ಅಪರಾಧ
Hasana teacher kidnap ಮದುವೆಗೊಪ್ಪದ ಹಾಸನದ ಶಿಕ್ಷಕಿಯನ್ನು ಅಪಹರಿಸಿದ ಸಂಬಂಧಿಕ – ನೆಲ್ಯಾಡಿಯಲ್ಲಿ ಕಿಡ್ನಾಪರ್ಸ್ ಅರೆಸ್ಟ್
ಗುರುವಾರ ಬೆಳಿಗ್ಗೆ ಹಾಸನದ ಶಾಲಾ ಶಿಕ್ಷಕಿ ಅಪಹರಣ ನಡೆದಿದ್ದು, ಕೇವಲ 7 ಗಂಟೆಯೊಳಗಡೆ ಪ್ರಕರಣವನ್ನು ಹಾಸನ ಪೊಲೀಸರು ಬೇಧಿಸಿದ್ದಾರೆ. ಅಪಹರಣಕಾರರನ್ನು ಬಂಧಿಸಿರುವ ಪೊಲೀಸರು, ಯುವತಿಯನ್ನು ಸುರಕ್ಷಿತವಾಗಿ ಮನೆ ಸೇರಿಸಿದ್ದಾರೆ .
ಶಿಕ್ಷಕಿ ಅರ್ಪಿತರನ್ನು ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಸಿನಿಮೀಯ ರೀತಿಯಲ್ಲಿ ತಂಡವೊಂದು ಕಾರಿನಲ್ಲಿ ಅಪಹರಿಸಿತ್ತು. ಬಂಧಿತ ಆರೋಪಿ ಅರ್ಪಿತಾರವರ ಸಂಬಂಧಿ ರಾಮು ಎಂದು ತಿಳಿದು ಬಂದಿದೆ. ಶಿಕ್ಷಕಿಯನ್ನು ಕರೆದುಕೊಂಡು ಹೋಗುತ್ತಿದ್ದ ಅಪಹರಣಕಾರರ ಕಾರನ್ನು ಪೊಲೀಸರು ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ಬೆನ್ನಟ್ಟಿ ಹಿಡಿದಿದ್ದರು.
ಆರೋಪಿ ರಾಮು 15 ದಿನಗಳ ಹಿಂದೆ ಶಿಕ್ಷಕಿ ಅರ್ಪಿತಾ ಮನೆಗೆ ಫೋಷಕರ ಜತೆ ಆಗಮಿಸಿ ಮದುವೆ ಪ್ರಸ್ತಾಪವಿಟ್ಟಿದ್ದ. ಆದರೆ, ಈ ಮದುವೆ ಪ್ರಸ್ತಾಪವನ್ನು ಶಿಕ್ಷಕಿ ಅರ್ಪಿತಾ ಹಾಗೂ ಪೋಷಕರು ತಿರಸ್ಕರಿಸಿದ್ದರು. ಆದರೇ ಅರ್ಪಿತಾಳನ್ನು ಒನ್ ವೇ ಲವ್ ಮಾಡುತ್ತಿದ್ದ ರಾಮ್ ಹೇಗಾದರೂ ಮದುವೆ ಆಗಬೇಕೇಂದು ಹಂಚಿಕೆ ಹಾಕಿದ್ದ.
ಇದರ ಮುಂದುವರಿದ ಭಾಗವಾಗಿ ಗುರುವಾರ (ನ.30) ಬೆಳಿಗ್ಗೆ 8 ಗಂಟೆಗೆ 5 ನಿಮಿಷಕ್ಕೆ ಶಾಲೆಗೆ ಹೋಗುತ್ತಿದ್ದ ಅರ್ಪಿತಾರನ್ನು ಇನ್ನೋವಾ ಕಾರ್ ನಲ್ಲಿ ಬಂದ ಅಪಹರಣಕಾರ ರಾಮ್ ಗೆಳೆಯರ ನೆರವಿನಿಂದ ಕಿಡ್ನ್ಯಾಪ್ ಮಾಡಿದ್ದ. ಆರೋಪಿ ರಾಮು ಕಾರಿನಲ್ಲೇ ಯುವತಿಯ ಮನವೊಲಿಸಿ ತಾಳಿಕಟ್ಟಲು ಯತ್ನಿಸಿದ್ದಾನೆ. ಆದರೆ ಯುವತಿ ಇದಕ್ಕೆ ಒಪ್ಪಲಿಲ್ಲ. ಎಂದು ತಿಳಿದು ಬಂದಿದೆ.

ಇತ್ತ ಮಗಳು ಅಪಹರಣವಾದ ಮಾಹಿತಿ ತಿಳಿಯುತ್ತಲೇ ಆರ್ಪಿತಾ ತಾಯಿ ಪೊಲೀಸರ ಮೊರೆ ಹೋಗಿದ್ದರು. ಮದುವೆಗೆ ಒಪ್ಪದಿದ್ದಕ್ಕೆ ನನ್ನ ಮಗಳನ್ನು ರಾಮು ಅಪರಣ ಮಾಡಿದ್ದಾರೆ ಎಂದು ಅರ್ಪಿತಾ ತಾಯಿ ದೂರು ನೀಡಿದ್ದರು.
ತಕ್ಷಣ ಕಾರ್ಯಾಚರಣೆ ನಡೆಸಿದ ಹಾಸನ ಪೊಲೀಸರು ಆರೋಪಿ ಹಾಗೂ ಹರ್ಷಿತಾಳ ಮೊಬೈಲ್ ಟ್ರ್ಯಾಕ್ ಮಾಡಿದ್ದರು. ಅಪಹರಣಕಾರರು ದಕ್ಷಿಣ ಕನ್ನಡ ಜಿಲ್ಲೆಯತ್ತ ಸಾಗುತ್ತಿರುವ ಮಾಹಿತಿ ಪಡೆದ ಪೊಲೀಸರು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಎಂಬಲ್ಲಿ ಅಪಹರಣಕಾರರ ಕಾರನ್ನು ಅಡ್ಡ ಹಾಕುತ್ತಾರೆ. ಈ ವೇಳೆ ಪ್ರಮುಖ ಆರೋಪಿ ರಾಮುನನ್ನು ಬಿಟ್ಟು ಉಳಿದವರು ಎಸ್ಕೇಪ್ ಆಗುತ್ತಾರೆ. ಸಂಜೆ 5 ಗಂಟೆಗೆ ರಾಮುವನ್ನು ಬಂಧಿಸಿದ ಪೊಲೀಸರು ಅರ್ಪಿತಾರನ್ನು ಸುರಕ್ಷಿತವಾಗಿ ಪೋಷಕರಿಗೆ ಒಪ್ಪಿಸಿದ್ದಾರೆ.

ಅಪಹರಣದ ಮಾಹಿತಿ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಧಾವಿಸಿದ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಆರೋಪಿಗಳ ಪತ್ತೆಗಾಗಿ ಮೂರು ತಂಡ ರಚನೆ ಮಾಡಿದ್ದರು. ಪೊಲೀಸರು ತಲೆ ಮರೆಸಿಕೊಂಡಿರುವ ಇತರ ಆರೋಪಿಗಳಿಗೆ ಶೋಧ ನಡೆಸುತ್ತಿದ್ದಾರೆ
ಅಪರಾಧ
Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Punacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
ಪುಣಚದಲ್ಲಿ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಪುತ್ತೂರು: ಪುಣಚದಲ್ಲಿ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ.
ಬೈಕ್ ಸವಾರ ನಿಧಾನವಾಗಿ ರಸ್ತೆ ಏರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತದ ದೃಶ್ಯಗಳು ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಈ ದೃಶ್ಯಗಳು ಸಹಕಾರಿಯಾಗುವ ಸಾಧ್ಯತೆಯಿದೆ.
ಇನ್ನು ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಬಗ್ಗೆ ಸ್ಥಳೀಯವಾಗಿ ವಿವಿಧ ಚರ್ಚೆಗಳು ನಡೆಯುತ್ತಿದ್ದು, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದಿವೆ. ಆದರೆ ಈ ಆರೋಪಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.
ಅಪರಾಧ
Punacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ವಿಟ್ಲ: ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
2024ರ ಡಿಸೆಂಬರ್ 11ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಸಂಜೀವ ನಾಯ್ಕ ತನ್ನ ಪತ್ನಿಗೆ ಹೃದಯಾಘಾತವಾಗಿದೆ ಎಂದು ನೆರೆಮನೆಯವರನ್ನು ನಂಬಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಘೋಷಿಸಿದ್ದರು.
ಮೃತದೇಹದ ಮೇಲೆ ಅನುಮಾನಾಸ್ಪದ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ನಿರೀಕ್ಷಕ ಹೆಚ್.ಇ. ನಾಗರಾಜ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎನ್ಎಸ್ ಕಲಂ 105 ಭಾಗ-2ರ ಅಡಿಯಲ್ಲಿ ಆರೋಪಿಗೆ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.
ಅಲ್ಲದೆ, ಬಿಎನ್ಎಸ್ ಕಲಂ 240ರ ಅಡಿಯಲ್ಲಿ ಸಾಕ್ಷ್ಯನಾಶ ಹಾಗೂ ಸುಳ್ಳು ಮಾಹಿತಿ ನೀಡಿದ ಅಪರಾಧಕ್ಕೆ 6 ತಿಂಗಳ ಸಾದಾ ಜೈಲು ಶಿಕ್ಷೆಯನ್ನೂ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ವಾದ ಮಂಡಿಸಿದ್ದರು.
-
ನಿಧನ ವಾರ್ತೆ11 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಅಪರಾಧ10 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ11 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ10 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ಬಿಗ್ ನ್ಯೂಸ್5 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ರಾಜಕೀಯ11 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಅಪರಾಧ8 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
-
ಬಿಗ್ ನ್ಯೂಸ್5 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ















