ಕ್ರೈಂ
Theft: ಪುತ್ತೂರು : ಗೊಡೌನಿನ ಲಾಕ್ ಮುರಿದು ದಾಸ್ತಾನಿರಿಸಿದ್ದ ಸುಲಿದ ಅಡಿಕೆ ಕಳ್ಳತನ
ದಾಸ್ತಾನಿರಿಸಿದ್ದ ಸುಲಿದ ಅಡಿಕೆಯನ್ನು ಮನೆಯ ಗೊಡೌನ್ʼನ ಬೀಗ ಮುರಿದು ಕದ್ದಯ್ಯೊದ್ದ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಪಾಣಾಜೆ ಎಂಬಲ್ಲಿ ನಡೆದಿದ್ದು ನ 23 ರಂದು ಬೆಳಕಿಗೆ ಬಂದಿದೆ. ಪುತ್ತೂರು ತಾಲೂಕು ಪಾಣಾಜೆ ಗ್ರಾಮ ನಿವಾಸಿ ಅಬ್ದುಲ್ ಬುರುಹಾನ್ (47) ಎಂಬವರ ಗೊಡೌನ್ ನಲ್ಲಿ ಕಳ್ಳತನವಾಗಿರುವುದು
ಅಬ್ದುಲ್ ಬುರುಹಾನ್ ಅವರು ನ 22 ರಂದು ಸುಲಿದ ಅಡಿಕೆಯನ್ನು ಗೋಣಿ ಚೀಲಗಳಲ್ಲಿ ತುಂಬಿಸಿ ಗೊಡೌನ್ ನಲ್ಲಿ ಇಟ್ಟಿದ್ದರು. ರಾತ್ರಿ ಬಾಗಿಲು ಹಾಕಿ ಹೋಗಿದ್ದು, ಬೆಳಿಗ್ಗೆ ( ನ 23 ರಂದು ) ನೋಡಿದಾಗ ಗೊಡೌನ್ ಹಾಕಿದ್ದ ಬೀಗವನ್ನು ಯಾವುದೋ ಆಯುಧದಿಂದ ಮುರಿದಿರುವುದು ಕಂಡು ಬಂದಿದೆ. ಗೊಡೌನ್ ನ ಒಳಗಡೆ ಪರಿಶೀಲಿಸಿದಾಗ, ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ ಸುಲಿದ ಅಡಿಕೆ ಕಳವು ಆಗಿರುವುದು ಗೊತ್ತಾಗಿದೆ.
ಸುಮಾರು 90 ಸಾವಿರ ಮೌಲ್ಯದ 02 ಕ್ವಿಂಟಾಲ್ 90 ಕೆಜಿ ಅಡಿಕೆಯನ್ನು ಗೊಡೌನ್ ಬೀಗ ಮುರಿದು ಕಳವು ಮಾಡಿರುವುದಾಗಿ ಪುತ್ತೂರು ಗ್ರಾಮಾಂತರ ಠಾಣೆಗೆ ಅಬ್ದುಲ್ ಬುರುಹಾನ್ ದೂರು ನೀಡಿದ್ದರು. IPC ಕಲಂ 454,457, 380 ರಂತೆ ಪ್ರಕರಣ ದಾಖಲಾಗಿದೆ.
ಕಳೆದ ಕೆಲವು ತಿಂಗಳುಗಳಿಂದ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ, ದರೋಡೆ ಪ್ರಕರಣಗಳಲ್ಲಿ ಹೆಚ್ಚಳ ಕಾಣಿಸಿದೆ. ರಾತ್ರಿ ಸಮರ್ಪಕ ಗಸ್ತು ವ್ಯವಸ್ಥೆ ಇಲ್ಲದಿರುವುದು, ಗಡಿ ಪ್ರದೇಶದ ಚಎಕ್ ಪೋಸ್ಟ್ ಗಳಲ್ಲಿ ಕಾವಲು ವ್ಯವಸ್ಥೆ ದುರ್ಭಲವಾಗಿರುವುದು ಹಾಗೂ ಹೆದ್ದಾರಿಗಳಲ್ಲಿ ಸಿಸಿಟಿವಿ ಇಲ್ಲದಿರುವುದು ಅಪರಾಧ ಪ್ರಕರಣ ಹೆಚ್ಚಲು ಕಾರಣ ಎನ್ನುತ್ತಾರೆ ಸಾರ್ವಜನಿಕರು
ಕ್ರೈಂ
Murder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
ಸಹೋದರನ ಮಗಳೇ ಚಿಕ್ಕಪ್ಪನನ್ನು ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಚೆನ್ನಯ್ಯ ಪೂಜಾರಿ (52) ಮೃತಪಟ್ಟಿದ್ದಾರೆ. ಅವರ ಸಹೋದರ ಕೋಟಿ ಪೂಜಾರಿಯವರ ಪುತ್ರಿ ಕೃತ್ತಿಕಾ (26) ಕೊಲೆ ಆರೋಪಿತೆಯಾಗಿದ್ದಾರೆ.
