Connect with us

ರಾಜಕೀಯ

Guarantee Scheme ಗ್ಯಾರಂಟಿ ಯೋಜನೆ ಸರಿಯಾಗಿ ಕೈ ಸೇರುತ್ತಿಲ್ಲ- ಸಿದ್ದರಾಮಯ್ಯ ನಡೆಸಿದ್ರು ಮಹತ್ವದ ಸಭೆ : ‘ಗೃಹಲಕ್ಷ್ಮೀ’ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಬಗ್ಗೆ CM ಖಡಕ್ ನಿರ್ದೇಶನ

Published

on

Ad Widget

Ad Widget

Ad Widget

Ad Widget

ರಾಜ್ಯ ಸರಕಾರದ ಮಹತ್ವಾಕಾಂಕ್ಷಿಯ ನಾಲ್ಕು ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತು ಸಂಬಂಧಪಟ್ಟ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸರಣಿ ಸಭೆಗಳನ್ನು ನಡೆಸಿದರು.

Ad Widget

Ad Widget

Ad Widget

Ad Widget


*ಶಕ್ತಿ ಯೋಜನೆ
ಶಕ್ತಿ ಯೋಜನೆ ಜಾರಿ ಆದಗಿನಿಂದ ನವೆಂಬರ್‌ 21 ರವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು(ಟಕೆಟ್) ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ. ಏಪ್ರಿಲ್‌ 2023 ರಲ್ಲಿ ಪ್ರತಿ ತಿಂಗಳ ಪ್ರಯಾಣಿಕರ ಸಂಖ್ಯೆ 84.17 ಲಕ್ಷ ಇತ್ತು. ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳವಾಗಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್‌ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಜೊತೆಗೆ ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

Ad Widget

Ad Widget alt="Ad Widget"/>

Ad Widget

*ಅನ್ನಭಾಗ್ಯ:

Ad Widget

Ad Widget <> Ad Widget

ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಚೀಟಿದಾರರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಿ. ಡಿ.31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದರು.

Ad Widget

Ad Widget

*ಗೃಹ ಜ್ಯೋತಿ:

ಗೃಹಜ್ಯೋತಿ ಯೋಜನೆಯಡಿ ಈವರೆಗೆ 1.62 ಕೋಟಿ ಜನ ನೋಂದಾಯಿಸಿಕೊಂಡಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ. ಆಗಸ್ಟ್ ನಿಂದ ಈವರೆಗೆ 2900 ಕೋಟಿ ರೂ. ಭರಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳು ಇಲಾಖೆಯ ದತ್ತಾಂಶದಲ್ಲಿಯೇ ಗೃಹಜ್ಯೋತಿ ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹಜ್ಯೋತಿಯಿಂದ ಬಿಟ್ಟು ಹೋಗಬಾರದು ಎಂದು ಸಿದ್ದರಾಮಯ್ಯ ತಿಳಿಸಿದರು.

*ಗೃಹಲಕ್ಷ್ಮಿ ಯೋಜನೆ:

ನವೆಂಬರ್ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ. ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್ ಲಿಂಕ್ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿಗಳನ್ನು ಬ್ಯಾಂಕಿಗೆ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ಕ್ರಮ ಕೈಗೊಳ್ಳಬೇಕು. ಡಿಸೆಂಬರ್ ಒಳಗೆ ಎಲ್ಲ ಅರ್ಹ ಫಲಾನುಭವಿಗಳಿಗೆ ನಗದು ವರ್ಗಾವಣೆಯನ್ನು ಖಾತರಿ ಪಡಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.

ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್ ಖಾತೆ ಆಧಾರ್ ಲಿಂಕ್ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದರು.

ಇಲಾಖಾ ವಾರು ನಡೆದ ಸಭೆಗಳಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್, ಸಾರಿಗೆ ಸಚಿವ ರಾಂಲಿಂಗಾರೆಡ್ಡಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Ad Widget
Click to comment

Leave a Reply

ಸ್ಥಳೀಯ

Rakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ

Published

on

Ad Widget

Ad Widget

Ad Widget

Ad Widget

ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಕ್ಷಿತ್ ಶಿವರಾಂ, ವಳಾಲು ಟೋಲ್ ಗೇಟ್‌ನಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Ad Widget

Ad Widget <> Ad Widget

ಹೊಸ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಸಂದರ್ಭದಲ್ಲೇ ರಸ್ತೆ ತೆರಿಗೆ ಪಾವತಿಸಲಾಗುತ್ತಿದ್ದರೂ, ರಸ್ತೆ ಬಳಕೆಯ ಹೆಸರಿನಲ್ಲಿ ಮತ್ತೆ ಮತ್ತೆ ಟೋಲ್ ಶುಲ್ಕ ಹೆಚ್ಚಿಸುತ್ತಿರುವುದು ಎಷ್ಟು ಸಮಂಜಸ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ನಿಯಮಗಳ ಪ್ರಕಾರ ಎರಡು ಟೋಲ್ ಪ್ಲಾಜಾಗಳ ನಡುವೆ ನಿಗದಿತ ಅಂತರ ಇರಬೇಕು. ಆದರೆ, ಬ್ರಹ್ಮರಕೊಟ್ಟು ಟೋಲ್ ಗೇಟ್‌ನಿಂದ 35 ಕಿ.ಮೀ.ಗಿಂತ ಕಡಿಮೆ, ಕೇವಲ 32 ಕಿ.ಮೀ. ಅಂತರದಲ್ಲೇ ವಳಾಲು ಟೋಲ್ ಆರಂಭಿಸಿ ಎರಡು ಕಡೆ ಶುಲ್ಕ ವಸೂಲಿ ಮಾಡುತ್ತಿರುವುದು ನಿಯಮಬಾಹಿರ ಎಂದು ರಕ್ಷಿತ್ ಶಿವರಾಂ ದೂರಿದ್ದಾರೆ.

Ad Widget

Ad Widget

ವಳಾಲು ಭಾಗದ ಸ್ಥಳೀಯರು ಬ್ಯಾಂಕ್, ಸಹಕಾರಿ ಹಾಲು ಡಿಪೋ, ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ತೆರಳುವಂತಹ ದೈನಂದಿನ ಚಟುವಟಿಕೆಗಳಿಗೂ ಪ್ರತಿನಿತ್ಯ ₹250 ವರೆಗೆ ಟೋಲ್ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಜನವಿರೋಧಿ ಟೋಲ್ ದರ ಏರಿಕೆ ವಿರುದ್ಧ ಧ್ವನಿ ಎತ್ತದಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಟೀಕಿಸಿದ್ದಾರೆ.

ವಾಹನ ಸವಾರರಿಗೆ ಹೊರೆಯಾಗುವ ರೀತಿಯಲ್ಲಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಶ್ನಿಸುವ ಧೈರ್ಯ ಶಾಸಕರಿಗಿದೆಯೇ ಎಂದು ರಕ್ಷಿತ್ ಶಿವರಾಂ ಸವಾಲು ಹಾಕಿದ್ದಾರೆ.

ವಳಾಲು ಟೋಲ್ ದರ ಏರಿಕೆಯನ್ನು ತಕ್ಷಣ ಮರುಪರಿಶೀಲಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಟೋಲ್ ದರ ನಿಗದಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಸ್ಥಳೀಯರಿಗೆ ವಿನಾಯಿತಿ ನೀಡಬೇಕು. ಬ್ರಹ್ಮರಕೊಟ್ಟು ಟೋಲ್ ಗೇಟ್ ತೆರವುಗೊಳಿಸಬೇಕು ಹಾಗೂ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಉದ್ದೇಶಿತ ಟೋಲ್ ಗೇಟ್ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?

Published

on

Ad Widget

Ad Widget

Ad Widget

Ad Widget

ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.

Ad Widget

Ad Widget <> Ad Widget

ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.

Ad Widget
Continue Reading

ರಾಜಕೀಯ

Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

Ad Widget

Ad Widget <> Ad Widget

ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.

1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Ad Widget

Ad Widget

2018ರಲ್ಲಿ ರೈತರ ಸಾಲಮನ್ನಾ ಮಾಡುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನೂ 1,000 ರೂ. ಹೆಚ್ಚಳ ಮಾಡಿದ್ದೆ ಎಂದು ಸ್ಮರಿಸಿದ ಅವರು, ‘ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು ಎಂದು ಮುಖ್ಯಮಂತ್ರಿಗಳು ಕೇಳುತ್ತಾರೆ. ನನ್ನ ಸಾಕ್ಷಿಗುಡ್ಡೆ ಇರಲಿ, ನಿಮ್ಮ ಸಾಕ್ಷಿಗುಡ್ಡೆ ಎಲ್ಲಿ?’ ಎಂದು ಪ್ರಶ್ನಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!