ರಾಷ್ಟ್ರೀಯ
Rescue operation:ಉತ್ತರಾಖಂಡ ರಾಜ್ಯದ ಸಿಲ್ಕ್ಯಾರ್ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರು – NDRF ತಂಡ ಅವರನ್ನು ಹೊರ ತೆಗೆಯುವ ಪ್ರಾತ್ಯಕ್ಷಿಕೆ
ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯಲ್ಲಿ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ ಕಳೆದ 13 ದಿನಗಳಿಂದ ನಡೆಯುತ್ತಿದ್ದು ಸಿಲುಕಿರುವ 41 ಕಾರ್ಮಿಕರನ್ನು ದೊಡ್ಡ ಪೈಪ್ ಮೂಲಕ ಹಗ್ಗ ಕಟ್ಟಿದ ಗಾಲಿ ಸ್ಟ್ರೆಚರ್ ನೆರವಿನಿಂದ ಕೆಲವೇ ಕ್ಷಣಗಳಲ್ಲಿ ಸುರಂಗದಿಂದ ಹೊರ ಕರೆತರಲಾಗುತ್ತದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ಡಿಆರ್ಎಫ್)ದ ಅಧಿಕಾರಿಗಳು ತಿಳಿಸಿದ್ದಾರೆ.
ಇದೀಗ ಎನ್ಡಿಆರ್ಎಫ್ ಬಿಡುಗಡೆ ಮಾಡಿರುವ ವಿಡಿಯೋವೊಂದರಲ್ಲಿ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಒಬ್ಬೊಬ್ಬರಾಗಿ ಯಾವ ರೀತಿ ಹೊರ ತೆಗೆಯಲಾಗುತ್ತದೆ ಎಂಬುದನ್ನು ಪ್ರದರ್ಶಿಸಲಾಗಿದೆ. ಸ್ವತಃ ರಕ್ಷಣಾ ಕಾರ್ಯಕರ್ತರು ಪೈಪ್ ಒಳಗೆ ಹೋಗಿ ಗಾಲಿ ಸ್ಟ್ರೆಚರ್ನಲ್ಲಿ ಹೊರಗಡೆ ಬರುವ ದೃಶ್ಯವಿದೆ.
ಸುರಂಗದ ಒಳಗೆ ಕುಸಿದಿರುವ ಅವಶೇಷಗಳನ್ನು ಕೊರೆದು ಅಳವಡಿಸಲಾಗಿರುವ ಬೃಹತ್ ಪೈಪ್ ಮೂಲಕ ಸ್ಟ್ರೆಚರ್ ಅನ್ನು ಕಳುಹಿಸಿ ಪ್ರತಿಯೊಬ್ಬ ಕಾರ್ಮಿಕರನ್ನು ಅದರ ಮೇಲೆ ಮಲಗಿಸಿ ಹಗ್ಗದ ಸಹಾಯದಿಂದ ಸ್ಟ್ರೆಚರ್ ಅನ್ನು ಹೊರಗೆಳೆಯಲಾಗುವುದು.
ಪೈಪ್ಗಳನ್ನು ವೆಲ್ಡಿಂಗ್ ಮಾಡಿರುವ ಕಾರಣ ಕಾರ್ಮಿಕರು ತೆವಳುವಾಗ ತರಚಿ ಗಾಯಗಳಾಗಬಹುದು ಎಂಬ ಕಾರಣಕ್ಕೆ ಗಾಲಿ ಸ್ಟ್ರೆಚರ್ ಸಹಾಯದಿಂದ ಹೊರಗೆ ತರಲು ಎನ್ಡಿಆರ್ಎಫ್ ಸಲಕ ಸಿದ್ಧತೆಯನ್ನು ಮಾಡಿಕೊಂಡಿದೆ.
ಕಾರ್ಮಿಕರಿಗೆ ಒಬ್ಬೊಬ್ಬರಾಗಿ ತೆವಳುವ ಆಯ್ಕೆಯನ್ನು ಸಹ ಪರಿಗಣಿಸಿದ್ದರೂ ಅವರ ಆರೋಗ್ಯ ಸ್ಥಿತಿಯು ಸ್ಟ್ರೆಚರ್ ಮೇಲೆ ಹೆಚ್ಚು ಅವಲಂಬನೆಯಾಗಿದೆ. ಏಕೆಂದರೆ, ಕಳೆದ 13 ದಿನಗಳಿಂದ ಯಾವುದೇ ನೈಸರ್ಗಿಕ ಬೆಳಕು ಮತ್ತು ಸಂಪೂರ್ಣ ಊಟವಿಲ್ಲದೆ ಸುರಂಗದ ಭಗ್ನಾವಶೇಷಗಳ ಅಡಿಯಲ್ಲಿ ಜೀವವನ್ನು ಕೈಯಲ್ಲಿ ಹಿಡಿದು ನಿತ್ರಾಣಗೊಂಡಿರುವ ಕಾರ್ಮಿಕರಿಗೆ ತೆವಳುವುದು ತುಂಬಾ ಕಷ್ಟವಾಗಬಹುದು. ಹೀಗಾಗಿ ಗಾಲಿ ಸ್ಟ್ರೆಚರ್ ರಕ್ಷಣಾ ಕಾರ್ಯಕರ್ತರ ಪ್ರಧಾನ ಆಯ್ಕೆಯಾಗಿದೆ.
ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯಲ್ಲಿರುವ ಸಿಲ್ಕ್ಯಾರ್ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಗಳು ಅಂತಿಮ ಘಟ್ಟಕ್ಕೆ ಬಂದಿದೆ. ಸುರಂಗದಲ್ಲಿ ಸಿಕ್ಕಿಬಿದ್ದ ಕಾರ್ಮಿಕರು ಮಂಗಳವಾರ ಮೊದಲ ಬಾರಿಗೆ ಹೊರ ಜಗತ್ತಿನ ಮಂದಿಗೆ ಕಾಣಿಸಿಕೊಂಡರು.
ಪೈಪ್ ಮೂಲಕ ಅಳವಡಿಸಲಾದ ಕ್ಯಾಮೆರಾ ಮೂಲಕ ಕಾರ್ಮಿಕರ ದೃಶ್ಯಗಳನ್ನು ಸೆರೆಹಿಡಿಯಲಾಯಿತು. ಬದುಕಿದ್ದಾರೋ? ಯಾವ ಸ್ಥಿತಿಯಲ್ಲಿದ್ದಾರೋ ಎಂಬ ಚಿಂತೆಯಲ್ಲಿದ್ದ ಮುಳುಗಿದ್ದ ಕಾರ್ಮಿಕರ ಕುಟುಂಬಕ್ಕೆ ಈ ಒಂದು ದೃಶ್ಯ ಹೊಸ ಭರವಸೆ ತಂದಿತು.
ಕಾರ್ಮಿಕರಿಗೂ ಕೂಡ ಹೊ ಬೆಳಕು ನೀಡಿತು.
13 ದಿನಗಳಿಂದ ಸುರಂಗದೊಳಗೆ ಸಿಲುಕಿ ಪರದಾಡುತ್ತಿರುವ 41 ಕಾರ್ಮಿಕರನ್ನು ಇಂದು ಹೊರತರುವ ನಿರೀಕ್ಷೆಯಿದೆ. ಅಂಬುಲೆನ್ಸ್‌ಗಳು, ವೈದ್ಯರ ತಂಡ ಅಗತ್ಯವಿರುವ ಎಲ್ಲಾ ವೈದ್ಯಕೀಯ ಉಪಕರಣಗಳೊಂದಿಗೆ ಸ್ಥಳದಲ್ಲಿ ಹಾಜರಿದ್ದಾರೆ. ಕಾರ್ಮಿಕರಿಗೆ ನೀರು, ಆಹಾರ ವಿತರಿಸಲು ಪೈಪ್ ಅನ್ನು ಅಳವಡಿಸಲಾಗಿದೆ.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ
Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!
ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.
ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.
-
Uncategorized16 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized18 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು21 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ20 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ22 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್21 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ21 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಬಿಗ್ ನ್ಯೂಸ್22 hours agoಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ


















