Connect with us

ಬಿಗ್ ನ್ಯೂಸ್

ನಾಗರಿಕರ ಜೀವ ರಕ್ಷಿಸಿ ಪ್ರಾಣತೆತ್ತ ಹುತಾತ್ಮ ಯೋಧ ಪ್ರಾಂಜಲ್ ಗೆ ಸಿಎಂ ಅಂತಿಮ ನಮನ – 50 ಲಕ್ಷ ಪರಿಹಾರ ಘೋಷಣೆ : ಮಂಗಳೂರಿನಲ್ಲಿ ಓದಿದ ಹುತಾತ್ಮರ ಮೃತದೇಹ ಹೆತ್ತವರ ಊರಿಗೆ

Published

on



Ad Widget

Ad Widget

Ad Widget

Ad Widget

ನವೆಂಬರ್ 22 ರಂದು ಕಾಶ್ಮೀರದ ರಜೌರಿಯ ಕಾವಿಕೋಟ್ ಎಂಬಲ್ಲಿ ಇಬ್ಬರು ಉಗ್ರರು ಅಡಗಿದ್ದರು.
ಕ್ಯಾಪ್ಟನ್ ಪ್ರಾಂಜಲ್ ಅವರು ತಮ್ಮ ತಂಡದೊಂದಿಗೆ ಕಾರ್ಯಾಚರಣೆ ನಡೆಸಿದ್ದರು. ನಾಗರಿಕರ ಜೊತೆ ಸಮಾಲೋಚನೆ ನಡೆಸುತ್ತಿರುವ ಸಂದರ್ಭದಲ್ಲಿ ಉಗ್ರರಿಂದ ತೀವ್ರವಾದ ದಾಳಿ ನಡೆಯಿತು. ಈ ಗುಂಡಿನ ದಾಳಿಯಲ್ಲಿ ಪ್ರಾಂಜಲ್ ಅವರು ನಾಗರಿಕರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದರು.

Ad Widget

Ad Widget

Ad Widget

Ad Widget

ಉಗ್ರರೊಂದಿಗೆ ಈ ವೇಳೆ ಗುಂಡಿನ ಚಕಮಕಿ ನಡೆಯಿತು. ಈ ದಾಳಿಯಲ್ಲಿ ಪ್ರಾಂಜಲ್ ಅವರು ತೀವ್ರವಾಗಿ ಗಾಯಗೊಂಡು ಹುತಾತ್ಮರಾದರು. ಆದರೆ ಪ್ರಾಂಜಲ್ ಅವರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ನಾಗರಿಕರನ್ನು ರಕ್ಷಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಕುಟುಂಬದ ದುಃಖದಲ್ಲಿ ಭಾಗಿಯಾಗುತ್ತೇನೆ. ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ 50 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ಘೋಷಿಸುತ್ತೇನೆ ಎಂದು ಸಿಎಂ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಮೃತದೇಹಕ್ಕೆ ಅಂತಿಮ ನಮನ ಸಲ್ಲಿಸಿ ಹೇಳಿದರು.

Ad Widget

Ad Widget <> Ad Widget

ಯೋಧ ಪ್ರಾಂಜಲ್ ಅವರ ಕುಟುಂಬದವರು ಆನೇಕಲ್ ತಾಲ್ಲೂಕಿನವರಾಗಿದ್ದು, ಅಲ್ಲಿ ಅಂತಿಮ ಸಂಸ್ಕಾರದ ವ್ಯವಸ್ಥೆ ಮಾಡಲಾಗಿದೆ ಎಂದರು.



Ad Widget

ಮಂಗಳೂರಿನ MRPL ದಿಲ್ಲಿ ಪಬ್ಲಿಕ್ ಸ್ಕೂಲ್ ನಲ್ಲಿ ಓದು ಪೂರೈಸಿ ನಂತರ ಸೇನೆಗೆ ಸೇರ್ಪಡೆಯಾದರು. ಹುತಾತ್ಮರಾದ ಪ್ರಾಂಜಲ್ MRPL ನಿವೃತ್ತ ಎಂಡಿ ವೆಂಕಟೇಶ್ ರವರ ಏಕೈಕ ಪುತ್ರರಾಗಿದ್ದರೆ.

Click to comment

Leave a Reply

ಬಿಗ್ ನ್ಯೂಸ್

Green card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ.

Ad Widget

Ad Widget

Ad Widget

Ad Widget

ವಾಷಿಂಗ್ಟನ್: ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ. ಈ ಕ್ರಮವು ಸಂಬಂಧಿತ ಕಂಪನಿಗಳ ಮೂಲಕ ಉದ್ಯೋಗ ಆಧಾರಿತ ಗ್ರೀನ್ ಕಾರ್ಡ್ ಪಡೆಯಲು ಕಾಯುತ್ತಿರುವ ವಿದೇಶಿ ಉದ್ಯೋಗಿಗಳ ಮೇಲೆ ಪರಿಣಾಮ ಬೀರಬಹುದಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಮೆರಿಕದ ಕಾರ್ಮಿಕ ಸಚಿವ ಕೀತ್ ಸೋಂಡರ್ಲಿಂಗ್ ಹಾಗೂ ಉಪಾಧ್ಯಕ್ಷ ಜೆ.ಡಿ. ವಾನ್ಸ್ ಈ ಕುರಿತು ಘೋಷಣೆ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಗ್ನಿಜೆಂಟ್, ಇನ್ಫೋಸಿಸ್, ಟಾಟಾ, ವಿಪ್ರೋ, ಎಚ್‌ಸಿಎಲ್, ಕ್ಯಾಪ್‌ಜೆಮಿನಿ, ಮೈಕ್ರೋಸಾಫ್ಟ್ ಮತ್ತು ಅಡೋಬ್ ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ.

Ad Widget

Ad Widget <> Ad Widget

ಈ ಕಂಪನಿಗಳಿಗೆ ಸಂಬಂಧಿಸಿದ ಹೊಸ ಅರ್ಜಿಗಳು ಹಾಗೂ ಬಾಕಿ ಉಳಿದಿರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಅಥವಾ ಪ್ರಕ್ರಿಯೆಗೊಳಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.



Ad Widget

ಸೋಂಡರ್ಲಿಂಗ್ ಅವರ ಹೇಳಿಕೆಯ ಪ್ರಕಾರ, 2009ರಿಂದ ಈ ಕಂಪನಿಗಳು ಸುಮಾರು 30 ಲಕ್ಷ ವಿದೇಶಿ ಉದ್ಯೋಗಿಗಳಿಗಾಗಿ ಮನವಿ ಸಲ್ಲಿಸಿವೆ. ಈ ಪೈಕಿ 2.3 ಲಕ್ಷಕ್ಕೂ ಹೆಚ್ಚು ಎಚ್‌-1ಬಿ ವೀಸಾ ಅನುಮೋದನೆಗಳು ಹಾಗೂ ಒಂದು ಲಕ್ಷಕ್ಕೂ ಹೆಚ್ಚು ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳನ್ನು ಪಡೆದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Continue Reading

ಸಿನೆಮಾ

Nana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget

Ad Widget

Ad Widget

ಪಣಜಿ: ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಡೋನಾ ಪೌಲಾದ ಓಷನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಿಂದ ಬಾಂಬೋಲಿಮ್‌ನ ಮಣಿಪಾಲ್ ಆಸ್ಪತ್ರೆಗೆ ಕರೆತರುವಷ್ಟರಲ್ಲಿ 75 ವರ್ಷದ ನಾನಾ ಪಾಟೇಕರ್ ಮೃತಪಟ್ಟಿದ್ದರು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.

Ad Widget

Ad Widget <> Ad Widget

ತನಿಖೆಯ ಭಾಗವಾಗಿ ನಟನ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಗೋವಾ ಮೆಡಿಕಲ್ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದ್ದು, ಸಾವಿಗೆ ಕಾರಣವಾದ ಸಂದರ್ಭಗಳ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕುಟುಂಬಸ್ಥರು ಹಾಗೂ ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆಯೂ ನಡೆದಿದೆ.



Ad Widget

ನಾನಾ ಪಾಟೇಕರ್ ಅವರ ಸಾವಿಗೆ ಹೃದಯಾಘಾತ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆದರೆ, ಸಾವಿನ ನಿಖರ ಕಾರಣ ಮತ್ತು ಸಂದರ್ಭಗಳ ಕುರಿತು ತನಿಖೆ ಮುಂದುವರಿದಿದೆ. ಅಸಹಜ ಸಾವು ಪ್ರಕರಣ ದಾಖಲಿಸಿರುವುದು ಮಾತ್ರವೇ ಸಾವಿನಲ್ಲಿ ಅಪರಾಧ ಅಥವಾ ಸಂಶಯಾಸ್ಪದ ಕೃತ್ಯ ನಡೆದಿದೆ ಎಂಬುದನ್ನು ಸೂಚಿಸುವುದಿಲ್ಲ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

Continue Reading

ಸ್ಥಳೀಯ

Beltangadi-ಬೆಳ್ತಂಗಡಿ: ಆನೆಗಳ ಸಂಚಾರ ಹೆಚ್ಚಳ ಹಿನ್ನೆಲೆ; ದಿಡುಪೆ ಫಾಲ್ಸ್ ವೀಕ್ಷಣೆಗೆ ನಿರ್ಬಂಧ

Published

on



Ad Widget

Ad Widget

Ad Widget

Ad Widget

ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್ ಸುತ್ತಮುತ್ತ ಆನೆಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್ ಸುತ್ತಮುತ್ತ ಆನೆಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ನಿರ್ಬಂಧ ನಾಳೆಯಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶ ಹೊರಬೀಳುವವರೆಗೆ ಪ್ರವಾಸಿಗರಿಗೆ ದಿಡುಪೆ ಫಾಲ್ಸ್ ವೀಕ್ಷಣೆಗೆ ಅವಕಾಶ ಇರುವುದಿಲ್ಲ ಎಂದು ವನ್ಯಜೀವಿ ವಲಯದ ಅರಣ್ಯಾಧಿಕಾರಿ ಶರ್ಮಿಷ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget

Ad Widget <> Ad Widget

ಆನೆಗಳ ಸಂಚಾರ ಹೆಚ್ಚಾಗಿರುವುದರಿಂದ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading