Connect with us

ಬಿಗ್ ನ್ಯೂಸ್

ಮಂಗಳೂರು: ಅನ್ಯಧರ್ಮದ ಹೆಣ್ಣುಮಕ್ಕಳನ್ನು ವೇಶ್ಯಾವಾಟಿಕೆ ಗೆ ತಳ್ಳುತಿದ್ದ ಆರೋಪ ಎದುರಿಸುತ್ತಿದ್ದ ರಿಯಾಜ್ ಗೆ ಚೂರಿ ಇರಿತ ಪ್ರಕರಣ – ಹಿಂದೂ ಸಂಘಟನೆಯ ಐವರ ಬಂಧನ – ಪೊಲೀಸ್ ವಶದಲ್ಲಿದ್ದ ಕೆಲವರ ಬಿಡಿಸಿದ ಶಾಸಕ ಭರತ್ ಶೆಟ್ಟಿ

Published

on



Ad Widget

Ad Widget

Ad Widget

Ad Widget

ಮಂಗಳೂರು, ಡಿ 14 : ನೀರುಮಾರ್ಗ ಸಮೀಪದ ಪಡು ಪೋಸ್ಟ್ ಆಫೀಸ್ ಬಳಿ ಕಾರನ್ನು ಅಡ್ಡಗಟ್ಟಿ ಕಾರಿನಲ್ಲಿದ್ದ ಮಹಮ್ಮದ್ ರಿಯಾಜ್ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮಾಂತರ ಠಾಣಾ ಪೊಲೀಸರು ಹಿಂದು ಪರ ಸಂಘಟನೆಯ ಸುವಿತ್ ರಂಗಪಾದೆ, ಗಣೇಶ್, ಚೇತನ್, ಪರೀಕ್ಷಿತ್ ಪಡು ಸೇರಿದಂತೆ ಐದು ಮಂದಿಯನ್ನು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.ಡಿಸೆಂಬರ್ 10ರ ಶುಕ್ರವಾರ ಪಡು ಎಂಬಲ್ಲಿ ಕಾರಿನಲ್ಲಿದ್ದ ಸ್ಥಳೀಯ ನಿವಾಸಿಗೆ ಅಬ್ದುಲ್ ರಜಾಕ್ ಗೆ ಕಾರಿನಲ್ಲಿ ಬಂದ ತಂಡ ಚೂರಿ ಇರಿದು ಹಲ್ಲೆ ನಡೆಸಿ ಪರಾರಿಯಾಗಿದ್ದರು. ಪೊಲೀಸ್ ಪರಿಶೀಲನೆ ವೇಳೆ ಅಬ್ದುಲ್ ರಜಾಕ್ ಸಂಬಂಧಿಸಿದ ರಿಟ್ಜ್ ಕಾರಿನಲ್ಲಿ ಮಹಿಳೆ ಧರಿಸುವ ಒಂದು ಜತೆ ಚಪ್ಪಲಿ ಹಾಗೂ ಮಹಿಳೆಗೆ ಸಂಬಂಧಿಸಿದ ಇತರ ವಸ್ತುಗಳು ಪತ್ತೆಯಾಗಿತ್ತು.

Ad Widget

Ad Widget

Ad Widget alt="Ad Widget"/>

Ad Widget

ಈ ಸಂಬಂಧ ಪೊಲೀಸ್ ವಶದಲ್ಲಿದ್ದ ಕೆಲ ಯುವಕರನ್ನು ಶಾಸಕ ಡಾ.ಭರತ್ ಶೆಟ್ಟಿ ಠಾಣೆಗೆ ತೆರಳಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಬಿಡುಗಡೆಗೊಳಿಸಿದರು ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Ad Widget

Ad Widget <> Ad Widget

ಹಲ್ಲೆಗೊಳಗದ ರಿಯಾಜ್ ಪಿಂಪ್ ರೀತಿ ಕಾರ್ಯನಿರ್ವಹಿಸುತ್ತಿದ್ದ. ಸುಮಾರು 40 ಮಹಿಳೆಯರು ಈತನ ಕೈ ಕೆಳಗೆ ಅನೈತಿಕ ಚಟುವಟಿಕೆ ಮಾಡುತ್ತಿದ್ದಾರೆ. ಹಿಂದೂ,ಮುಸ್ಲಿಂ ಮಹಿಳೆಯರನ್ನೂ ಈತ ಅನೈತಿಕ ಚಟುವಟಿಕೆಗಳಿಗೆ ಬಳಸುತ್ತಿದ್ದ. ಮಂಡ್ಯ,ಮೈಸೂರು ಸೇರಿದಂತೆ ಬೇರೆ ಬೇರೆ ಭಾಗದಿಂದ ಮಹಿಳೆಯರನ್ನು ಈತ ಬಳಸುತ್ತಿದ್ದ. ಹಲ್ಲೆಯಾಗುವ ದಿನ ಈತನ ಕಾರ್‌ನಲ್ಲಿ ಹಿಂದೂ ಮಹಿಳೆ ಇದ್ದಳು ಅನ್ನೋದು ಮಾಹಿತಿ ಲಭ್ಯವಾಗಿದೆ . ಕೆಲವು ವಿಷಯಗಳನ್ನು ಕೊಲೆಯತ್ನ ಪ್ರಕರಣದಲ್ಲಿ ಬಂಧಿತ ಆರೋಪಿಗಳು ಪೊಲೀಸರೆದುರು ಬಾಯಿ ಬಿಟ್ಟಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಧ್ಯಮಗಳಿಗೆ ತಿಳಿಸಿದರು.



Ad Widget
Ad Widget
Click to comment

Leave a Reply

ಅಂತರ ರಾಜ್ಯ

Supreme Court-ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ..!

Published

on



Ad Widget

Ad Widget

Ad Widget

Ad Widget

ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ ತುರ್ತು ನಿರ್ದೇಶನಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ ತುರ್ತು ನಿರ್ದೇಶನಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರತಿಭಟನೆಯಿಂದ ಹಬ್ಬದ ವ್ಯಾಪಾರಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದ ವರ್ತಕರು, ಪ್ರತಿಭಟನೆಗೆ ತಡೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಈ ಮನವಿಯ ವಿಚಾರವಾಗಿ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್, ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ವಿವೇಕವನ್ನು ಪ್ರತಿಭಟನಾಕಾರರು ಹೊಂದಿರುತ್ತಾರೆ ಎಂದು ಆಶಿಸಿರುವುದಾಗಿ ತಿಳಿಸಿದೆ.



Ad Widget

ಹಬ್ಬದ ಸಂದರ್ಭದಲ್ಲಿ ವ್ಯಾಪಾರ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಬೇಕೆಂಬ ವರ್ತಕರ ಆತಂಕದ ನಡುವೆಯೇ, ಪ್ರತಿಭಟನೆಗೆ ಸಂಬಂಧಿಸಿದಂತೆ ತುರ್ತು ನಿರ್ಬಂಧಗಳನ್ನು ವಿಧಿಸಲು ನ್ಯಾಯಾಲಯ ನಿರಾಕರಿಸಿರುವುದು ಗಮನ ಸೆಳೆದಿದೆ.

Continue Reading

ಬಿಗ್ ನ್ಯೂಸ್

Puttur-ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ

Published

on



Ad Widget

Ad Widget

Ad Widget

Ad Widget

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾ‌ರ್ ಸಮೀಪ ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್‌ಟೇಕ್ ಮಾಡುವ ಭರದಲ್ಲಿ ಈ ದುರಂತ ನಡೆದಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.

Ad Widget

Ad Widget

Ad Widget

Ad Widget

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾ‌ರ್ ಸಮೀಪ ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್‌ಟೇಕ್ ಮಾಡುವ ಭರದಲ್ಲಿ ಈ ದುರಂತ ನಡೆದಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಯು ಮುಂಭಾಗದಲ್ಲಿದ್ದ ಕಾರನ್ನು ಓವರ್‌ಟೇಕ್ ಮಾಡಲು ಯತ್ನಿಸಿದಾಗ ಈ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಲಾರಿಯು ಹೆದ್ದಾರಿಗೆ ಅಡ್ಡಲಾಗಿ ಮಗುಚಿಬಿದ್ದಿದೆ.

Ad Widget

Ad Widget <> Ad Widget

ಅಪಘಾತದಿಂದಾಗಿ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯ ಸಾರ್ವಜನಿಕರು ಹಾಗೂ ಹಾದಿಹೋಕರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ನೆರವಾಗಿದ್ದಾರೆ.
ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ತಬ್ಧಗೊಂಡು, ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರೇನ್ ಬಳಸಿ ರಸ್ತೆಯಲ್ಲಿದ್ದ ಲಾರಿಯನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಸುಗಮಗೊಳಿಸಿದರು. ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.



Ad Widget
Ad Widget
Continue Reading

ಅಂತರ ರಾಜ್ಯ

Supreme Court-ಇಸ್ಲಾಂಗೆ ಮತಾಂತರಗೊಂಡ ಬಳಿಕ ಹಿಂದುಳಿದ ವರ್ಗಗಳ ಮೀಸಲಾತಿಯಿಲ್ಲ; ಸುಪ್ರೀಂಕೋರ್ಟ್

Published

on



Ad Widget

Ad Widget

Ad Widget

Ad Widget

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು, ಮತಾಂತರಕ್ಕೂ ಮುನ್ನ ಹೊಂದಿದ್ದ ಸಾಮಾಜಿಕ ವರ್ಗದ ಆಧಾರದಲ್ಲಿ ಹಿಂದುಳಿದ ವರ್ಗಗಳ (BC) ಮೀಸಲಾತಿ ಸೌಲಭ್ಯವನ್ನು ಮುಂದುವರಿಸಬಹುದೇ ಎಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು, ಮತಾಂತರಕ್ಕೂ ಮುನ್ನ ಹೊಂದಿದ್ದ ಸಾಮಾಜಿಕ ವರ್ಗದ ಆಧಾರದಲ್ಲಿ ಹಿಂದುಳಿದ ವರ್ಗಗಳ (BC) ಮೀಸಲಾತಿ ಸೌಲಭ್ಯವನ್ನು ಮುಂದುವರಿಸಬಹುದೇ ಎಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಶ್ರೀ ಚಂದ್ರಶೇಖರ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿದೆ. ಮತಾಂತರದ ನಂತರ ವ್ಯಕ್ತಿಯ ಸಾಮಾಜಿಕ ವರ್ಗದ ಸ್ಥಾನಮಾನ ಮತ್ತು ಮೀಸಲಾತಿ ಅರ್ಹತೆಯನ್ನು ಅನ್ವಯಿಸುವ ಕುರಿತು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ.

Ad Widget

Ad Widget <> Ad Widget

ಮೀಸಲಾತಿ ಅರ್ಹತೆ ಕುರಿತು ನ್ಯಾಯಾಲಯದ ಅಭಿಪ್ರಾಯ
ಮತಾಂತರ ಪೂರ್ವದ ಜಾತಿ ಅಥವಾ ಸಮುದಾಯದ ಸ್ಥಿತಿಯನ್ನು, ಮತಾಂತರದ ನಂತರದ ವ್ಯವಸ್ಥೆಯಲ್ಲಿ ಅಧಿಸೂಚಿತ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿಸಲು ಸಾಧ್ಯವಿಲ್ಲ.
ಹಿಂದುಳಿದ ವರ್ಗದಿಂದ, ಇಸ್ಲಾಂ ಅಥವಾ ಹಿಂದೂಯೇತರ ಜಾತಿಗೆ ಕನ್ವರ್ಟ್ ಆಗಲು ಇದ್ದಂತಹ ಪರಿಸ್ಥಿತಿಯು ಏನೇ ಇದ್ದರೂ, ಮತಾಂತರದ ನಂತರ ಬೇರೊಂದು ಹಿಂದುಳಿದ ವರ್ಗದ ಸದಸ್ಯತ್ವನ್ನು ನೀಡಲು ಕಾನೂನಾತ್ಮಕವಾಗಿ ಸಾಧ್ಯವಿಲ್ಲ.



Ad Widget

ಸಂವಿಧಾನದ ಪರಿಶಿಷ್ಟ ಜಾತಿಗಳ ಆದೇಶದ ಪ್ರಕಾರ, ಹಿಂದೂ, ಸಿಖ್ ಅಥವಾ ಬೌದ್ದ ಧರ್ಮವನ್ನು ಹೊರತು ಪಡಿಸಿ ಇತರ ಧರ್ಮವನ್ನು ಪ್ರತಿಪಾದಿಸುವ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ (SC) ಸದಸ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ.

Ad Widget

Ad Widget

ಈ ಮೂರು ಜಾತಿಯನ್ನು ಹೊರತು ಪಡಿಸಿ, ಇತರ ಧರ್ಮಕ್ಕೆ ಮತಾಂತರಗೊಂಡ ತಕ್ಷಣವೇ ಆ ವ್ಯಕ್ತಿಯ ಪರಿಶಿಷ್ಠ ಜಾತಿಯ ಸದಸ್ಯತ್ವಕ್ಕೆ ಆಧರಿಸಿ ಇರುವ ಮೀಸಲಾತಿ ವಿಧಿ 16(4) ಮತ್ತು ಸೌಲಭ್ಯಗಳನ್ನು ಕಳೆದುಕೊಳ್ಳುತ್ತಾನೆ.

ಒಂದು ವೇಳೆ, ಹಿಂದೂಯೇತರ ಧರ್ಮಕ್ಕೆ ಮತಾಂತರಗೊಂಡು, ನಂತರ ಮತ್ತೆ ಹಿಂದೂ ಧರ್ಮಕ್ಕೆ ಕನ್ವರ್ಟ್ ಆದರೆ, ಮರುಮತಾಂತರದ ನಂತರ ಮೀಸಲಾತಿ ಆಟೊಮೆಟಿಕ್ ಆಗಿ ಬರುವುದಿಲ್ಲ. ಮರುಮತಾಂತರ ನಂತರದ ಆತನ ಮೂಲ ಜಾತಿಯ ದಾಖಲೆಗಳು ಬದಲಾಗಿರುವುದು ಮುಖ್ಯ.

ಇಸ್ಲಾಂ, ಕ್ರಿಶ್ಚಿಯನ್ ಅಥವಾ ಇತರ ಹಿಂದೂಯೇತರ ಧರ್ಮಕ್ಕೆ ಮತಾಂತರಗೊಂಡ ನಂತರ, ಶಾಸನಬದ್ದ ಸೌಲಭ್ಯ, ರಕ್ಷಣೆ, ಮೀಸಲಾತಿ, ಅರ್ಹತೆಯನ್ನು, ಕನ್ವರ್ಟ್ ಆಗುವ ಮುನ್ನ ಇದ್ದ ಸಾಂವಿಧಾನಿಕ ಆಧಾರದ ಮೇಲೆ ಪಡೆಯಲು ಸಾಧ್ಯವಿಲ್ಲ.

ಪ್ರಕರಣದ ಹಿನ್ನೆಲೆ ಏನು?
ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು ಅಥವಾ ಪರಿಶಿಷ್ಟ ಜಾತಿಗಳಿಗೆ ಸೇರಿದ ವ್ಯಕ್ತಿಗಳು ಇಸ್ಲಾಂ ಅಥವಾ ಇತರ ಹಿಂದೂಯೇತರ ಧರ್ಮಕ್ಕೆ ಮತಾಂತರಗೊಂಡ ಬಳಿಕವೂ ಹಿಂದುಳಿದ ವರ್ಗದ (ಮುಸ್ಲಿಂ) ಮೀಸಲಾತಿ ಪಡೆಯಲು ಅವಕಾಶ ನೀಡುವ ಸಂಬಂಧ ತಮಿಳುನಾಡು ಸರ್ಕಾರ 2024ರಲ್ಲಿ ಸರ್ಕಾರಿ ಆದೇಶ ಹೊರಡಿಸಿತ್ತು ಎನ್ನಲಾಗಿದೆ.

ಈ ಆದೇಶವನ್ನು ಪ್ರಶ್ನಿಸಲಾಗಿತ್ತು. ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಸರ್ಕಾರದ ಆದೇಶವನ್ನು ಅಸಂವಿಧಾನಿಕ ಎಂದು ಪರಿಗಣಿಸಿತ್ತು. ಈ ಆದೇಶದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ ಎಂದು ವರದಿಯಾಗಿದೆ.

ತಮಿಳುನಾಡಿನ ಮುಸ್ಲಿಂ ಹಿಂದುಳಿದ ವರ್ಗಗಳ ಪಟ್ಟಿ
1993ರ ಸರ್ಕಾರಿ ಆದೇಶದಡಿ ಮುಸ್ಲಿಂ ಸಮುದಾಯದ ಏಳು ವಿಭಾಗಗಳನ್ನು ಗುರುತಿಸಲಾಗಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅವುಗಳೆಂದರೆ ಅನ್ಸಾರ್, ಡೆಕ್ಕನಿ ಮುಸ್ಲಿಮರು, ದುಬೇಕುಲ, ಲಬ್ಬೈ, ಮಾಪಿಳೈ, ಶೇಕ್ ಮತ್ತು ಸೈಯದ್.

ಮತಾಂತರದ ಬಳಿಕ ವ್ಯಕ್ತಿಯ ಸಾಮಾಜಿಕ ವರ್ಗದ ಗುರುತು ಮತ್ತು ಮೀಸಲಾತಿ ಅರ್ಹತೆಯನ್ನು ಹೇಗೆ ನಿರ್ಧರಿಸಬೇಕು ಎಂಬ ವಿಚಾರದಲ್ಲಿ ಈ ಪ್ರಕರಣ ಮಹತ್ವ ಪಡೆದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading