Connect with us

ದಕ್ಷಿಣ ಕನ್ನಡ

ʼಮಠಂದೂರುರವರ ಅಶ್ಲೀಲ ಚಿತ್ರ ಹರಿಯಬಿಟ್ಟವರಿಗೆ ಜನರಿಂದ ಆಯ್ಕೆಯಾದ ಶಾಸಕರ ಬಗ್ಗೆ ಮಾತನಾಡುವ ಅಧಿಕಾರ ಇಲ್ಲʼ : ಸಾಜ ಆಳ್ವರಿಗೆ ಅಮಳ ರಾಮಚಂದ್ರ ತಿರುಗೇಟು

Published

on



Ad Widget

Ad Widget

Ad Widget

Ad Widget

ಪುತ್ತೂರು: ಸಂಜೀವ ಮಠಂದೂರು ಅವರು ಐದು ವರ್ಷಗಳ ಕಾಲ ಶಾಸಕರಾಗಿದ್ದ ವೇಳೆ ಅವರ ಹಿಂದೆಯೇ ಸುತ್ತುತ್ತಿದ್ದ ಬಿಜೆಪಿ‌ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ಹಾಗೂ ಅವರ ಪಟಾಲಂ ಕೊನೆಗೆ ಅವರ ಅಶ್ಲೀಲ ಸೆಲ್ಫಿ ಚಿತ್ರವನ್ನು ಸಾಮಾಜಿಕ ಜಾಲ ತಾಣದಲ್ಲಿ ಹರಿಯಬಿಟ್ಟು ಅವರ ರಾಜಕೀಯ ಜೀವನವನ್ನೇ ಮುಗಿಸಿದ್ದರು ಎಂದು ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ ರವರು ತಿರುಗೇಟು ನೀಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರಿನ ನಾಲ್ವರು ಯುವಕರನ್ನು ಗಡಿಪಾರು ಮಾಡುವ ಕುರಿತಾಗಿ ಪೊಲೀಸ್‌ ಇಲಾಖೆ ಇತ್ತೀಚೆಗೆ ಸಂಬಂಧಪಟ್ಟವರಿಗೆ ನೊಟೀಸ್‌ ಜಾರಿ ಮಾಡಿತ್ತು ಇದನ್ನು ಖಂಡಿಸಿ, ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಕಾಂಗ್ರೆಸ್‌ ಸರಕಾರ ಗಡಿಪಾರು ಮಾಡುತ್ತಿದೆಯೆಂದು ಹಿಂದೂತ್ವವಾದಿ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದರು.

Ad Widget

Ad Widget

Ad Widget alt="Ad Widget"/>

Ad Widget

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಅಶೋಕ್‌ ರೈಯವರು ” ಬಿಜೆಪಿ ಸರಕಾರದ ಅವಧಿಯಲ್ಲೆ ಈ ಯುವಕರ ಮೇಲೆ ಪ್ರಕರಣ ದಾಖಲಾಗಿರುವುದುಈಗ ಬಿಜೆಪಿಯವರು ಯುವಕರ ಪರ ಪ್ರತಿಭಟನೆಯ ನಾಟಕವಾಡುತ್ತಿದ್ದು ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದರು. ಇದಕ್ಕೆ ತಿರುಗೇಟು ನೀಡಿದ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವರವರು ಅಶೋಕ್‌ ರೈಯವರನ್ನು ಉಲ್ಲೇಖಿಸಿ ಉದ್ಯಮ ರಂಗದಲ್ಲಿದ್ದಾಗ ಬೆದರಿಕೆ ಹಾಕಿದ ವ್ಯಕ್ತಿಗಳು ಬಿಜೆಪಿಗೆ ಬುದ್ದಿವಾದ ಹೇಳುತ್ತಿದ್ದಾರೆ. ಅಂತಹವರಿಂದ ಬಿಜೆಪಿಗೆ ಬುದ್ದಿ ಮಾತು ಬೇಕಿಲ್ಲ. ಮೊದಲು ಅಂತಹ ವ್ಯಕ್ತಿಗಳನ್ನು ಗಡಿಪಾರು ಮಾಡಬೇಕು ಎಂದು ಕಟಕಿಯಾಡಿದ್ದರು.

Ad Widget

Ad Widget <> Ad Widget

ಇದಕ್ಕೆ ಪ್ರತ್ಯುತ್ತರ ನೀಡಿರುವ ರಾಜ್ಯ ಕಾಂಗ್ರೆಸ್‌ ವಕ್ತಾರ ಅಮಳ ರಾಮಚಂದ್ರ ರವರು
ʼ ಜೊತೆಗೆ ಇದ್ದು ಬೆನ್ನಿಗೆ ಚೂರಿ ಹಾಕಿದ್ದೂ ಮಾತ್ರವಲ್ಲದೆ ಚುನಾವಣೆ ಘೋಷಣೆಗೆ ಕೆಲವೇ ದಿನಗಳ ಮುಂಚೆ ಮಠಂದೂರು ರವರ ಸೆಲ್ಫಿಯನ್ನು ಸಾಮಾಜಿಕ ತಾಣದಲ್ಲಿ ಹರಿಯಬಿಟ್ಟು ಅವರಿಗೆ ಬಿಜೆಪಿ ಟಿಕೆಟ್ ಸಿಗದಂತೆ ಮಾಡುವಲ್ಲಿ ಇವರುಗಳು ಯಶಸ್ವಿಯಾಗಿದ್ದರು. ಮಠಂದೂರುರವರನ್ನು ಮುಗಿಸಿದರೆ ಬಿಜೆಪಿಯಲ್ಲಿ ಚುನಾವಣೆಗೆ ಸ್ಪರ್ಧಿಸಲು ತಮಗೇ ಅವಕಾಶ ಸಿಗಬಹುದು ಎಂಬ ದುರಾಸೆಯಿಂದ ಮಠಂದೂರ್‌ರವರನ್ನು ಫಿನಿಶ್ ಮಾಡಿದ ಖ್ಯಾತಿ ಇವರಿಗೆ ಸಲ್ಲುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.



Ad Widget

ಇಂತಹ ಡಬಲ್ ಗೇಮ್ ರಾಜಕಾರಣಿಗಳಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ. ಕಳೆದ ಚುನಾವಣೆಯ ವೇಳೆ ಮತೀಯ ಗಲಭೆ ಪ್ರಕರಣದಲ್ಲಿ ಬಜರಂಗದಳದ ಯುವಕರ ಮೇಲೆ ಪೊಲೀಸರು ಕೇಸು ದಾಖಲಿಸಿದ್ದರು ಆಗ ಕರ್ನಾಟಕದಲ್ಲಿದ್ದುದೇ ಬಿಜೆಪಿ ಸರಕಾರ , ಸಂಜೀವ ಮಟಂದೂರುರವರೇ ಪುತ್ತೂರಿನ ಶಾಸಕರಾಗಿದ್ದರು. ಬಿಜೆಪಿ ಸರಕಾರವೇ ಯುವಕರ ಮೇಲೆ ಕೇಸು ದಾಖಲಿಸಿದ್ದ ಪರಿಣಾ‌ಮ ಇಂದು ಪೊಲೀಸ್ ಇಲಾಖೆ ಆರೋಪಿ ಯುವಕರಿಗೆ ಗಡಿಪಾರಿಗೆ ಆದೇಶ ಮಾಡಿದೆ ಎಂದು ವಿವರಿಸಿದರು.

Ad Widget

Ad Widget

ಇದನ್ನು ಬೊಟ್ಟು ಮಾಡಿ ಶಾಸಕರು ಜನರಿಗೆ ಸತ್ಯವನ್ನು ಹೇಳಿದ್ದಾರೆ. ಈಗ ನೈಜ ವಿಷಯವನ್ನು ಅರಗಿಸಿಕೊಳ್ಳಲಾರದೆ ಇದಕ್ಕೆ ಸಂಬಂಧಪಡದ ವಿಚಾರವನ್ನು ಮೇಲೆತ್ತಿ ತಮ್ಮ ಪಕ್ಷದ ತಪ್ಪನ್ನು ಮರೆ ಮಾಚುವ ಪ್ರಯತ್ನ ಮಾಡಿದ್ದಾರೆ. ಯುವಕರನ್ನು ಸಮಾಜ ವಿರೋಧಿ ಕೃತ್ಯಗಳಿಗೆ ಬಳಕೆ ಮಾಡಿಕೊಳ್ಳುವವರೂ ಬಿಜೆಪಿಯವರೇ, ಅವರ ಮೇಲೆ ಕೇಸು ದಾಖಲಿಸುವುದೂ ಇವರ ಸರಕಾರವೇ, ಈಗ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಬೀದಿ ನಾಟಕ ಮಾಡಿ ಕಾಂಗ್ರೆಸ್ ತಲೆಗೆ ಕಟ್ಟುವ ಪ್ರಯತ್ನ ಮಾಡುವವರೂ ಇವರೇ. ಇದರಲ್ಲಿ ಕಾಂಗ್ರೆಸ್‌ನ ಪಾತ್ರ ಲವಲೇಷವೂ ಇಲ್ಲ ಎಂದರು.

ಕಾನೂನು ಅದರ ಕೆಲಸವನ್ನು ಮಾಡುತ್ತಿದೆ, ಇಲಾಖೆಯ ನಿಯಮಾನುಸಾರ ಗಡಿಪಾರು ನೊಟೀಸ್ ನೀಡಲಾಗಿದೆ ಇವೆಲ್ಲಕ್ಕೂ ಅಂದಿನ ಬಿಜೆಪಿ ಸರಕಾರ ಹಾಗೂ ಪುತ್ತೂರಿನ ಆಗಿನ ಬಿಜೆಪಿ ಶಾಸಕರೇ ಜವಾಬ್ದಾರರಾಗಿದ್ದಾರೆ ಎಂದು ಅಮಳ ಹೇಳಿದರು.

ಪುತ್ತೂರು ಶಾಸಕರು ಉತ್ತಮ ರೀತಿಯಲ್ಲಿ ಅಭಿವೃದ್ದಿ ಕೆಲಸವನ್ನು ಮಾಡುತ್ತಿದ್ದಾರೆ ಇದಕ್ಕೆ ಬೆಂಬಲ ನೀಡುವ ಕೆಲಸವನ್ನು ಬಿಜೆಪಿ ಮಾಡಲಿ ಅದನ್ನು ಬಿಟ್ಟು ತಾವು ಮಾಡಿದ ತಪ್ಪನ್ನು ಕಾಂಗ್ರೆಸ್ ಮೇಲೆ ಹಾಕುವುದನ್ನು ನಿಲ್ಲಿಸಲಿ. ನಾಡಿನ ಯುವಕರು ಬಿಜೆಪಿಯವರ ಕಪಟ ಬುದ್ದಿಯನ್ನು ಅರಿತುಕೊಳ್ಳಬೇಕಿದೆ. ಒಮ್ಮೆ ಕೇಸ್ ಆದರೆ ಮತ್ತೆ ಜೀವನ ಪೂರ್ತಿ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಬಿಜೆಪಿಯವರ ಮಾತನ್ನು ಕೇಳಿ ಯಾವುದೇ ದುಷ್ಕೃತ್ಯಗಳನ್ನು ಮಾಡಬೇಡಿ. ನಿಮಗೆ ತೊಂದರೆಯಾದಾಗ ಯಾರೂ ಇರುವುದಿಲ್ಲ ಎಂಬುದನ್ನು ಯುವಕರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಬಿಜೆಪಿ‌ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ಹೇಳಿದ್ದೇನು ?

Ad Widget
Click to comment

Leave a Reply

ಪುತ್ತೂರು

ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು

Published

on



Ad Widget

Ad Widget

Ad Widget

Ad Widget

ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ.

Ad Widget

Ad Widget

Ad Widget

Ad Widget

ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್‌ ಲೈನ್‌ನ ಜಿಒಎಸ್‌ (ಗ್ಯಾಂಗ್‌ ಆಪರೇಟಿಂಗ್‌ ಸ್ವಿಚ್‌) ತೆರೆಯುವ ಸಂದರ್ಭದಲ್ಲಿ ಅರ್ಥ್‌ ಆಗಿ ವಿದ್ಯುತ್‌ ಪ್ರವಹಿಸಿ ರವಿ ಗೌಡ ಅವರಿಗೆ ವಿದ್ಯುತ್‌ ಸ್ಪರ್ಶಿಸಿದೆ ಎನ್ನಲಾಗಿದೆ.

Ad Widget

Ad Widget <> Ad Widget

ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.



Ad Widget
Ad Widget
Continue Reading

ಅಪರಾಧ

Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget <> Ad Widget

ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.



Ad Widget

ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.

ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.

Ad Widget
Continue Reading

ಶಿಕ್ಷಣ

Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.

Ad Widget

Ad Widget <> Ad Widget

ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.



Ad Widget

ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.

Ad Widget

Ad Widget

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading