Connect with us

ಪುತ್ತೂರು

Peruvaje Jaladurga devi: ನೂರು ವರ್ಷಗಳ ಬಳಿಕ ನಿರ್ಮಾಣಗೊಂಡಿದೆ ಪೆರುವಾಜೆ ಜಲದುರ್ಗಾದೇವಿಗೆ ಬ್ರಹ್ಮರಥ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರದಲ್ಲಿ ಜ.16 ಬ್ರಹ್ಮರಥ ಸಮರ್ಪಣೆ , ಜ.19 : ಬ್ರಹ್ಮರಥೋತ್ಸವ

Published

on



Ad Widget

Ad Widget

Ad Widget

Ad Widget

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯಕ್ಕೆ ಹೊಸ ಬ್ರಹ್ಮರಥ ನಿರ್ಮಿಸಲಾಗಿದ್ದು, ಸಮರ್ಪಣೆಗೆ ಮುಹೂರ್ತ ನಿಗದಿಯಾಗಿದೆ. ಜ.16 ರಂದು ರಥ ಸಮರ್ಪಣೆಯಾಗಲಿದ್ದು, ಜ. 19 ರಂದು ಬ್ರಹ್ಮರಥೋತ್ಸವ ನಡೆಯಲಿದೆ.

Ad Widget

Ad Widget

Ad Widget

Ad Widget

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯಲದ ವಾರ್ಷಿಕ ಜಾತ್ರೆ ಹಾಗೂ ರಥ ಸಮರ್ಪಣೆ ಕಾರ್ಯಕ್ಕೆ ಸಂಬಂಧಿಸಿ ರವಿವಾರ ಪೂರ್ವಭಾವಿ ಸಭೆ ನಡೆಯಿತು. ಜನವರಿ 16 ರಿಂದ 21 ರ ತನಕ ಧಾರ್ಮಿಕ ವಿಧಿ ವಿಧಾನಗಳು ಜರುಗಲಿವೆ. ಈ ವೇಳೆ ಕ್ಷೇತ್ರದ ತಂತ್ರಿ ಕೆಮ್ಮಿಂಜೆ ಕಾರ್ತಿಕ್ ತಂತ್ರಿಯವರು ಕಾರ್ಯಕ್ರಮದ ವಿವರಗಳನ್ನು ನೀಡಿದರು

Ad Widget

Ad Widget

Ad Widget alt="Ad Widget"/>

Ad Widget

ಶತ ವರ್ಷಗಳ ಬಳಿಕ ಬ್ರಹ್ಮರಥ ನಿರ್ಮಾಣಗೊಂಡಿದ್ದು ಕ್ಷಣಗಣನೆ ಆರಂಭಗೊಂಡಿದೆ. ಈ ಅಪೂರ್ವ ಕಾರ್ಯದಲ್ಲಿ ಭಕ್ತರು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.

Ad Widget

Ad Widget <> Ad Widget

ರಥೋತ್ಸವ ಸಂದರ್ಭದಲ್ಲಿ ಭಕ್ತರಿಗೆ ಸೇವೆ ಸಲ್ಲಿಸುವ ಅವಕಾಶ ಇದ್ದು ಅವೆಲ್ಲವನ್ನೂ ಪಡೆಯುವ ಪುಣ್ಯ ನಮ್ಮ ಪಾಲಿಗೆ ಸಿಕ್ಕಿದೆ. ಪೆರುವಾಜೆ ದೇವಿಯ ರಥೋತ್ಸವ ಅತ್ಯಂತ ಯಶಸ್ವಿಯಾಗಿ ನಡೆದು ಹತ್ತೂರಿನ ಭಕ್ತರ ಭಾಗವಹಿಸುವಂತಾಗಬೇಕು ಎಂದರು.



Ad Widget

1.25 ಕೋ.ರೂ. ಅಗತ್ಯವಿದೆ
ಪದ್ಮನಾಭ ಶೆಟ್ಟಿಯವರು ಮಾತನಾಡಿ ” ರಥ ನಿರ್ಮಾಣ ಕಾರ್ಯ ಶೇ.80 ರಷ್ಟು ಪೂರ್ಣಗೊಂಡಿದ್ದು ಹಂತ ಹಂತವಾಗಿ ಜೋಡಣೆಯ ಕೆಲಸ ನಡೆಯುತ್ತಿದೆ. ರಥ ತಂಗಲು ಶೆಡ್ ನಿರ್ಮಾಣ ಪ್ರಗತಿಯಲ್ಲಿದೆ. ಬ್ರಹ್ಮರಥ ಸಂಚಾರಕ್ಕೆ ಈಗಿನ ರಥ ಬೀದಿಯನ್ನು ತಗ್ಗಿಸಿ ಸಮತ್ತಟ್ಟು ಮಾಡಬೇಕಿದ್ದು ಇದಕ್ಕೆ ಸುಮಾರು 20 ಲಕ್ಷ ರೂ.ಮೊತ್ತದ ಅಗತ್ಯ ಇದೆ. ಈ ವರ್ಷ ತಾತ್ಕಾಲಿಕವಾಗಿ ಸಮತ್ತಟ್ಟು ಮಾಡಲು ಶಾಸಕರು ಅನುದಾನ ಒದಗಿಸುವ ಭರವಸೆ ನೀಡಿದ್ದು ಈಗಿನ ರಥ ಬೀದಿಯಲ್ಲೇ ರಥ ಸಂಚರಿಸಲಿದೆ. ಮುಂದಿನ ವರ್ಷಕ್ಕೆ ಶಾಶ್ವತ ರಥಬೀದಿ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ. ಬ್ರಹ್ಮರಥ, ಶೆಡ್ ನಿರ್ಮಾಣ, ರಥಬೀದಿ ಸಮತ್ತಟ್ಟು ಕಾರ್ಯಕ್ಕೆ ಅಂದಾಜು 1.25 ಕೋ.ರೂ. ಅಗತ್ಯ ಇದ್ದು ಈಗಾಗಲೇ ಭಕ್ತ ವೃಂದದಿಂದ ದೇಣಿಗೆಯ ರೂಪದಲ್ಲಿ 33 ಲಕ್ಷ ರೂ. ಮೊತ್ತ ಬಂದಿದೆ ಎಂದು ಹೇಳಿದರು

Ad Widget

Ad Widget

ಜ.16 : ರಥ ಸಮರ್ಪಣೆ
ಜ.15 ರಂದು ಸಂಜೆ ರಥ ಸಮರ್ಪಣೆಗೆ ಪೂರ್ವಭಾವಿಯಾಗಿ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ. ರಾತ್ರಿ ಉದ್ಭವ ಗಣಪತಿಗೆ ಮೂಡಪ್ಪ ಸೇವೆ, ಉದ್ಭವ ಜಲದುರ್ಗಾದೇವಿಗೆ ದೊಡ್ಡ ರಂಗಪೂಜೆ ನೆರವೇರಲಿದೆ. ಜ.16 ಕ್ಕೆ ಬೆಳಗ್ಗೆ ಮಹಾಗಣಪತಿ ಹೋಮ, ಬ್ರಹ್ಮರಥ ಶುದ್ಧಿ ಕಲಶ, ಶ್ರೀ ದೇವರಿಗೆ ಬ್ರಹ್ಮರಥ ಸಮರ್ಪಣೆ, ಪಲ್ಲಕ್ಕಿ ಸಮರ್ಪಣೆ ನಡೆಯಲಿದೆ

ಜ.19 : ಬ್ರಹ್ಮರಥೋತ್ಸವ

ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಮಾತನಾಡಿ, ಬ್ರಹ್ಮರಥೋತ್ಸವದ ಕಾರಣದಿಂದ ಈ ಬಾರಿಯ ಜಾತ್ರೆಯಲ್ಲಿ ಒಂದೆರಡು ಬದಲಾವಣೆ ಇರಲಿದೆ. ಈ ಬಾರಿ ಜ.17 ರಂದು ರಾತ್ರಿ ಶ್ರೀ ದೇವರ ಪೇಟೆ ಸವಾರಿ ನಡೆಯಲಿದೆ. ಜ.18 ರಂದು ದೀಪೊತ್ಸವ, ಪಲ್ಲಕ್ಕಿ ಉತ್ಸವ ನೆರವೇರಲಿದೆ. ಜ.19 ರಂದು ರಾತ್ರಿ ಪಲ್ಲಕ್ಕಿ ಉತ್ಸವ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ ನಡೆದು ಬಳಿಕ ಪಿಲಿಭೂತದ ಭಂಡಾರ ಬರಲಿದೆ. ಅದಾದ ನಂತರ ದೈವ-ದೇವರ ಮುಖಾಮುಖಿ ನಡೆದು ಕ್ಷೇತ್ರದ ರಥಬೀದಿಯಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ. ಒಟ್ಟು ಎರಡು ಸಲ ಪಲ್ಲಕ್ಕಿ ಉತ್ಸವ ನೆರವೇರಲಿದೆ.

ಡಿ.14 : ಚಪ್ಪರ ಮುಹೂರ್ತ
ಜಾತ್ರೆಗೆ ಪೂರ್ವಭಾವಿಯಾಗಿ ಡಿ.14 ರಂದು ಚಪ್ಪರ ಮುಹೂರ್ತ ನಡೆಯಲಿದೆ. ವಿವಿಧ ಸಂಘ ಸಂಸ್ಥೆ, ಭಕ್ತರು ಕರಸೇವೆ ರೂಪದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಯಿತು.

ಪೆರುವಾಜೆ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ, ಸದಸ್ಯ ಸಚಿನ್‍ರಾಜ್ ಶೆಟ್ಟಿ ಪೆರುವಾಜೆ, ವೆಂಕಪ್ಪ ಗೌಡ, ಜಗದೀಶ್ ರೈ ಪೆರುವಾಜೆ ಮೊದಲಾದವರು ಸಲಹೆ ಸೂಚನೆಗಳನ್ನು ನೀಡಿದರು. ಇದೇ ಸಂದರ್ಭದಲ್ಲಿ ನವರಾತ್ರಿ ಉತ್ಸವದ ಲೆಕ್ಕಚಾರವನ್ನು ಸಭೆಗೆ ಮಂಡಿಸಲಾಯಿತು.
ವೇದಿಕೆಯಲ್ಲಿ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್, ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಪ್ರಮುಖರಾದ ಅಮರಾಥ ಶೆಟ್ಟಿ ಪೆರುವಾಜೆಗುತ್ತು, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಕೆಎಂಬಿ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸದಸ್ಯರಾದ ಪಿ.ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ, ಪಿ.ಜಗನ್ನಾಥ ರೈ, ದಾಮೋದರ ನಾಯ್ಕ, ಭಾಗ್ಯಲಕ್ಷ್ಮೀ ಅರ್ನಾಡಿ, ಯಶೋಧಾ ಎ.ಎಸ್., ಮಾಜಿ ಸದಸ್ಯ ಭೋಜರಾಜ ಶೆಟ್ಟಿ ಕಲ್ಕಂಪಾಡಿಗುತ್ತು ಮೊದಲಾದವರಿದ್ದರು. ವ್ಯವಸ್ಥಾಪನ ಸಮಿತಿ ಸದಸ್ಯ ನಾರಾಯಣ ಕೊಂಡೆಪ್ಪಾಡಿ ವಂದಿಸಿದರು. ಮಾಜಿ ಆಡಳಿತಾಧಿಕಾರಿ ಪದ್ಮನಾಭ ನೆಟ್ಟಾರು ನಿರೂಪಿಸಿದರು.

Ad Widget

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಗ್ಲಿಷ್ ಭಾಷಣ ಸ್ಪರ್ಧೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.

Ad Widget

Ad Widget

Ad Widget

Ad Widget

ಪುತ್ತೂರು, ಅ.8: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.

Ad Widget

Ad Widget

Ad Widget alt="Ad Widget"/>

Ad Widget

“ಎಮೋಷನಲ್ ಇಂಟೆಲಿಜೆನ್ಸ್, ಎಮೋಷನಲ್ ಲೈಫ್, ಎಮೋಷನಲ್ ಕೋಶಂಟ್ ಮತ್ತು ಎಮೋಷನಲ್ ಮ್ಯಾನೇಜ್ಮೆಂಟ್” ಎಂಬ ವಿಷಯದ ಕುರಿತು ನಡೆದ ಈ ಸ್ಪರ್ಧೆಯನ್ನು ಪ್ರಾಂಶುಪಾಲರಾದ ರೆ| ಡಾ| ಆಂಟನಿ ಪ್ರಕಾಶ್ ಮೊಂತೇರೊ ಅವರು ಉದ್ಘಾಟಿಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಭಾವನಾತ್ಮಕ ಬುದ್ಧಿವಂತಿಕೆ ಮತ್ತು ಭಾವನಾತ್ಮಕ ನಿರ್ವಹಣೆಯ ಪ್ರಸ್ತುತತೆಯನ್ನು ಎತ್ತಿ ತೋರಿಸಿದರು. ಯಶಸ್ಸಿಗೆ ಕೇವಲ ಶೈಕ್ಷಣಿಕ ಜ್ಞಾನವೊಂದೇ ಸಾಕಾಗುವುದಿಲ್ಲ; ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ನಿರ್ವಹಿಸುವ, ಇತರರೊಂದಿಗೆ ಸಹಾನುಭೂತಿ ಹೊಂದುವ, ಸವಾಲುಗಳನ್ನು ಎದುರಿಸುವ ಮತ್ತು ಆರೋಗ್ಯಕರ ಸಂಬಂಧಗಳನ್ನು ಕಾಪಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು” ಎಂದು ಅವರು ಅಭಿಪ್ರಾಯಪಟ್ಟರು.



Ad Widget

ಭಾಷಣ ಸ್ಪರ್ಧೆಗಳಂತಹ ವೇದಿಕೆಗಳು ವಿದ್ಯಾರ್ಥಿಗಳು ತಮ್ಮ ಆಲೋಚನೆಗಳನ್ನು ಆತ್ಮವಿಶ್ವಾಸದಿಂದ ವ್ಯಕ್ತಪಡಿಸಲು, ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಲು ಮತ್ತು ತಮ್ಮ ಆಲೋಚನೆಗಳನ್ನು ಪರಿಣಾಮಕಾರಿಯಾಗಿ ಸಂವಹನ ಮಾಡಲು ಕಲಿಯಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು.

Ad Widget

Ad Widget

ಸ್ಪರ್ಧೆಯಲ್ಲಿ ಕಾಲೇಜಿನ ನಿವೃತ್ತ ಉಪ-ಪ್ರಾಂಶುಪಾಲರಾದ ಡಾ| ಎ. ಪಿ. ರಾಧಾಕೃಷ್ಣ ಮತ್ತು ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ| ಈಶ್ವರ ಗೌಡ ಪಿ.  ಅವರು ತೀರ್ಪುಗಾರರಾಗಿ ಭಾಗವಹಿಸಿದ್ದರು

ಸ್ಪರ್ಧೆಯ ಫಲಿತಾಂಶ:

ತೀವ್ರ ಪೈಪೋಟಿಯಿಂದ ನಡೆದ ಈ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಎಂ.ಸಿ.ಎ ತರಗತಿಯ ಡೆಲಿಶಾ ಲೋಬೋ ಪ್ರಥಮ ಸ್ಥಾನ, ತೃತೀಯ ಬಿ.ಕಾಂನ ಅಪೂರ್ವ ಡಿ. ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಬಿ.ಸಿ.ಎ ತರಗತಿಯ ಪ್ರತ್ಯಕ್ಷ ಪಿ. ಎ. ತೃತೀಯ ಸ್ಥಾನ ಪಡೆದರು. ಜೆನಿಶಾ ಕುಟಿನ್ಹಾ (ದ್ವಿತೀಯ ಬಿ.ಎಸ್ಸಿ) ಮತ್ತು ಕೃಷ್ಣ ವಂಶಿ (ದ್ವಿತೀಯ ಬಿ.ಬಿ.ಎ) ಸಮಾಧಾನಕರ ಬಹುಮಾನಗಳನ್ನು ಪಡೆದುಕೊಂಡರು.

ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಸಂಯೋಜಕರಾದ ಪ್ರಶಾಂತ್ ರೈ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕರಾದ ಅಬ್ದುಲ್ ರೆಹಮಾನ್ ಜಿ. ವಂದನಾರ್ಪಣೆ ಮಾಡಿದರು ಸನ್ನಿಧಿ (ಪ್ರಥಮ ಬಿ.ಬಿ.ಎ.) ಮತ್ತು ಮಾನಸ (ತೃತೀಯ ಬಿ.ಎಸ್ಸಿ.) ಪ್ರಾರ್ಥಿಸಿದರು.

ಸ್ನಾತಕೋತ್ತರ ವಿಭಾಗದ ಗ್ರಂಥಪಾಲಕ ಮನೋಹರ್ ಎಸ್. ಜಿ. ಹಾಗೂ ಎಂ.ಸಿ.ಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅಕ್ಷತಾ ಬಿ. ಸಹಕರಿಸಿದರು.

Ad Widget
Continue Reading

ಶಿಕ್ಷಣ

Philomena-ಎತ್ತರ ಜಿಗಿತ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಸುಫೈ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ತುಮಕೂರು ಡಿಸ್ಟ್ರಿಕ್ಟ್ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು, ಅ 23 ಮತ್ತು 27ರಂದು ತಮಿಳುನಾಡಿನ ಜೆ. ಎನ್ ಕ್ರೀಡಾಂಗಣ ಚೆನ್ನೈ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎತ್ತರ ಜಿಗಿತ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಬಪ್ಪಳಿಗೆ ನಿವಾಸಿ ಇಸ್ಮೈಲ್ ಪಿ ಎಂ ಹಾಗೂ ಕಮರುನ್ನಿಸಾ ದಂಪತಿಗಳ ಪುತ್ರನಾಗಿರುತ್ತಾರೆ.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.



Ad Widget
Ad Widget
Continue Reading

ಬಿಗ್ ನ್ಯೂಸ್

AYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ

Published

on



Ad Widget

Ad Widget

Ad Widget

Ad Widget

ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.

Ad Widget

Ad Widget

Ad Widget

Ad Widget

ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಡಾ. ಪ್ರದೀಪ್ ನಾವೂರು ಅವರು ವೈದ್ಯಕೀಯ ಸೇವೆಯ ಜೊತೆಗೆ ಸಮಾಜದ ಆರೋಗ್ಯ ಮತ್ತು ಜಾಗೃತಿಯ ದೃಷ್ಟಿಯಿಂದ ಹಲವಾರು ಉಪನ್ಯಾಸ ಹಾಗೂ ಆರೋಗ್ಯ ಸಂಬಂಧಿತ ಕಾರ್ಯ ಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ದೇವಸ್ಥಾನ,ದೈವಸ್ಥಾನ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಮುಂಚೂಣಿ ವ್ಯಕ್ತಿಯಾಗಿದ್ದಾರೆ.

Ad Widget

Ad Widget <> Ad Widget

ಇಂತಹ ಸಮಾಜಮುಖಿ ಹಾಗೂ ಸೇವಾಮನೋಭಾವದ ವ್ಯಕ್ತಿಯ ಆರೋಗ್ಯ ಕ್ಲಿನಿಕ್ ಗೆ ಯಾರೋ ಕಿಡಿಗೇಡಿಗಳು ದುರುದ್ದೇಶದಿಂದ ಬೆಂಕಿ ಹಚ್ಚಿರುವುದು ಅತ್ಯಂತ ಕಳವಳಕಾರಿ ಹಾಗೂ ಖಂಡನೀಯ ಸಂಗತಿಯಾಗಿದೆ. ವೈದ್ಯರು ಸಮಾಜದ ಆರೋಗ್ಯ ಕಾಪಾಡುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದು ಅವರ ಸೇವಾಕೇಂದ್ರದ ಮೇಲೆಯೇ ಇಂತಹ ಕೃತ್ಯಕ್ಕೆ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.



Ad Widget

ಡಾ. ಪ್ರದೀಪ್ ನಾವೂರು ಅವರು ಕೇವಲ ವೈದ್ಯರಲ್ಲ, ಸಮಾಜದ ಪ್ರತಿಯೊಬ್ಬರಿಗೂ ಅಗತ್ಯವಿರುವ ಒಬ್ಬ ಉತ್ತಮ ವ್ಯಕ್ತಿತ್ವದ ಸಮಾಜಮುಖಿ ವ್ಯಕ್ತಿ. ಅವರ ಆರೋಗ್ಯ ಸೇವೆ ಹಾಗೂ ಸಾಮಾಜಿಕ ಕಾಳಜಿ ಶ್ಲಾಘನೀಯವಾಗಿದೆ. ಇಂತಹ ವ್ಯಕ್ತಿಯ ಕ್ಲಿನಿಕ್ ಗೆ ಬೆಂಕಿ ಹಚ್ಚಿರುವುದು ಅತ್ಯಂತ ಖಂಡನೀಯ.

Ad Widget

Ad Widget

ಇದು ಸಮಾಜ ಘಾತುಕ ಕೆಲಸ .ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ, ಕೃತ್ಯದ ಹಿಂದಿರುವ ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ಅಧ್ಯಕ್ಷ ಡಾ. ಹರಿಕೃಷ್ಣ ಪಾಣಾಜೆ ಒತ್ತಾಯಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading