ಕ್ರೀಡೆ
Hardik paandya: ಗುಜರಾತ್ ಟೈಟನ್ಸ್ ತನ್ನಲೇ ರಿಟೈನ್ ಮಾಡಿದ್ರೂ ನಡೆಯಿತು ಹೈಡ್ರಾಮ – ಮತ್ತೆ ಮುಂಬೈ ಇಂಡಿಯನ್ಸ್‌ಗೆ ಸೇರಿದ ಸ್ಟಾರ್ ಅಲ್ ರೌಂಡರ್ ಹಾರ್ದಿಕ್ ಪಾಂಡ್ಯ ! ಇದು ಹೇಗಾಯಿತು ಗೊತ್ತೇ ?
ಗುಜರಾತ್ ಟೈಟನ್ಸ್ ತೊರೆದು ಮುಂಬೈ ಇಂಡಿಯನ್ಸ್‌ಗೆ ಸೇರಿದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ! ಇಲ್ಲಿದೆ ನೋಡಿ ಮಾಹಿತಿ
ಹಾರ್ದಿಕ್ ಪಾಂಡ್ಯ ಅಧಿಕೃತವಾಗಿ ಮುಂಬೈ ಇಂಡಿಯನ್ಸ್ ಬಳಗ ಸೇರಿದ್ದಾರೆ. 2 ವರ್ಷಗಳ ಕಾಲ ಗುಜರಾತ್ ಟೈಟನ್ಸ್ ತಂಡದ ಕ್ಯಾಪ್ಟನ್ ಆಗಿ ಆಡಿ ಒಂದು ಟ್ರೋಫಿ ಗೆದ್ದು ಹಾಗೂ ಒಮ್ಮೆ ರನ್ನರ್ಸ್‌ಅಪ್ ಸ್ಥಾನ ತಂದುಕೊಟ್ಟ ಹಾರ್ದಿಕ್ ಪಾಂಡ್ಯ ಅವರನ್ನು ಗುಜರಾತ್ ಟೈಟನ್ಸ್ ತಂಡ ಐಪಿಎಲ್ 2024 ಟೂರ್ನಿಗೆ ಪ್ರಕಟ ಮಾಡಿದ ಉಳಿಸಿಕೊಂಡ ಆಟಗಾರರ ಪಟ್ಟಿಯಲ್ಲಿ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಅವರ ಹೆಸರು ಪ್ರಕಟ ಮಾಡಿತ್ತು. ಆದರೆ, ಇದಾದ ಕೆಲವೇ ಗಂಟೆಗಳಲ್ಲಿ ಸ್ಟಾರ್ ಆಲ್‌ರೌಂಡರ್ ಟ್ರೇಡಿಂಗ್ ವೀಡಿಯೋ ಮೂಲಕ ಮುಂಬೈ ಇಂಡಿಯನ್ಸ್ ಬಳಗ ಸೇರಿರುವ ಅಧಿಕೃತ ಮಾಹಿತಿ ಹೊರಬಿದ್ದಿರುವುದು ಅಚ್ಚರಿ ತಂದಿದೆ.
ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ತಂಡವನ್ನು ತೊರೆದು, ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಋತುವಿನಲ್ಲಿ ಆಡಲು ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಲಿದ್ದಾರೆ ಎಂದು ಇಎಸ್ಪಿಎನ್ ಕ್ರಿಕ್ಇನ್ಫೊ ವರದಿ ಮಾಡಿದೆ.
ಇದಕ್ಕೆ ಸಂಬಂಧಿಸಿ ಮುಂಬೈ ಇಂಡಿಯನ್ಸ್, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಗುಜರಾತ್ ಟೈಟಾನ್ಸ್ ಜೊತೆಗೆ ಒಪ್ಪಂದ ಮಾಡಿಕೊಂಡಿದೆ ಎಂದು ಇಎಸ್ಪಿಎನ್ ಕ್ರಿಕ್ಇನ್ಫೊ ವರದಿಯೊಂದು ತಿಳಿಸಿದೆ. ಈ ಒಪ್ಪಂದಗಳ ಪ್ರಕಾರ, ಮುಂಬೈ ಇಂಡಿಯನ್ಸ್ ಹಾರ್ದಿಕ್ ಪಾಂಡ್ಯಗೆ ವರ್ಷಕ್ಕೆ 15 ಕೋಟಿ ರೂಪಾಯಿ ವೇತನ ನೀಡಲಿದೆ ಮತ್ತು ಗುಜರಾತ್ ಟೈಟಾನ್ಸ್ ಗೆ ವರ್ಗಾವಣೆ ಶುಲ್ಕವನ್ನು ನೀಡಲಿದೆ. ಆದರೆ, ಈ ವರ್ಗಾವಣೆ ಶುಲ್ಕದ ಮೊತ್ತವನ್ನು ಬಹಿರಂಗಪಡಿಸಲಾಗಿಲ್ಲ. ಈ ವರ್ಗಾವಣೆ ಶುಲ್ಕದ ಅರ್ಧದಷ್ಟನ್ನು ಹಾರ್ದಿಕ್ ಪಾಂಡ್ಯ ಪಡೆಯಲಿದ್ದಾರೆ ಎಂದು ವರದಿ ತಿಳಿಸಿದೆ.
ಈ ಬೆಳವಣಿಗೆಗಳು ಯೋಜಿತ ರೀತಿಯಲ್ಲಿ ಸಾಗಿದರೆ, ಇದು ಐಪಿಎಲ್ ಇತಿಹಾಸದ ಅತಿ ದೊಡ್ಡ ಆಟಗಾರ ವರ್ಗಾವಣೆಯಾಗಲಿದೆ. ಈವರೆಗೆ, ಗುಜರಾತ್ ಟೈಟಾನ್ಸ್ ಆಗಲಿ, ಮುಂಬೈ ಇಂಡಿಯನ್ಸ್ ಆಗಲಿ ಈ ವಿಷಯವನ್ನು ಪ್ರಕಟಿಸಿಲ್ಲ.
ಐಪಿಎಲ್ 2022ರ ಋತುವಿನಲ್ಲಿ, ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಪ್ರಶಸ್ತಿ ಗೆದ್ದಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಅವರನ್ನು ಪಂದ್ಯಶ್ರೇಷ್ಠ ಪ್ರಶಸ್ತಿಯಿಂದ ಪುರಸ್ಕರಿಸಲಾಗಿತ್ತು. ಅದು ಗುಜರಾತ್ ಟೈಟಾನ್ಸ್ ನ ಮೊದಲ ಐಪಿಎಲ್ ಋತುವಾಗಿತ್ತು.
ಐಪಿಎಲ್ 2023ರ ಋತುವಿನಲ್ಲಿ, ಸತತ ಎರಡನೇ ಬಾರಿಗೆ ಗುಜರಾತ್ ಟೈಟಾನ್ಸ್ ಫೈನಲ್ ತಲುಪಿತ್ತು. ಆದರೆ, ಫೈನಲ್ ನಲ್ಲಿ ಅದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲನುಭವಿಸಿತು.
ಹಾರ್ದಿಕ್ ಪಾಂಡ್ಯ 2015ರಲ್ಲಿ ಐಪಿಎಲ್ ಗೆ ಪಾದಾರ್ಪಣೆ ಮಾಡಿದರು. ಈವರೆಗೆ ಅವರು ಐಪಿಎಲ್ ನಲ್ಲಿ 123 ಪಂದ್ಯಗಳನ್ನು ಆಡಿದ್ದಾರೆ. ಅವರು 53 ವಿಕೆಟ್ ಗಳನ್ನು ಗಳಿಸಿದ್ದಾರೆ ಮತ್ತು 139.89ರ ಸ್ಟ್ರೈಕ್ ರೇಟ್ನಲ್ಲಿ 2309 ರನ್ ಗಳನ್ನು ಮಾಡಿದ್ದಾರೆ.
ಈ ವರ್ಗಾವಣೆ ಸಂಭವಿಸಿದರೆ, ಪಾಂಡ್ಯ ಐಪಿಎಲ್ ಇತಿಹಾಸದಲ್ಲಿ ವರ್ಗಾವಣೆಗೊಂಡ ಮೂರನೇ ನಾಯಕರಾಗಲಿದ್ದಾರೆ. ವರ್ಗಾವಣೆಗೊಂಡ ಮೊದಲ ನಾಯಕ ರವಿಚಂದ್ರನ್ ಅಶ್ವಿನ್ ಆಗಿದ್ದರು. ಅವರು ಪಂಜಾಬ್ ಕಿಂಗ್ಸ್ ನಿಂದ ಡೆಲ್ಲಿ ಕ್ಯಾಪಿಟಲ್ಸ್ ಗೆ ಹೋಗಿದ್ದರು. ವರ್ಗಾವಣೆಗೊಂಡ ಎರಡನೇ ನಾಯಕ ಅಜಿಂಕ್ಯ ರಹಾನೆ. ಅವರು 2020ರಲ್ಲಿ ರಾಜಸ್ಥಾನ ರಾಯಲ್ಸ್ ನಿಂದ ಡೆಲ್ಲಿ ಕ್ಯಾಪಿಟಲ್ಸ್ ಗೆ ಹೋಗಿದ್ದರು
ಕ್ರೀಡೆ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್‌ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.
ಕ್ರೀಡೆ
IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್‌ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್‌ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.
ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.
ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.
ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.
10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2
ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.
2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.
ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.
ಅಂತರ ರಾಜ್ಯ
Mohammed Shami: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ
ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
ಹೊಸದಿಲ್ಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
‘ನಾನು ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದರೊಂದಿಗೆ ಬೆಸೆದುಕೊಂಡಿರುವ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ’ ಎಂದು ಶಮಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಭಾರತದ ಟೆಸ್ಟ್ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಅವರು, ‘ಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನಲ್ಲಿದ್ದದ್ದು ಒಂದೇ ಕನಸು. ನನ್ನ ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದಾಗಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಪ್ರತಿಯೊಂದು ಹೋರಾಟ, ಪ್ರತಿಯೊಂದು ಗಾಯ ಹಾಗೂ ಪ್ರತಿಯೊಂದು ಪುನರಾಗಮನವೂ ನನಗೆ ಹೊಸ ಪಾಠ ಕಲಿಸಿದೆ’ ಎಂದು ಬರೆದುಕೊಂಡಿದ್ದಾರೆ.
ಟೆಸ್ಟ್ ಕ್ರಿಕೆಟ್ ನನ್ನ ಜೀವನದ ವಿಶೇಷ ಭಾಗವಾಗಿತ್ತು
‘ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯ ಹಾಗೂ ಅಸಂಖ್ಯಾತ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ತಮ್ಮ ಕ್ರಿಕೆಟ್ ಪಯಣದಲ್ಲಿ ಬೆಂಬಲವಾಗಿ ನಿಂತ ಸಹ ಆಟಗಾರರು, ತರಬೇತುದಾರರು ಹಾಗೂ ಕುಟುಂಬ ಸದಸ್ಯರಿಗೆ ಶಮಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಒಳ್ಳೆಯ ಹಾಗೂ ಕಷ್ಟದ ಸಮಯಗಳಲ್ಲೂ ತಮ್ಮ ಮೇಲೆ ನಂಬಿಕೆ ಇಟ್ಟ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.
ತಮ್ಮ ಪ್ರತಿಭೆಯನ್ನು ಗುರುತಿಸಿ, ಬೆಳೆಯಲು ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಸ್ಥೆಗಳು ನೀಡಿದ ಬೆಂಬಲ ಹಾಗೂ ವಿಶ್ವಾಸ ಸದಾ ತಮ್ಮ ಪಾಲಿಗೆ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.
-
ಅಪರಾಧ16 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್14 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ14 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು15 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ10 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ15 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು16 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಸ್ಥಳೀಯ15 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















