ಶಿಕ್ಷಣ
celebrate girl child birth: ಹೆಣ್ಣು ಮಗುವಿನ ಜನನವನ್ನು ಸಂಭ್ರಮಿಸಬೇಕು – ಗಂಡು ಹೆಣ್ಣು ಮಕ್ಕಳ ಬಗ್ಗೆ ಸಮಾನ ಭಾವ ಬೆಳೆಸಬೇಕು : ಎಣ್ಮಕಜೆ ಗ್ರಾಪಂ ಅಧ್ಯಕ್ಷ ಸೋಮಶೇಖರ್ ಜೆ.ಎಸ್
ಹೆಣ್ಣು ಮಕ್ಕಳು ಜನಿಸಿದಾಗ ನಾವು ಖುಷಿಯಿಂದ ಸಂಭ್ರಮಿಸಬೇಕು.ಹೆಣ್ಣು ಮಕ್ಕಳ ಬಗ್ಗೆ ಒಂದೇ ರೀತಿಯ ಅಭಿಮಾನ ಹೊಂದಿರಬೇಕು. ಪುತ್ರಿಯ ಬಗ್ಗೆ ಹೆಮ್ಮೆಪಡಬೇಕು ಎಂದು ಎಣ್ಮಕಜೆ ಗ್ರಾಪಂ ಅಧ್ಯಕ್ಷ ಸೋಮಶೇಖರ್ ಜೆ.ಎಸ್. ಹೇಳಿದರು.

ಕೇಂದ್ರ ಸರಕಾರದ ಬೇಟಿ ಬಚಾವೋ, ಬೇಟಿ ಪಢಾವೋ (ಮಗಳನ್ನು ಉಳಿಸಿ, ಮಗಳಿಗೆ ಶಿಕ್ಷಣ ನೀಡಿ) ಅಭಿಯಾನದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾಸರಗೋಡು ನಿರ್ದೇಶನದಂತೆ ಐಸಿಡಿಎಸ್ ಮಂಜೇಶ್ವರ ಎಡಿಶನಲ್ ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಶಿಶು ಅಭಿವೃದ್ಧಿ ಇಲಾಖೆಯ ಅಡಿ ವಿವಿಧ ಶಾಲೆಗಳಲ್ಲಿ ಸೈಕೋ ಸಾಮಾಜಿಕ ಶಾಲಾ ಕೌನ್ಸಿಲರ್ ಅಭಿನೇತ್ರಿಗಳ ಭಾಗವಹಿಸುವಿಕೆಯ ಮೂಲಕ ಪೆರ್ಲ ಪೇಟೆಯಲ್ಲಿ ಶುಕ್ರವಾರ ನಡೆದ “ಚೂಟ್” (ದೀವಟಿಕೆ) ಮಲಯಾಳಂ ಬೀದಿ ನಾಟಕ ಉದ್ಘಾಟಿಸಿ ಮಾತನಾಡಿದರು.

ಪಿಸಿ ಮತ್ತು ಪಿಎನ್ ಡಿಟಿ ಕಾಯಿದೆಯ ಅನುಷ್ಠಾನ ಮತ್ತು ರಾಷ್ಟ್ರವ್ಯಾಪಿ ಜಾಗೃತಿ ಕಾರ್ಯಕ್ರಮಗಳ ಮೂಲಕ ಮೊದಲ ಹಂತದಲ್ಲಿ ದೇಶದ 100 ಜಿಲ್ಲೆಗಳಲ್ಲಿ ಅಭಿಯಾನವನ್ನು ಆರಂಭಿಸಲಾಗಿದೆ. ತರಬೇತಿ, ವಿಚಾರದ ಅರಿವು, ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ತಳಮಟ್ಟದಲ್ಲಿ ಸಮುದಾಯಗಳನ್ನು ಒಗ್ಗೂಡಿಸುವ ಮೂಲಕ ಜನರ ಮನಸ್ಸಿನಲ್ಲಿಯೇ ಬದಲಾವಣೆ ತರುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಗ್ರಾಪಂ ಉಪಾಧ್ಯಕ್ಷೆ ಡಾ.ಫಾತಿಮತ್ ಝಹನಾನ್ ಹಂಸಾರ್ ಮಾತನಾಡಿ, ಹೆಣ್ಣು ಮಕ್ಕಳ ಬಗೆಗಿನ ಸಮಾಜದ ದೃಷ್ಟಿಕೋನವನ್ನು ಬದಲಾಯಿಸುವ ಉದ್ದೇಶದಿಂದ ದೇಶವ್ಯಾಪಿ ಬೇಟಿ ಬಚಾವೋ, ಬೇಟಿ ಪಢಾವೋ ಅಭಿಯಾನ ಆಯೋಜಿಸಲಾಗುತ್ತಿದೆ. ಮಗ ಮತ್ತು ಮಗಳು ಸಮಾನರು ಎನ್ನುವುದು ನಮ್ಮ ಮೂಲ ಮಂತ್ರವಾಗಿರಬೇಕು. ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳು ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಹೆಚ್ಚಿನ ತರಬೇತಿ ನೀಡುವ ಉದ್ದೇಶದಿಂದ, ತರಬೇತುದಾರರಿಗೆ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಜಾಗೃತಿ ಅಭಿಯಾನಗಳಿಂದ ಲಿಂಗ ಆಧರಿತ ಗರ್ಭಪಾತಗಳ ಪರಿಣಾಮದ ಕುರಿತು ಜನರಲ್ಲಿ ಅರಿವು ಮೂಡತೊಡಗಿದೆ ಎಂದರು.

ಪಡ್ರೆ ವಾಣೀನಗರ ಸರಕಾರಿ ಹೈಯರ್ ಸೆಕೆಂಡರಿ ಶಾಲಾ ಕೌನ್ಸೆಲರ್ ಕೀರ್ತಿ ಬಿ.ಕೆ. ಜಾಗೃತಿ ತರಗತಿ ನೀಡಿ ಮಾತನಾಡಿ, ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಹೆಣ್ಣು ಮಗುವಿನ ರಕ್ಷಣೆ ಮತ್ತು ಶಿಕ್ಷಣಕ್ಕಾಗಿ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಗಂಡು ಹೆಣ್ಣೆಂಬ ಬೇಧ ಭಾವ ತೋರದೆ ಗಂಡು ಮಕ್ಕಳಿಗೆ ಕೊಡುವ ಎಲ್ಲಾ ಆದ್ಯತೆ ಸವಲತ್ತು, ಶಿಕ್ಷಣವನ್ನು ಹೆಣ್ಣು ಮಕ್ಕಳಿಗೂ ಒದಗಿಸಬೇಕು. ಹೆಣ್ಣುಮಕ್ಕಳೂ ಉದ್ಯೋಗ ಪಡೆದು ಪರರನ್ನು ಆಶ್ರಯಿಸದೆ ಸ್ವಂತ ಕಾಲಿನಲ್ಲಿ ನಿಲ್ಲುವಂತಾಗಬೇಕು ಎಂದರು.
ಎಣ್ಮಕಜೆ ಗ್ರಾಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಶ್ರೀ ಕುಲಾಲ್, ವಾರ್ಡ್ ಸದಸ್ಯೆ ಉಷಾ ಗಣೇಶ್, ಮಂಜೇಶ್ವರ ಎಡಿಶನಲ್ ಐಸಿಡಿಎಸ್ ಕೌನ್ಸೆಲರ್ ಸುಶ್ಮಾ ಸಿ.ಎಚ್., ಗೀತಾ ಮರಕ್ಕಿಣಿ ಉಪಸ್ಥಿತರಿದ್ದರು. ಮಂಜೇಶ್ವರ ಐಸಿಡಿ ಎಸ್ ಸೂಪರ್ ವೈಸರ್ ಪ್ರೇಮಲತ ಸ್ವಾಗತಿಸಿದರು. ವಾರ್ಡ್ ಸದಸ್ಯೆ ಕುಸುಮಾವತಿ ವಂದಿಸಿದರು.
ನಿರ್ಣಾಯಕವಾದ ಔಪಚಾರಿಕ ಶಿಕ್ಷಣದ ಅವಧಿಯಲ್ಲಿ ಮಕ್ಕಳು ಎದುರಿಸುತ್ತಿರುವ ಹಲವಾರು ಸವಾಲುಗಳಲ್ಲಿ ಕೌನ್ಸಿಲಿಂಗ್ ಮತ್ತು ಬೋಧನೆ ತರಗತಿಗಳು ನಡೆಸಿದ ಅನುಭವವಿರುವ ಜಿಲ್ಲಾ ಮಹಿಳಾ ಶಿಶು ಅಭಿವೃದ್ಧಿ ಇಲಾಖೆಯ ಅಡಿ ವಿವಿಧ ಶಾಲೆಗಳಲ್ಲಿ ಸೈಕೋ ಸಾಮಾಜಿಕ ಶಾಲಾ ಕೌನ್ಸಿಲರ್ ಗಳು ನಾಟಕದಲ್ಲಿ ಉತ್ತಮವಾಗಿ ಅಭಿನಯಿಸಿದರು. ಪೆರ್ಲ ಸತ್ಯನಾರಾಸತ್ಯನಾರಾಯಣ
ಪ್ರೌಢಶಾಲೆ ವಿದ್ಯಾರ್ಥಿಗಳು, ಸಾರ್ವಜನಿಕರು ಬೀದಿ ನಾಟಕದ ಸವಿಯುಂಡರು.
ಬಚಾವೋ, ಬೇಟಿ ಪಢಾವೋ ಅಭಿಯಾನದ ಭಾಗವಾಗಿ ಸಮುದಾಯಗಳನ್ನು ದೊಡ್ಡ ಮಟ್ಟದಲ್ಲಿ ತಲುಪಲು, ಯೋಜನೆಯ ಮಾಹಿತಿಯನ್ನು ಜನರಿಗೆ ತಿಳಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಗಳು, ಮತ್ತು ಸರಕಾರಿ ಇಲಾಖೆಗಳು ಸಾರ್ವಜನಿಕರನ್ನು ಬಳಸಿಕೊಂಡು ನಾನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಜನರಲ್ಲಿ ಹೆಚ್ಚಿನ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಬೀದಿ ನಾಟಕಗಳನ್ನೂ ಪ್ರದರ್ಶಿಸಲಾಗುತ್ತಿದೆ.ಹೆಣ್ಣು ಮಕ್ಕಳ ಸಮಸ್ಯೆಗಳು, ಜೀವನಪೂರ್ತಿ ಅವಳು ಅನುಭವಿಸಬೇಕಾದ ಕಷ್ಟಗಳ ಬಗ್ಗೆ ಬೀದಿ ನಾಟಕಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ. ಸಹಿ ಸಂಗ್ರಹ ಅಭಿಯಾನದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ತಲುಪಲು ಪ್ರಯತ್ನಿಸಲಾಗುತ್ತಿದೆ ಎಂದು
ಬೆಳ್ಳೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆ ಕೌನ್ಸೆಲರ್ ರ್ಪೂರ್ಣಿಮಾ ಎಂ ತಿಳಿಸಿದ್ದಾರೆ.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.
ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಮಾತಾಡಿದರು.

ಪುತ್ತೂರು: ಲೈಂಗಿಕ ಕಿರುಕುಳ ಎನ್ನುವುದು ಕೇವಲ ದೈಹಿಕ ಸ್ಪರ್ಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಆಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಮಾತುಗಳನ್ನಾಡುವುದು ಅಥವಾ ಅಂತಹ ಯಾವುದೇ ರೀತಿಯ ವರ್ತನೆಗಳೂ ಕೂಡಾ ಇದರಲ್ಲಿ ಸೇರಿವೆ ಎಂದು ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು.
ಇಂದಿನ ಪೀಳಿಗೆ, ಅವರ ಪೋಷಕರು, ಶಿಕ್ಷಕರ ನಡುವಿನ ವ್ಯತ್ಯಾಸ ಮತ್ತು ಜವಾಬ್ಧಾರಿಗಳ ಬಗ್ಗೆ ವಾಸ್ತವಿಕ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು ಯುವಜನತೆ ಪಾಲಿಸಬೇಕಾದ ಮತ್ತು ಪಾಲಿಸಬಾರದ ವಿಷಯಗಳ ಬಗ್ಗೆ ತಿಳಿಸಿದರು. ಒಬ್ಬರ ಸಾಮರ್ಥ್ಯವನ್ನು, ದೇಹದ ಆಕಾರವನ್ನು ಟೀಕಿಸುವುದು ಕೂಡಾ ಅಪರಾಧ. ಅಂತಹ ಸಂದರ್ಭದಲ್ಲಿ ಅದನ್ನು ಎದುರಿಸುವ, ಪ್ರತಿಕ್ರಿಯಿಸುವ ಬಗೆ ಮತ್ತು ದೂರು ಸಲ್ಲಿಸಬೇಕಾದ ಪ್ರಾಧಿಕಾರಗಳ ಬಗ್ಗೆ ತಿಳಿಸಿದರು. ನೀವು ಕೋಪಗೊಂಡಿದ್ದರೆ, ಅತಿಯಾದ ಉತ್ಸಾಹದಲ್ಲಿದ್ದರೆ ಅಥವಾ ಒತ್ತಡದಲ್ಲಿದ್ದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು 10 ನಿಮಿಷಗಳ ಕಾಲ ಮುಂದೂಡಿ. ಸಾಧ್ಯವಾದರೆ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲು ಒಂದು ರಾತ್ರಿ ಚೆನ್ನಾಗಿ ಯೋಚಿಸಿ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಕ್ಷ.ಎಸ್.ಆರ್ ಮಾತನಾಡಿ ಮೊದಲು ಆಲಿಸಿ ನಂತರ ಮಾತನಾಡಿ, ಕೆಲವೊಮ್ಮೆ ಅಲ್ಲಿ ಉಪಸ್ಥಿತರಿದ್ದು ಮೌನವಾಗಿ ಆಲಿಸುವುದರಿಂದ ಜೀವನದಲ್ಲಿ ಹೆಚ್ಚಿನ ಪ್ರಯೋಜನಗಳಾಗುತ್ತದೆ ಎಂದರು. ಒಬ್ಬ ಉತ್ತಮ ಇಂಜಿನಿಯರ್ ಆಗುವ ಜತೆಯಲ್ಲಿ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಎಂದು ನುಡಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಜೋತಿಮಣಿ.ಕೆ, ಡಾಟಾಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ಗೆ ಆಯ್ಕೆ
ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.
ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.
ಗುಜರಾತ್‌ನಲ್ಲಿ ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್ ನಡೆಯುತ್ತಿದ್ದು, ಈ ಕ್ಯಾಂಪ್‌ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ನವೆಂಬರ್ ೧ರಂದು ನಡೆಯುವ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗಣ್ಯ ವ್ಯಕ್ತಿಯಾಗಿ ಆಗಮಿಸಲಿದ್ದಾರೆ.
ಇವರಿಗೆ ಎನ್.ಸಿ.ಸಿ ಘಟಕದ ಮುಖ್ಯಸ್ಥ ಲೆ. ಭಾಮಿ ಅತುಲ್ ಶೆಣೈ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಎನ್.ಸಿ.ಸಿ ಘಟಕ, ಐಕ್ಯೂಎಸಿ ಘಟಕ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿ ವೃಂದ ಶುಭಾಶಯಗಳನ್ನು ಕೋರುತ್ತಾರೆ.
-
ಮಂಗಳೂರು10 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ14 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು16 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಸ್ಥಳೀಯ14 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
Uncategorized7 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ9 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ರಾಜಕೀಯ16 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ
-
ಉದ್ಯೋಗ10 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening


















