ಮಂಗಳೂರು
Appeal to donors for ailing girl ಬಂಟ್ವಾಳ :ಹೈಸ್ಕೂಲ್ ವಿದ್ಯಾರ್ಥಿನಿಗೆ ಮಾರಣಾಂತಿಕ ಖಾಯಿಲೆ – ಚಿಕಿತ್ಸೆಗೆ ಬೇಕಾಗಿದೆ ಲಕ್ಷಾಂತರ ಹಣ – ದಾನಿಗಳ ಮೊರೆ ಹೋದ ಹೆತ್ತವರು
ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಹದಿನಾಲ್ಕರ ಹರೆಯದ ಹೈಸ್ಕೂಲ್ ವಿದ್ಯಾರ್ಥಿನಿಯೊರ್ವಳು SLE ಡಿಸೀಸ್ ಎಂಬ ಮಾರಣಾಂತಿಕ ಖಾಯಿಲೆಗೆ ತುತ್ತಾಗಿದ್ದು ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಆಕೆಯ ಹೆತ್ತವರು ಮಗಳ ಚಿಕಿತ್ಸಾ ವೆಚ್ಚಕ್ಕಾಗಿ ದಾನಿಗಳ ನೆರವನ್ನು ಕೋರಿದ್ದಾರೆ.
ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಾಂಧಿ ನಗರ ಸಮೀಪದ ಗಾಳಿಗುಡ್ಡೆ ನಿವಾಸಿಗಳಾದ ರಮೇಶ್ – ನಳಿನಿ ದಂಪತಿಗಳ ಪುತ್ರಿ ಕಾವ್ಯ ಶ್ರೀ ಅನಾರೋಗ್ಯಕ್ಕೆ ತುತ್ತಾಗಿರುವ ಬಾಲಿ. ಈಕೆ ಶ್ರೀರಾಮ ಪ್ರೌಢಶಾಲೆಯ ವಿದ್ಯಾರ್ಥಿನಿ.
ಈ ಬಾಲಕಿ ಅಪರೂಪದ SLE ಡಿಸೀಸ್ ಎಂಬ ಖಾಯಿಲೆಗೆ ತುತ್ತಾಗಿದ್ದು ಪ್ರಸ್ತುತ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈಕೆಯ ಚಿಕಿತ್ಸೆಗೆ ಕನಿಷ್ಟ 20 ಲಕ್ಷ ರೂಪಾಯಿಯ ಅವಶ್ಯಕತೆಯಿದೆ. ಇಷ್ಟು ಮೊತ್ತವನ್ನು ಭರಿಸುವ ಅರ್ಥಿಕ ಚೈತನ್ಯ ಕಾವ್ಯಶ್ರೀಯ ಬಡ ಕುಟುಂಬಕ್ಕಿದೆ. ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಒಂದಷ್ಟು ಹಣವನ್ನು ಭರಿಸಿದರಾದರೂ ಇನ್ನಷ್ಟು ಹಣದ ಅವಶ್ಯಕತೆ ಇರುವುದರಿಂದ ಬಾಲೆಯ ಮನೆಯವರು ದಾನಿಗಳ ಮೊರೆ ಹೋಗಿದ್ದಾರೆ.
ನೆರವು ನೀಡಲು ಇಚ್ಚಿಸುವ ದಾನಿಗಳು ಕೆಳಗೆ ನೀಡಿದ ಬ್ಯಾಂಕ್ ಖಾತೆಗೆ ನೆರವಿನ ಹಸ್ತವನ್ನು ಚಾಚಬಹುದು
Google pay/phone pay
70906 92408
NALINI
18940100056735
IFSC:FDRL0001894
BANK :FEDERAL
BRANCH:PUTTUR
More information
𝗟𝗶𝗸𝗲 & 𝗙𝗼𝗹𝗹𝗼𝘄 ★ 𝗙𝗮𝗰𝗲𝗯𝗼𝗼𝗸, 𝗪𝗵𝗮𝘁𝘀𝗮𝗽𝗽, 𝗜𝗻𝘀𝘁𝗮𝗴𝗿𝗮𝗺
fayazmadoo +918867777771
+919686266750
ಅಪರಾಧ
Mangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್‌ಐ ವಶಕ್ಕೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರು ಮಂಗಳೂರು ಮೂಲದವರಾಗಿದ್ದು, ಮತ್ತೊಬ್ಬರು ಕಾಸರಗೋಡು ಮೂಲದವರು ಎಂದು ತಿಳಿದುಬಂದಿದೆ. ದುಬೈ ಹಾಗೂ ಕೇರಳ ಮೂಲದ ಚಿನ್ನ ಕಳ್ಳಸಾಗಣೆ ಜಾಲದೊಂದಿಗೆ ಸಂಪರ್ಕ ಹೊಂದಿ ಅಕ್ರಮ ಚಿನ್ನ ಸಾಗಾಟಕ್ಕೆ ನೆರವಾಗುತ್ತಿದ್ದ ಆರೋಪ ಇವರ ಮೇಲಿದೆ.
ವ್ಯವಸ್ಥಿತವಾಗಿ ನಡೆಯುತ್ತಿದ್ದ ಕಳ್ಳಸಾಗಣೆ
ದುಬೈ ಸೇರಿದಂತೆ ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಲ್ಲಿ ಚಿನ್ನವನ್ನು ಅಡಗಿಸಿಟ್ಟು ತೆರಳುತ್ತಿದ್ದರು ಎನ್ನಲಾಗಿದೆ. ಬಳಿಕ ಈ ಮಾಹಿತಿಯನ್ನು ಜಾಲದ ಸಂಪರ್ಕದಲ್ಲಿದ್ದ ವಿಮಾನ ನಿಲ್ದಾಣದ ಸಿಬ್ಬಂದಿಗೆ ತಲುಪಿಸಲಾಗುತ್ತಿತ್ತು. ವಿಮಾನಗಳ ನಿರ್ವಹಣಾ ಕಾರ್ಯ ಮುಗಿದ ಬಳಿಕ ಸಿಬ್ಬಂದಿ ಶೌಚಾಲಯಕ್ಕೆ ತೆರಳಿ, ಅಲ್ಲಿ ಅಡಗಿಸಿಟ್ಟ ಚಿನ್ನವನ್ನು ಹೊರತೆಗೆದು ತಮ್ಮ ಸಂಪರ್ಕದಲ್ಲಿದ್ದ ಕಳ್ಳಸಾಗಣೆದಾರರಿಗೆ ಹಸ್ತಾಂತರಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಖಚಿತ ಮಾಹಿತಿಯ ಮೇರೆಗೆ ಡಿಆರ್‌ಐ ಅಧಿಕಾರಿಗಳು ಆರೋಪಿಗಳ ಮೇಲೆ ನಿಗಾ ಇರಿಸಿದ್ದರು. ಅದರಂತೆ ನ. 23ರಂದು ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಿಂದ ಚಿನ್ನದ ಪೇಸ್ಟ್ ರೂಪದ ಎರಡು ಪ್ಯಾಕ್‌ಗಳನ್ನು ಹೊರತೆಗೆಯುತ್ತಿದ್ದ ಮಂಗಳೂರು ಮೂಲದ ಸಿಬ್ಬಂದಿಯನ್ನು ಅಧಿಕಾರಿಗಳು ಹಿಡಿದಿದ್ದಾರೆ.
ಈ ಚಿನ್ನವನ್ನು ಆತ ಕಾಸರಗೋಡು ಮೂಲದ ಮತ್ತೊಬ್ಬ ಸಿಬ್ಬಂದಿಗೆ ಹಸ್ತಾಂತರಿಸಬೇಕಿತ್ತು. ಬಳಿಕ ಆ ಸಿಬ್ಬಂದಿ ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸ್ಥಳಕ್ಕೆ ಚಿನ್ನವನ್ನು ಕೊಂಡೊಯ್ದು ಜಾಲದ ಮೂರನೇ ವ್ಯಕ್ತಿಗೆ ತಲುಪಿಸಲು ಯೋಜಿಸಿದ್ದ ಎನ್ನಲಾಗಿದೆ. ಅಧಿಕಾರಿಗಳು ತ್ವರಿತ ಕಾರ್ಯಾಚರಣೆ ನಡೆಸಿ ಉಳಿದ ಇಬ್ಬರನ್ನೂ ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ, 73 ಲಕ್ಷ ರೂ. ನಗದು, ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಡಿ. 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.
ಇದಕ್ಕೂ ಮೊದಲು 1.77 ಕೋಟಿ ರೂ. ಮೌಲ್ಯದ ಚಿನ್ನ ವಶ
ಇದಕ್ಕೂ ಮುನ್ನ ನ. 14ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕಾಸರಗೋಡು ಮೂಲದ ಇಬ್ಬರು ಪ್ರಯಾಣಿಕರು ದೇಹದೊಳಗೆ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದ ವೇಳೆ ಡಿಆರ್‌ಐ ಅಧಿಕಾರಿಗಳ ವಶಕ್ಕೆ ಸಿಕ್ಕಿದ್ದರು. ಅವರಿಂದ ಸುಮಾರು 1.77 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನಿಖೆಯ ಹಿತದೃಷ್ಟಿಯಿಂದ ಬಂಧಿತ ಆರೋಪಿಗಳ ಹೆಸರುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.
ನಿಧನ ವಾರ್ತೆ
ಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
ರಾಷ್ಟ್ರೀಯ ಹೆದ್ದಾರಿ-66ರ ಪಂಪ್‌ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಪಂಪ್‌ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನ. 14ರಂದು ಬೆಳಗ್ಗೆ ಜ್ಯೋತಿ ಹಾಗೂ ಅವರ ಸಂಬಂಧಿ ನಂದಿನಿ (19) ಗೋರಿಗುಡ್ಡ ಬಳಿ ರಸ್ತೆ ವಿಭಜಕ ದಾಟಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ನಂತೂರು ಕಡೆಗೆ ಸಂಚರಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದು, ಬೈಕ್‌ನಲ್ಲಿದ್ದವರಿಗೂ ಗಾಯಗಳಾಗಿದ್ದವು. ಗಂಭೀರ ಗಾಯಗೊಂಡಿದ್ದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜ್ಯೋತಿ ನಗರದ ಖಾಸಗಿ ಕಾಲೇಜೊಂದರಲ್ಲಿ ಜಿಎನ್‌ಎಂ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.
ಮೂಲತಃ ಚಿಕ್ಕಮಗಳೂರಿನ ಶಿಳ್ಳೆಕ್ಯಾತ ಅಲೆಮಾರಿ ಸಮುದಾಯಕ್ಕೆ ಸೇರಿದ ಜ್ಯೋತಿಯ ಕುಟುಂಬ ಹಲವು ವರ್ಷಗಳಿಂದ ಮಂಗಳೂರಿನ ಕಣ್ಣೂರಿನಲ್ಲಿ ವಾಸವಾಗಿತ್ತು. ನೇತ್ರಾವತಿ ನದಿಯಲ್ಲಿ ತೆಪ್ಪದ ಮೂಲಕ ಮೀನು ಹಿಡಿಯುವ ವೃತ್ತಿಯನ್ನು ಕುಟುಂಬ ನಡೆಸುತ್ತಿತ್ತು. ಕುಟುಂಬದ ಹಿರಿಯ ಮಗಳಾಗಿದ್ದ ಜ್ಯೋತಿ ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಮಂಗಳೂರು
Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್‌ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.
ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್‌ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್‌ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.
-
ಸ್ಥಳೀಯ18 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ನಿಧನ ವಾರ್ತೆ24 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ22 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಅಪರಾಧ18 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ23 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
-
ಅಂತರ ರಾಜ್ಯ19 hours agoSabarimala-ಶಬರಿಮಲೆ: ದೇವಸ್ಥಾನ ಹಾಗೂ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; ಅಂಗಡಿಗಳಿಗೆ ₹1 ಲಕ್ಷ ದಂಡ
-
ಅಪರಾಧ18 hours agoCyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ















