ಕ್ರೈಂ
Car accident: ರಾಮನಗರದಲ್ಲಿ ಹೊತ್ತಿ ಉರಿದ ಕಾರು.. ದಂಪತಿ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ನಾಲ್ವರು ಕದೀಮರು .
ರಾಮನಗರ ತಾಲೂಕಿನ ದೊಡ್ಡ ಗಂಗವಾಡಿ ಗ್ರಾಮದಲ್ಲಿ ನಿನ್ನೆ ರಾತ್ರಿ ಕಾರು ಅಪಘಾತಗೊಂಡು ಹೊತ್ತಿ ಉರಿದ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ,ಮನೆ ಖಾಲಿ ಮಾಡಿ ಇನ್ನೊಂದು ಮನೆಗೆ ತೆರಳುತ್ತಿದ್ದ ದಂಪತಿ ಮೇಲೆ ನಾಲ್ವರ ಗ್ಯಾಂಗ್ ಹಲ್ಲೆ ಮಾಡಿ 35 ಗ್ರಾಂ ಬಂಗಾರದ ಮಾಂಗಲ್ಯ ಸರ, ಮನೆ ಖಾಲಿ ಮಾಡಿದ ಅಡ್ವನ್ಸ್ ಹಣ 4 ಲಕ್ಷ ರೂ. ದರೋಡೆ ಮಾಡಿದ್ದಾರೆ. ಮೂವರನ್ನು ಬಂಧಿಸಿದ್ದು, ಇನ್ನೊಬ್ಬನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಮನೆ ಖಾಲಿ ಮಾಡಿ ಇನ್ನೊಂದು ಮನೆಗೆ ದಂಪತಿ ತೆರಳುತ್ತಿದ್ದರು. ರಾಮನಗರದ ಮಂಜುನಾಥ ನಗರದಿಂದ ದೊಡ್ಡ ಹೊಂಬೇಗೌಡ ಗ್ರಾಮಕ್ಕೆ ಮನೆ ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಮನೆ ಸಾಮಾಗ್ರಿಗಳ ಜೊತೆ ಹಿಂದೆ ಕಾರಿನಲ್ಲಿ ದಂಪತಿ ಹೊರಟಿದ್ದರು.
ರವಿಕುಮಾರ್, ಪತ್ನಿ ಪ್ರಮೀಳಾ, ಅತ್ತೆ ಲಕ್ಷ್ಮಮ್ಮ ಕಾರಿನಲ್ಲಿ ತೆರಳುತ್ತಿದ್ದು, ಮೊದಲಿಗೆ ಸಾಮಾನುಗಳಿದ್ದ ಟೆಂಪೋಗೆ ಕಾರನ್ನು ಗ್ಯಾಂಗ್ ಅಡ್ಡಗಟ್ಟಿದೆ. ವರ್ಣಾ ಕಾರಿನಿಂದ ಇಳಿದು ಬಂದು 4 ಜನರಿಂದ ಟೆಂಪೋ ಚಾಲಕನಿಗೆ ಥಳಿಸಿದ್ದಾರೆ. ಹಲ್ಲೆ ತಡೆಯಲು ಬಂದ ರವಿಕುಮಾರ್ ಗೂ ರಾಡಿನಿಂದ ಹಲ್ಲೆ ಮಾಡಲಾಗಿದೆ. ಪತಿಯನ್ನು ಬಿಡಿಸಲು ಬಂದ ಪತ್ನಿ ಪ್ರಮಿಳಾ ಮೇಲೆಯೂ ಹಲ್ಲೆ ಮಾಡಿದ್ದಾರೆ. ಪ್ರಮೀಲಾಗೆ ಕಾಲಿನಿಂದ ಹೊಟ್ಟೆಗೆ ಒದ್ದಿದ್ದಾರೆ.
