದ್ರೆ ಒಳ್ಳೆಯದು ಎಂಬ ಪ್ರಶ್ನೆ ನಿಮ್ಮ ಮನಸ್ಸಿನಲ್ಲಿ ಮೂಡಿರುತ್ತದೆ ಅಲ್ಲವೇ ? ಇಟಲಿಯಲ್ಲಿ ನಡೆಸಿದ ಸಂಶೋಧನೆಯೊಂದರ ಪ್ರಕಾರ ರಾತ್ರಿ 7 ಗಂಟೆಗೆ ಊಟ ಮಾಡಿದವರು 90 ವರ್ಷಕ್ಕೂ ಅಧಿಕ ಕಾಲ ಜೀವಿಸಿದ್ದು ಕಂಡು ಬಂದಿದೆ. ಇನ್ನೂ ರಾತ್ರಿ ಊಟ ಮಾಡಿದ ಬಳಿಕ ಹಾಸಿಗೆಯಲ್ಲಿ ಮಲಗುವ ಮಧ್ಯೆ ಕನಿಷ್ಟ 2 ಗಂಟೆ ಸಮಯ ಇರಬೇಕು ಎನ್ನುವುದು ಅಧ್ಯಯನವೊಂದರಿಂದ ಕಂಡುಕೊಳ್ಳಲಾಗಿದೆ. ಯಾವಾಗಲೂ ರಾತ್ರಿ 7 ರಿಂದ 8 ಗಂಟೆಯ ಒಳಗೆ ಊಟಮಾಡುವ ಅಭ್ಯಾಸ ಒಳ್ಳೆಯದು ಎನ್ನುತ್ತಾರೆ ತಜ್ಞರು. ಮಲಗುವ 3 ಗಂಟೆಯ ಮೊದಲು ಊಟ ಮಾಡುವುದು ಹೆಚ್ಚು ಒಳಿತು. ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಬಹುದಾಗಿದೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
ಮಂಗಳೂರು10 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ13 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ15 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್15 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಬಿಗ್ ನ್ಯೂಸ್8 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು9 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ8 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಅಪರಾಧ10 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















