Uncategorized
Yettinahole project: ಎತ್ತಿನಹೊಳೆ ಯೋಜನೆ ಪ್ರಾಯೋಗಿಕ ಪರೀಕ್ಷೆ : ಪೈಪ್ ಗಳಿಂದ ಭಾರಿ ಪ್ರಮಾಣದ ನೀರು ಸೋರಿಕೆ – ನಡುಗಿದ ಭೂಮಿ, ಅದುರಿದ ಮನೆಗಳು – 6 ಕಿಮೀಗೆ ಹೀಗಾದರೇ ನೂರಾರು ಕಿಮೀ ಹರಿಯುವಾಗ ಏನಾಗಬಹುದು?
ಹಾಸನ: ಎತ್ತಿನಹೊಳೆ ಯೋಜನೆಯ (Yettinahole project) ಅಂಗವಾಗಿ ಕಟ್ಟಲಾಗಿರುವ ಸಕಲೇಶಪುರ (Sakleshpur) ತಾಲ್ಲೂಕಿನ ಕಾಡುಮನೆ ಚೆಕ್ ಡ್ಯಾಂನಿಂದ ದೊಡ್ಡ ನಾಗರ ಶೇಖರಣಾ ಘಟಕಕ್ಕೆ ಅಧಿಕಾರಿಗಳು ನಿನ್ನೆ ಪ್ರಾಯೋಗಿಕವಾಗಿ ನೀರು ಹರಿಸಿದ್ದಾರೆ. ಇದುವರೆಗೆ ಪೈಪ್‌ಲೈನ್ ಪೂರ್ಣಗೊಂಡಿರುವ 6 ಕಿ.ಮೀಗಳಷ್ಟು ದೂರದವರೆಗೆ ಪ್ರಾಯೋಗಿಕವಾಗಿ ನೀರು ಹರಿಸಿದ್ದಾರೆ.
ಹೀಗೆ ಪ್ರಾಯೋಗಿಕವಾಗಿ ನೀರು ಹರಿಸಿದ ವೇಳೆ ಭಾರಿ ಪ್ರಮಾಣದ ನೀರು (Water leakage) ಸೋರಿಕೆಯಾಗಿದೆ. ಅರ್ಧಕ್ಕೂ ಹೆಚ್ಚು ನೀರು ಪೈಪ್‌ಲೈನ್‌ನಿಂದ ಆಚೆ ಬಂದಿದೆ. ಹಲವೆಡೆ ರಸ್ತೆ ಕುಸಿತವುಂಟಾಗಿದೆ. ಹಾಸನ ಜಿಲ್ಲೆಯ ದೇಖಲ, ಕುಂಬರಡಿ, ಮಲ್ಲಾಗದ್ದೆ ಗ್ರಾಮಗಳಲ್ಲಿ ರಸ್ತೆಗಳು ಕುಸಿದಿವೆ. ಈ ಎಲ್ಲ ಕಡೆ ರಸ್ತೆ ಹಾನಿಯಿಂದ ಜನರ ಓಡಾಟಕ್ಕೆ ತೊಂದರೆಯಾಯಿತು. ಪೈಪ್ ನಿಂದ ನೀರು ಸೋರಿಕೆಯ ರಭಸಕ್ಕೆ ದೇಖಲ ಗ್ರಾಮದಲ್ಲಿ ಮುಖ್ಯ ರಸ್ತೆಯೊಂದು ಕುಸಿದಿದೆ. ಇದೇ ಮಾರ್ಗದಲ್ಲಿ ಹೋಗುತ್ತಿದ್ದ ಕಾಫಿ ಮಂಡಳಿಯ ಜೀಪು ಈ ಗುಂಡಿಯೊಳಗೆ ಸಿಕ್ಕಿಕೊಂಡು ಹರಸಾಹಸದಿಂದ ಮೇಲೆತ್ತಲಾಗಿದೆ.
ಕಾಡಮನೆಯಿಂದ ದೊಡ್ಡನಾಗರ ನೀರು ಶೇಖರಣಾ ಕೇಂದ್ರದವರೆಗೆ, ಕಾಡಮನೆ, ಮಲ್ಲಾಗದ್ದೆ, ನಡಹಳ್ಳಿ, ದೇಖಲ, ಕುಂಬರಡಿ, ಹೆಬ್ಬಸಾಲೆ ಮುಖ್ಯ ರಸ್ತೆಯ ಬದಿಯಲ್ಲಿಯೇ ಪೈಪ್‌ಗಳನ್ನು ಜೋಡಿಸಲಾಗಿದೆ.. ಭೂಮಿಯೊಳಗೆ ಜೋಡಣೆ ಮಾಡಿರುವ ಪೈಪ್‌ನಲ್ಲಿ ನೀರು ಹರಿಯುವ ವೇಗ ಹಾಗೂ ಒತ್ತಡಕ್ಕೆ ಮೇಲ್ಬಾಗದ ಭೂಮಿ ನಡುಗುತ್ತದೆ. ಮನೆಯೇ ಅದುರುತ್ತಿದ್ದು, ಭಯದಿಂದ ಮನೆಯೊಳಗಿನಿಂದ ಹೊರಗೆ ಓಡಿ ಬಂದಿದ್ದಾಗಿ’ ದೇಖಲ ಗ್ರಾಮಸ್ಥರು ಹೇಳಿದ್ದಾರೆ.
ಈ ʼಪ್ರಾಯೋಗಿಕ ಅನಾಹುತʼದ ಪರಿಣಾಮ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ನೀರು ಹರಿಸುವಿಕೆ ನಿಲ್ಲಿಸಿದ್ದಾರೆ. ಆರು ಕಿಲೋಮೀಟರ್ ಕಾಮಗಾರಿಗೇ ಇಷ್ಟು ಅನಾಹುತ ಆದರೆ, ಇನ್ನು ಕೋಲಾರದವರೆಗೂ ತಲುಪಬೇಕಿರುವ ನೂರಾರು ಕಿಲೋಮೀಟರ್ ಕಾಮಗಾರಿ ಹೇಗಿರಬಹುದು, ಏನೇನು ಅನಾಹುತ ಉಂಟುಮಾಡಬಹುದು ಎಂದು ಸ್ಥಳೀಯರು ಪ್ರಶ್ನಿಸುವಂತಾಗಿದೆ.

ಒಟ್ಟು 8 ಪಂಪ್‌ಗಳಿಂದ, 5 ಪೈಪ್‌ಗಳಲ್ಲಿ ದೊಡ್ಡನಾಗರ ಶೇಖರಣಾ ಕೇಂದ್ರಕ್ಕೆ ನೀರು ಹರಿಸಲಾಗುತ್ತದೆ. ಕಾಡಮನೆ ವೈರ್ 5 ರಿಂದ ಡಿಸಿ 2 ರವರೆಗೆ ಪೈಪ್‌ಲೈನ್ ಕಾಮಗಾರಿ ಪೂರ್ಣಗೊಂಡಿದೆ. ನೀರು ಯಾವ ರೀತಿ ಹರಿಯುತ್ತದೆ ಎಂಬುದನ್ನು ಪರೀಕ್ಷೆ ಮಾಡಲು, ಈ ಮಾರ್ಗದ 6 ಕಿ.ಮೀ. ಪ್ರದೇಶದಲ್ಲಿ ಪ್ರಾಯೋಗಿಕವಾಗಿ ನೀರು ಹರಿಸಲಾಗಿದೆ.
‘ಭೂಮಿಯೊಳಗೆ ಪೈಪ್‌ಗಳನ್ನು ಜೋಡಣೆ ಮಾಡಿ 5 -6 ವರ್ಷಗಳಾಗಿವೆ. ಹಾಗಾಗಿ ಕೆಲವೆಡೆ ವೆಲ್ಡಿಂಗ್ ಬಿಟ್ಟು ಹೋಗಿರುವುದು, ಮತ್ತೆ ಕೆಲವು ತಾಂತ್ರಿಕ ಕಾರಣಗಳಿಂದ ಕೆಲವೆಡೆ ನೀರು ಸೋರಿಕೆ ಆಗಿದೆ. ನೀರು ಹರಿಸಿ ಪರೀಕ್ಷೆ ಮಾಡುವುದರಿಂದ ಇಂತಹ ಸೋರಿಕೆ, ನೀರು ಹರಿವಿನ ಒತ್ತಡ ಗೊತ್ತಾಗುತ್ತದೆ’ ಎಂದು ವಿಶ್ವೇಶ್ವರಯ್ಯ ಜಲ ನಿಗಮದ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್ ತಿಳಿಸಿದ್ದಾರೆ.
“ನೀರು ಹರಿಸುವುದನ್ನು ತಕ್ಷಣವೇ ನಿಲ್ಲಿಸಲಾಗಿದೆ. ದುರಸ್ತಿ ಕಾಮಗಾರಿಗಳನ್ನು ತ್ವರಿತವಾಗಿ ಮಾಡಲಾಗುತ್ತಿದೆ. ರಸ್ತೆ ಹಾಗೂ ಇನ್ನಿತರ ಯಾವುದೇ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಪಾಸ್ತಿ ಹಾನಿ ಆಗಿದ್ದರೆ ದುರಸ್ತಿ ಮಾಡಲಾಗುವುದು. ಈ ಬಗ್ಗೆ ಸುತ್ತಲಿನ ಗ್ರಾಮಸ್ಥರು ಆತಂಕ ಪಡುವುದು ಬೇಡ. ಯಾವುದೇ ಸಮಸ್ಯೆಗಳಿದ್ದರೂ ಇಲಾಖೆ ತಕ್ಷಣ ಸ್ಪಂದಿಸುತ್ತದೆ’ ಎಂದು ಭರವಸೆ ನೀಡಿದ್ದಾರೆ.

ಸಕಲೇಶಪುರ (Sakleshpura) ತಾಲೂಕಿನ ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆ ಹೊಳೆ, ಕೇರಿಹೊಳೆ ಮತ್ತು ಹೊಂಗಡಹಳ್ಳದಿಂದ ಮುಂಗಾರು ಮಳೆ ಅವಧಿಯಲ್ಲಿ 24.01 ಟಿಎಂಸಿ ಪ್ರಮಾಣದ ಪ್ರವಾಹ ನೀರನ್ನು ಏಳು ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿನ ಬರಪೀಡಿತ 29 ತಾಲೂಕಿನ 38 ಪಟ್ಟಣ ಪ್ರದೇಶದ 6,657 ಗ್ರಾಮಗಳ 75.59 ಲಕ್ಷ ಜನ-ಜಾನುವಾರುಗಳಿಗೆ 13.931 ಟಿಎಂಸಿ ಕುಡಿಯುವ ನೀರು ಒದಗಿಸುವುದು ಎತ್ತಿನ ಹೊಳೆ ಯೋಜನೆಯ ಪ್ರಮುಖ ಉದ್ದೇಶ
ಇದರ ಜೊತೆಗೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ತುಮಕೂರು ಐದು ಜಿಲ್ಲೆಯ ವ್ಯಾಪ್ತಿಯಲ್ಲಿ 527 ಕೆರೆಗಳಿಗೆ 10.064 ಟಿಎಂಸಿ ಪ್ರಮಾಣದ ನೀರನ್ನು ಕೆರೆಗಳ ಸಾಮರ್ಥ್ಯದ 50% ರಷ್ಟು ತುಂಬಿಸಿ ಅಂತರ್ಜಲ ಮರುಪೂರ್ಣ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ.
Uncategorized
Lawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. ಆದರೆ ಈ ತನಿಖೆಯಿಂದ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಕೀಲ ಅಮೃತೇಶ್ ಅಭಿಪ್ರಾಯಪಟ್ಟಿದ್ದಾರೆ. ಸಂತೋಷ್ ರಾವ್ ಅವರನ್ನು ತನಿಖೆಯಿಂದ ಹೊರಗಿಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಉಲ್ಲೇಖಿಸಿದ ಅಮೃತೇಶ್, ಅವರ ವಿರುದ್ಧ ಬಲವಾದ ಸಾಕ್ಷ್ಯಗಳಿವೆ ಎಂದು ಹೇಳಿದರು.
ಬೆಂಗಳೂರು: ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. ಆದರೆ ಈ ತನಿಖೆಯಿಂದ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಕೀಲ ಅಮೃತೇಶ್ ಅಭಿಪ್ರಾಯಪಟ್ಟಿದ್ದಾರೆ.
ಮಂಗಳವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ‘ವಾಯ್ಸ್ ಆಫ್ ಪಬ್ಲಿಕ್’ ಸಂಘಟನೆ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೌಜನ್ಯಾ ಪ್ರಕರಣದ ಮರುತನಿಖೆ, ಸಂತೋಷ್ ರಾವ್ ಪಾತ್ರ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ವಿವಿಧ ಬೆಳವಣಿಗೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಸಂತೋಷ್ ರಾವ್ ಅವರನ್ನು ತನಿಖೆಯಿಂದ ಹೊರಗಿಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಉಲ್ಲೇಖಿಸಿದ ಅಮೃತೇಶ್, ಅವರ ವಿರುದ್ಧ ಬಲವಾದ ಸಾಕ್ಷ್ಯಗಳಿವೆ ಎಂಬುದು ತಮ್ಮ ವಾದವಾಗಿದೆ ಎಂದು ಹೇಳಿದರು. ಸಿಬಿಐ ತನಿಖೆಯ ವೇಳೆ ಫೋರೆನ್ಸಿಕ್ ವರದಿಗಳಲ್ಲಿ ಸಂತೋಷ್ ರಾವ್ ಅವರ ದೇಹದಲ್ಲಿದ್ದ ಗಾಯಗಳ ಬಗ್ಗೆ ಉಲ್ಲೇಖವಾಗಿತ್ತು ಎಂದು ತಿಳಿಸಿದರು.
ಸಿಬಿಐನ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿದ್ದ ಬಿ.ಆರ್. ಶಿವಾನಂದ ಅವರು ಪ್ರಕರಣದ ವಿಚಾರದಲ್ಲಿ ನಿರ್ದಿಷ್ಟ ಸಂಘಟನೆಗಳ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಅಮೃತೇಶ್ ಆರೋಪಿಸಿದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಸ್ವತಂತ್ರವಾಗಿ ದೃಢೀಕರಿಸಿದ ಮಾಹಿತಿ ಲಭ್ಯವಿಲ್ಲ.
ಕ್ಷೇತ್ರದ ವಿರುದ್ಧ ಅಪಪ್ರಚಾರದ ಆರೋಪ
ಸೌಜನ್ಯಾ ಪ್ರಕರಣವನ್ನು ಮುಂದಿಟ್ಟುಕೊಂಡು ಕೆಲವರು ಹಣ ಸಂಪಾದಿಸಿದ್ದಾರೆ ಹಾಗೂ ಪ್ರಸಿದ್ಧ ಧಾರ್ಮಿಕ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸುವ ಉದ್ದೇಶದಿಂದ ಷಡ್ಯಂತ್ರ ರೂಪಿಸಿದ್ದಾರೆ ಎಂದು ಅಮೃತೇಶ್ ಆರೋಪಿಸಿದರು. ಪ್ರಕರಣದ ಹಿಂದೆ ಎಡಪಂಥೀಯರು ಹಾಗೂ ನಗರ ನಕ್ಸಲರ ಕೈವಾಡವಿದೆ ಎಂಬ ಆರೋಪವನ್ನೂ ಅವರು ಮಾಡಿದರು.
ಬುರುಡೆ ಪ್ರಕರಣದ ಅಂತಿಮ ವರದಿ ಬಹಿರಂಗಪಡಿಸಲು ಆಗ್ರಹ
ಸೌಜನ್ಯಾ ಪ್ರಕರಣದಲ್ಲಿ ಹಿನ್ನಡೆಯಾದ ಬಳಿಕ ಕೆಲವು ಗುಂಪುಗಳು ಬುರುಡೆ ಪ್ರಕರಣವನ್ನು ಮುನ್ನೆಲೆಗೆ ತಂದವು ಎಂದು ಅಮೃತೇಶ್ ಹೇಳಿದರು. ಸರ್ಕಾರದ ವೆಚ್ಚದಲ್ಲಿ ನಡೆದಿದ್ದ ಅನಧಿಕೃತ ಶವಗಳ ಅಂತ್ಯಸಂಸ್ಕಾರಕ್ಕೆ ಸಂಬಂಧಿಸಿದ ತನಿಖೆಯ ಅಂತಿಮ ವರದಿ ಇನ್ನೂ ಬಹಿರಂಗವಾಗಿಲ್ಲ ಎಂದು ಅವರು ಆಕ್ಷೇಪಿಸಿದರು.
ಚಿನ್ನಯ್ಯ ಆರೋಪಿಸಿರುವ ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟೆಣ್ಣವರ್ ಹಾಗೂ ಯೂಟ್ಯೂಬರ್ ಸಮೀರ್ ಸೇರಿದಂತೆ ಕೆಲವರ ವಿರುದ್ಧ ಪ್ರಕರಣ ದಾಖಲಾಗದಿರುವುದರ ಬಗ್ಗೆಯೂ ಅವರು ಪ್ರಶ್ನೆ ಎತ್ತಿದರು.
ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವುದು ಕಷ್ಟ
ಸೌಜನ್ಯಾ ತಾಯಿ ಕುಸುಮಾವತಿ ಹಾಗೂ ಕೆಲವು ಗ್ಯಾಂಗ್ ಹಣ ಮಾಡುವ ಉದ್ದೇಶದಿಂದ ಕ್ಷೇತ್ರದ ವಿರುದ್ಧ ಕುತಂತ್ರ ನಡೆಸುತ್ತಿದೆ. ಕೆಲವು ವಿಷಯ ಮುಚ್ಚಿಟ್ಟು ಅವರು ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ. ಸುಪ್ರಿಂಕೋರ್ಟ್ ಸಂಪೂರ್ಣವಾಗಿ ಹೊಸದಾಗಿ ತನಿಖೆ ಮಾಡಲು ಎಸ್‌ಐಟಿ ರಚನೆ ಮಾಡಲು ಸೂಚಿಸಿದೆ. ಆದರೆ ಮೂರು ತಿಂಗಳಲ್ಲಿ ಪ್ರಕರಣದ ತೀರ್ಪು ಬರಲು ಸಾಧ್ಯವಿಲ್ಲ. 14 ವರ್ಷದ ಸಾಕ್ಷ್ಯಾಧಾರಗಳು ಈಗ ಸಿಗಲು ಸಾಧ್ಯವಿಲ್ಲ. ಈ ಗ್ಯಾಂಗ್‌ನ ನಿಜವಾದ ಟಾರ್ಗೆಟ್ ಮಲ್ಲಿಕ್ ಜೈನ್, ಧೀರಜ್ ಜೈನ್, ಉದಯ್ ಜೈನ್ ಅಲ್ಲ. ಬದಲಾಗಿ ಕ್ಷೇತ್ರವೇ ಆಗಿದೆ ಎಂದು ಅಮೃತೇಶ್ ತಿಳಿಸಿದ್ದಾರೆ.
ಹಿಂದಿನ ಹೇಳಿಕೆಗಳನ್ನು ಉಲ್ಲೇಖಿಸಿದ ವಕೀಲ
ಸೌಜನ್ಯಾ ಪ್ರಕರಣ ನಡೆದು 14 ವರ್ಷಗಳಾಗಿವೆ ಎಂದು ತಿಳಿಸಿದ ಅಮೃತೇಶ್, ಆರಂಭದಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಬಳಿಕ ಮೃತದೇಹ ಪತ್ತೆಯಾದ ನಂತರ ಅತ್ಯಾಚಾರ ಮತ್ತು ಕೊಲೆ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು. ನಂತರ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ವರ್ಗಾಯಿಸಲಾಗಿತ್ತು ಎಂದು ವಿವರಿಸಿದರು.
ಘಟನೆಯ ಬಳಿಕ ಸೌಜನ್ಯಾ ಅವರ ಕುಟುಂಬದವರು ಬೆಳ್ತಂಗಡಿಯಲ್ಲಿ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಧರ್ಮಸ್ಥಳದಿಂದ ಯಾವುದೇ ಒತ್ತಡ ಅಥವಾ ಬೆದರಿಕೆ ಇರಲಿಲ್ಲ ಎಂದು ಹೇಳಿದ್ದರೆಂದು ಅಮೃತೇಶ್ ಉಲ್ಲೇಖಿಸಿದರು. ಬಳಿಕ ಕೆಲವು ಗುಂಪುಗಳು ಧಾರ್ಮಿಕ ಗುರುಗಳು ಹಾಗೂ ಮಠಾಧೀಶರನ್ನು ಗುರಿಯಾಗಿಸಿಕೊಂಡು ಕ್ಷೇತ್ರದ ವಿರುದ್ಧ ಆರೋಪಗಳನ್ನು ಹರಡಿವೆ ಎಂದು ದೂರಿದರು.
ಸಂತೋಷ್ ರಾವ್ ಅವರನ್ನು ಪ್ರಕರಣದಿಂದ ಬಿಡುಗಡೆಗೊಳಿಸಲು ಸಾಕಷ್ಟು ಹಣ ಖರ್ಚು ಮಾಡಿರುವುದಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರೇ ಹೇಳಿದ್ದಾರೆ ಎಂದೂ ಅಮೃತೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ವಕೀಲ ಸದಾನಂದ ಗೌಡ ಉಪಸ್ಥಿತರಿದ್ದರು.
Uncategorized
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ

ಪುತ್ತೂರು: ಮುಂಬೈ ಪೊಲೀಸ್ ಹಾಗೂ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು, ಬಂಧನದ ಭೀತಿ ಹುಟ್ಟಿಸಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ₹1.31 ಕೋಟಿ ವಂಚಿಸಿರುವ ಘಟನೆ ನಡೆದಿದೆ.
ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ಸುಳ್ಳು ಆರೋಪ ಹೊರಿಸಿದ ವಂಚಕರು, ವಾಟ್ಸ್‌ಆ್ಯಪ್ ವಿಡಿಯೋ ಕರೆಗಳ ಮೂಲಕ ನಿರಂತರವಾಗಿ ಬೆದರಿಸಿದ್ದಾರೆ. ಬ್ಯಾಂಕ್ ಖಾತೆಗಳ ಪರಿಶೀಲನೆ ಮತ್ತು ಹಣದ ದೃಢೀಕರಣದ ನೆಪದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಆರ್‌ಟಿಜಿಎಸ್ ಮೂಲಕ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.
ಇದನ್ನು ನಂಬಿದ ದೂರುದಾರರು 2026ರ ಸೆ.2ರಿಂದ ಅ.6ರವರೆಗೆ ಹಂತ ಹಂತವಾಗಿ ಒಟ್ಟು ₹1,31,50,000 ಹಣವನ್ನು ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ವಂಚನೆಗೊಳಗಾಗಿದ್ದಾರೆ.
ನಂತರ ಇದು ಸೈಬರ್ ವಂಚನೆ ಎಂಬುದನ್ನು ಅರಿತ ದೂರುದಾರರು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಈ ಸಂಬಂಧ ದಕ್ಷಿಣ ಕನ್ನಡ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ನಡೆಸಲಾಗುತ್ತಿದೆ.
ಗಮನಿಸಿ: ಪೊಲೀಸ್ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ವಿಡಿಯೋ ಕರೆ ಮಾಡಿ ಬಂಧನದ ಬೆದರಿಕೆ ಒಡ್ಡಿ ಹಣ ವರ್ಗಾಯಿಸುವಂತೆ ಸೂಚಿಸುವುದು ಸೈಬರ್ ವಂಚನೆಯ ವಿಧಾನವಾಗಿದೆ. ಇಂತಹ ಕರೆಗಳನ್ನು ನಂಬದೆ, ತಕ್ಷಣವೇ 1930 ಸಹಾಯವಾಣಿಗೆ ದೂರು ನೀಡಬೇಕು.
Uncategorized
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಐಇಇಇ ಬೆಂಗಳೂರು ವಿಭಾಗ ಮತ್ತು ಐಇಇಇ ಮಂಗಳೂರು ಉಪವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್, ವಿಎಲ್‌ಎಸ್‌ಐ, ಇಲೆಕ್ಟಿçಕಲ್ ಸರ್ಕ್ಯೂಟ್ಸ್ ಮತ್ತು ರೊಬೋಟಿಕ್ಸ್ ವಿಷಯಗಳನ್ನೊಳಗೊಂಡ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನ ಡಿಸ್ಕವರ್ 2026ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಬ್ಲೂಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಇದರ ಸ್ಥಾಪಕ ಹಾಗೂ ಮುಖ್ಯ ತಂತ್ರಜ್ಞಾನ ಅಧಿಕಾರಿ ಸುದರ್ಶನ್ ಶೆನ್ವಿ ಮಾತಾಡಿದರು.

ಪುತ್ತೂರು: ನೀವು ವಿದ್ಯಾರ್ಥಿಯಾಗಿರಲಿ ಅಥವಾ ವೃತ್ತಿಪರರಾಗಿರಲಿ ಐಇಇಇ ಸದಸ್ಯತ್ವವು ನಿಮ್ಮನ್ನು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಜಾಗತಿಕ ಸಮುದಾಯಗಳೊಂದಿಗೆ ನೇರವಾಗಿ ಜೋಡಿಸುತ್ತದೆ ಎಂದು ಬೆಂಗಳೂರಿನ ಬ್ಲೂಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಇದರ ಸ್ಥಾಪಕ ಹಾಗೂ ಮುಖ್ಯ ತಂತ್ರಜ್ಞಾನ ಅಧಿಕಾರಿ ಸುದರ್ಶನ್ ಶೆನ್ವಿ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಐಇಇಇ ಬೆಂಗಳೂರು ವಿಭಾಗ ಮತ್ತು ಐಇಇಇ ಮಂಗಳೂರು ಉಪವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್, ವಿಎಲ್‌ಎಸ್‌ಐ, ಇಲೆಕ್ಟ್ರಿಕಲ್ ಸರ್ಕ್ಯೂಟ್ಸ್ ಮತ್ತು ರೊಬೋಟಿಕ್ಸ್ ವಿಷಯಗಳನ್ನೊಳಗೊಂಡ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನ ಡಿಸ್ಕವರ್ 2026ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು.
ಎಲ್ಲರೂ ಒಗ್ಗೂಡಿ ಕೆಲಸ ಮಾಡಿದರೆ ಯಾವುದನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಈ ಸಮ್ಮೇಳನವೇ ಸಾಕ್ಷಿ, ನಿಗದಿತ ಸಮಯದಲ್ಲಿ ಪ್ರತಿಯೊಂದು ಕೆಲಸಗಳು ಸಂಪನ್ನಗೊಂಡವು ಇದರ ಹಿಂದೆ ಸಹಕರಿಸಿದ ಎಲ್ಲರೂ ಅಭಿನಂದನಾರ್ಹರು ಎಂದು ನುಡಿದರು.

ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಐಇಇಇ ಬೆಂಗಳೂರು ವಿಭಾಗದ ತಾಂತ್ರಿಕ ಮತ್ತು ಸಮ್ಮೇಳನ ಪ್ರಾಯೋಜಕತ್ವ ಸಮಿತಿಯ ಸಹ ಅಧ್ಯಕ್ಷ ಡಾ.ವಾಸುದೇವ ಆಚಾರ್ಯ ಮಾತನಾಡಿ ಈ ಅಂತಾರಾಷ್ಟ್ರೀಯ ಸಮ್ಮೇಳನವು ಅತ್ಯಂತ ಉತ್ತಮ ರೀತಿಯಲ್ಲಿ ನಡೆಯಿತು. ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿದ್ದತೆಗಳು ಯಾವರೀತಿಯಲ್ಲಿ ನಡೆಯುತ್ತಿತ್ತು ಎನ್ನುವುದಕ್ಕೆ ಇದರ ಯಶಸ್ಸೇ ಸಾಕ್ಷಿ ಎಂದರು. ಕರ್ನಾಟಕದ ಎಲ್ಲಾ ಜಿಲ್ಲೆಗಳನ್ನು ಐಇಇಇಯ ವ್ಯಾಪ್ತಿಗೆ ತರುವ ಮಿಷನ್-31 ಎನ್ನುವ ಪರಿಕಲ್ಪನೆಗೆ ಎಲ್ಲರೂ ಕೈಜೋಡಿಸಿ ಇದರ ಯಶಸ್ಸಿನಲ್ಲಿ ಪಾಲುದಾರರಾಗಬೇಕು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ ಮಾತನಾಡಿ ಇಂಜಿನಿಯರಿಂಗ್ ಕಾಲೇಜಿನ ಇತಿಹಾಸದಲ್ಲಿ ಇದೊಂದು ಮುಖ್ಯ ಕಾರ್ಯಕ್ರಮವಾಗಿ ಗುರುತಿಸಲ್ಪಡುವಂತಾಯ್ತು ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು. ನಮ್ಮ ಸಂಸ್ಥೆಯು ವಿದ್ಯಾರ್ಥಿಗಳ ಔನ್ನತ್ಯಕ್ಕಾಗಿ ಇಂತಹ ಕಾರ್ಯಕ್ರಮಗಳನ್ನು ಏರ್ಪಡಿಸುವುದಕ್ಕೆ ಉತ್ಸುಕವಾಗಿದೆ ಎಂದರು.
ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಐಇಇಇ ಮಂಗಳೂರು ಉಪವಿಭಾಗದ ಮುಖ್ಯಸ್ಥ ಡಾ.ವೇಣುಗೋಪಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ಸಂಯೋಜಕಿಯರಲ್ಲೊಬ್ಬರಾದ ಡಾ.ರಜನಿ ರೈ.ಬಿ ಎರಡು ದಿನಗಳ ಕಾಲ ನಡೆದ ಈ ಸಮ್ಮೇಳನದ ವರದಿಯನ್ನು ವಾಚಿಸಿದರು. ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ.ರೇಶ್ಮಾ ಪೈ ಅತಿಥಿಗಳನ್ನು ಪರಿಚಯಿಸಿದರು.
ಒಟ್ಟು ಆರು ವಿಭಾಗಗಳಲ್ಲಿ ನಡೆದ ಪ್ರಬಂಧ ಮಂಡನೆಯಲ್ಲಿ ಪ್ರತಿ ವಿಭಾಗದಲ್ಲಿಯೂ ಉತ್ತಮವಾದ ಪ್ರಬಂಧಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಎಂಸಿಎ ವಿಭಾಗದ ನಿರ್ದೇಶಕಿ ಡಾ.ಜೋತಿಮಣಿ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕಿ ಡಾ.ಜೀವಿತಾ.ಬಿ.ಕೆ ವಂದಿಸಿದರು. ಮೂಲ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ. ಶ್ರೀಶರಣ್ಯ ಕಾರ್ಯಕ್ರಮ ನಿರ್ವಹಿಸಿದರು.
-
ನಿಧನ ವಾರ್ತೆ17 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ನಿಧನ ವಾರ್ತೆ12 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಸ್ಥಳೀಯ16 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು15 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್‌ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ಸ್ಥಳೀಯ17 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
Uncategorized10 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಬಿಗ್ ನ್ಯೂಸ್12 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ಶಿಕ್ಷಣ11 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ


















