ಸಾಮಾಜಿಕ ಮಾಧ್ಯಮ
Wear Mask ಚೀನಾದಲ್ಲಿ ಹರಡುತ್ತಿರುವ ನ್ಯುಮೋನಿಯಾ – ಕರ್ನಾಟಕದಲ್ಲಿ ಇವರಿಗೆ ಮಾಸ್ಕ್ ಕಡ್ಡಾಯ
ಬೆಂಗಳೂರು, ನ.29: ಚೀನಾದಲ್ಲಿ ಕೊರೊನಾ ವೈರಸ್ (Corona Virus) ಬಳಿಕ ಈಗ ಮತ್ತೆ ಹೊಸ ಬಗೆಯ ನ್ಯುಮೋನಿಯಾ ಕಾಯಿಲೆ (pneumonia) ವ್ಯಾಪಕವಾಗಿ ಹರಡಿದೆ. ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಉಲ್ಬಣವಾಗಿದ್ದು, ನ್ಯುಮೋನಿಯಾದಿಂದ ಬಳಲುತ್ತಿರುವ ಮಕ್ಕಳಿಂದ ಆಸ್ಪತ್ರೆಗಳು ತುಂಬಿಹೋಗಿವೆ.
ಚೀನಾದ ಉತ್ತರ ಭಾಗದ ಮಕ್ಕಳಲ್ಲಿ ಕಾಣಿಸಿಕೊಂಡಿರುವ ನಿಗೂಢ ನ್ಯುಮೋನಿಯಾ ಪ್ರಕರಣಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ರಾಜ್ಯದಲ್ಲಿ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಈ ಮಾರ್ಗಸೂಚಿಯನ್ವಯ ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಸೋಮವಾರ ನಡೆದ ಇಲಾಖೆಯ ರಾಜ್ಯ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯವನ್ನು ಆಧರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ. ರಂದೀಪ್ ಮಂಗಳವಾರ ಈ ಸುತ್ತೋಲೆ ಹೊರಡಿಸಿದ್ದಾರೆ.
ಸರಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳ ಸಿಬ್ಬಂದಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ನ್ಯುಮೋನಿಯಾ ಚಿಕಿತ್ಸೆಗೆ ಅಗತ್ಯವಿರುವ ಮಾತ್ರೆಗಳು ಹಾಗೂ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ಆಗತ್ಯವಿರುವಷ್ಟು ಪಿಪಿಇ ಕಿಟ್ ಗಳನ್ನು ದಾಸ್ತಾನು ಮಾಡಿಕೊಳ್ಳುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಶೀತ–ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್ಐ) ಹಾಗೂ ತೀವ್ರ ಉಸಿರಾಟದ ಸಮಸ್ಯೆಗಳುಳ್ಳ (ಸಾರಿ) ಪ್ರಕರಣಗಳನ್ನು ಆರೋಗ್ಯ ಇಲಾಖೆಯ ಪೋರ್ಟಲ್ ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು. ಯಾವುದೇ ಪ್ರದೇಶಗಳಲ್ಲಿ ಈ ಪ್ರಕರಣಗಳ ಸಂಖ್ಯೆ ಅನಿಯಮಿತ ಪ್ರಮಾಣದಲ್ಲಿ ಹೆಚ್ಚಳವಾದರೆ ವಿಶೇಷ ನಿಗಾ ಇರಿಸಬೇಕು. ಅಂತಹ ಪ್ರಕರಣಗಳ ಪರೀಕ್ಷಾ ವರದಿಗಳ ಕುರಿತು ಆರೋಗ್ಯ ಇಲಾಖೆಯ ಪೋರ್ಟಲ್ನಲ್ಲಿ ಮಾಹಿತಿ ದಾಖಲಿಸಬೇಕು ಎಂದು ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.
ಕೋವಿಡ್ ನಿಯಂತ್ರಣಕ್ಕೆ ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೋವಿಡ್ ಚಿಕಿತ್ಸೆಗೆ ನಿಗದಿಪಡಿಸಿದ್ದ ಎಲ್ಲ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಸನ್ನದ್ಧವಾಗಿರುವ ಕುರಿತು ಪರಿಶೀಲನೆ ನಡೆಸಬೇಕು. ಹಾಸಿಗೆಗಳ ಲಭ್ಯತೆ, ವೈದ್ಯರು, ಅರೆವೈದ್ಯಕೀಯ ಮತ್ತು ಇತರ ಸಿಬ್ಬಂದಿಯ ಲಭ್ಯತೆ, ಪಿಪಿಇ ಕಿಟ್, ಆಮ್ಲಜನಕ, ಔಷಧಿಗಳ ದಾಸ್ತಾನಿನ ಕುರಿತು ಖಚಿತಪಡಿಸಿಕೊಳ್ಳಬೇಕು. ನ್ಯುಮೋನಿಯಾ ಸೋಂಕಿನಿಂದ ಉದ್ಭವಿಸಬಹುದಾದ ಪರಿಸ್ಥಿತಿ ಎದುರಿಸಲು ಆಸ್ಪತ್ರೆಗಳನ್ನು ಸಜ್ಜುಗೊಳಿಸಬೇಕು ಎಂದು ಆಯುಕ್ತರು ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.
ಸಮುದಾಯ ಹಂತದಲ್ಲಿ ತೀವ್ರ ನಿಗಾ ಇರಿಸಬೇಕು. ಒಂದೇ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ನ್ಯುಮೋನಿಯಾ ಪ್ರಕರಣಗಳು ಪತ್ತೆಯಾದಲ್ಲಿ ಆ ಬಗ್ಗೆ ವಿಶೇಷ ನಿಗಾ ಇರಿಸಬೇಕು. ಕೋವಿಡ್ ಸೋಂಕು ದೃಢಪಡದೇ ತೀವ್ರ ಉಸಿರಾಟದಿಂದ ಸಾವು ಸಂಭವಿಸಿದ ಪ್ರಕರಣಗಳಲ್ಲಿ ಹೆಚ್ಚಿನ ಪರೀಕ್ಷೆಗಳನ್ನು ನಡೆಸಬೇಕು. ಎಲ್ಲ ವೈರಾಣು ಸಂಶೋಧನಾ ಕೇಂದ್ರಗಳು ಮತ್ತು ಪ್ರಯೋಗಾಲಯಗಳನ್ನೂ ಸನ್ನದ್ಧ ಸ್ಥಿತಿಯಲ್ಲಿಡಬೇಕು ಎಂದು ಸೂಚಿಸಲಾಗಿದೆ.
ಸಾರ್ವಜನಿಕರಿಗೆ ಸೂಚನೆ
- ಕೆಮ್ಮುವಾಗ ಮತ್ತು ಶೀನುವಾಗ ಕರವಸ್ತ್ರದಿಂದ ಬಾಯಿ, ಮೂಗು ಮುಚ್ಚಿಕೊಳ್ಳಬೇಕು
- ಸೋಪ್ ಬಳಸಿ ಆಗಾಗ ಕೈ ತೊಳೆದುಕೊಳ್ಳಬೇಕು
- ಶೀತ ಮತ್ತು ಜ್ವರ 5ರಿಂದ 7 ದಿನಗಳು ಇರಲಿವೆ
- ಎಳೆ ಮಕ್ಕಳು, ವೃದ್ಧರು, ಗರ್ಭಿಣಿಯರು, ಗಂಭೀರ ಸ್ವರೂಪದ ಅನಾರೋಗ್ಯ ಸಮಸ್ಯೆ ಇರುವವರು ಎಚ್ಚರ ವಹಿಸಬೇಕು
- ಶೀತ–ಜ್ವರ ಬಾಧೆ(ಐಎಲ್ಐ, ಸಾರಿ ಲಕ್ಷಣ) ಇದ್ದರೆ ಹತ್ತಿರ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕು.
ಸಾಮಾಜಿಕ ಮಾಧ್ಯಮ
ನೀವು ಕಳ್ಳರ ಜೊತೆಗಾದರೂ ಇರಿ. ಯಾರ ಜೊತೆಗಾದರೂ ಇರಿ. ಆದರೆ, ಸತ್ಯದ ಪರವಾಗಿ ಇರಿ: ಎಲೆಕ್ಟ್ರಾನಿಕ್ ಮೀಡಿಯಾದವರಿಗೆ ಸಿಎಂ ಕರೆ : ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ – ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.
ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.
ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.
ಸಂಘದ ಬೇಡಿಕೆ
ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಸಿನೆಮಾ
Kiara Advani War 2 bikini look: ಕಿಯಾರಾ ಬಿಕಿನಿ ಕಿಡಿ – ಎಲ್ಲರ ಕಣ್ಣು ಅಲ್ಲೇ! ‘ವಾರ್ 2’ ಟೀಸರ್‌ನಿಂದ ಇಂಟರ್ನೆಟ್‌ನಲ್ಲಿ ಅಲ್ಲೋಲ ಕಲ್ಲೋಲ

ವಾರ್ 2′ ಟೀಸರ್‌ನಲ್ಲಿ ಕಿಯಾರಾ ಅಡ್ವಾಣಿಯವರ ಚಿನ್ನದ ಬಿಕಿನಿ ಲುಕ್ ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅವರ ಕೇವಲ ಎರಡು ಸೆಕೆಂಡ್‌ಗಳ ಹಾಟ್ ದೃಶ್ಯವು ಎಲ್ಲೆಡೆ ಭಾರಿ ಚರ್ಚೆಗೆ ಕಾರಣವಾಗಿದೆ.
Kiara Advani War 2 bikini look ಬಾಲಿವುಡ್‌ನ ಬ್ಯೂಟಿ ಕ್ವೀನ್ ಕಿಯಾರಾ ಅಡ್ವಾಣಿ ಇದೀಗ ಇಂಟರ್ನೆಟ್‌ನಲ್ಲಿ ಅಕ್ಷರಶಃ ಬೆಂಕಿ ಹಚ್ಚಿದ್ದಾರೆ! “ವಾರ್ 2” ಚಿತ್ರದ ಟೀಸರ್‌ನಲ್ಲಿ ಅವರು ತೊಟ್ಟ ಚಿನ್ನದ ಬಿಕಿನಿ ಇದೀಗ ನ್ಯಾಷನಲ್ ಹಾಟ್ ಟಾಪಿಕ್. ಜೂನಿಯರ್ ಎನ್‌ಟಿಆರ್ ಹುಟ್ಟುಹಬ್ಬದ ಗಿಫ್ಟ್ ಆಗಿ ರಿಲೀಸ್ ಆದ ಈ ಟೀಸರ್‌ನಲ್ಲಿ ಹೃತಿಕ್ ರೋಷನ್‌ರವರ ಮೈ ಜುಮ್ಮೆನ್ನಿಸೋ ಆಕ್ಷನ್ ಸೀಕ್ವೆನ್ಸ್‌ಗಳಿವೆ, ನಿಜ. ಆದರೆ, ಎಲ್ಲರ ಕಣ್ಣು, ಮನಸ್ಸು ಕದ್ದಿದ್ದು ಮಾತ್ರ ಕಿಯಾರಾ ಅವರ ಹಾಟ್ ಅವತಾರ!
ಬರೀ ಎರಡೇ ಎರಡು ಸೆಕೆಂಡುಗಳ ಕಾಲ ಕಡಲತೀರದಲ್ಲಿ, ಚಿನ್ನದ ಬಿಕಿನಿಯಲ್ಲಿ ಕಂಗೊಳಿಸಿರುವ ಕಿಯಾರಾ, ತಮ್ಮ ಫಿಟ್ ದೇಹ ಮತ್ತು ಆಕರ್ಷಕ ಮೈಮಾಟದಿಂದ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ರೆಡ್ಡಿಟ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ಕಾಳ್ಗಿಚ್ಚಿನಂತೆ ಹಬ್ಬಿದೆ. ‘ಕಿಯಾರಾ ಎರಡೇ ಸೆಕೆಂಡ್‌ನಲ್ಲಿ ಇಡೀ ಶೋ ಕದ್ದಿದ್ದಾರೆ’ ಎಂದು ಕೆಲವರು ಹೊಗಳಿದರೆ, ‘ಗರ್ಭಿಣಿಯಾಗಿದ್ದರೂ ಕಿಯಾರಾ ದೇವತೆಯಂತೆ ಕಾಣುತ್ತಿದ್ದಾರೆ’ ಎಂದು ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ.ಅವರ ಫಿಟ್ನೆಸ್, ಆಕರ್ಷಕ ಮೈಮಾಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಸದ್ಯ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಿಯಾರಾಗೆ, ‘ವಾರ್ 2’ ಹಲವು ಪ್ರಥಮಗಳ ಚಿತ್ರ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್‌ನಲ್ಲಿ ಮೊದಲ ಸಿನಿಮಾ, ಮೊದಲ ಪಕ್ಕಾ ಆಕ್ಷನ್ ಸಿನಿಮಾ, ಮತ್ತು ಹೌದು, ತೆರೆಮೇಲೆ ಮೊದಲ ಬಿಕಿನಿ ದೃಶ್ಯ ಕೂಡಾ ಇದೇ! ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರ 2025ರ ಆಗಸ್ಟ್ 14ಕ್ಕೆ ತೆರೆಗೆ ಅಪ್ಪಳಿಸಲಿದೆ.

ಆದರೆ, ಇಲ್ಲೊಂದು ಸಣ್ಣ ಟ್ವಿಸ್ಟ್! ಈ ಹಾಟ್ ಲುಕ್ ಕೆಲವರಲ್ಲಿ ಅನುಮಾನದ ಕಿಡಿಯನ್ನೂ ಹತ್ತಿಸಿದೆ. ಕೆಲವರು ಇದನ್ನು ಸಿಜಿಐ (ಕಂಪ್ಯೂಟರ್ ಜನರೇಟೆಡ್ ಇಮೇಜರಿ) ಇರಬೇಕು “ಇಲ್ಲ, ಬಾಡಿ ಡಬಲ್ ಇರಬಹುದು” ಅಂತೆಲ್ಲಾ ಕೆಲ ನೆಟ್ಟಿಗರು ಗುಸುಗುಸು ಶುರುಮಾಡಿದ್ದಾರೆ. ಆದರೆ, ಕಿಯಾರಾ ಅವರ ತಂಡ, “ಅದೆಲ್ಲಾ ಸುಳ್ಳು, ಕಿಯಾರಾ ಈ ಲುಕ್‌ಗಾಗಿ ಸಖತ್ ಆಗಿ ಜಿಮ್‌ನಲ್ಲಿ ಬೆವರು ಹರಿಸಿದ್ದಾರೆ” ಅಂತ ಸ್ಪಷ್ಟನೆ ಕೊಟ್ಟಿದೆ.
ಸಾಮಾಜಿಕ ಮಾಧ್ಯಮ
ದೂರು ನೀಡಲು ಬಂದ ಮಹಿಳೆಯ ಜತೆ ಡಿವೈಎಸ್ಪಿ ಬಲವಂತದ ಸೆಕ್ಸ್ ! ಕಛೇರಿಯಲ್ಲೆ ರಾಸಲೀಲೆ ನಡೆಸುತ್ತಿರುವ ವಿಡಿಯೋ ವೈರಲ್ – ಗೃಹ ಸಚಿವರ ತವರು ಜಿಲ್ಲೆಯಲ್ಲಿ ಶಾಕಿಂಗ್ ಘಟನೆ

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
ತುಮಕೂರು : ಜ 2ಡಿವೈಎಸ್ಪಿಯೊಬ್ಬರು ರಾಜ್ಯ ಪೊಲೀಸ್ ಇಲಾಖೆಯ ಮಾನ ಹಾಗೂ ಗೌರವವನ್ನು ಹರಾಜು ಹಾಕಿದ ಘಟನೆಯೊಂದು ಗೃಹ ಸಚಿವ ಡಾ| ಪರಮೇಶ್ವರ್ ಅವರ ತವರು ಜಿಲ್ಲೆಯಿಂದ ವರದಿಯಾಗಿದೆ. ದೂರು ನೀಡಲು ಬಂದ ಸಂತ್ರಸ್ತ ಮಹಿಳೆಯನ್ನು ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ತನ್ನ ಕಾಮತೃಷೆ ತೀರಿಸಲು ಬಲವಂತವಾಗಿ ಬಳಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ.ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಘಿದೆ.
ಏನಿದು ಪ್ರಕರಣ ?
ದೂರು ನೀಡಲು ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೊ ವೈರಲ್ ಆಗಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ.
ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.
ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ. ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ.
ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
‘ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್‌ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ತುಮಕೂರು ಜಿಲ್ಲೆ ಎಸ್‌ಪಿ ಕೆ.ವಿ. ಅಶೋಕ್ ಪ್ರತಿಕ್ರಿಯಿಸಿದ್ದಾರೆ
-
Uncategorized15 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized17 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು20 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ19 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ21 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್20 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ20 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಬಿಗ್ ನ್ಯೂಸ್21 hours agoಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ



















