ವಿಚ್ಛೇದಿತ ಪತ್ನಿಗೆ ಮಾಸಿಕ ₹30 ಸಾವಿರ ಜೀವನಾಂಶ ಮತ್ತು ₹51ಸಾವಿರ ವ್ಯಾಜ್ಯ ವೆಚ್ಚವನ್ನು ನೀಡುವಂತೆ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸುವ […]" /> ವಿಚ್ಛೇದಿತ ಪತ್ನಿಗೆ ಮಾಸಿಕ ₹30 ಸಾವಿರ ಜೀವನಾಂಶ ಮತ್ತು ₹51ಸಾವಿರ ವ್ಯಾಜ್ಯ ವೆಚ್ಚವನ್ನು ನೀಡುವಂತೆ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸುವ […]"> Verdict on Alimony: ದುಡಿಯಬಲ್ಲ ಪತ್ನಿಗೆ ಕೊಡುವ ಜೀವನಾಂಶ, ಪತಿಗೆ ಹೊರೆಯಾಗಬಾರದು: ಹೈಕೋರ್ಟ್ ನಿಂದ ಮಹತ್ತರ ಆದೇಶ - Nikhara News | Kannada News Website
Connect with us

Uncategorized

Verdict on Alimony: ದುಡಿಯಬಲ್ಲ ಪತ್ನಿಗೆ ಕೊಡುವ ಜೀವನಾಂಶ, ಪತಿಗೆ ಹೊರೆಯಾಗಬಾರದು: ಹೈಕೋರ್ಟ್ ನಿಂದ ಮಹತ್ತರ ಆದೇಶ

Published

on

Ad Widget

Ad Widget

Ad Widget

Ad Widget

ದುಡಿಯಲು ಸಮರ್ಥವಿರುವ ಪತ್ನಿ ತನ್ನ ಸಂಗಾತಿಯ ಪಾಲಿಗೆ ಹೊರೆಯಾಗಬಾರದು ಎಂದು ದೆಹಲಿ ಹೈಕೋರ್ಟ್ (Karnataka High Court) ತೀರ್ಪು ನೀಡಿದೆ.

Ad Widget

Ad Widget

Ad Widget

Ad Widget

ಹಿಂದೂ ವಿವಾಹ ಕಾಯ್ದೆ ಪ್ರಕಾರ ವಿಚ್ಛೇದಿತ ಹೆಂಡತಿಗೆ ಪುರುಷನು ನೀಡುತ್ತಿದ್ದ ಮಾಸಿಕ ಜೀವನಾಂಶವನ್ನು ₹30 ಸಾವಿರದಿಂದ ₹21 ಸಾವಿರಕ್ಕೆ ಇಳಿಸುವಾಗ ಈ ಸೂಚನೆ ನೀಡಿದೆ.

Ad Widget

Ad Widget alt="Ad Widget"/>

Ad Widget

ವಿಚ್ಛೇದಿತ ಪತ್ನಿಗೆ ಮಾಸಿಕ ₹30 ಸಾವಿರ ಜೀವನಾಂಶ ಮತ್ತು ₹51ಸಾವಿರ ವ್ಯಾಜ್ಯ ವೆಚ್ಚವನ್ನು ನೀಡುವಂತೆ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸುವ ವೇಳೆ, ಮಹಿಳೆಯ ಆದಾಯಕ್ಕೆ ಸ್ವತಂತ್ರ ಮೂಲವಿಲ್ಲ. ಆದರೆ ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಪಡೆಯುವ ಮೂಲಕ ಶಿಕ್ಷಿತರಾಗಿದ್ದಾರೆ. ಹೀಗಾಗಿ ಹೆಚ್ಚಿನ ಜೀವನಾಂಶ ಕೇಳುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ.

Ad Widget

Ad Widget <> Ad Widget

ಹಣ ಸಂಪಾದಿಸಲು ಸೂಕ್ತವಾದ ಸಾಮರ್ಥ್ಯ ಇದ್ದರೂ ಸರಿಯಾದ ವಿವರಣೆ ನೀಡದೆ ನಿರುದ್ಯೋಗಿಯಾಗಿ ಇರಲು ಬಯಸುವ ಸಂಗಾತಿಯ ಖರ್ಚುಗಳನ್ನು ಇನ್ನೊಬ್ಬ ಸಂಗಾತಿಯ ಮೇಲೆ ಏಕಪಕ್ಷೀಯವಾಗಿ ಹೊರಿಸಲು ಅವಕಾಶ ಕೊಡಬಾರದು’ ಎಂದು ನ್ಯಾಯಮೂರ್ತಿಗಳಾದ ವಿ. ಕಾಮೇಶ್ವರ ರಾವ್ ಮತ್ತು ಅನೂಪ್ ಕುಮಾರ್ ಮೆಂದೀರತ್ತಾ ಅವರು ಇದ್ದ ನ್ಯಾಯಪೀಠ ಹೇಳಿದೆ.

ಮನೆ ಬಿಟ್ಟು ಹೋಗಿರುವ ಪತ್ನಿಗೆ ತಿಂಗಳಿಗೆ ₹30 ಸಾವಿರ ಜೀವನಾಂಶ ಹಾಗೂ ಕೋರ್ಟ್ ವೆಚ್ಚವಾಗಿ ₹51 ಸಾವಿರ ಪಾವತಿಸಬೇಕು ಎಂದು ವಿಚಾರಣಾ ನ್ಯಾಯಾಲಯ ನೀಡಿರುವ ಆದೇಶವನ್ನು ಪತಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಿಚಾರಣಾ ನ್ಯಾಯಾಲಯವು ಈ ಮೊದಲು ₹21 ಸಾವಿರ ಜೀವನಾಂಶ ನೀಡಬೇಕು ಎಂದು ಆದೇಶಿಸಿತ್ತು. ಆದರೆ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆ ಆಗದಿದ್ದರೂ, ಮೊತ್ತವನ್ನು ₹30 ಸಾವಿರಕ್ಕೆ ಹೆಚ್ಚಿಸಿತು ಎಂದು ಪತಿ ದೂರಿದ್ದಾರೆ.

Ad Widget

Ad Widget

‘ವಾಸ್ತವಾಂಶಗಳನ್ನು ಹಾಗೂ ಪರಿಸ್ಥಿತಿಯನ್ನು ಗಮನಿಸಿ, ಜೀವನಾಂಶದ ಮೊತ್ತವನ್ನು ಪರಿಗಣಿಸುವಾಗ ಪತಿಗೆ ಇರುವ ಹೊಣೆಗಾರಿಕೆ ಹಾಗೂ ಕುಟುಂಬದ ಇತರ ಸದಸ್ಯರ ವಿಚಾರವಾಗಿ ಇರುವ ಕರ್ತವ್ಯಗಳನ್ನು ಕಡೆಗಣಿಸಲಾಗದು’ ಎಂದು ಪೀಠ ಹೇಳಿದೆ. ವಿಚಾರಣಾ ನ್ಯಾಯಾಲಯದಲ್ಲಿನ ಪ್ರಕರಣ ಇತ್ಯರ್ಥ ಆಗುವವರೆಗೆ ಮಹಿಳೆಗೆ ₹21 ಸಾವಿರ ಜೀವನಾಂಶ ಸಾಕು ಎಂದು ಹೇಳಿದೆ.

ವಿಚ್ಛೇದನ ಆಗುವವರೆಗೆ ಜೀವನಾಂಶದ ಮೊತ್ತವನ್ನು ವರ್ಷಕ್ಕೆ ₹1,500ರಷ್ಟು ಹೆಚ್ಚಿಸಬೇಕು ಎಂದು ಸೂಚಿಸಿದೆ. ದಂಪತಿ 2018ರಲ್ಲಿ ಮದುವೆಯಾಗಿದ್ದರು. 2020ರಲ್ಲಿ ವಿಚ್ಛೇದನ ಪಡೆದುಕೊಂಡಿದ್ದರು.

Ad Widget

Uncategorized

Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು

Published

on

Ad Widget

Ad Widget

Ad Widget

Ad Widget

ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.

Ad Widget

Ad Widget <> Ad Widget

ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.

ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.

Ad Widget

Ad Widget

ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.

ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget
Continue Reading

Uncategorized

Soujanya case-Big Breaking: ಸೌಜನ್ಯ ಪ್ರಕರಣ: ಎಸ್‌ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget

Ad Widget <> Ad Widget

ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.

ಇಂದು ಐವರ ಹೇಳಿಕೆಗಳನ್ನು ಎಸ್‌ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.

Ad Widget

Ad Widget

ಈ ನಡುವೆ ತನಿಖಾಧಿಕಾರಿ ಲೋಕೇಶ್ ಹಾಗೂ ಸಹ ತನಿಖಾಧಿಕಾರಿ ಮನೋಜ್ ನಾಯ್ಕ್ ಅವರು ಕೂಡ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget
Continue Reading

Uncategorized

Modi visit effect-ಮೋದಿ ಭೇಟಿ ಎಫೆಕ್ಟ್: ಬೆಂಗಳೂರಿನಲ್ಲಿ ಭಾರಿ ಟ್ರಾಫಿಕ್ ಜಾಮ್, ಗಂಟೆಗಟ್ಟಲೆ ಪರದಾಡಿದ ವಾಹನ ಸವಾರರು..!

Published

on

Ad Widget

Ad Widget

Ad Widget

Ad Widget

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ ಬೆಂಗಳೂರಿನಾದ್ಯಂತ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಯಿತು.

Ad Widget

Ad Widget

Ad Widget

Ad Widget

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ ಬೆಂಗಳೂರಿನಾದ್ಯಂತ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಯಿತು.

Ad Widget

Ad Widget alt="Ad Widget"/>

Ad Widget

ಬನ್ನೇರುಘಟ್ಟ ಮುಖ್ಯರಸ್ತೆ, ಆಡುಗೋಡಿ, ಜಯನಗರ, ಜೆ.ಪಿ.ನಗರ, ತಲಘಟ್ಟಪುರ ಹಾಗೂ ಹುಳಿಮಾವು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹಾಗೂ ಮಾರ್ಗ ಬದಲಾವಣೆ ಮಾಡಲಾಗಿತ್ತು.

Ad Widget

Ad Widget <> Ad Widget

ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ತಾವರೆಕೆರೆ ಮೆಟ್ರೋ ನಿಲ್ದಾಣದ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದಲೂ ತಪಾಸಣೆ ನಡೆಸಲಾಗಿತ್ತು.

ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದರಿಂದ ಐಐಎಂಬಿ ಹಾಗೂ ಜಯದೇವ ಆಸ್ಪತ್ರೆ ಮಾರ್ಗವಾಗಿ ಸಂಚರಿಸುವವರು ತೀವ್ರ ತೊಂದರೆ ಅನುಭವಿಸಿದರು. ಮುಖ್ಯ ರಸ್ತೆಗೆ ಬ್ಯಾರಿಕೇಡ್ ಅಳವಡಿಸಿದ್ದರಿಂದ ವಾಹನ ಸವಾರರು ಬಿಟಿಎಂ ಬಡಾವಣೆ, ಜೆ.ಪಿ.ನಗರ ಮತ್ತು ಜಯನಗರದ ಒಳರಸ್ತೆಗಳ ಮೂಲಕ ಸಂಚರಿಸಬೇಕಾಯಿತು. ಇದರಿಂದ ಕಿರಿದಾದ ವಸತಿ ಪ್ರದೇಶಗಳ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿ ಹಲವು ಜಂಕ್ಷನ್‌ಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.

Ad Widget

Ad Widget

ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಪರ್ಕ ರಸ್ತೆಗಳು, ಬಿಟಿಎಂ ಬಡಾವಣೆ ಒಳರಸ್ತೆಗಳಲ್ಲಿ ತೀವ್ರ ಸಂಚಾರ ದಟ್ಟಣೆ ಕಂಡುಬಂದಿತು. ಡೇರಿ ವೃತ್ತ, ಮೈಕೋ ಲೇಔಟ್, ಹುಳಿಮಾವು ಹಾಗೂ ಜಯನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳು ನಿಧಾನವಾಗಿ ಚಲಿಸಿದವು.

ಬೆಳಿಗ್ಗೆ 9 ಗಂಟೆಗೆ ಹುಳಿಮಾವಿನಿಂದ ಹೊರಟು ಡೇರಿ ವೃತ್ತದಲ್ಲಿ 11 ಗಂಟೆಗೆ ನಡೆಯಬೇಕಿದ್ದ ಸಭೆಗೆ ತೆರಳುತ್ತಿದ್ದರೂ ಮಧ್ಯಾಹ್ನ 1 ಗಂಟೆಯಾದರೂ ತಲುಪಲು ಸಾಧ್ಯವಾಗಲಿಲ್ಲ ಎಂದು ಪ್ರಯಾಣಿಕ ರಮೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಪರ್ಯಾಯ ಮಾರ್ಗಗಳಲ್ಲಿಯೂ ವಾಹನ ದಟ್ಟಣೆ ಇತ್ತು. ಯಾವ ರಸ್ತೆಯಲ್ಲಿ ಸಂಚರಿಸಬೇಕು ಎಂಬುದರ ಕುರಿತು ಸ್ಪಷ್ಟ ಸೂಚನಾ ಫಲಕಗಳಿರಲಿಲ್ಲ ಎಂದು ಅವರು ದೂರಿದರು.

ಸಂಚಾರ ನಿರ್ಬಂಧದಿಂದ ಉದ್ಯೋಗಿಗಳಿಗೆ ತೊಂದರೆಯಾಗುವುದನ್ನು ಗಮನದಲ್ಲಿಟ್ಟುಕೊಂಡು ನಗರದ ಹಲವು ಐಟಿ ಕಂಪನಿಗಳು ಶುಕ್ರವಾರ ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ (ವರ್ಕ್ ಫ್ರಂ ಹೋಮ್) ಸೂಚಿಸಿದ್ದವು.

ಮಾರ್ಗ ಬದಲಾವಣೆ ಕುರಿತು ಎಫ್‌ಎಂ ರೇಡಿಯೊ, ಸುದ್ದಿವಾಹಿನಿಗಳು ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಮುಂಚಿತವಾಗಿಯೇ ಮಾಹಿತಿ ನೀಡಲಾಗಿತ್ತು. ಆದರೂ ಪರ್ಯಾಯ ಮಾರ್ಗಗಳ ಪರಿಚಯವಿಲ್ಲದವರು ಕಿರಿದಾದ ಒಳರಸ್ತೆಗಳಿಗೆ ಪ್ರವೇಶಿಸಿದ್ದರಿಂದ ಗೊಂದಲ ಉಂಟಾಗಿ ಸಂಚಾರ ದಟ್ಟಣೆ ಹೆಚ್ಚಾಯಿತು ಎಂದು ಹಿರಿಯ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಚ್ಚು ಸಂಚಾರ ದಟ್ಟಣೆ ಕಂಡುಬಂದ ಪ್ರದೇಶಗಳು:
ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಪರ್ಕ ರಸ್ತೆಗಳು
ಬಿಟಿಎಂ ಬಡಾವಣೆ ಒಳರಸ್ತೆಗಳು
ಜೆ.ಪಿ.ನಗರ ಮತ್ತು ಜಯನಗರದ ಒಳರಸ್ತೆಗಳು
ಮೈಕೋ ಲೇಔಟ್ ಜಂಕ್ಷನ್‌ಗಳು
ಹುಳಿಮಾವು ಜಂಕ್ಷನ್‌ಗಳು
ಡೇರಿ ವೃತ್ತ
ಜಯದೇವ ಆಸ್ಪತ್ರೆ ಮತ್ತು ಐಐಎಂಬಿ ಮುಂಭಾಗದ ರಸ್ತೆಗಳು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!