ಪುತ್ತೂರು: ಸಹೋದರನ ಮಗಳೇ ಚಿಕ್ಕಪ್ಪನನ್ನು ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದಲ್ಲಿ ನಡೆದಿದೆ.
ಕನ್ಯಾನ ಗ್ರಾಮದ ಶಿರಂಕಲ್ಲು ನಂದರಬೆಟ್ಟು ಎಂಬಲ್ಲಿ ನ.24ರ ರಾತ್ರಿ ನಡೆದ ಘಟನೆಯಲ್ಲಿ ಚೆನ್ನಯ್ಯ ಪೂಜಾರಿ (52) ಮೃತಪಟ್ಟಿದ್ದಾರೆ. ಅವರ ಸಹೋದರ ಕೋಟಿ ಪೂಜಾರಿಯವರ ಪುತ್ರಿ ಕೃತ್ತಿಕಾ (26) ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ವಿವರ
ಶಿರಂಕಲ್ಲು ನಂದರಬೆಟ್ಟು ದಾಸರಕೋಡಿ ಎಂಬಲ್ಲಿ ಕೋಟಿ ಪೂಜಾರಿ ಹಾಗೂ ಚೆನ್ನಯ್ಯ ಪೂಜಾರಿ ಎಂಬ ಅವಳಿ ಸಹೋದರರು ವಾಸವಾಗಿದ್ದರು. ಕೋಟಿ ಪೂಜಾರಿಯವರ ವಿವಾಹಿತ ಪುತ್ರಿ ಕೃತ್ತಿಕಾ ಇತ್ತೀಚೆಗೆ ತವರು ಮನೆಗೆ ಬಂದಿದ್ದರು.
ನ.24ರಂದು ರಾತ್ರಿ ಸುಮಾರು 7 ಗಂಟೆಯ ವೇಳೆಗೆ ಚೆನ್ನಯ್ಯ ಪೂಜಾರಿ ಅವರು ಕೃತ್ತಿಕಾ ವಾಸವಿದ್ದ ಮನೆಯ ಬಳಿ ಗಲಾಟೆ ನಡೆಸಿದ್ದು, ಈ ವೇಳೆ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಮಾತಿನ ಚಕಮಕಿ ತೀವ್ರಗೊಂಡಾಗ ಆಕ್ರೋಶಗೊಂಡ ಕೃತ್ತಿಕಾ ಮನೆಯಲ್ಲಿದ್ದ ಹರಿತವಾದ ಕತ್ತಿಯಿಂದ ತನ್ನ ಚಿಕ್ಕಪ್ಪ ಚೆನ್ನಯ್ಯ ಪೂಜಾರಿ ಅವರ ಎದೆಗೆ ಬಲವಾಗಿ ಚುಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.
ಕತ್ತಿಯೇಟಿನಿಂದ ಎದೆಗೆ ಗಂಭೀರ ಗಾಯಗೊಂಡ ಚೆನ್ನಯ್ಯ ಪೂಜಾರಿ ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದ ಅವರನ್ನು ಸ್ಥಳೀಯರು ತಕ್ಷಣ ವಿಟ್ಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಆದರೆ, ಪುತ್ತೂರಿಗೆ ಕರೆತರುತ್ತಿದ್ದ ವೇಳೆ ತೀವ್ರ ರಕ್ತಸ್ರಾವದಿಂದ ಚೆನ್ನಯ್ಯ ಪೂಜಾರಿ ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ, ಉಪನಿರೀಕ್ಷಕರು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಕೃತ್ತಿಕಾಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಕ್ರೈಂ
Murder-7 ಮಂದಿಯ ಹತ್ಯೆ ಪ್ರಕರಣ: ಶವದ ಜೊತೆ ಖಾರದ ಪುಡಿ, ಒಣಮೆಣಸಿನಕಾಯಿ ತುಂಬಿಸುತ್ತಿದ್ದ ಹಂತಕ..!
ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ.
ಬೆಂಗಳೂರು: ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ.
ಏಳು ಮಂದಿಯನ್ನು ರುಬ್ಬುವ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಬಳಿಕ ಮೃತದೇಹಗಳ ಕೈ-ಕಾಲುಗಳನ್ನು ಹಗ್ಗದಿಂದ ಕಟ್ಟಿದ್ದ ಆರೋಪಿ, ಸೆಲೋ ಟೇಪ್ ಸುತ್ತಿ ಗೋಣಿ ಚೀಲ ಹಾಗೂ ಬೆಡ್ಶೀಟ್ಗಳಲ್ಲಿ ಪ್ಯಾಕ್ ಮಾಡಿದ್ದ ಎನ್ನಲಾಗಿದೆ. ಈ ವೇಳೆ ಮೃತದೇಹಗಳ ಮೇಲೆ ಖಾರದ ಪುಡಿ ಸಿಂಪಡಿಸಿ, ಒಣಮೆಣಸಿನಕಾಯಿಗಳನ್ನೂ ಹಾಕಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಿರಾಡಿಘಾಟ್ನಲ್ಲಿ ಪತ್ತೆಯಾದ ನಳಿನಿ ಮತ್ತು ಶಂಕರ್ ಅವರ ಮೃತದೇಹಗಳ ಪರಿಶೀಲನೆ ವೇಳೆ ಒಣಮೆಣಸಿನಕಾಯಿ ಹಾಗೂ ಖಾರದ ಪುಡಿ ಪತ್ತೆಯಾಗಿದೆ. ಪ್ರಾಣಿ, ಪಕ್ಷಿಗಳು ಮೃತದೇಹಗಳನ್ನು ಕಿತ್ತು ತಿನ್ನದಂತೆ ತಡೆಯಲು ಹಾಗೂ ಪೊಲೀಸ್ ಶ್ವಾನಗಳಿಗೆ ಮೃತದೇಹಗಳ ಸುಳಿವು ಸಿಗದಂತೆ ಮಾಡಲು ಆರೋಪಿ ಈ ತಂತ್ರ ಅನುಸರಿಸಿದ್ದ ಎನ್ನಲಾಗಿದೆ. ಇದರಿಂದ ಪೊಲೀಸರಿಗೆ ತನ್ನನ್ನು ಪತ್ತೆಹಚ್ಚಲು ಕಷ್ಟವಾಗಬಹುದು ಎಂದು ಆತ ಭಾವಿಸಿದ್ದ ಎಂದು ಮೂಲಗಳು ತಿಳಿಸಿವೆ.
ಮಗಳಿಗೆ 10 ದಿನಗಳ ಪೊಲೀಸ್ ವಶ
ಸರಣಿ ಹತ್ಯೆ ಪ್ರಕರಣದಲ್ಲಿ ತಂದೆಗೆ ಸಹಕರಿಸಿದ ಆರೋಪ ಎದುರಿಸುತ್ತಿರುವ ಮಗಳನ್ನು ಬಾಲ ನ್ಯಾಯಮಂಡಳಿಗೆ ಹಾಜರುಪಡಿಸಿದ ಪೊಲೀಸರು, 10 ದಿನಗಳ ವಶಕ್ಕೆ ಪಡೆದು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ.
ಇನ್ನೊಂದೆಡೆ ಪೊಲೀಸ್ ವಶದಲ್ಲಿರುವ ಇಂದುಶೇಖರ್ನನ್ನು ತನಿಖಾಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪತ್ನಿಯ ಕಿರುಕುಳದ ಆರೋಪದ ಜೊತೆಗೆ ಆಸ್ತಿ ವಿಚಾರಕ್ಕಾಗಿ ಹತ್ಯೆ ನಡೆಸಿರುವ ಸಾಧ್ಯತೆಯ ಆಯಾಮದಲ್ಲಿಯೂ ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.
ಮನೆಗೆ ಲುಮಿನಾಲ್ ಪರೀಕ್ಷೆ
ಹತ್ಯೆಯಾದವರ ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಮತ್ತೊಂದೆಡೆ, ಆರೋಪಿಯ ಮನೆಯಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಹಾಗೂ ಸುಕೋ ತಂಡಗಳು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನು ಸಂಗ್ರಹಿಸಿವೆ.
ಆರೋಪಿ ರುಬ್ಬುವ ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ ಬಳಿಕ ಮನೆಯ ಹಾಲ್, ಸ್ನಾನಗೃಹ ಹಾಗೂ ರುಬ್ಬುವ ಕಲ್ಲಿನ ಮೇಲಿದ್ದ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿದ್ದ ಎನ್ನಲಾಗಿದೆ. ಹೀಗಾಗಿ ಕಣ್ಣಿಗೆ ಕಾಣದ ರಕ್ತದ ಗುರುತುಗಳನ್ನು ಪತ್ತೆಹಚ್ಚಲು ತಜ್ಞರು ಮನೆಯಲ್ಲಿ ಲುಮಿನಾಲ್ ಪರೀಕ್ಷೆ ನಡೆಸಿದ್ದಾರೆ.
ಏನಿದು ಲುಮಿನಾಲ್ ಪರೀಕ್ಷೆ?
ಲುಮಿನಾಲ್ ಪರೀಕ್ಷೆಯು ಕಣ್ಣಿಗೆ ಕಾಣದ ರಕ್ತದ ಕಲೆಗಳನ್ನು ಪತ್ತೆಹಚ್ಚಲು ಬಳಸುವ ವೈಜ್ಞಾನಿಕ ವಿಧಾನವಾಗಿದೆ. ರಕ್ತವಿರುವ ಸ್ಥಳವನ್ನು ಸ್ವಚ್ಛಗೊಳಿಸಿದರೂ ರಕ್ತದಲ್ಲಿರುವ ಹಿಮೋಗ್ಲೋಬಿನ್ನ ಅಂಶಗಳು ಉಳಿದಿರಬಹುದು. ಅಂತಹ ಸ್ಥಳಗಳಿಗೆ ನಿರ್ದಿಷ್ಟ ರಾಸಾಯನಿಕ ದ್ರಾವಣವನ್ನು ಸಿಂಪಡಿಸಿದಾಗ ರಾಸಾಯನಿಕ ಪ್ರತಿಕ್ರಿಯೆಯಿಂದ ಬೆಳಕು ಕಾಣಿಸಿಕೊಳ್ಳುತ್ತದೆ. ಈ ಮೂಲಕ ಸ್ವಚ್ಛಗೊಳಿಸಲಾದ ಸ್ಥಳಗಳಲ್ಲಿಯೂ ರಕ್ತದ ಗುರುತುಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ.
ಲುಮಿನಾಲ್ ಪರೀಕ್ಷೆ ವೇಳೆ ಸಂಗ್ರಹಿಸಿದ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಎಫ್ಎಸ್ಎಲ್ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರೈಂ
Murder-ಬೆಂಗಳೂರು: ಕುಟುಂಬದವರ ಎದುರೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ
ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.
ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಗ್ಗೆ ಸುಮಾರು 10.30ರ ವೇಳೆಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಮೀಪ ಚರಣ್ ಗೌಡ ಅವರು ಕುಟುಂಬದವರೊಂದಿಗೆ ಬಂದಿದ್ದರು. ಈ ಸಂದರ್ಭದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಅವರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ದುಷ್ಕರ್ಮಿಗಳು ಕುಟುಂಬದವರ ಎದುರೇ ಚರಣ್ ಗೌಡ ಅವರ ಮೇಲೆ ಮನಬಂದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಆಯುಧಗಳ ಸಮೇತ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಹಳೆಯ ದ್ವೇಷದ ಶಂಕೆ
ಚರಣ್ ಗೌಡ ಅವರ ಹತ್ಯೆಗೆ ಹಳೆಯ ದ್ವೇಷವೇ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ರಿಯಲ್ ಎಸ್ಟೇಟ್ ಉದ್ಯಮಕ್ಕೆ ಸಂಬಂಧಿಸಿದಂತೆ ಅವರಿಗೆ ಕೆಲವರೊಂದಿಗೆ ವೈಷಮ್ಯವಿತ್ತು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.
-
ಬಿಗ್ ನ್ಯೂಸ್20 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ19 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ಸುಳ್ಯ14 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ17 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ನಿಧನ ವಾರ್ತೆ19 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಅಂತರ ರಾಜ್ಯ17 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ಸ್ಥಳೀಯ14 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ನಿಧನ ವಾರ್ತೆ19 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು















