ಆರೋಗ್ಯ
Patanjali advertisement contorovercy ಪತಂಜಲಿಯವರ ತಪ್ಪು ದಾರಿಗೆಳೆಯುವ ಪ್ರತಿಯೊಂದು ಜಾಹೀರಾತಿಗೂ 1 ಕೋಟಿ ದಂಡ ವಿಧಿಸಲಾಗುತ್ತದೆ : ಸುಪ್ರೀಂ ಕೋರ್ಟ್ ನಿಂದ ಎಚ್ಚರಿಕೆ
ಅಲೋಪಥಿ ಔಷಧಗಳ ಕುರಿತು ಜನರ ಹಾದಿ ತಪ್ಪಿಸುವಂತಹ ಜಾಹೀರಾತುಗಳನ್ನು ನೀಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ತಲಾ ₹ 1 ಕೋಟಿ ದಂಡ ವಿಧಿಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ. ಎಚ್ಚರಿಕೆ ನೀಡಿದೆ
ಪತಂಜಲಿ ಔಷಧ ಉತ್ಪನ್ನಗಳ ಜಾಹೀರಾತುಗಳು ತಪ್ಪು ದಾರಿಗೆ ಎಳೆಯುವಂತವು. ವಿಶೇಷವಾಗಿ ಕೋವಿಡ್ ಲಸಿಕೆ (covid vaccine) ವಿರುದ್ಧ ಹಾಗೂ ಆಧುನಿಕ ಔಷಧ ಪದ್ಧತಿ ಅಲೋಪತಿ ವಿರುದ್ಧ ಪತಂಜಲಿ ಜಾಹೀರಾತು ಪ್ರಕಟಿಸಿದೆ ಹಾಗೂ ಅದರ ಮುಖ್ಯಸ್ಥ ಬಾಬಾ ರಾಮದೇವ್ (Ramdev)ಹೇಳಿಕೆ ನೀಡಿದ್ದಾರೆ’ ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ಪೀಠ, ‘ಪತಂಜಲಿ ಇಂತಹ ಸುಳ್ಳು ಮತ್ತು ದಾರಿ ತಪ್ಪಿಸುವ ಜಾಹೀರಾತು (ADVT) ತಕ್ಷಣವೇ ನಿಲ್ಲಿಸಬೇಕು. ನಿಲ್ಲಿಸದೇ ಹೋದರೆ ‘ನಿರ್ದಿಷ್ಟ ರೋಗ ಗುಣಪಡಿಸಬಹುದು’ ಎಂಬ ಸುಳ್ಳು ಜಾಹೀರಾತಿನ ಪ್ರತಿ ಉತ್ಪನ್ನದ ಮೇಲೆ 1 ಕೋಟಿ ರು. ದಂಡ ಹಾಕಬೇಕಾಗುತ್ತದೆ’ ಎಂದಿತು.
ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠವು ಪತಂಜಲಿ ಕಂಪನಿಗೆ ಎಚ್ಚರಿಕೆ ನೀಡಿದೆ. ತಮ್ಮ ಉತ್ಪನ್ನಗಳಿಗೆ ಸಂಬಂಧಿಸಿದಂತೆ ಇದೇ ರೀತಿಯ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನ ಪ್ರಸಾರ ಮಾಡುವುದನ್ನ ಮುಂದುವರಿಸಿದರೆ, ಅವರು 1 ಕೋಟಿ ರೂಪಾಯಿ ದಂಡವನ್ನ ಎದುರಿಸಬೇಕಾಗುತ್ತದೆ ಎಂದಿದೆ.
ಸುದ್ದಿಗೋಷ್ಠಿಗಳಲ್ಲಿ ವೈದ್ಯಕೀಯ ಪದ್ಧತಿಗಳ ಬಗ್ಗೆ ಮಾತನಾಡುವಾಗಲೂ ಎಚ್ಚರಿಕೆ ವಹಿಸುವಂತೆಯೂ ನ್ಯಾಯಪೀಠ ಸೂಚನೆ ನೀಡಿದೆ.
ಲಸಿಕೆ ಅಭಿಯಾನ ಮತ್ತು ಆಧುನಿಕ ಔಷಧಿಗಳ ವಿರುದ್ಧ ರಾಮ್ದೇವ್ ಅವರ ಅಭಿಯಾನವನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು , ಕೆಲವು ರೋಗಗಳ ಬಗ್ಗೆ ಹಾಗೂ ಅಲೋಪಥಿ ವೈದ್ಯಕೀಯ ಚಿಕಿತ್ಸಾ ಪದ್ಧತಿ ಬಗ್ಗೆ ಪತಂಜಲಿ ಸಂಸ್ಥೆಯು ನೀಡುತ್ತಿರುವ ಜಾಹೀರಾತುಗಳು ಜನರಿಗೆ ತಪ್ಪು ಮಾಹಿತಿಯನ್ನು ರವಾನಿಸುತ್ತಿವೆ ಎಂದು ಅಭಿಪ್ರಾಯಪಟ್ಟಿದೆ.
ಪತಂಜಲಿ ಫುಡ್ಸ್ ಮಾಲೀಕರ ಷೇರು ವಹಿವಾಟು ಸ್ಥಗಿತಗೊಳಿಸಿದ ಬಿಎಸ್ಇ, ಎನ್ಎಸ್ಇ
ಐಎಂಎ ಸಲ್ಲಿಸಿದ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್, ಆಗಸ್ಟ್ 23, 2022 ರಂದು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಆಯುಷ್ ಮತ್ತು ಪತಂಜಲಿ ಆಯುರ್ವೇದ್ ಲಿಮಿಟೆಡ್ಗೆ ನೋಟಿಸ್ ಕೂಡ ಜಾರಿ ಮಾಡಿತ್ತು.
ಸಂಕ್ಷಿಪ್ತ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಪೀಠವು ಪತಂಜಲಿ ಆಯುರ್ವೇದ ಸಂಸ್ಥೆಗೆ, ಆಧುನಿಕ ವೈದ್ಯಕೀಯ ವ್ಯವಸ್ಥೆಗಳ ವಿರುದ್ಧ ತಪ್ಪುದಾರಿಗೆಳೆಯುವ ವರದಿಗಳನ್ನು ಹಾಗೂ ಜಾಹೀರಾತುಗಳನ್ನು ಪ್ರಕಟಿಸದಂತೆ ಸೂಚಿಸಿದೆ.
ಅಲ್ಲದೆ, ಯಾವುದೇ ಉತ್ಪನ್ನದ ಪ್ರಚಾರದ ವೇಳೆ ನಿರ್ದಿಷ್ಟ ಕಾಯಿಲೆಯನ್ನು ಗುಣಪಡಿಸಬಹುದು ಎಂದು ಸುಳ್ಳು ಹೇಳಿದರೆ ಪ್ರತಿ ಉತ್ಪನ್ನದ ಮೇಲೆ 1 ಕೋಟಿ ರೂ. ದಂಡ ವಿಧಿಸಲು ಪೀಠವು ಪರಿಗಣಿಸಬಹುದು ಎಂದು ಸಂಸ್ಥೆಗೆ ಎಚ್ಚರಿಕೆಯನ್ನೂ ನೀಡಿದೆ.
”ಪತಂಜಲಿ ಸಂಸ್ಥೆಯು ಜಾಹೀರಾತಿನಲ್ಲಿ ನೀಡುವ ಮಾಹಿತಿಯ ಹಿಂದೆ ಯಾವುದೇ ಸಂಶೋಧನೆ ನಡೆಸಲಾಗಿಲ್ಲ. ಮಾಹಿತಿ ಸಾಬೀತಿಗೆ ನಿಖರ ವರದಿಗಳಿಲ್ಲ. ಹಾಗಾಗಿ ಇದು 1954ರ ಡ್ರಗ್ಸ್ ಮತ್ತು ಇತರ ಮ್ಯಾಜಿಕ್ ರೆಮಿಡೀಸ್ ಕಾಯಿದೆಯ ಉಲ್ಲಂಘನೆಯಾಗಿದೆ. ಜತೆಗೆ, ಗ್ರಾಹಕರ ರಕ್ಷಣಾ ಕಾಯಿದೆ ಅಡಿಯ ಕಾನೂನುಗಳನ್ನು ಕೂಡ ಉಲ್ಲಂಘಿಸಲಾಗಿದೆ. ಈ ಬಗ್ಗೆ ಕೇಂದ್ರ ಸರಕಾರವು ನಿರ್ದಿಷ್ಟ ಶಿಫಾರಸುಗಳ ಮೂಲಕ ಮಾರ್ಗಸೂಚಿಗಳನ್ನು ಜಾರಿಗೆ ತರುವುದು ಉತ್ತಮ,” ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ. ಪ್ರಕರಣದ ವಿಚಾರಣೆಯನ್ನು 2024ರ ಫೆ. 5ಕ್ಕೆ ಮುಂದೂಡಲಾಗಿದೆ.
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
-
ಬಿಗ್ ನ್ಯೂಸ್14 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ13 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ಅಂತರ ರಾಜ್ಯ11 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ನಿಧನ ವಾರ್ತೆ12 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಸುಳ್ಯ8 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ11 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ನಿಧನ ವಾರ್ತೆ13 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
-
ಸ್ಥಳೀಯ8 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!















