ಪುತ್ತೂರು
‘ಶ್ರೀನಿವಾಸ ಕಲ್ಯಾಣೋತ್ಸವ – ಸನಾತನ ಸಮಾಗಮ’ದ ಕಾರ್ಯಲಯ ಉದ್ಘಾಟನೆ : ಹಿಂದೂಗಳಿಂದ ಹಿಂದೂಗಳಿಗಾಗಿ ಪರಿಕಲ್ಪನೆಯ ವೆಬ್ ಸೈಟ್ ಲೋಕಾರ್ಪಣೆ : ವಿರೋಧಗಳನ್ನು ಮೆಟ್ಟಿ ನಿಂತು ಪ್ರತಿ ಮನೆಯಿಂದ ಹಿಂದೂಗಳು ಪಾಲ್ಗೊಂಡು ಈ ಶ್ರೀನಿವಾಸ ಕಲ್ಯಾಣೋತ್ಸವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಬರೆಯುತ್ತದೆ – ಮಾಣಿಲ ಶ್ರೀ
ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಡಿ.24-25 ರಂದು ಪ್ರಪ್ರಥಮ ಬಾರಿಗೆ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಕಾರ್ಯಾಲಯ ಉದ್ಘಾಟನೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಬಾಕಿಮಾರು ಗದ್ದೆಯಲ್ಲಿ ಡಿ.2ರಂದು ಬೆಳಿಗ್ಗೆ ನಡೆಯಿತು.
ಮಾಣಿಲ ಶ್ರೀ ಮೋಹನದಾಸ ಸ್ವಾಮಿಜಿ ಕಾರ್ಯಾಲಯ ಉದ್ಘಾಟಿಸಿ, ಕಾರ್ಯಕ್ರಮ ಅದ್ಭುತ ಯಶಸ್ವಿಗೆ ಶುಭಹಾರೈಸಿದರು.
ಈ ಸಂದರ್ಭ ಪುತ್ತಿಲ ಪರಿವಾರದ ವೆಬ್ ಸೈಟ್ ಗೆ ಹರಿಪ್ರಸಾದ್ ಹೊಟೇಲ್ ಮಾಲಕ ಹರಿನಾರಾಯಣ ಹೊಳ್ಳ ಚಾಲನೆ ನೀಡಿದರು.


ಅರುಣ್ ಕುಮಾರ್ ಪುತ್ತಿಲ, ಅನಿವಾಸಿ ಭಾರತೀಯ ಉದ್ಯಮಿ , ರಾಜ್ಯೋತ್ಸವ ಪುರಸ್ಕೃತ ರವಿ ಶೆಟ್ಟಿ ಮೂಡಂಬೈಲು, ಜಯಂತ ನಡುಬೈಲು, ಜಯಕುಮಾರ್ ನಾಯರ್, ಸ್ನೇಹ ಸಿಲ್ಕ್ ನ ಮಾಲಕರಾದ ಸತೀಶ್ ಕುಮಾರ್, ಪದ್ಮಶ್ರೀ ಮೆಡಿಕಲ್ ಮಾಲಕರಾದ ತಾರಾನಾಥ ರೈ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಡಾ. ಗಣೇಶ್ ಪ್ರಸಾದ್ ಮುದ್ರಾಜೆ, ಸ್ವಾಗತ ಸಮಿತಿ ಅಧ್ಯಕ್ಷರು ಕಿರಣ್ ಗೌಡ, ಉಪಾಧ್ಯಕ್ಷರುಗಳಾದ ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೃಷ್ಣ ಪ್ರಸಾದ್ ಶೆಟ್ಟಿ,ಸ್ವಾಗತ ಸಮಿತಿ ಸಂಚಾಲಕರಾದ ಗಣೇಶ್ ಭಟ್ ಮಕರಂದ, ಮಹಿಳಾ ಘಟಕದ ಅಧ್ಯಕ್ಷರಾದ ಮಲ್ಲಿಕಾ ಪ್ರಸಾದ್, ಜಯಲಕ್ಷ್ಮೀ, ಅಶ್ವಿನಿ ಸಂಪ್ಯ, ಕಲ್ಯಾಣೋತ್ಸವ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್, ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ನಗರ ಅಧ್ಯಕ್ಷ ಅನಿಲ್ ತೆಂಕಿಲ , ರವಿ ರೈ ಕೆದಂಬಾಡಿ ಮಠ, ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಸುಬ್ರಹ್ಮಣ್ಯ ಬಲ್ಯಾಯ ಗೋಪಾಲಕೃಷ್ಣ ಭಟ್ , ಮಹೇಂದ್ರ ವರ್ಮ, ಲಕ್ಷ್ಮಣ ಬೈಲಾಡಿ, ಪ್ರಶಾಂತ್ ನೆಕ್ಕಿಲಾಡಿ , ಕಿಶೋರ್ ಜೋಗಿ, ಮಹೇಂದ್ರ ವರ್ಮ, ಅರುಣ್ ಭಟ್, ರಾಜೇಶ್ ಭಟ್ ಕುಳ, ರವಿಕೃಷ್ಣ ನಗರ, ಗೋಕುಲ್ ದಾಸ್ ಪ್ರಗತಿ, ಭೀಮಯ್ಯ ಭಟ್, ಪ್ರವೀಣ್ ಭಂಡಾರಿ, ಅನಿಲ್ ಮುಂಡೂರು, ಅಶೋಕ್ ಪುತ್ತಿಲ,ಪುರುಷೋತ್ತಮ ಕೋಲ್ಪೆ , ಜಯಪ್ರಕಾಶ್ , ರತ್ನಾಕರ್ ನಾಯಕ್ ಸಹಿತ ನೂರಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.
PuthilaParivara.org ಚಾಲನೆ:
ಪುತ್ತಿಲ ಪರಿವಾರ ಟ್ರಸ್ಟ್ ನ ಅಡಿಯಲ್ಲಿ PuthilaParivara.Org ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು.
ಹಿಂದೂಗಳಿಂದ ಹಿಂದೂಗಳಿಗಾಗಿ ಎಂಬ ಹೊಸ ಪರಿಕಲ್ಪನೆಯೊಂದಿಗೆ ಈ ವೆಬ್ ಸೈಟ್ ಮೂಡಿ ಬರಲಿದೆ.
ವಾಲಿಂಟಿಯರ್ ಹಾಗೂ ಮೆಂಬರ್ ಶಿಪ್ ಎಂಬ ಎರಡು ವಿಭಾಗವಿದ್ದು, ಮೆಂಬರ್ ಶಿಪ್ ಆದವರಿಗೆ ಕಾರ್ಯಕ್ರಮಗಳ ಅಪ್ ಡೇಟ್ ಸಂದೇಶ ಮೊಬೈಲ್ ಗೆ ಹೋಗಲಿದೆ. ಇದಕ್ಕೆ 10 ರೂ. ಸದಸ್ಯತನ ಶುಲ್ಕವಿದೆ.
ವಾಲಿಂಟಿಯರ್ ಗೆ ಉಚಿತ ಸದಸ್ಯತ್ವ ಇರಲಿದೆ. ಸದಸ್ಯತನ ಹಾಗೂ ವಾಲಿಂಟಿಯರ್ ಆಗುವವರಿಗೆ ಐಡಿ ಕಾರ್ಡ್ ಲಭಿಸಲಿದೆ.
ಡೋನೆಶನ್ ಮಾಡುವವರಿಗೂ ಅವಕಾಶವಿದೆ.
ರಕ್ತದಾನ ಮಾಡುವವರಿಗೆ ನೊಂದಣಿ ಹಾಗೂ ಸರ್ಟಿಫಿಕೇಟ್ ವ್ಯವಸ್ಥೆಯಿದೆ.

ಶ್ರೀನಿವಾಸ ಕಲ್ಯಾಣೋತ್ಸವ ಸಮಾಲೋಚನ ಸಭೆ :
ಶ್ರೀನಿವಾಸ ಕಲ್ಯಾಣೋತ್ಸವ ಸಮಾಲೋಚನ ಸಭೆ ಡಿ 2 ರಂದು ನಟರಾಜ ವೇದಿಕೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ತಿರುಪತಿ ಅರ್ಚಕರಾದ ಲಕ್ಷ್ಮೀಪತಿ ಮಾತನಾಡಿ , ತಿರುಮಲದಲ್ಲಿ ನಡೆಯುವ ಸೇವೆಯನ್ನು ಎಲ್ಲರೂ ಪಾಲ್ಗೊಳ್ಳುವುದು ಕಷ್ಟಕರ ಹೀಗಾಗಿ ಪುತ್ತೂರಿನಲ್ಲಿ ಬಹಳ ಅಚ್ಚುಕಟ್ಟಾಗಿ ಕಲ್ಯಾಣೋತ್ಸವ ನಡೆಯಲಿದೆ ಎಂದರು.
24 ಬೆಳಿಗ್ಗೆ ತಿರುಪತಿಯಲ್ಲಿ ಪ್ರಾತಃಕಾಲದ ಪೂಜೆ ವಿಧಿವಿಧಾನ ನಡೆದು ಸಂಜೆ ಪುತ್ತೂರಿಗೆ ಪುರಪ್ರವೇಶ ಆಗಲಿದೆ. ಎಲ್ಲಾ ಸಂಪ್ರದಾಯದವರಿಂದ ಸುಪ್ರಭಾತ ಸೇವೆ ನಡೆಯಲಿದೆ. ತೋಮಲಿಕೆ ಸೇವೆ , ನಂತರ ಪಂಚಾಮೃತಗಳಿಂದ ಮಂಗಲ ದೃವ್ಯಗಳಿಂದ ವಿಶೇಷವಾಗಿರುವ ಮಂಗಳಾಭೀಷೇಕ ನಡೆಯಲಿದೆ.
ಮಧ್ಯಾಹ್ನ ಹೋಮದ ಪೂರ್ಣಾಹುತಿ ನಂತರ , ತಿರುಮಂಜನಾಭಿಷೇಕ, ಮಹಾಪೂಜೆ ನಂತರ ಬ್ರಹ್ಮೋತ್ಸವದಲ್ಲಿ ನಡೆಯುವ ಆಲಂಕಾರ ಸೇವೆ ಪುತ್ತೂರಿನಲ್ಲಿ ನಡೆಯಲಿದೆ. ಕಾಶಿಯಾತ್ರಾ ಮಹೋತ್ಸವ ಸೇವೆ ನಡೆಯಲಿದೆ. ಮಹಾಗಣಪತಿ, ವಾಗ್ ನಿಶ್ಚಯ ಲಗ್ನಪತ್ರಿಕಾ ಸೇವೆ ನಡೆದು ಮಹೋತ್ಸವ ನಡೆಯಲಿದೆ. ಅಷ್ಟವಧನ ಸೇವೆ ಹಾಗೂ ಮಹಾಮಂಗಳಾರತಿ ಹಾಗೂ ತಿರುಮಲ ಲಡ್ಡು ಪ್ರಸಾದ ಜೊತೆ ತೀರ್ಥ ಪ್ರಸಾದ ನಡೆಯಲಿದೆ ಎಂದರು.
ಭಜನಾ ಸಾಧಕ ರಾಮಕೃಷ್ಣ ಕಾಟುಕುಕ್ಕೆ ಮಾತನಾಡಿ, ನಗರೀಕರಣ ಹಾಗೂ ನಾಗರೀಕತೆಯ ಜೊತೆ ಸನಾತನ ಧರ್ಮದ ಕಾರ್ಯಗಳು ಬೆಳೆಯಬೇಕು ಎಂದರು.
ಶ್ರೀನಿವಾಸ ಬರುವಾಗ ಅದ್ದೂರಿಗಿಂತ ಅದ್ದೂರಿ ಕಾರ್ಯಕ್ರಮ ಆಗುತ್ತದೆ. ಅದನ್ನು ಶ್ರೀನಿವಾಸನೇ ಮಾಡಿಕೊಳ್ತಾನೆ ಎಂದರು.
ಧರ್ಮದಲ್ಲಿ ಧಾರ್ಮಿಕತೆ ಇದ್ದರೆ ಸಮಾಜದಲ್ಲಿ ಶಾಂತಿ ನೆಲೆಸುವುದು ಸಹಜ ಎಂದರು. ಭಕ್ತಿ ಶ್ರದ್ಧೆಯಿಂದ ಮಾಡಿದರೆ ಪುಣ್ಯ ಖಂಡಿತ ಪ್ರಾಪ್ತಿಯಾಗ್ತದೆ. ಸನಾತನ ಸಂಸ್ಕೃತಿಗಾಗಿ ಎಲ್ಲರೂ ಪುತ್ತೂರಿನ ಬೃಹತ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದರು.
ವೇದಿಕೆಯಲ್ಲಿ ಮಾಣಿಲ ಶ್ರೀ ಮೋಹನದಾಸ ಸ್ವಾಮಿಜಿ ಮಾತನಾಡಿ, ಹಿಂದೂ ಸಮಾಜದ ಭಾವೈಕ್ಯತೆಗಾಗಿ ಈ ಕಾರ್ಯಕ್ರಮ ನಡೆಯಲಿದೆ ಎಂದರು.
ಕಲ್ಯಾಣೋತ್ಸವ ಹಿಂದೂಗಳ ಕಾರ್ಯಕ್ರಮ ಹಿಂದೂಗಳೆಲ್ಲ ಭಾಗವಹಿಸಬೇಕು. ಭಗವಂತನ ಸೇವೆಗಾಗಿ ವಿರೋಧಗಳಿದ್ದರು ಮೆಟ್ಟಿ ನಿಲ್ಲಬೇಕು. ಹುಟ್ಟು ಸಾವಿನ ನಡುವಿನ ಮನುಷ್ಯ ಜೀವನದ ದ್ವೇಷ ಬಿಡಲು ನಡೆಯುವುದೇ ಶ್ರೀನಿವಾಸ ಕಲ್ಯಾಣೋತ್ಸವ.
ಮನಶುದ್ದಿ ಮತ್ತು ಭಾವಶುದ್ದಿಗಾಗಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಯಾರೇ ವಿರೋಧಿಸಿದರು ಪ್ರತಿ ಮನೆಯ ಹಿಂದೂಗಳು ಭಾಗವಹಿಸಬೇಕು. ಜಿಲ್ಲೆಯ ಎಲ್ಲಾ ಸಂಘಗಳು, ಸಂಘಟನೆಗಳು, ಶಿಕ್ಷಣ ಸಂಸ್ಥೆಗಳು ಒಂದಾಗಿ ಜಿಲ್ಲೆಯಲ್ಲೇ ಇತಿಹಾಸ ಬರೆಯುವ ಕಾರ್ಯಕ್ರಮ ಆಗುವುದರಲ್ಲಿ ಸಂಶಯವಿಲ್ಲ ಎಂದರು.
ಕಾರ್ಯಲಯ ಉದ್ಘಾಟನೆ ಸಂದರ್ಭ ನಿಧಿ ಸಂಚಯನದಲ್ಲಿ 12506 ರೂಪಾಯಿ ಕ್ಷಣದಲ್ಲಿ ಸಂಗ್ರಹ ಆಯ್ತು. ಇದರ ಸಂಖ್ಯೆ ಕೂಡಿಸಿದಾಗ 5 ಎಂದಾಗುತ್ತದೆ. ಪಂಚಮಮ್ ಕಾರ್ಯ ಶುಭಂ ಎಂದು ಸ್ವಾಮಿಜೀ ಹೇಳಿದರು.
ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ನೀವು ನೀಡುವ ಸಂಪತ್ತು ನಿಮಗೆ ನೂರು ಪಟ್ಟು ಹಿಂದಿರುಗಿ ಬರುವುದರಲ್ಲಿ ಯಾವೂದೇ ಸಂಶಯವಿಲ್ಲ ಎಂದು ಸ್ವಾಮೀಜಿ ಹೇಳಿದರು.
ಸ್ವಾಗತ ಸಮಿತಿಯ ಸಂಚಾಲಕ ಗಣೇಶ್ ಭಟ್ ಮಕರಂದ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಪ್ರಧಾನ ಕಾರ್ಯದರ್ಶಿ ಉಮೇಶ್ ವೀರಮಂಗಲ, ಭೀಮಯ್ಯ ಭಟ್, ಶ್ರೀನಿವಾಸ ಕಲ್ಯಾಣೋತ್ಸವದ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್ ಉಪಸ್ಥಿತರಿದ್ದರು.
ಕಾರ್ಯಕ್ರಮ ಯಶಸ್ವಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಅರುಣ್ ಕುಮಾರ್ ಪುತ್ತಿಲ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಪ್ರಸನ್ನ ಮಾರ್ತ ಧನ್ಯವಾದಗೈದರು.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
ಮಂಗಳೂರು15 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಬಿಗ್ ನ್ಯೂಸ್13 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ19 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಅಪರಾಧ14 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಸ್ಥಳೀಯ21 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್21 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಮಂಗಳೂರು14 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ16 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















