ಅಪರಾಧ
Wild Elephant Attack on Car: ಬೆಳ್ತಂಗಡಿ : ಕಾಡಾನೆ ರೌದ್ರವತಾರ – ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರನ್ನು ಎತ್ತಿ ಒಗೆಯಿತು – ಪುತ್ತೂರಿನ ಇಬ್ಬರಿಗೆ ಗಾಯ; ಬೆಳಿಗ್ಗೆ ಶಾಂತವಾಗಿದ್ದ ಆನೆ ರಾತ್ರಿಯಾಗುತ್ತಲೇ ಕೆರಳಲು ಕಾರಣವೇನು ಗೊತ್ತೇ?
ಕಾರೊಂದರ ಮೇಲೆ ಕಾಡಾನೆಯೊಂದು (Wild Elephant) ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸಿದ ಹಾಗೂ ಕಾರಿಗೆ ಹಾನಿ (Attack on car) ಉಂಟು ಮಾಡಿದ ಘಟನೆ ಬೆಳ್ತಂಗಡಿ (Belthangady) ತಾಲೂಕಿನ ನೆರಿಯದ ಅಣಿಯೂರಿನಲ್ಲಿ ಸೋಮವಾರ ನ.27 ರಾತ್ರಿ ಸಂಭವಿಸಿದೆ. ಕಾರಿನಲ್ಲಿ ಮಗು ಸಹಿತ ಏಳು ಮಂದಿಯಿದ್ದು ಅವರು ನೆರಿಯದ ಸಂಬಂಧಿಕರ ಮನೆಗೆ ಪ್ರಯಾಣಿಸುತ್ತಿದ್ದರು.
ಪುತ್ತೂರು ಮೂಲದ ಅಬ್ದುಲ್ ರೆಹಮಾನ್ (40) ಮತ್ತು ನಾಸಿಯಾ (30) ಗಾಯಾಳುಗಳು ಎಂದು ತಿಳಿದು ಬಂದಿದೆ. ರೆಹಮಾನ್ ಅವರ ತಲೆ ಮತ್ತು ಕಾಲಿಗೆ ಹಾಗೂ ನಾಸಿಯಾ ಅವರ ಕಾಲಿಗೆ ಗಾಯವಾಗಿದೆ. ಅವರಿಗೆ ಕಕ್ಕಿಂಜೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಬೆಳ್ತಂಗಡಿ ತಾಲೂಕಿನ ಹಲವು ಗ್ರಾಮಗಳು ಅರಣ್ಯ ಪ್ರದೇಶದ ಪಕ್ಕದಲ್ಲಿದ್ದು ಇಲ್ಲಿ ಕಾಡಾನೆಗಳ ಹಾವಳಿ ನಿತ್ಯ ನಿರಂತರ. ಈ ಕಾಡಾನೆಗಳು ನಾಡಿಗೆ ದಾಂಗುಡಿಯಿಟ್ಟ ಸಂದರ್ಭ ಕೃಷಿಗೆ ಹಾನಿ ಉಂಟು ಮಾಡುತ್ತಿದ್ದವೇ ಹೊರತು ವಾಹನದ ಮೇಲೆ ಅಥಾವ ಮನುಷ್ಯನ ಮೇಲೆ ಹಾನಿ ಮಾಡಿದ ನಿದರ್ಶನಗಳು ಈ ಭಾಗದಲ್ಲಿ ಇರಲಿಲ್ಲ ಎನ್ನಲಾಗುತ್ತಿದೆ.

ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ತೋಟತ್ತಾಡಿ ಪರಿಸರದಲ್ಲಿ ಸೋಮವಾರ ಬೆಳಗ್ಗೆ ಇದೇ ಕಾಡಾನೆ ಕಾಣಿಸಿದೆ. ಆಗ ಆನೆ ಶಾಂತವಾಗಿತ್ತು. ಆ ಪರಿಸರದಲ್ಲಿ ಓಡಾಡಿ ಯಾವುದೇ ಹಾನಿ ಎಸಗದೆ ಕಾಡಿಗೆ ತೆರಳಿತ್ತು. ಆದರೇ ರಾತ್ರಿಯ ವೇಳೆ ನೆರಿಯದ ಬಯಲು ಶಾಲೆಯ ಬಳಿ ಮತ್ತೆ ಆನೆ ಕಾಣಿಸಿಕೊಂಡಿದೆ. ಅದೆ ವೇಳೆ ರಸ್ತೆಯಲ್ಲಿ ಜೀಪ್ ಒಂದು ಹೋಗಿದ್ದು ಅದರ ಹೆಡ್ ಲೈಟ್ ಬೆಳಕು ಆನೆಯ ಕಣ್ಣಿಗೆ ಕುಕ್ಕಿದಂತಾಗಿದೆ. ತನ್ನ ಮೇಲೆ ಯಾರೋ ದಾಳಿ ಮಾಡಲು ಬಂದಿದ್ದಾರೆ ಅಂದು ಕೊಂಡ ಆನೆ ವ್ಯಗ್ರವಾಗಿದೆ.
ಈ ನಡುವೆ ಜನರು ಕೂಡ ಬೊಬ್ಬೆ ಹಾಕಿ, ಪಟಾಕಿ ಸಿಡಿಸಿ ಆನೆಯ ಸಿಟ್ಟನ್ನು ಇಮ್ಮಡಿಗೊಳಿಸಿದ್ದಾರೆ. ಇದರಿಂದಾಗಿ ಕೆರಳಿದ ಆನೆ ಪರಿಸರದ ಜನನಿಬಿಡ ಪ್ರದೇಶಗಳಲ್ಲಿ ಓಡಾಟ ನಡೆಸಿದೆ. ಒಬ್ಬರ ಮನೆಯಂಗಳಕ್ಕೂ ಹೋಗಿತ್ತು ಹಾಗೂ ರಸ್ತೆ ಬದಿ ಇರುವ ಮನೆಯೊಂದರ ಗೇಟನ್ನು ಮುರಿಯಲು ಯತ್ನಿಸಿತ್ತು. ಆಗ ಸುತ್ತಮುತ್ತಲ ಮನೆಯವರು ಬೊಬ್ಬೆ ಹೊಡೆದಿದ್ದರು.

ಕ್ರೋಧಿತ ಆನೆ ಆ ರಸ್ತೆಯಲ್ಲಿ ಸಂಚರಿಸುತ್ತಿರುವುದನ್ನು ತಿಳಿದಿದ್ದ ಸ್ಥಳೀಯರು ಆಗ ಆ ದಾರಿಯಾಗಿ ಬಂದ ಕಾರನ್ನು ಮುನ್ನೆಚ್ಚರಿಕೆ ದೃಷ್ಟಿಯಿಂದ ನಿಲ್ಲಿಸುವಂತೆ ಸೂಚಿಸಿದರು. ಕಾರನ್ನು ಕಟ್ಟಡವೊಂದರ ಬದಿಯಲ್ಲಿ ನಿಲ್ಲಿಸುವಷ್ಟರಲ್ಲಿ ಆನೆ ಅದೇ ಪರಿಸರಕ್ಕೆ ಆಗಮಿಸಿತ್ತು. ಕಾರಿನಲ್ಲಿದ್ದ ಕೆಲವರು ಅಷ್ಟರಲ್ಲಿ ಕೆಳಗೆ ಇಳಿದು ಪಕ್ಕದ ಮನೆಯಲ್ಲಿ ರಕ್ಷಣೆ ಪಡೆದರು.

ಆನೆಯು ದಾಡೆಯ ಮೂಲಕ ಕಾರನ್ನು ಕಟ್ಟಡದ ಗೋಡೆಗೆ ಗುದ್ದಿ ಜಖಂಗೊಳಿಸಿ ಅನಂತರ ಅಲ್ಲಿಂದ ಮನೆಯ ಕಾಂಪೌಂಡ್ಗೆ ನುಗ್ಗಿ ಅಲ್ಲಿಂದ ತೋಟಕ್ಕೆ ಹೋಗಿದೆ. ಬಳಿಕ ನದಿಯ ಪರಿಸರದಲ್ಲಿ ಕಂಡಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ. ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬಂದಿ ಪಟಾಕಿ ಸಿಡಿಸುವ ಮೂಲಕ ಆನೆಯನ್ನು ಕಾಡಿನತ್ತ ಅಟ್ಟಲು ಕ್ರಮ ಕೈಗೊಂಡಿದ್ದಾರೆ.
.
ಅಂತರ ರಾಜ್ಯ
Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.
ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.
ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.
ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.
ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.
ಸ್ಥಳೀಯ
Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.
ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.















