Connect with us

ದಕ್ಷಿಣ ಕನ್ನಡ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಪ್ರತಿಭಾ ತರಂಗಿಣಿ 2013-24ಕ್ಕೆ ಚಾಲನೆ; ಐಎಎಸ್, ಐಪಿಎಸ್ ವಿದಾರ್ಥಿಗಳ ಗುರಿಯಾಗಬೇಕು : ಅಶೋಕ್ ರೈ

Published

on



Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯಾರ್ಥಿಗಳು ಐಎಎಸ್, ಐಪಿಎಸ್‌ನಂತಹ ಕ್ಷೇತ್ರಗಳನ್ನೂ ತಮ್ಮ ಅವಕಾಶಗಳೆಂದು ಪರಿಗಣಿಸಬೇಕು. ಸರಿಯಾದ ಪೂರ್ವ ಸಿದ್ಧತೆಯೊಂದಿಗೆ ಯೋಜನಾಬದ್ಧವಾಗಿ ಅಧ್ಯಯನ ನಡೆಸಿದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗೆಲುವು ಸಾಧಿಸಬಹುದು. ಆದರೆ ಅಂತಹ ಆತ್ಮವಿಶ್ವಾಸವನ್ನು ಮೊಟ್ಟಮೊದಲಿಗೆ ಬೆಳೆಸಿಕೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

Ad Widget

Ad Widget

Ad Widget

Ad Widget

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಹತ್ತನೆಯ ವರ್ಷಾಚರಣೆ ದಶಾಂಬಿಕೋತ್ಸವದ ಅಂಗವಾಗಿ ಆಯೋಜಿಸಲಾದ ಪ್ರತಿಭಾ ತರಂಗಿಣಿ 2023-24 ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರತಿಭೋತ್ಸವದಲ್ಲಿ ಬುಧವಾರ ಮಾತನಾಡಿದರು.

Ad Widget

Ad Widget

Ad Widget alt="Ad Widget"/>

Ad Widget

ಹಿಂದಿನ ಕಾಲದಲ್ಲಿ ಮೆಡಿಕಲ್, ಇಂಜಿನಿಯರಿAಗ್ ಕ್ಷೇತ್ರ ಆರ್ಥಿಕವಾಗಿ ಸ್ಥಿತಿವಂತರ ಮಕ್ಕಳಿಗೆ ಮಾತ್ರ ಎಂಬ ಭಾವನೆಯಿತ್ತು. ಆದರೆ ಈಗ ಕಾಲ ಬದಲಾಗಿದೆ. ಪ್ರತಿಯೊಬ್ಬನಿಗೂ ಡಾಕ್ಟರ್, ಇಂಜಿನಿಯರ್ ಆಗುವ ಅವಕಾಶಗಳಿವೆ. ಆದಾಗ್ಯೂ ಭಾರತದಲ್ಲಿ ಸರಾಸರಿ ಹತ್ತು ಸಾವಿರ ಮಂದಿಗೆ ಒಬ್ಬ ಡಾಕ್ಟರ್ ಇರುವಂತಹ ಪರಿಸ್ಥಿತಿಯಿದೆ. ಅಮೇರಿಕಾದಂತಹ ರಾಷ್ಟçದಲ್ಲಿ ಎರಡು ಸಾವಿರ ಮಂದಿಗೆ ಒಬ್ಬ ವೈದ್ಯರಿದ್ದಾರೆ. ಹಾಗಾಗಿ ಮತ್ತಷ್ಟು ಮೆಡಿಕಲ್ ಕಾಲೇಜುಗಳ ಅವಶ್ಯಕತೆ ಇದೆ ಎಂದರಲ್ಲದೆ ಉನ್ನತ ಸ್ಥಾನಕ್ಕೆ ಹೋದಾಗ ಹೆತ್ತವರನ್ನು ಮಕ್ಕಳು ಮರೆಯುವುದು ಸಂಸ್ಕಾರವಲ್ಲ ಎಂದು ನುಡಿದರು.

Ad Widget

Ad Widget <> Ad Widget

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಣಿಪಾಲದ ಡಾ.ಟಿ.ಎಂ.ಎ ಪೈ ಕಾಲೇಜ್ ಆಫ್ ಎಜುಕೇಶನ್‌ನ ಸಂಯೋಜಕ ಡಾ.ಮಹಾಬಲೇಶ್ವರ ರಾವ್ ಮಾತನಾಡಿ ಮಕ್ಕಳಿಗೆ ಆದರ್ಶಗಳನ್ನು ಕೇವಲ ಬಾಯಿಮಾತಿನಲ್ಲಿ ಹೇಳುವುದರಿಂದ ಯಾವ ಪ್ರಯೋಜನವೂ ಆಗಲಾರದು. ಹೆತ್ತವರು ಸ್ವತಃ ಆಚರಿಸಿ ತೋರಿಸಿದಾಗ ಮಾತ್ರ ಅದು ಮಕ್ಕಳ ಮನಸ್ಸಿಗೆ ಇಳಿಯುವುದಕ್ಕೆ ಸಾಧ್ಯ. ಹೆತ್ತವರ ಮೌಲ್ಯಗಳು ಕೃತಿಯಲ್ಲಿ ಕಾಣಿಸಿಕೊಂಡಾಗ ಮಕ್ಕಳಲ್ಲಿ ತನ್ನಿಂದ ತಾನೇ ಮೌಲ್ಯಗಳು ಬೆಳೆಯುತ್ತವೆ ಎಂದರು.



Ad Widget

ಮಕ್ಕಳ ಜತೆ ಮಾತನಾಡುವುದು ಅತ್ಯಂತ ಮುಖ್ಯ. ಇಂದು ಸಂಕಟವನ್ನು ಹೇಳಿಕೊಳ್ಳಲಾಗದೆ ಯುವ ಸಮೂಹ ಆತ್ಮಹತ್ಯೆ ಮಾಡಿಕೊಳ್ಳುತ್ತಿದೆ. ಹೆಚ್ಚು ಆತ್ಮಹತ್ಯೆಗಳು ನಡೆಯುವ ಸಮಾಜ ಅತ್ಯಂತ ರೋಗಗ್ರಸ್ತ ಸಮಾಜ ಎನಿಸಿಕೊಳ್ಳುತ್ತದೆ. ಆದ್ದರಿಂದ ಮಕ್ಕಳು ಸೋತಾಗ ಅವರ ಬಳಿ ತೆರಳಿ ಧೈರ್ಯ ತುಂಬುವ ಕಾರ್ಯ ಆಗಬೇಕಿದೆ. ನಾವಿಂದು ಸುಖ ಕೇಂದ್ರಿತ ಸಮಾಜದಲ್ಲಿದ್ದೇವೆ. ಹಾಗಾಗಿಯೇ ಮೌಲ್ಯಗಳ ಕೊರತೆಗಳು ಎಲ್ಲೆಡೆ ಕಾಣಿಸುತ್ತಿವೆ. ಇಂತಹ ಸಂದರ್ಭದಲ್ಲಿ ಹೆತ್ತವರು ತಮ್ಮನ್ನು ತಾವು ಮಾದರಿಯಾಗಿ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

Ad Widget

Ad Widget

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಶಿಕ್ಷಣದ ಉದ್ದೇಶ ದೇಶ ಕಟ್ಟುವಿಕೆಯೇ ಆಗಿರಬೇಕು. ದೇಶಕ್ಕಾಗಿ ಪ್ರಾಣವನ್ನಾದರೂ ಅರ್ಪಿಸುವುದಕ್ಕೆ ಸಿದ್ಧರಾಗುವ ರೀತಿಯಲ್ಲಿ ನಮ್ಮ ಮಕ್ಕಳು ಬೆಳೆದುಬರಬೇಕು. ದೇಶಪ್ರೇಮ ತುಂಬುವುದು ವಿದ್ಯಾಸಂಸ್ಥೆಗಳ ಕರ್ತವ್ಯ ಎಂದು ಅಭಿಪ್ರಾಯಪಟ್ಟರು.


ಈ ಸಂದರ್ಭದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಅಂತರಾಷ್ಟಿçÃಯ ಜಾಂಬೂರಿಯಲ್ಲಿ ಭಾರತವನ್ನು ಪ್ರತಿನಿಧಿಸಿದ ಹತ್ತನೆಯ ತರಗತಿ ವಿದ್ಯಾರ್ಥಿ ಶ್ರೀಕೃಷ್ಣ ನಟ್ಟೋಜ, ಸ್ಕೌಟ್ ಅಂಡ್ ಗೈಡ್ಸ್ ನಲ್ಲಿ ರಾಜ್ಯಪಾಲರಿಂದ ರಾಜ್ಯಪುರಸ್ಕಾರ ಗಳಿಸಿದ ಹತ್ತನೆಯ ತರಗತಿಯ ವಿದ್ಯಾರ್ಥಿಗಳಾದ ತನ್ವಿ ವಿ, ಅನ್ಸಿಕಾ ಎನ್ ಶೆಟ್ಟಿ, ಯಶಸ್ವಿ ಸುರುಳಿ, ಭಾರ್ಗವಿ ಬೋರ್ಕರ್ ಕೆ, ಭವಿಷ್ ಪಿ ಗೌಡ, ಭವಿತ್ ಪಿ ಗೌಡ ಹಾಗೂ ಆತ್ರೇಯ ಭಟ್ ಎ.ಜಿ ಅಂತೆಯೇ ಕ್ಯಾಂಪ್ಕೋ ಸಂಸ್ಥೆ ಆಯೋಜಿಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾಗಿ ಇಪ್ಪತ್ತೆöÊದು ಸಾವಿರ ಮೊತ್ತವನ್ನು ಬಹುಮಾನವಾಗಿ ಪಡೆದ ಒಂಬತ್ತನೆಯ ತರಗತಿಯ ಅನಘಾ ವಿ.ಪಿ ಹಾಗೂ ಎಂಟನೆಯ ತರಗತಿಯ ವೈಷ್ಣವಿ ಎಂ.ಆರ್, ಜಿಲ್ಲಾಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಭಾಗವಹಿಸಿದ ಹತ್ತನೆಯ ತರಗತಿ ವಿದ್ಯಾರ್ಥಿ ಅವನೀಶ ಕೃಷ್ಣ, ವಲಯ ಮಟ್ಟದ ಚೆಸ್‌ನಲ್ಲಿ ಸಾಧನೆಗೈದ ಏಳನೆಯ ತರಗತಿ ವಿದ್ಯಾರ್ಥಿ ಸಾತ್ವಿಕ್ ಜಿ, ತಾಲೂಕು ದಸರಾ ಸ್ಪರ್ಧೆಯಲ್ಲಿ ವಿಝೇತರಾದ ಏಳನೆಯ ತರಗತಿ ವಿದ್ಯಾರ್ಥಿನಿ ಒಂಬತ್ತನೆಯ ತರಗತಿ ವಿದ್ಯಾರ್ಥಿನಿ ನಿಯತಿ ಭಟ್, ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜೂನಿಯರ್ ಅಥ್ಲೆಟ್ ಸ್ಪರ್ಧೆಯಲ್ಲಿ ಸಾಧನೆಗೈದ ಏಳನೆಯ ತರಗತಿ ವಿದ್ಯಾರ್ಥಿನಿ ದೃಶಾನ ಅವರನ್ನು ಅಭಿನಂದಿಸಲಾಯಿತು.


ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್.ನಟ್ಟೋಜ, ಆಡಳಿತ ಮಂಡಳಿ ಸದಸ್ಯರಾದ ಡಾ.ಎಚ್.ಮಾಧವ ಭಟ್, ಡಾ.ಎಂ.ಎಸ್.ಶೆಣೈ, ಬಾಲಕೃಷ್ಣ ಬೋರ್ಕರ್, ಪ್ರಸನ್ನ ಭಟ್, ದಶಾಂಬಿಕೋತ್ಸವ ಸಮಿತಿಯ ಅಧ್ಯಕ್ಷ, ನ್ಯಾಯವಾದಿ ಮಹೇಶ್ ಕಜೆ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಸೀಮಾ ನಾಗರಾಜ್, ವಿದ್ಯಾರ್ಥಿ ನಾಯಕ ಜಸ್ವಿತ್, ವಿದ್ಯಾರ್ಥಿ ನಾಯಕಿ ಅರುಂಧತಿ ಎಲ್ ಆಚಾರ್ಯ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳಾದ ಆತ್ರೇಯ ಭಟ್, ಯಶಸ್ ಬಿ.ಜೆ, ಸನ್ಮಯ್ ಎನ್ ಹಾಗೂ ಮಯೂರ್ ಎಸ್ ಮಯ್ಯ ಪ್ರಾರ್ಥಿಸಿದರು. ಪ್ರಾಚಾರ್ಯೆ ಮಾಲತಿ ಡಿ ಸ್ವಾಗತಿಸಿದರು. ಉಪಪ್ರಾಚಾರ್ಯೆ ಸುಜನಿ ಬೋರ್ಕರ್ ವಂದಿಸಿದರು. ಶಿಕ್ಷಕಿಯರಾದ ಸುಷ್ಮಾ ಮಿಥುನ್ ಹಾಗೂ ಗೌರಿ ಬಿ.ವಿ ಕಾರ್ಯಕ್ರಮ ನಿರ್ವಹಿಸಿದರು.

Ad Widget
Click to comment

Leave a Reply

ಶಿಕ್ಷಣ

Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ

Published

on



Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

Ad Widget

Ad Widget <> Ad Widget

ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.



Ad Widget

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.

Ad Widget

Ad Widget

ಕಾರ್ಯಕ್ರಮದಲ್ಲಿ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ. ಹಾಗೂ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು.

6ನೇ ತರಗತಿಯ ಆರಾಧ್ಯ ಸ್ವಾಗತಿಸಿದರು. 9ನೇ ತರಗತಿಯ ಮಾನ್ಯಲಕ್ಷೀ ಎನ್ ಪಿ ಯೋಧರ ಪರಿಚಯಗೈದರು. 9ನೇ ತರಗತಿಯ ಕುವೀರ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವಿದ್ಯಾರ್ಥಿನಿ ದೀಪ್ತಿ ಬಿ ಪಿ ಸಹಕರಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಲೈಂಗಿಕ ಕಿರುಕುಳ ಎನ್ನುವುದು ಕೇವಲ ದೈಹಿಕ ಸ್ಪರ್ಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಆಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಮಾತುಗಳನ್ನಾಡುವುದು ಅಥವಾ ಅಂತಹ ಯಾವುದೇ ರೀತಿಯ ವರ್ತನೆಗಳೂ ಕೂಡಾ ಇದರಲ್ಲಿ ಸೇರಿವೆ ಎಂದು ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು.

Ad Widget

Ad Widget <> Ad Widget

ಇಂದಿನ ಪೀಳಿಗೆ, ಅವರ ಪೋಷಕರು, ಶಿಕ್ಷಕರ ನಡುವಿನ ವ್ಯತ್ಯಾಸ ಮತ್ತು ಜವಾಬ್ಧಾರಿಗಳ ಬಗ್ಗೆ ವಾಸ್ತವಿಕ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು ಯುವಜನತೆ ಪಾಲಿಸಬೇಕಾದ ಮತ್ತು ಪಾಲಿಸಬಾರದ ವಿಷಯಗಳ ಬಗ್ಗೆ ತಿಳಿಸಿದರು. ಒಬ್ಬರ ಸಾಮರ್ಥ್ಯವನ್ನು, ದೇಹದ ಆಕಾರವನ್ನು ಟೀಕಿಸುವುದು ಕೂಡಾ ಅಪರಾಧ. ಅಂತಹ ಸಂದರ್ಭದಲ್ಲಿ ಅದನ್ನು ಎದುರಿಸುವ, ಪ್ರತಿಕ್ರಿಯಿಸುವ ಬಗೆ ಮತ್ತು ದೂರು ಸಲ್ಲಿಸಬೇಕಾದ ಪ್ರಾಧಿಕಾರಗಳ ಬಗ್ಗೆ ತಿಳಿಸಿದರು. ನೀವು ಕೋಪಗೊಂಡಿದ್ದರೆ, ಅತಿಯಾದ ಉತ್ಸಾಹದಲ್ಲಿದ್ದರೆ ಅಥವಾ ಒತ್ತಡದಲ್ಲಿದ್ದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು 10 ನಿಮಿಷಗಳ ಕಾಲ ಮುಂದೂಡಿ. ಸಾಧ್ಯವಾದರೆ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲು ಒಂದು ರಾತ್ರಿ ಚೆನ್ನಾಗಿ ಯೋಚಿಸಿ ಎಂದು ಹೇಳಿದರು.



Ad Widget

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಕ್ಷ.ಎಸ್.ಆರ್ ಮಾತನಾಡಿ ಮೊದಲು ಆಲಿಸಿ ನಂತರ ಮಾತನಾಡಿ, ಕೆಲವೊಮ್ಮೆ ಅಲ್ಲಿ ಉಪಸ್ಥಿತರಿದ್ದು ಮೌನವಾಗಿ ಆಲಿಸುವುದರಿಂದ ಜೀವನದಲ್ಲಿ ಹೆಚ್ಚಿನ ಪ್ರಯೋಜನಗಳಾಗುತ್ತದೆ ಎಂದರು. ಒಬ್ಬ ಉತ್ತಮ ಇಂಜಿನಿಯರ್ ಆಗುವ ಜತೆಯಲ್ಲಿ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಎಂದು ನುಡಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಜೋತಿಮಣಿ.ಕೆ, ಡಾಟಾಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Ad Widget

Ad Widget

ಡಾಟಾಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ಗಗನ್‌ದೀಪ್ ಸ್ವಾಗತಿಸಿ, ನಿಹಾರಿಕಾ ಅತಿಥಿಗಳನ್ನು ಪರಿಚಯಿಸಿದರು. ಆಶ್ಲೇಷ್ ವಂದನಾರ್ಪಣೆಗೈದರು. ಶ್ರೇಯಾ ಎಮ್. ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ಗೆ ಆಯ್ಕೆ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗುಜರಾತ್‌ನಲ್ಲಿ ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್ ನಡೆಯುತ್ತಿದ್ದು, ಈ ಕ್ಯಾಂಪ್‌ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ನವೆಂಬರ್ ೧ರಂದು ನಡೆಯುವ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗಣ್ಯ ವ್ಯಕ್ತಿಯಾಗಿ ಆಗಮಿಸಲಿದ್ದಾರೆ.

Ad Widget

Ad Widget <> Ad Widget

ಇವರಿಗೆ ಎನ್.ಸಿ.ಸಿ ಘಟಕದ ಮುಖ್ಯಸ್ಥ ಲೆ. ಭಾಮಿ ಅತುಲ್ ಶೆಣೈ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಎನ್.ಸಿ.ಸಿ ಘಟಕ, ಐಕ್ಯೂಎಸಿ ಘಟಕ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿ ವೃಂದ ಶುಭಾಶಯಗಳನ್ನು ಕೋರುತ್ತಾರೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading