ಆರೋಗ್ಯ
Fenugreek Leaves ಮೆಂತ್ಯೆ ಸೊಪ್ಪಿನಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳು
ದೇಹದ ಆರೋಗ್ಯ ಕಾಪಾಡಿಕೊಳ್ಳಲು ಹಣ್ಣು, ತರಕಾರಿಗಳು ಹಾಗೂ ಸೊಪ್ಪುಗಳ ಸೇವನೆ ಬಹು ಮುಖ್ಯವಾಗಿದ್ದು, ಇವುಗಳ ಪ್ರಾಮುಖ್ಯತೆಗಳನ್ನು ಪೋಷಕರು ತಿಳಿದುಕೊಂಡು, ಅದನ್ನು ಮಕ್ಕಳಿಗೂ ಹೇಳಿಕೊಡುವ ಮನೋಭಾನೆಯನ್ನು ಬೆಳೆಸಿಕೊಳ್ಳಬೇಕು. ಅದ್ರಲ್ಲೂ ಆಹಾರದಲ್ಲಿ ಹಸಿರು ಸೊಪ್ಪು ಮತ್ತು ತರಕಾರಿಗಳನ್ನು ಬಳಸಿಕೊಂಡರೆ ಆರೋಗ್ಯದ ಸಮಸ್ಯೆಗಳನ್ನು ನಾವು ಅರ್ಧಭಾಗದಷ್ಟು ಪರಿಹರಿಸಬಹುದು,
ಮೆಂತ್ಯ ಸೊಪ್ಪಿನಲ್ಲಿ ನಾರಿನಂಶ, ಪ್ರೋಟೀನ್, ಕಬ್ಬಿಣ, ಮೆಗ್ನೀಸಿಯಮ್ ಮುಂತಾದ ಪೋಷಕಾಂಶಗಳು ಸಮೃದ್ಧವಾಗಿವೆ. ಹಾಗಾಗಿ ಇದು ನಮ್ಮನ್ನು ಹಲವು ಆರೋಗ್ಯ ಸಮಸ್ಯೆಗಳಿಂದ ರಕ್ಷಿಸುತ್ತದೆ ಎಂದು ಹೇಳಲಾಗುತ್ತದೆ. ಮೆಂತ್ಯ ಸೊಪ್ಪಿನ ಸೇವನೆಯಿಂದ ಏನೆಲ್ಲಾ ಪ್ರಯೋಜನಗಳು ಲಭ್ಯವಿವೆ ಎಂದು ತಿಳಿಯೋಣ…
*ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚಳ:
ಇದರಲ್ಲಿ ಅಧಿಕ ಪ್ರಮಾಣದಲ್ಲಿ ಕಬ್ಬಿಣಾಂಶ ಇರುವುದರಿಂದ ರಕ್ತ ಹೀನತೆಗೆ ಪ್ರಮುಖ ಔಷಧಿಯನ್ನಾಗಿ ಉಪಯೋಗಿಸುತ್ತಾರೆ. ರಕ್ತ ಹೀನತೆ ಇರುವವರು ಮೆಂತೆಯ ಆಹಾರ ಮತ್ತು ಇತರ ತರಕಾರಿಗಳ ಜೊತೆ ಸಲಾಡ್ ರೂಪದಲ್ಲಿ ಹಸಿ ಮೆಂತೆಯ ಸೊಪ್ಪನ್ನು ಸೇವಿಸಿದರೆ ಹಿಮೋಗ್ಲೋಬಿನ್ ಪ್ರಮಾಣ ಏರಿಕೆ ಆಗುವುದು.
*ತೂಕ ಇಳಿಕೆಗೆ ಸಹಕಾರಿ:
ಮೆಂತ್ಯ ಸೊಪ್ಪು ಸೇವನೆಯು ತೂಕ ಇಳಿಕೆಗೂ ಕೂಡ ಸಹಕಾರಿ ಎಂದು ಹೇಳಲಾಗುತ್ತದೆ.
*ಹೃದಯ ಸಂಬಂಧಿ ಸಮಸ್ಯೆಗಳಿಂದ ರಕ್ಷಣೆ:
ಮೆಂತ್ಯ ಸೊಪ್ಪಿನ ಸೇವನೆಯಿಂದ ಹೃದಯಾಘಾತ ಮತ್ತು ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಕಡಿಮೆ ಮಾಡಬಹುದು. ಜೊತೆಗೆ ಹೃದಯಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು.
*ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಗೆ:
ಮೆಂತ್ಯ ಸೊಪ್ಪಿನ ಸೇವನೆಯಿಂದ ಜೀರ್ಣಾಂಗ ವ್ಯವಸ್ಥೆ ಆರೋಗ್ಯಕರವಾಗಿರುತ್ತದೆ. ಮಾತ್ರವಲ್ಲ, ಇದು ಮಲಬದ್ಧತೆ, ಹೊಟ್ಟೆ ನೋವು ಸೇರಿದಂತೆ ಉದರ ಸಂಬಂಧಿತ ಹಲವು ಸಮಸ್ಯೆಗಳಿಂದಲೂ ಪರಿಹಾರವನ್ನು ನೀಡುತ್ತದೆ.
ಮಧುಮೇಹಕ್ಕೆ ಸಹಕಾರಿ:
ಟೈಪ್ 1 ಮತ್ತು ಟೈಪ್ 2 ಮಧುಮೇಹ ಹೊಂದಿರುವಂತಹ ಜನರಿಗೆ ಮೆಂತ್ಯೆ ಸೊಪ್ಪು ತುಂಬಾ ಲಾಭಕಾರಿ. ಇದು ಮಧುಮೇಹಿಗಳಲ್ಲದೆ ಇರುವ ಜನರಲ್ಲಿ ಕಾರ್ಬ್ಸ್ ಸೂಕ್ಷ್ಮತೆಯನ್ನು ಸುಧಾರಣೆ ಮಾಡುವುದು. ಮೆಂತ್ಯೆಯು ಇನ್ಸುಲಿನ್ ಚಟುವಟಿಕೆ ಸುಧಾರಣೆ ಮಾಡುವುದು. ಮೆಂತ್ಯೆಯಲ್ಲಿ ಇರುವ ನಾರಿನಾಂಶವು ಇದಕ್ಕೆ ಕಾರಣವಾಗಿದೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
Uncategorized13 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಮಂಗಳೂರು10 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized11 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ12 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ11 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಬಿಗ್ ನ್ಯೂಸ್7 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ನಿಧನ ವಾರ್ತೆ11 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್12 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















