ಉಡುಪಿ
Bangalore Kambala : ಸಿಲಿಕಾನ್ ಸಿಟಿಯಲ್ಲಿ ನಡೆಯುವ ಕಂಬಳದಲ್ಲಿ ಗೆಲ್ಲುವ ಕೋಣಗಳಿಗೆ ಸಿಗಲಿದೆ ಭರ್ಜರಿ ಬಹುಮಾನ – ಇಲ್ಲಿದೆ ಬಹುಮಾನದ ವಿವರ
ಇದೇ ಮೊದಲ ಬಾರಿಗೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್ 25 ಮತ್ತು 26 ರಂದು ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಶೀರ್ಷಿಕೆಯಡಿ ಕಂಬಳವನ್ನು ಆಯೋಜಿಸಲಾಗಿದೆ.
.25ರಂದು ಬೆಳಗ್ಗೆ 10.30ಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಕಂಬಳ ಉದ್ಘಾಟಿಸಲಿದ್ದಾರೆ. ಕಂಬಳ ಮಹೋತ್ಸವದಲ್ಲಿ ಗೆಲ್ಲುವ ಕೋಣಗಳಿಗೆ ಭಾರೀ ಮೊತ್ತದ ನಗದು ಹಾಗೂ ಚಿನ್ನವನ್ನು ನೀಡಲಾಗುತ್ತದೆ.
ಕಂಬಳ ವಿಜೇತರ ಬಹುಮಾನ ವಿವರ ಹೀಗಿದೆ: ಬೆಂಗಳೂರು ಕಂಬಳದಲ್ಲಿ ವಿಜೇತರಾಗುವ ಕೋಣದ ಮಾಲೀಕರಿಗೆ 1 ಲಕ್ಷ ರೂ. ನಗದು, 16 ಗ್ರಾಂ ಸ್ವರ್ಣ ಕೊಡಲಾಗುತ್ತದೆ. ದ್ವಿತೀಯ ಸ್ಥಾನ ಗಳಿಸಿದವರಿಗೆ 50,000 ರೂ. ಜತೆಗೆ 8 ಗ್ರಾಂ ಚಿನ್ನ ಮತ್ತು ತೃತೀಯ ಸ್ಥಾನ ಪಡೆದವರಿಗೆ 25,000 ರೂ. ನಗದು ಹಾಗೂ 4 ಗ್ರಾಂ ಬಂಗಾರದ ಪದಕವನ್ನು ಬಹುಮಾನವಾಗಿ ನೀಡಲಾಗುತ್ತದೆ.
ಬೆಂಗಳೂರು ಕರಾವಳಿ ಕರ್ನಾಟಕದ 18 ಲಕ್ಷ ಜನರಿಗೆ ನೆಲೆಯಾಗಿದೆ. ಅವರಲ್ಲಿ ಸುಮಾರು ಎಂಟು ಲಕ್ಷ ಜನರು ಎರಡು ದಿನಗಳ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಗಳಿವೆ. ಕಂಬಳದ ವೇಳೆ ಆಹಾರ, ಕಲಾಕೃತಿಗಳು ಮತ್ತು ಇತರ ವಸ್ತುಗಳ 150 ಕ್ಕೂ ಹೆಚ್ಚು ಮಳಿಗೆಗಳನ್ನು ಹಾಕಲಾಗುತ್ತದೆ.
ಆರು ವಿಭಾಗಗಳಲ್ಲಿ ನಡೆಯಲಿದೆ ಬೆಂಗಳೂರು ಕಂಬಳ: ಕನೆಹಲಗೆ, ಅಡ್ಡಹಲಗೆ, ನೇಗಿಲು ಹಿರಿಯ ಮತ್ತು ಕಿರಿಯ ಜೊತೆಗೆ ಹಗ್ಗ ಹಿರಿಯ ಮತ್ತು ಕಿರಿಯ ಎಂಬ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ.

ಕಂಬಳಕ್ಕೆ ಸಾರ್ವಜನಿಕರಿಗೆ ಫ್ರೀ:ಹೌದು ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಇದೆ. ಯಾವುದೇ ಟಿಕೆಟ್ ಆಗಲಿ ಪಡೆದುಕೊಳ್ಳಲುವ ಅವಕಾಶ ಇಲ್ಲ. ಸಾರ್ವಜನಿಕರಿಗೆ ಪಾಸ್ ತೋರಿಸುವ ಅಗತ್ಯವೂ ಇಲ್ಲ. ಬದಲಾಗಿ ವಿಐಪಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು 24 ಎಕರೆ ಪ್ರದೇಶದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ವೀಕ್ಷಕರಿಗೆ ನೋಡಲು ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. 6 ರಿಂದ 7 ಸಾವಿರ ಜನರು ಇದರಲ್ಲಿ ಕುಳಿತುಕೊಂಡು ಕಂಬಳ ನೋಡಬಹುದು
ನ. 24 ರಂದು ಶುಕ್ರವಾರ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ. ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪರಮೇಶ್ವರ್, ಬಸವರಾಜ್ ಬೊಮ್ಮಯಿ, ಶೋಭಾ ಕರಂದ್ಲಾಜೆ ಸೇರಿದಂತೆ ಎಲ್ಲ ಶಾಸಕರು, ಸಚಿವರುಗಳು ಬರಲಿದ್ದಾರೆ. ಸರ್ಕಾರದಿಂದ ಒಂದು ಕೋಟಿ ಅನುದಾನ ಕೊಟ್ಟಿದ್ದಾರೆ. ಆದರೆ 7 ರಿಂದ 8 ಕೋಟಿ ಖರ್ಚಾಗುತ್ತಿದೆ. ಉಳಿದ ಹಣವನ್ನ ಸಂಘ- ಸಂಸ್ಥೆಗಳಿಂದ ಸಂಗ್ರಹಿಸಲಾಗಿದೆ.

ಕಂಬಳಕ್ಕೆ ತಾರಾ ಮೆರಗು: ಮಂಗಳೂರಿನ 80 % ರಷ್ಟು ಸಿನಿಮಾ ನಟಿ – ನಟಿಯರು ಕಂಬಳಕ್ಕೆ ಬರಲಿದ್ದಾರೆ. ಅನುಷ್ಕ ಶೆಟ್ಟಿ ಬರ್ತಾರೆ. ಶಿವಣ್ಣ, ಸುದೀಪ್, ಉಪೇಂದ್ರ, ಅಶ್ವಿನಿ ಪುನೀತ್ ರಾಜ್ ಕುಮಾರ್ ಬರ್ತಾರೆ.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್ಐ ಸುಳ್ಳು ವಿವರಗಳೊಂದಿಗೆ ಎಫ್ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
-
ಸ್ಥಳೀಯ12 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್12 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಬಿಗ್ ನ್ಯೂಸ್7 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಶಿಕ್ಷಣ5 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು6 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಕಾರ್ಯಕ್ರಮಗಳು7 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ6 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ14 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ















