ಕ್ರೈಂ
Snake Bite: ಘಟಿಕೋತ್ಸವದಲ್ಲಿ ಪದವಿ ಪಡೆದ ಸ್ವಲ್ಪ ಹೊತ್ತಿನಲ್ಲಿ ಕಾಲೇಜಿನ ಆವರಣದಲ್ಲಿ ಹಾವು ಕಚ್ಚಿ MBBS ವಿದ್ಯಾರ್ಥಿ ದುರಂತ ಸಾವು
ಸಿದ್ಧಾರ್ಥ ವಿವಿ ಘಟಿಕೋತ್ಸವದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಕುಲಪತಿ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ಭಾಗವಹಿಸಿದ ಸಂದರ್ಭದಲ್ಲಿ ಆದಿತ್ ಅವರಿಗೆ ಎಂಬಿಬಿಎಸ್ ಪದವಿಯನ್ನು ನೀಡಲಾಯಿತು
ತುಮಕೂರು : ದಿನದ ಹಿಂದೆ ವಿವಿ ಘಟಿಕೋತ್ಸವದಲ್ಲಿ ಪದವಿ ಪಡೆದ ವಿದ್ಯಾರ್ಥಿ ಮರುದಿನ ವಿಷದ ಹಾವು ಕಚ್ಚಿ ಮೃತಪಟ್ಟ ದಾರುಣ ಘಟನೆ ತುಮಕೂರು ಜಿಲ್ಲೆಯಿಂದ ವರದಿಯಾಗಿದೆ. ಕೇರಳದ ತ್ರಿಸ್ಸೂರು ಮೂಲದ ನಿವಾಸಿ ಅದಿತ್ ಬಾಲಕೃಷ್ಣನ್ ಹಾವು ಕಡಿತಕ್ಕೆ ಒಳಗಾಗಿ ಮೃತಪಟ್ಟವರು. ತುಮಕೂರು ಹೊರ ವಲಯದಲ್ಲಿರುವ ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಆದಿತ್ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದರು
ನವೆಂಬರ್ 29 ರಂದು ನಡೆದ ಸಿದ್ಧಾರ್ಥ ವಿವಿ ಘಟಿಕೋತ್ಸವದಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ಜರುಗಿತ್ತು. ಘಟಿಕೋತ್ಸವ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ರಾತ್ರಿ 11 ಗಂಟೆ ಸುಮಾರಿಗೆ ವಿಷಪೂರಿತ ಹಾವು ಕಚ್ಚಿದೆ , ವಿದ್ಯಾರ್ಥಿಯ ಕೊಠಡಿಯ ಸಮೀಪವಿರುವ ಪಾರ್ಕಿಂಗ್ ಸ್ಥಳದ ಬಳಿ ಹಾವು ಕಚ್ಚಿದೆ. ಘಟನೆಯ ಸಮಯದಲ್ಲಿ ಅವನ ತಾಯಿ ಮತ್ತು ಇತರ ಸಂಬಂಧಿಕರು ಜೊತೆಗಿದ್ದರು. ಆದರೆ, ಹಾವು ಕಚ್ಚಿರುವುದು ಯಾರಿಗೂ ತಿಳಿದಿರಲಿಲ್ಲ. ಮನೆಗೆ ತಲುಪಿದ ಬೆನ್ನಲ್ಲೇ ಕುಸಿದುಬಿದ್ದ ಆದಿತ್ ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು.
ಆದರೆ, ಚಿಕಿತ್ಸೆ ಫಲಿಸದೇ ಆದಿತ್ ಮೃತಪಟ್ಟಿದ್ದಾರೆಂದು ತುಮಕೂರಿನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಆದಿತ್ ದೇಹದಲ್ಲಿ ಹಾವು ಕಡಿತದ ಗುರುತುಗಳು ಕಂಡುಬಂದಿದೆ. ಅಲ್ಲದೆ, ಶವಪರೀಕ್ಷೆಯ ರಕ್ತದ ಮಾದರಿಗಳಲ್ಲಿಯೂ ಹೆಚ್ಚಿನ ಮಟ್ಟದ ವಿಷ ಇರುವುದು ವೈದ್ಯಕೀಯ ವರದಿಯಲ್ಲಿ ಕಂಡು ಬಂದಿದೆ.
ಸಿದ್ಧಾರ್ಥ ವಿವಿ ಘಟಿಕೋತ್ಸವದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಕುಲಪತಿ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ಭಾಗವಹಿಸಿದ ಸಂದರ್ಭದಲ್ಲಿ ಆದಿತ್ ಅವರಿಗೆ ಎಂಬಿಬಿಎಸ್ ಪದವಿಯನ್ನು ನೀಡಲಾಯಿತು ,ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ತ್ರಿಸ್ಸೂರ್‌ನಿಂದ ಬಂದಿದ್ದ ಅದಿತ್‌ನ ತಾಯಿ ಮತ್ತು ಸಂಬಂಧಿಕರು ಆದಿತ್ನ ಅಕಾಲಿಕ ಮರಣ ಕಂಡು ಆತನ ಕುಟುಂಬದಲ್ಲಿ ಶೋಕ ಆವರಿಸಿದೆ.ಅಂತಿಮ ವಿಧಿವಿಧಾನಗಳನ್ನು ಪೂರ್ಣಗೊಳಿಸಲು ಅದಿತ್ ಅವರ ತಂದೆ ಇಟಲಿಯಿಂದ ಬರಬೇಕಿದ್ದು, ಅವರಿಗಾಗಿ ಕುಟುಂಬವು ಕಾಯುತ್ತಿದೆ ಎಂದು ಕಾಲೇಜು ಮೂಲಗಳು ತಿಳಿಸಿವೆ.
ಸ್ಥಳೀಯ
Kalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ.
ಆಕೆಯ ಪತಿ ಸೂರ್ಯಕಾಂತ್ ಹಡಪದ್ ಕೊಲೆ ಆರೋಪಿಯಾಗಿದ್ದು, ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಮಕ್ಕಳಾಗದಿರುವ ವಿಚಾರ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸಂಬಂಧಿಸಿ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಬಳಿಕ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಅಂತರ ರಾಜ್ಯ
Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.
ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.
ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.
ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.
ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.
ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕ್ರೈಂ
Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.
ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
-
Uncategorized20 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized23 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized9 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
Uncategorized7 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ8 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ಮಂಗಳೂರು6 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ನಿಧನ ವಾರ್ತೆ7 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ನಿಧನ ವಾರ್ತೆ6 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು


















