Uncategorized
Robbery at Puttur: ಪುತ್ತೂರಿನಲ್ಲಿ ಮತ್ತೆ ತಲ್ವಾರು ಠೇಂಕಾರ – ತಲ್ವಾರಿನಿಂದ ಕಡಿದು ಎಡಪತ್ಯ ಫಾರ್ಮ್ಸ್ ನಿಂದ ಅಡಿಕೆ ದೋಚಿದ ದರೋಡೆಕೋರರು
ಪುತ್ತೂರು: ವಾಹನದಲ್ಲಿ ಆಗಮಿಸಿದ ಕಳ್ಳರ ಗ್ಯಾಂಗೊಂದು ಸವಣೂರಿನ ಫಾರ್ಮ್ಸ್ ವೊಂದರಲ್ಲಿ ಅಡಿಕೆ ದೋಚುತ್ತಿದ್ದಾಗ ತೋಟದ ಮಾಲೀಕನ ಪುತ್ರನ ಕಣ್ಣಿಗೆ ಸಿಕ್ಕಿಬಿದ್ದ ಹಾಗೂ ಈ ವೇಳೆ ಕಳ್ಳರು ತಲವಾರು ದಾಳಿ ನಡೆಸಿ ಮಾಲೀಕರ ಪುತ್ರನನ್ನು ಗಾಯಗೊಳಿಸಿದ ಘಟನೆ ನ 25ರಂದು ನಸುಕಿನ ವೇಳೆ ನಡೆದಿದೆ. ಕಡಬ ತಾಲೂಕಿಗೆ ಸೇರಿದ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಪಣೆಮಜಲುನಲ್ಲಿರುವ ರಾಮಚಂದ್ರ ಎಡಪತ್ಯ ಮಾಲಕತ್ವದ ಎಡಪತ್ಯ ಫಾರ್ಮ್ಸ್ ನಲ್ಲಿ ಘಟನೆ ನಡೆದಿದೆ
ರಾಮಚಂದ್ರ ಎಡಪತ್ಯ ಅವರ ಪುತ್ರ ನಿಷ್ಕಲ್ ರಾಮ್ ಎಡಪತ್ಯ ತಲವಾರು ದಾಳಿಗೆ ಒಳಗಾದವರು. ದಾಳಿಯ ವೇಳೆ ಕೈಗೆ ಗಂಭೀರ ಗಾಯವಾಗಿದ್ದು, ಪುತ್ತೂರಿನ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳ್ಳರು ಒಂದು ಕಾರು ಮತ್ತು ಸ್ಕೂಟರ್ ನಲ್ಲಿ ಕಳ್ಳತನಕ್ಕೆ ಬಂದಿದ್ದರು.
ಶನಿವಾರ ಬೆಳಗ್ಗಿನ ಜಾವ ನಿಷ್ಕಲ್ ಅವರು ಮೈಸೂರಿನಿಂದ ಮನೆಗೆ ಆಗಮಿಸಿದ ವೇಳೆ ಅಡಕೆ ಒಣಹಾಕಿದ ಸೋಲಾರ್ ಗೂಡಿನಿಂದ ಇಬ್ಬರು ಕಳ್ಳರು ಕಾರಿಗೆ ಅಡಿಕೆ ತುಂಬುತ್ತಿರುವುದು ಕಾಣಿಸಿದೆ. ತಕ್ಷಣ ಜಾಗೃತರಾದ ನಿಷ್ಕಲ್ ರವರು ಕಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ. ಈ ಸಂದರ್ಭ ಕಳ್ಳರು ತಲವಾರಿನಿಂದ ದಾಳಿ ಮಾಡಿದ್ದು, ನಿಶ್ಚಲ್ ಕೈಗೆ ಗಾಯವಾಗಿದೆ. ಆದರೂ ಕಳ್ಳರಲ್ಲಿ ಓರ್ವನನ್ನು ಹಿಡಿದಿಡುವಲ್ಲಿ ಅವರು ಯಶಸ್ವಿಯಾಗಿದ್ದಾರೆ.


ಬಶೀರ್ ಸಿಕ್ಕಿಬಿದ್ದ ಕಳ್ಳ. ಕಳೆದ ಹಲವು ದಿನಗಳಿಂದ ನಿರಂತರ ಅಡಕೆ ಕಳ್ಳತನ ಮಾಡುತ್ತಿರುವುದನ್ನು ಒಪ್ಪಿಕೊಂಡಿರುವ ಬಶೀರ್, ಸುಮಾರು 5 ಲಕ್ಷಕ್ಕೂ ಅಧಿಕ ಮೊತ್ತದ ಅಡಕೆಯನ್ನು ಸುಲಿದಿಟ್ಟ ಗೋದಾಮು ಹಾಗೂ ಸೋಲಾರ್ ಕೊಠಡಿಯಿಂದ ಕಳವು ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ ಎಂದು ರಾಮಚಂದ್ರರವರು ತಿಳಿಸಿದ್ದಾರೆ. ಇನ್ನೋರ್ವ ಕಳ್ಳ ಹಕ್ಕೀಂ ಎಂಬಾತನ ಸೂಚನೆಯ ಮೇರೆಗೆ ಇಲ್ಲಿಗೆ ಆಗಮಿಸಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಕಳ್ಳ ಒಪ್ಪಿಕೊಂಡಿದ್ದಾನೆ. ಇರ್ಷಾದ್ ಎಂಬರಿಗೆ ಸೇರಿದ ಕಾರಿನಲ್ಲಿ ಕಳ್ಳರು ಬಂದಿದ್ದು, ಬಶೀರ್ ಎಂಬಾತನನ್ನು ಫಾರ್ಮ್ ಮಾಲೀಕರು ಬೆಳ್ಳಾರೆ ಠಾಣೆಗೆ ಒಪ್ಪಿಸಿದ್ದಾರೆ.
ಆರೋಪಿ ಹಕೀಂ ಎರಡು ಗೋಣಿ ಚೀಲಗಳಲ್ಲಿ ಸುಲಿದಿಟ್ಟಿದ್ದ ರೂ.24000/- ಮೌಲ್ಯದ ಅಡಿಕೆಯನ್ನು ಸ್ಕೂಟರನಲ್ಲಿ ಹೇರಿಕೊಂಡು ಪರಾರಿಯಾಗಿರುತ್ತಾನೆ. ಇನ್ನೊಬ್ಬ ಆರೋಪಿ ಬಶೀರ್ ರೂ 75000/- ಮೌಲ್ಯದ ಅಡಿಕೆಯೊಂದಿಗೆ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದು, ಆತನನ್ನು ನೆರೆಕರೆಯವರ ಸಹಾಯದಿಂದು ಹಿಡಿದು ಪೊಲೀಸರಿಗೆ ಒಪ್ಪಿಸಿರುವುದಾಗಿ ರಾಮಚಂದ್ರ ಎಡಪತ್ಯ ರವರು ದೂರಿನಲ್ಲಿ ತಿಳಿಸಿದ್ದಾರೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Uncategorized
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿಗೆ ‘ಅಂಬಿಯೋರ- 2026’; ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ
ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.
ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸ್ವಿನಿಕಾ ವಿಯೋಲಾ ಕ್ರಾಸ್ತಾ ಹಾಗೂ ಧ್ಯಾನ್ ಬಿ ಪ್ರಥಮ, ಪ್ರಾಡಕ್ಟ್ ಇನ್ನೊವೇಟಿವ್ ಚಾಲೆಂಜ್ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಿವಾನಿ ಹಾಗೂ ಗಾನವಿ ಪ್ರಥಮ, ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಅದ್ವಿತಿ ಜಿ ಹಾಗೂ ಎ ಜಿ ಕೃತಿಕಾ ಪ್ರಥಮ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ವೇದಿತಾ ಕೆ ಮತ್ತು ತನುಶ್ರೀ ಬಿ ದ್ವಿತೀಯ, ಬಿಸ್ನೆಸ್ ಮಾಡೆಲ್ ಸ್ಪರ್ಧೆಯಲ್ಲಿ ಹೆಫ್ಜಿಬಾ ಎಂ ರಿನ್ಸಾನ್ ಹಾಗೂ ಪ್ರೀತಾ ಎ ದ್ವಿತೀಯ, ಬೆಸ್ಟ್ ಔಟ್ ಆಫ್ ವೇಸ್ಟ್ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸಜ್ನಾಜ್ ಮತ್ತು ಹಲೀಮತ್ ಸೌಧ ದ್ವಿತೀಯ ಹಾಗೂ ಮಿನಿ ಮಿಲಿಟಿಯ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಹಾದ್ ಅಜಾರ್ ಮತ್ತು ಮೊಹಮ್ಮದ್ ರಫಾಜ್ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.
Uncategorized
Vivekananda-ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಸ್ವಾದಸಂಭ್ರಮ-2026’ ಆಹಾರ ಮೇಳ
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಮಾತನಾಡಿದರು.

ಪುತ್ತೂರು: ಆಹಾರ ಮೇಳ ಕೇವಲ ಆಹಾರ ಮಾರಾಟದ ಬಗ್ಗೆ ಮಾತ್ರವಲ್ಲ. ಇಲ್ಲಿ ವಿದ್ಯಾರ್ಥಿಗಳು ಉದ್ಯಮ ನಡೆಸುವಾಗ ಇರಬೇಕಾದ ಕೌಶಲ್ಯಗಳು, ಗ್ರಾಹಕರ ಮನಸ್ಥಿತಿ ಮತ್ತು ಅವರೊಂದಿಗೆ ವ್ಯವಹರಿಸಬೇಕಾದ ರೀತಿಯನ್ನು ಮೇಳಗಳಿಂದ ತಿಳಿದುಕೊಳ್ಳಬಹುದು. ಇದರ ನಡುವೆ ಬರುವ ಸೋಲು-ಗೆಲುವುಗಳನ್ನು ವಿದ್ಯಾರ್ಥಿಗಳು ಸಮನಾಗಿ ಸ್ವೀಕರಿಸಬೇಕು ಎಂದು ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಗೌರವ ಅತಿಥಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಮಾತನಾಡಿ, ಉದ್ದಿಮೆಯ ಬಗ್ಗೆ ಸೈದ್ಧಾಂತಿಕವಾಗಿ ಕಲಿತ ವಿಚಾರಗಳು ಇಲ್ಲಿ ಪ್ರಾಯೋಗಿಕವಾಗಿ ನಡೆಯುತ್ತಿದೆ. ಒಂದು ಉದ್ದಿಮೆಯನ್ನು ನಡೆಸಬೇಕಾದರೆ ಅದರಲ್ಲಿರುವಂತಹ ಕಷ್ಟ-ಸುಖಗಳನ್ನು ಅರಿಯಲು ಇಂತಹ ಮೇಳಗಳು ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ರೇಖಾ ಪಿ. ಉಪಸ್ಥಿತರಿದ್ದರು.
ಸ್ವಾದಸಂಭ್ರಮ ಆಹಾರ ಮೇಳ-2026ರ ವಿಜೇತರು:
ವ್ಯವಹಾರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 14 ತಂಡಗಳು ಭಾಗವಹಿಸಿದ್ದು ಫ್ರೋಜನ್ ಡಿಲೈಟ್ ತಂಡ ಪ್ರಥಮ ಸ್ಥಾನ, ಬೈಟ್ ಬೈ ಬೈಟ್ ದ್ವಿತೀಯ ಸ್ಥಾನ ಪಡೆದುಕೊಂಡಿತು. ಉತ್ತಮ ನೈರ್ಮಲ್ಯ ಕಾಪಾಡುವಿಕೆ ವಿಭಾಗದಲ್ಲಿ ಸ್ವದೇಶೀ ಸ್ವಾದ್ ತಂಡ, ಗ್ರಾಹಕರೊಂದಿಗೆ ಉತ್ತಮ ಸಂವಹನ ವಿಭಾಗದಲ್ಲಿ ಫ್ಲೇವರ್ ತಂಡ, ಉತ್ತಮ ಪೋಸ್ಟರ್ ವಿಭಾಗದಲ್ಲಿ ಫ್ಲೇವರ್ ಹಂಟರ್ಸ್ ತಂಡ ಹಾಗೂ ಉತ್ತಮ ರೀಲ್ಸ್ ವಿಭಾಗದಲ್ಲಿ ಸ್ವದ್ಘಾಮ್ ತಂಡ ಪ್ರಶಸ್ತಿ ಪಡೆದಿಕೊಂಡಿದೆ.
ಕಾರ್ಯಕ್ರಮವನ್ನು ತೃತೀಯ ಕಲಾ ವಿಭಾಗದ ಕೆ. ಕೃತಿಕಾ ನಿರ್ವಹಿಸಿದರು.
Uncategorized
Ashok Rai-ಬದ್ಯಾರ್‌ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.

ಪುತ್ತೂರು: ಈ ಭಾಗದ ಜನರು ರಸ್ತೆಯಿಲ್ಲದೆ ಸುಮಾರು 50 ವರ್ಷಗಳಿಂದ ತೊಂದರೆಯಲ್ಲಿದ್ದರು, ಇಲ್ಲಿ ಸುಮಾರು ಹತ್ತು ಮನೆಗಳಿದೆ, ಮನೆ ಕಟ್ಟುವಾಗ ಇವರೆಲ್ಲಾ ಕಲ್ಲನ್ನು ಕಾಲು ದಾರಿಯ ಮೂಲಕ ಹೊತ್ತುಕೊಂಡೇ ಹೋಗಿದ್ದು, ವಾಹನ ಹತ್ತ ಬೇಕಾದರೆ ಒಂದಷ್ಟು ದೂರ ನಡೆದುಕೊಂಡೇ ಬರಬೇಕಾದ ಸ್ಥಿತಿ. ಇದು ಪೆರುವಾಯಿ ಗ್ರಾಮದ ಬದ್ಯಾರಿನ ಕಥೆ.
ಇವರು ರಸ್ತೆಗಾಗಿ ಮನವಿ ಹಾಗೂ ಹೋರಾಟವನ್ನು ಮಾಡುತ್ತಲೇ ಇದ್ದರು. ಆದರೆ ರಸ್ತೆ ನಿರ್ಮಾಣವಾಗುವಲ್ಲಿ ಖಾಸಗಿ ಜಾಗದ ತಕರಾರಿತ್ತು. ಈ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸಲು ಅನೇಕ ಜನಪ್ರತಿನಿಧಿಗಳು ಪ್ರಯತ್ನ ಮಾಡಿದ್ದರು ಆದರೆ ಯಾರಿದಂಲೂ ಸಾಧ್ಯವಾಗಿಲ್ಲ, ಕೆಲವರು ಭರವಸೆಯನ್ನು ಮಾತ್ರ ಕೊಟ್ಟಿದ್ದರು.
ಶಾಸಕ ಅಶೋಕ್ ರೈ ಭೇಟಿ
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.
ಶಾಸಕರಿಗೆ ಸನ್ಮಾನ
ವಿವಾದ ಇತ್ಯರ್ಥಪಡಿಸಿ ೫೦ ವರ್ಷಗಳ ಹಿಂದಿನ ಬಹುದೊಡ್ಡ ಬೇಡಿಕೆಯನ್ನು ಈಡೇರಿಸಿದ ಶಾಸಕರಿಗೆ ಬದ್ಯಾರು ರಸ್ತೆ ಫಲಾನುಭವಿಗಳು ಸನ್ಮಾನವನ್ನು ಮಾಡಿದ್ದಾರೆ.
ಬದ್ಯಾರ್‌ನಿವಾಸಿಗಳು ತಮ್ಮ ಕಷ್ಟವನ್ನು ನನ್ನಲ್ಲಿ ಹೇಳಿಕೊಂಡಿದ್ದರು. ರಸ್ತೆ ಇಲ್ಲದೆ ಹತ್ತು ಕುಟುಂಬಗಳು ಸಂಕಷ್ಟದಲ್ಲಿತ್ತು ಮಾತ್ರವಲ್ಲದೆ ಪಕ್ಕದಲ್ಲೇ ಒಂದು ದೇವಸ್ಥಾನದ ಕಾಮಗಾರಿಯೂ ಅರ್ಧಕ್ಕೆ ನಿಂತಿತ್ತು. ಜಾಗ ಖಾಸಗಿ ವ್ಯಕ್ತಿಗೆ ಸೇರಿದ್ದರಿಂದ ರಸ್ತೆ ನಿರ್ಮಾಣಕ್ಕೆ ತೊಂದರೆಯಾಗಿತ್ತು. ಜಾಗದ ಮಾಲಿಕರನ್ನು ಕರೆಸಿ ಮಾತುಕತೆ ನಡೆಸಿದಾಗ ಅವರು ಮಾನವೀಯ ನೆಲೆಯಲ್ಲಿ ಒಪ್ಪಿಕೊಂಡು ರಸ್ತೆ ನಿರ್ಮಾಣಕ್ಕೆ ಅನುವು ಮಾಡಿಕೊಡುವ ಮೂಲಕ ದೊಡ್ಡ ಪುಣ್ಯದ ಕೆಲಸವನ್ನು ಮಾಡಿದ್ದಾರೆ. ಬೇಡಿಕೆ ಈಡೇರಿಸಿದ್ದೇನೆ, ಅನುದಾನವನ್ನು ನೀಡಿದ್ದೇನೆ ಮುಂದೆ ಅವರೆಲ್ಲರೂ ನನ್ನ ಜೊತೆ ಇರುತ್ತಾರೆ ಎಂಬ ನಂಬಿಕೆಯೂ ಇದೆ
ಅಶೋಕ್ ರೈ, ಶಾಸಕರು ಪುತ್ತೂರು
ರಸ್ತೆ ಸಂಪರ್ಕ ಇಲ್ಲದೆ 50 ವರ್ಷದಿಂದ ಪರದಾಡುತ್ತಿದ್ದೇವೆ, ನಾವು ಬಿಜೆಪಿ ಶಾಸಕರಿಗೆ, ಮುಖಂಡರಿಗಳಿಗೆ ಮನವಿ ಮಾಡಿದ್ದೆವು, ನಾವು ಬಿಜೆಪಿ ಕಾರ್ಯಕರ್ತರಾದರೂ ನಮ್ಮ ಬೇಡಿಕೆಯನ್ನು ಅವರು ಈಡೇರಿಸಿರಲಿಲ್ಲ. ನಾವು ಶಾಸಕ ಅಶೋಕ್ ರೈ ಕಚೇರಿಗೆ ಈ ವಿಚಾರವನ್ನು ತಿಳಿಸಲು ಹೋದಾಗ ಕೆಲವರು ನಮ್ಮನ್ನು ಛೇಡಿಸಿದ್ದರು. ನೀವು ಬಿಜೆಪಿ ಕಾರ್ಯಕರ್ತರಾದ ಕಾರಣ ನಿಮ್ಮ ಕೆಲಸ ಶಾಸಕರು ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಶಾಸಕರು ಪಕ್ಷ ರಾಜಕೀಯ ಮಾಡದೆ ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ, ನಾವು ಮುಂದೆ ಅಶೋಕ್ ರೈ ಜೊತೆ ಇರುತ್ತೇವೆ, ಶಾಸಕರು ಮಾಡಿದ ಈ ಉಪಕಾರವನ್ನು ಮರೆಯುವುದೇ ಇಲ್ಲ.
ಜಯರಾಮ, ಬದ್ಯಾರ್ ಫಲಾನುಭವಿ
ಯಾವ ಜನಪ್ರತಿನಿಧಿಯಿಂದಲೂ ಮಾಡಲಾಗದ ಕೆಲಸವನ್ನು ಶಾಸಕ ಅಶೋಕ್ ರೈ ಮಾಡಿದ್ದಾರೆ. ಪಕ್ಷ ಬೇದವಿಲ್ಲದೆ ಬೇಡಿಕೆಯನ್ನು ಈಡೇರಿಸಿದ್ದಾರೆ, ಇವರು ಮುಂದೆಯೂ ಶಾಸಕರಾಗಿ ಆಯ್ಕೆಯಾಗುವಲ್ಲಿ ನಾವು ಖಂಡಿತಾ ಕೆಲಸ ಮಾಡುತ್ತೇವೆ.
ಶೀಲಾ ರೈ , ಫಲಾನುಭವಿ
-
ಸ್ಥಳೀಯ9 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಅಪರಾಧ7 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಬಿಗ್ ನ್ಯೂಸ್9 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಮಂಗಳೂರು4 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಸಿನೆಮಾ8 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಅಪರಾಧ9 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಬಿಗ್ ನ್ಯೂಸ್8 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
-
ಅಪರಾಧ4 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!



