ಪ್ರಮೀಳಾರನ್ನು ಕೆಳಗೆ ಬೀಳಿಸಿ 35 ಗ್ರಾಂ ಬಂಗಾರದ ಮಾಂಗಲ್ಯ ಸರ ಕಿತ್ತುಕೊಂಡಿದ್ದಾರೆ. ಇಬ್ಬರು ಚಾಲಕರನ್ನು ವಯರ್ನಿಂದ ಕುತ್ತಿಗೆಗೆ ಬಿಗಿದು ದರದರನೆ ಎಳೆದು ಹಾಕಿದ್ದಾರೆ. ಚೀರಾಟ ಕೇಳಿ ಸ್ಥಳಿಯರು ಆಗಮಿಸುತ್ತಿದ್ದಂತೆ ನಾಲ್ವರು ಪರಾರಿಯಾಗಿದ್ದಾರೆ. ಅಪಘಾತ ಆಗಿರಬಹುದೆಂದು ನಾಲ್ವರ ರಕ್ಷಣೆಗೆ ಗ್ರಾಮಸ್ಥರು ಧಾವಿಸಿದ್ದಾರೆ. ನಂತರ ಹಿಂಬಾಲಿಸಿಕೊಂಡ ಬಂದ ಹಲ್ಲೆಗೊಳಗಾದ ಟೆಂಪೋ ಡ್ರೈವರ್ ಅಜರ್ ಪಾಷಾ, ದಂಪತಿ ದರೋಡೆ ಮಾಡಿರುವ ಸಂಗತಿ ಸ್ಥಳೀಯರಿಗೆ ತಿಳಿಸಿದ್ದಾರೆ. ದರೋಡೆ ಸುದ್ದಿ ಕೇಳಿ ಗ್ರಾಮಸ್ಥರು ಸಿಟ್ಟಾಗಿದ್ದು, ಅಪಘಾತ ಮಾಡಿ ಏನೂ ಗೊತ್ತಿಲ್ಲದವರಂತ್ತಿದ್ದ ದರೋಡೆ ಕೋರರಿಗೆ ಥಳಿಸಿದ್ದಾರೆ. ಬಳಿಕ ಇಬ್ಬರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ.
ಹಲೆಗೊಳಗಾದವರನ್ನು ರಾಮನಗರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಒಟ್ಟು ಮೂವರನ್ನು ಹಿಡಿದಿರೋ ರಾಮನಗರ ಗ್ರಾಮಾಂತರ ಪೊಲೀಸರು ಇನ್ನೊಬ್ಬನಿಗಾಗಿ ಹುಡುಕಾಟ ನಡೆಸಿದ್ದಾರೆ. ಘಟನೆಯಿಂದಾಗಿ ದಂಪತಿ ರವಿಕುಮಾರ್ ಮತ್ತು ಪತ್ನಿ ಪ್ರಮೀಳಾ ಶಾಕ್ನಲ್ಲಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ತಾವರಕೆರೆಯಲ್ಲಿ ಮರದ ವ್ಯಾಪಾರಿಯಾಗಿರುವ ಲೋಹಿತ್ ತಮ್ಮ ಕಾರು ತೆಗದುಕೊಂಡು ದೊಡ್ಡಗಂಗವಾಡಿಯ ಸಂಜು ಜೊತೆ ವ್ಯವಹಾರಕ್ಕೆ ಬಂದಿದ್ದಾರೆ. ಮರದ ವ್ಯಾಪಾರಕ್ಕೆ ಲೋಹಿತ್ನನ್ನು ದೊಡ್ಡಗಂಗವಾಡಿ ನಿವಾಸಿ ಸಂಜು ಕರೆಸಿದ್ದಾನೆ. ಇದೇ ವೇಳೆ ಬೆಂಗಳೂರಿನಿಂದ ಪಾರ್ಟಿ ಮಾಡಲು ಬಂದಿದ್ದ ಸಂಜು ಫ್ರಂಡ್ಸ್ಗೆ ನಿನ್ನ ಕಾರು ಕೊಡು ಎಂದಿದ್ದ ಸಂಜು, ಕಾರು ತೆಗೆದುಕೊಂಡ ಹೋದ ಸಂಜು ಸ್ನೇಹಿತರಿಂದ ದಂಪತಿಗಳ ಮೇಲೆ ಹಲ್ಲೆ ದರೋಡೆ ಮಾಡಿದ್ದಾರೆ. ಲೋಹಿತ್ ಹಾಗೂ ಸಂಜು ನನ್ನ ಗ್ರಾಮಸ್ಥರು ಥಳಿಸಿದ್ದು, ಇಬ್ಬರನ್ನು ಹಿಡಿದು ತಂದು ಠಾಣೆಗೆ ಒಪ್ಪಿಸಿದ್ದಾರೆ.
ಕ್ರೈಂ
Murder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
ಸಹೋದರನ ಮಗಳೇ ಚಿಕ್ಕಪ್ಪನನ್ನು ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಚೆನ್ನಯ್ಯ ಪೂಜಾರಿ (52) ಮೃತಪಟ್ಟಿದ್ದಾರೆ. ಅವರ ಸಹೋದರ ಕೋಟಿ ಪೂಜಾರಿಯವರ ಪುತ್ರಿ ಕೃತ್ತಿಕಾ (26) ಕೊಲೆ ಆರೋಪಿತೆಯಾಗಿದ್ದಾರೆ.
ಪುತ್ತೂರು: ಸಹೋದರನ ಮಗಳೇ ಚಿಕ್ಕಪ್ಪನನ್ನು ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದಲ್ಲಿ ನಡೆದಿದೆ.
ಕನ್ಯಾನ ಗ್ರಾಮದ ಶಿರಂಕಲ್ಲು ನಂದರಬೆಟ್ಟು ಎಂಬಲ್ಲಿ ನ.24ರ ರಾತ್ರಿ ನಡೆದ ಘಟನೆಯಲ್ಲಿ ಚೆನ್ನಯ್ಯ ಪೂಜಾರಿ (52) ಮೃತಪಟ್ಟಿದ್ದಾರೆ. ಅವರ ಸಹೋದರ ಕೋಟಿ ಪೂಜಾರಿಯವರ ಪುತ್ರಿ ಕೃತ್ತಿಕಾ (26) ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ವಿವರ
ಶಿರಂಕಲ್ಲು ನಂದರಬೆಟ್ಟು ದಾಸರಕೋಡಿ ಎಂಬಲ್ಲಿ ಕೋಟಿ ಪೂಜಾರಿ ಹಾಗೂ ಚೆನ್ನಯ್ಯ ಪೂಜಾರಿ ಎಂಬ ಅವಳಿ ಸಹೋದರರು ವಾಸವಾಗಿದ್ದರು. ಕೋಟಿ ಪೂಜಾರಿಯವರ ವಿವಾಹಿತ ಪುತ್ರಿ ಕೃತ್ತಿಕಾ ಇತ್ತೀಚೆಗೆ ತವರು ಮನೆಗೆ ಬಂದಿದ್ದರು.
ನ.24ರಂದು ರಾತ್ರಿ ಸುಮಾರು 7 ಗಂಟೆಯ ವೇಳೆಗೆ ಚೆನ್ನಯ್ಯ ಪೂಜಾರಿ ಅವರು ಕೃತ್ತಿಕಾ ವಾಸವಿದ್ದ ಮನೆಯ ಬಳಿ ಗಲಾಟೆ ನಡೆಸಿದ್ದು, ಈ ವೇಳೆ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಮಾತಿನ ಚಕಮಕಿ ತೀವ್ರಗೊಂಡಾಗ ಆಕ್ರೋಶಗೊಂಡ ಕೃತ್ತಿಕಾ ಮನೆಯಲ್ಲಿದ್ದ ಹರಿತವಾದ ಕತ್ತಿಯಿಂದ ತನ್ನ ಚಿಕ್ಕಪ್ಪ ಚೆನ್ನಯ್ಯ ಪೂಜಾರಿ ಅವರ ಎದೆಗೆ ಬಲವಾಗಿ ಚುಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.
ಕತ್ತಿಯೇಟಿನಿಂದ ಎದೆಗೆ ಗಂಭೀರ ಗಾಯಗೊಂಡ ಚೆನ್ನಯ್ಯ ಪೂಜಾರಿ ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದ ಅವರನ್ನು ಸ್ಥಳೀಯರು ತಕ್ಷಣ ವಿಟ್ಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಆದರೆ, ಪುತ್ತೂರಿಗೆ ಕರೆತರುತ್ತಿದ್ದ ವೇಳೆ ತೀವ್ರ ರಕ್ತಸ್ರಾವದಿಂದ ಚೆನ್ನಯ್ಯ ಪೂಜಾರಿ ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ, ಉಪನಿರೀಕ್ಷಕರು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಕೃತ್ತಿಕಾಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಕ್ರೈಂ
Murder-7 ಮಂದಿಯ ಹತ್ಯೆ ಪ್ರಕರಣ: ಶವದ ಜೊತೆ ಖಾರದ ಪುಡಿ, ಒಣಮೆಣಸಿನಕಾಯಿ ತುಂಬಿಸುತ್ತಿದ್ದ ಹಂತಕ..!
ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ.
ಬೆಂಗಳೂರು: ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ.
ಏಳು ಮಂದಿಯನ್ನು ರುಬ್ಬುವ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಬಳಿಕ ಮೃತದೇಹಗಳ ಕೈ-ಕಾಲುಗಳನ್ನು ಹಗ್ಗದಿಂದ ಕಟ್ಟಿದ್ದ ಆರೋಪಿ, ಸೆಲೋ ಟೇಪ್ ಸುತ್ತಿ ಗೋಣಿ ಚೀಲ ಹಾಗೂ ಬೆಡ್ಶೀಟ್ಗಳಲ್ಲಿ ಪ್ಯಾಕ್ ಮಾಡಿದ್ದ ಎನ್ನಲಾಗಿದೆ. ಈ ವೇಳೆ ಮೃತದೇಹಗಳ ಮೇಲೆ ಖಾರದ ಪುಡಿ ಸಿಂಪಡಿಸಿ, ಒಣಮೆಣಸಿನಕಾಯಿಗಳನ್ನೂ ಹಾಕಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಿರಾಡಿಘಾಟ್ನಲ್ಲಿ ಪತ್ತೆಯಾದ ನಳಿನಿ ಮತ್ತು ಶಂಕರ್ ಅವರ ಮೃತದೇಹಗಳ ಪರಿಶೀಲನೆ ವೇಳೆ ಒಣಮೆಣಸಿನಕಾಯಿ ಹಾಗೂ ಖಾರದ ಪುಡಿ ಪತ್ತೆಯಾಗಿದೆ. ಪ್ರಾಣಿ, ಪಕ್ಷಿಗಳು ಮೃತದೇಹಗಳನ್ನು ಕಿತ್ತು ತಿನ್ನದಂತೆ ತಡೆಯಲು ಹಾಗೂ ಪೊಲೀಸ್ ಶ್ವಾನಗಳಿಗೆ ಮೃತದೇಹಗಳ ಸುಳಿವು ಸಿಗದಂತೆ ಮಾಡಲು ಆರೋಪಿ ಈ ತಂತ್ರ ಅನುಸರಿಸಿದ್ದ ಎನ್ನಲಾಗಿದೆ. ಇದರಿಂದ ಪೊಲೀಸರಿಗೆ ತನ್ನನ್ನು ಪತ್ತೆಹಚ್ಚಲು ಕಷ್ಟವಾಗಬಹುದು ಎಂದು ಆತ ಭಾವಿಸಿದ್ದ ಎಂದು ಮೂಲಗಳು ತಿಳಿಸಿವೆ.
ಮಗಳಿಗೆ 10 ದಿನಗಳ ಪೊಲೀಸ್ ವಶ
ಸರಣಿ ಹತ್ಯೆ ಪ್ರಕರಣದಲ್ಲಿ ತಂದೆಗೆ ಸಹಕರಿಸಿದ ಆರೋಪ ಎದುರಿಸುತ್ತಿರುವ ಮಗಳನ್ನು ಬಾಲ ನ್ಯಾಯಮಂಡಳಿಗೆ ಹಾಜರುಪಡಿಸಿದ ಪೊಲೀಸರು, 10 ದಿನಗಳ ವಶಕ್ಕೆ ಪಡೆದು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ.
ಇನ್ನೊಂದೆಡೆ ಪೊಲೀಸ್ ವಶದಲ್ಲಿರುವ ಇಂದುಶೇಖರ್ನನ್ನು ತನಿಖಾಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪತ್ನಿಯ ಕಿರುಕುಳದ ಆರೋಪದ ಜೊತೆಗೆ ಆಸ್ತಿ ವಿಚಾರಕ್ಕಾಗಿ ಹತ್ಯೆ ನಡೆಸಿರುವ ಸಾಧ್ಯತೆಯ ಆಯಾಮದಲ್ಲಿಯೂ ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.
ಮನೆಗೆ ಲುಮಿನಾಲ್ ಪರೀಕ್ಷೆ
ಹತ್ಯೆಯಾದವರ ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಮತ್ತೊಂದೆಡೆ, ಆರೋಪಿಯ ಮನೆಯಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಹಾಗೂ ಸುಕೋ ತಂಡಗಳು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನು ಸಂಗ್ರಹಿಸಿವೆ.
ಆರೋಪಿ ರುಬ್ಬುವ ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ ಬಳಿಕ ಮನೆಯ ಹಾಲ್, ಸ್ನಾನಗೃಹ ಹಾಗೂ ರುಬ್ಬುವ ಕಲ್ಲಿನ ಮೇಲಿದ್ದ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿದ್ದ ಎನ್ನಲಾಗಿದೆ. ಹೀಗಾಗಿ ಕಣ್ಣಿಗೆ ಕಾಣದ ರಕ್ತದ ಗುರುತುಗಳನ್ನು ಪತ್ತೆಹಚ್ಚಲು ತಜ್ಞರು ಮನೆಯಲ್ಲಿ ಲುಮಿನಾಲ್ ಪರೀಕ್ಷೆ ನಡೆಸಿದ್ದಾರೆ.
ಏನಿದು ಲುಮಿನಾಲ್ ಪರೀಕ್ಷೆ?
ಲುಮಿನಾಲ್ ಪರೀಕ್ಷೆಯು ಕಣ್ಣಿಗೆ ಕಾಣದ ರಕ್ತದ ಕಲೆಗಳನ್ನು ಪತ್ತೆಹಚ್ಚಲು ಬಳಸುವ ವೈಜ್ಞಾನಿಕ ವಿಧಾನವಾಗಿದೆ. ರಕ್ತವಿರುವ ಸ್ಥಳವನ್ನು ಸ್ವಚ್ಛಗೊಳಿಸಿದರೂ ರಕ್ತದಲ್ಲಿರುವ ಹಿಮೋಗ್ಲೋಬಿನ್ನ ಅಂಶಗಳು ಉಳಿದಿರಬಹುದು. ಅಂತಹ ಸ್ಥಳಗಳಿಗೆ ನಿರ್ದಿಷ್ಟ ರಾಸಾಯನಿಕ ದ್ರಾವಣವನ್ನು ಸಿಂಪಡಿಸಿದಾಗ ರಾಸಾಯನಿಕ ಪ್ರತಿಕ್ರಿಯೆಯಿಂದ ಬೆಳಕು ಕಾಣಿಸಿಕೊಳ್ಳುತ್ತದೆ. ಈ ಮೂಲಕ ಸ್ವಚ್ಛಗೊಳಿಸಲಾದ ಸ್ಥಳಗಳಲ್ಲಿಯೂ ರಕ್ತದ ಗುರುತುಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ.
ಲುಮಿನಾಲ್ ಪರೀಕ್ಷೆ ವೇಳೆ ಸಂಗ್ರಹಿಸಿದ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಎಫ್ಎಸ್ಎಲ್ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರೈಂ
Murder-ಬೆಂಗಳೂರು: ಕುಟುಂಬದವರ ಎದುರೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ
ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.
ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಗ್ಗೆ ಸುಮಾರು 10.30ರ ವೇಳೆಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಮೀಪ ಚರಣ್ ಗೌಡ ಅವರು ಕುಟುಂಬದವರೊಂದಿಗೆ ಬಂದಿದ್ದರು. ಈ ಸಂದರ್ಭದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಅವರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ದುಷ್ಕರ್ಮಿಗಳು ಕುಟುಂಬದವರ ಎದುರೇ ಚರಣ್ ಗೌಡ ಅವರ ಮೇಲೆ ಮನಬಂದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಆಯುಧಗಳ ಸಮೇತ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಹಳೆಯ ದ್ವೇಷದ ಶಂಕೆ
ಚರಣ್ ಗೌಡ ಅವರ ಹತ್ಯೆಗೆ ಹಳೆಯ ದ್ವೇಷವೇ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ರಿಯಲ್ ಎಸ್ಟೇಟ್ ಉದ್ಯಮಕ್ಕೆ ಸಂಬಂಧಿಸಿದಂತೆ ಅವರಿಗೆ ಕೆಲವರೊಂದಿಗೆ ವೈಷಮ್ಯವಿತ್ತು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.
-
ನಿಧನ ವಾರ್ತೆ11 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ10 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ10 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ10 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ11 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ಅಂತರ ರಾಜ್ಯ10 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಸ್ಥಳೀಯ10 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ
-
ಸ್ಥಳೀಯ4 hours agoRakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ















