ರಾಜಕೀಯ
Krishna Byre Gowda: ʼಭೂಮಿಯ ಮೇಲಿರಿ, ಆಕಾಶದಲ್ಲಿ ಹಾರಾಡಬೇಡಿ- ಕೆಳಗಿಳಿಸುವುದು ಹೇಗೆ ನನಗೆ ಗೊತ್ತಿದೆʼ : ತಹಶೀಲ್ದಾರ್ʼಗಳನ್ನು ಹಿಗ್ಗಾಮುಗ್ಗಾ ತರಾಟೆಗೆತ್ತಿಕೊಂಡ ಸಚಿವ ಕೃಷ್ಣ ಬೈರೆಗೌಡ
ಬೆಂಗಳೂರು : ಅಧಿಕಾರಿಗಳು ಭೂಮಿ ಮೇಲಿರಿ, ಆಕಾಶದಲ್ಲಿ ಹಾರಾಡಬೇಡಿ. ಹಾಗೇ ಹಾರಾಡಿದರೆ ನಿಮ್ಮನ್ನು ಕೆಳಗಿಳಿಸುವುದು ಹೇಗೆ ಎಂಬುದು ನನಗೆ ಗೊತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಸಿದರು.
ಜಿಲ್ಲಾಧಿಕಾರಿ ತಹಸೀಲ್ದಾರರ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಉದ್ದೇಶಿಸಿ ಮಾತನಾಡಿದ ಕೃಷ್ಣ ಬೈರೇಗೌಡ ಅವರು, ತಹಸೀಲ್ದಾರ್ ಹಾಗೂ ಎಸಿ ನ್ಯಾಯಾಲಯಗಳಲ್ಲಿ ಬಾಕಿ ಇರುವ 1 ವರ್ಷಕ್ಕಿಂತ ಹಳೆಯ ತಕರಾರು ಅರ್ಜಿಗಳನ್ನು ಶೀಘ್ರದಲ್ಲಿ ವಿಲೇವಾರಿಗೊಳಿಸಿ ಎಂದು ವಿಕಾಸ ಸೌಧದಲ್ಲಿ ಏರ್ಪಡಿಸಲಾಗಿದ್ದ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆ ನೀಡಿದರು.
ತಹಸೀಲ್ದಾರ್ ನ್ಯಾಯಾಲಯದಲ್ಲಿ ಒಂದು ವರ್ಷಕ್ಕಿಂತ ಹಳೆಯ 1318 ಪ್ರಕರಣಗಳು ರಾಯಚೂರಿನಲ್ಲಿ ಬಾಕಿ ಇದ್ದರೆ, ತುಮಕೂರಿನ ಎಸಿ ನ್ಯಾಯಾಲಯದಲ್ಲಿ 6590 ಪ್ರಕರಣಗಳು ಬಾಕಿ ಇವೆ. ಕೋಲಾರದಲ್ಲಿ ಆರು ತಹಸೀಲ್ದಾರರಿದ್ದೂ ಸಹ ಕಳೆದ 20 ದಿನಗಳಲ್ಲಿ ಕೇವಲ 11 ಪ್ರಕರಣಗಳನ್ನು ಮಾತ್ರ ವಿಲೇವಾರಿಗೊಳಿಸಲಾಗಿದೆ. ಬೆಂಗಳೂರು ನಗರ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಯೇನೂ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನತಾ ದರ್ಶನದಲ್ಲಿ ಕಂದಾಯ ಇಲಾಖೆಯ ಬಗ್ಗೆಯೇ 458 ದೂರುಗಳು ದಾಖಲಾಗಿವೆ. ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಸರ್ಕಾರ ತಲೆತಗ್ಗಿಸಬೇಕಾ? ಎಂದು ಉಪವಿಭಾಗ ಅಧಿಕಾರಿಗಳು ಹಾಗೂ ತಹಶೀಲ್ದಾರರ ವಿರುದ್ಧ ಸಚಿವರು ವಾಗ್ದಾಳಿ ನಡೆಸಿದರು.
6 ತಿಂಗಳ ಡೆಡ್ ಲೈನ್
ಜನವರಿ 15ರ ಒಳಗಾಗಿ ಆರು ತಿಂಗಳಿಗಿಂತ ಹಳೆಯ ಎಲ್ಲ ಪ್ರಕರಣಗಳನ್ನೂ ಇತ್ಯರ್ಥಗೊಳಿಸಬೇಕು ಎಂದು ಅವರು ಸಮಯದ ಗಡುವು ನೀಡಿದರು. ಸರ್ಕಾರದ ಸವಲತ್ತುಗಳಿಂದ ವಂಚಿತರಾಗಿರುವ ತಾಂಡ-ಗೊಲ್ಲರಹಟ್ಟಿ ಸೇರಿದಂತೆ ಜನವಸತಿ ಪ್ರದೇಶಗಳನ್ನು ಶೀಘ್ರವೇ ಕಂದಾಯ ಗ್ರಾಮಗಳನ್ನಾಗಿ ಘೋಷಿಸಬೇಕು. ಈ ಬಗ್ಗೆ ಕಳೆದ ಆರು ತಿಂಗಳಿನಿಂದ ಸೂಚನೆ ನೀಡುತ್ತಿದ್ದಾಗ್ಯೂ ಜಿಲ್ಲಾಧಿಕಾರಿಗಳು ಅರ್ಹ ತಾಂಡ-ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಲು ವಿಳಂಬ ಮಾಡುತ್ತಿರುವುದೇಕೇ ಎಂದು ಸಚಿವರು ತರಾಟೆ ತೆಗೆದುಕೊಂಡರು.
ಖಾಸಗಿ ಬೋರ್ ವೆಲ್ಗೆ ಹೆಚ್ಚು ಒತ್ತುನೀಡಿ
ಕಂದಾಯ ಗ್ರಾಮ ಘೋಷಣೆ ಜತೆ ಜತೆಗೇ ಎಲ್ಲ ಕುಟುಂಬಗಳಿಗೆ ಹಕ್ಕುಪತ್ರ ಸಿದ್ದಪಡಿಸುವ ಕೆಲಸವೂ ಆಗಬೇಕು. ಜನವರಿ 10ರೊಳಗೆ ಹಕ್ಕುಪತ್ರ ವಿತರಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲಾಧಿಕಾರಿಗಳು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ಮೆಚ್ಚುಗೆ ಸೂಚಿಸಿದರು.ಎಲ್ಲ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳು ಖಾಸಗಿ ಬೋರ್ ವೆಲ್ಗೆ ಹೆಚ್ಚು ಒತ್ತುನೀಡಿ ಮತ್ತು ಬೋರ್ ವೆಲ್ ದರ ಮಾತುಕತೆಯಲ್ಲೂ ಗಮನವಿರಲಿ ಎಂದರು.
ರಾಮನಗರ, ಕೋಲಾರ, ಚಿಕ್ಕ ಬಳ್ಳಾಪುರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕೇವಲ 35 ಬೋರ್ ವೆಲ್ ಮಾತ್ರ ಗುರುತಿಸಲಾಗಿದೆ. ಬೇಸಿಗೆಯ ಸಂದರ್ಭದಲ್ಲಿ ಇದು ಸಾಲುತ್ತಾ? ಎಂದು ಪ್ರಶ್ನಿಸಿದರು. ಟ್ಯಾಂಕರ್‌ಗಳಲ್ಲಿ ನೀರು ಪೂರೈಸುವುದಾದರೆ ಮೊದಲೇ ಟೆಂಡರ್ ಆಗಿರಬೇಕು. ತಾಲೂಕುಗಳಲ್ಲಿ ಟಾಸ್ಕ್ ಫೋರ್ಸ್ ಸಭೆ ಆಗದಿದ್ದರೆ ಕೂಡಲೇ ಮಾಡಿ ಎಂದೂ ಸೂಚಿಸಿದರು.
ಇ-ಆಫೀಸ್ ಬಳಸದ ಅಧಿಕಾರಿಗಳ ತರಾಟೆ
ಇ-ಆಫೀಸ್ ಅನ್ನು ಸಮರ್ಪಕವಾಗಿ ಬಳಸದ ಅಧಿಕಾರಿಗಳನ್ನೂ ಸಹ ಸಚಿವರು ತರಾಟೆಗೆ ತೆಗೆದುಕೊಂಡರು. ಹೆಸರಿಗೆ ಇ-ಆಫೀಸ್ ಅನುಷ್ಠಾನಗೊಳಿಸಿ ಶೇ.100 ರಷ್ಟು ಅನುಷ್ಠಾನ ಆಗದಿದ್ದರೆ ನಮ್ಮ ಉದ್ದೇಶವೇ ವ್ಯರ್ಥ ಎಂದು ಕಿಡಿಕಾರಿದರು. ಚಾಮರಾಜನಗರದಂತಹ ಅತ್ಯಂತ ಹಿಂದುಳಿದ ಜಿಲ್ಲೆಯಲ್ಲೂ ಇ-ಆಫೀಸ್ ಪರಿಣಾಮಕಾರಿಯಾಗಿ ಜಾರಿಯಾಗಿದೆ. ಆದರೆ ಮುಂದುವರೆದ ಜಿಲ್ಲೆಗಳಿಗೇನು ಕಷ್ಟ? ಎಂದು ಅಸಮಾಧಾನ ಹೊರಹಾಕಿದರು.
ಮುಂದಿನ ಸೋಮವಾರದಿಂದಲೇ ಎಸಿ-ಡಿಸಿ ಹಾಗೂ ತಹಸೀಲ್ದಾರ್ ಕಚೇರಿಗಳಲ್ಲಿ ಶೇ.100 ರಷ್ಟು ಇ-ಆಫೀಸ್ ಮೂಲಕವೇ ನಿರ್ವಹಿಸಬೇಕು. ಭೌತಿಕ ದಾಖಲೆಗಳನ್ನು ಇನ್ನು ಸ್ವೀಕರಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ರೈತರ ಒಟ್ಟಾರೆ ಜಮೀನಿನ ಸಂಪೂರ್ಣ ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸುವುದು, ಬಗರ್ ಹುಕುಂ ಸಮಿತಿ ರಚನೆಗೆ ಒತ್ತು ನೀಡುವುದು, ರೆಕಾರ್ಡ್ ರೂಂ ನಿರ್ವಹಣೆ ಮತ್ತು ಡಿಜಿಟಲೀಕರಣ ಸೇರಿದಂತೆ ಹಲವು ಮಹತ್ವದ ವಿಚಾರಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.
ರಾಜಕೀಯ
Sanjeev Mathandur-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ; ‘ಷಡ್ಯಂತ್ರ, ಭ್ರಷ್ಟಾಚಾರದ ಶಂಕೆ’ – ಸಂಜೀವ ಮಠಂದೂರು
ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.
ಅ.8ರಂದು ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ತಾಲೂಕುಗಳ ರೈತರು ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಸುಮಾರು ₹840 ಕೋಟಿ ಪರಿಹಾರ ಬರಬೇಕಿದ್ದು, ವಾಸ್ತವವಾಗಿ ರೈತರಿಗೆ ಎಷ್ಟು ಮೊತ್ತ ವಿತರಿಸಲಾಗಿದೆ ಎಂಬುದನ್ನು ಸರಕಾರ ಹಾಗೂ ವಿಮಾ ಕಂಪನಿಗಳು ಅಂಕಿ-ಅಂಶಗಳ ಸಹಿತ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
ರೈತರು ಪಾವತಿಸಿದ ವಿಮಾ ಮೊತ್ತಕ್ಕೆ ಅನುಗುಣವಾಗಿ ಎಷ್ಟು ಪರಿಹಾರ ನೀಡಲಾಗಿದೆ? ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಮೊತ್ತದಲ್ಲಿ ವ್ಯತ್ಯಾಸವಾಗಲು ಕಾರಣವೇನು? ಯಾವ ವೈಜ್ಞಾನಿಕ ಮಾನದಂಡದ ಆಧಾರದಲ್ಲಿ ಪರಿಹಾರ ನಿಗದಿಪಡಿಸಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.
ಟರ್ಮ್‌ಶೀಟ್ ಬದಲಾದ ಬಳಿಕ ಸಮಸ್ಯೆ
2023-24ನೇ ಸಾಲಿನವರೆಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಪರಿಹಾರ ವಿತರಣೆಯಲ್ಲಿ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಸಮಸ್ಯೆ ಇರಲಿಲ್ಲ. ಆದರೆ ಬಳಿಕ ಟರ್ಮ್‌ಶೀಟ್ ಬದಲಾವಣೆಯಾದ ನಂತರ ಸಮಸ್ಯೆಗಳು ಆರಂಭವಾಗಿವೆ ಎಂದು ಮಠಂದೂರು ಆರೋಪಿಸಿದರು.
ಒಂದೇ ತಾಲೂಕು, ಹೋಬಳಿ ಹಾಗೂ ಒಂದೇ ರೀತಿಯ ಭೌಗೋಳಿಕ ಪರಿಸ್ಥಿತಿಯಲ್ಲಿರುವ ಗ್ರಾಮಗಳ ನಡುವೆ ಪರಿಹಾರ ಮೊತ್ತದಲ್ಲಿ ಭಾರಿ ವ್ಯತ್ಯಾಸ ಕಂಡುಬರುತ್ತಿದೆ. ಕೆಲವೆಡೆ ಕೇವಲ 100 ಮೀಟರ್ ಅಂತರದಲ್ಲಿರುವ ರೈತರಿಗೂ ₹10 ಸಾವಿರದಿಂದ ₹15 ಸಾವಿರದವರೆಗೆ ವ್ಯತ್ಯಾಸವಾಗುತ್ತಿದೆ. ಪಂಚಾಯಿತಿಯಿಂದ ಪಂಚಾಯಿತಿಗೆ, ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಬದಲಾಗುತ್ತಿರುವುದರ ಹಿಂದಿನ ಕಾರಣವನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರಕಾರವೂ ವಿಮಾ ಮೊತ್ತದ ಶೇ.20ರಷ್ಟು ಪಾಲು ಪಾವತಿಸುತ್ತಿರುವುದರಿಂದ ವಿಮಾ ಕಂಪನಿಗಳ ಕಾರ್ಯವೈಖರಿ ಕುರಿತು ರಾಜ್ಯ ಸರಕಾರವೇ ತನಿಖೆ ನಡೆಸಬೇಕು. ರೈತರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ಕಣ್ಮುಚ್ಚಿ ಕುಳಿತಿದೆ ಎಂದು ಅವರು ಆರೋಪಿಸಿದರು.
274 ಗ್ರಾಮ ಪಂಚಾಯಿತಿಗಳ ಪೈಕಿ 231 ಮಳೆ ಮಾಪಕ ಮಾತ್ರ ಕಾರ್ಯನಿರ್ವಹಣೆ
ಬಿಜೆಪಿ ಸತ್ಯಶೋಧನ ಸಮಿತಿ ಜಿಲ್ಲೆಯ ಒಂಬತ್ತು ತಾಲೂಕುಗಳಲ್ಲಿ ನಡೆಸಿದ ಅಧ್ಯಯನದಲ್ಲಿ ಹಲವು ಕಡೆ ಮಳೆ ಮಾಪಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಬಳಿಕ ಕೆಲವು ಮಳೆ ಮಾಪಕಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ 274 ಗ್ರಾಮ ಪಂಚಾಯಿತಿಗಳಲ್ಲಿ ಮಳೆ ಮಾಪಕಗಳನ್ನು ಅಳವಡಿಸಲಾಗಿದ್ದು, 231 ಮಾತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. 20 ಹೋಬಳಿ ಮಟ್ಟದಲ್ಲಿ ಉಷ್ಣಾಂಶ ಮಾಪಕಗಳಿವೆ. ಮಳೆ ಹಾಗೂ ಉಷ್ಣಾಂಶದ ದಾಖಲೆಗಳ ಆಧಾರದಲ್ಲಿ ಟರ್ಮ್‌ಶೀಟ್ ಪ್ರಕಾರ ವಿಮಾ ಪರಿಹಾರ ನಿರ್ಧರಿಸಲಾಗುತ್ತದೆ ಎಂದು ವಿವರಿಸಿದರು.
‘ಗ್ರಾಮಕ್ಕೊಂದು ಮಾನದಂಡ ಸಲ್ಲ’
ತಾಲೂಕಿನ ಎಲ್ಲ ಗ್ರಾಮಗಳ ರೈತರಿಗೆ ಒಂದೇ ಮಾನದಂಡದಲ್ಲಿ ವಿಮಾ ಪರಿಹಾರ ನೀಡಬೇಕು. ಒಂದು ಗ್ರಾಮಕ್ಕೆ ಗರಿಷ್ಠ ಪರಿಹಾರ ನೀಡಲು ಅನ್ವಯಿಸುವ ಮಾನದಂಡವಿದ್ದರೆ, ಅದೇ ಮಾನದಂಡವನ್ನು ಇತರ ಗ್ರಾಮಗಳಿಗೂ ಅನ್ವಯಿಸಬೇಕು. ಪಂಚಾಯಿತಿ, ಹೋಬಳಿ ಹಾಗೂ ಗ್ರಾಮವಾರು ಪ್ರತ್ಯೇಕ ಮಾನದಂಡಗಳಿಂದ ಪರಿಹಾರ ನೀಡಿದರೆ ರೈತರು ಬೆಳೆ ವಿಮಾ ಯೋಜನೆಯ ಮೇಲಿನ ವಿಶ್ವಾಸ ಕಳೆದುಕೊಳ್ಳಲಿದ್ದಾರೆ ಎಂದು ಮಠಂದೂರು ಹೇಳಿದರು.
2025-26ನೇ ಸಾಲಿನಲ್ಲಿ ರೈತರು ಶೇ.5, ರಾಜ್ಯ ಸರಕಾರ ಶೇ.20 ಹಾಗೂ ಕೇಂದ್ರ ಸರಕಾರ ಶೇ.10ರಷ್ಟು ಪಾಲನ್ನು ಪಾವತಿಸಿವೆ. ಜಿಲ್ಲೆಯ ರೈತರಿಂದ ₹42.03 ಕೋಟಿ, ಕೇಂದ್ರದಿಂದ ₹84.07 ಕೋಟಿ ಹಾಗೂ ರಾಜ್ಯದಿಂದ ₹168.14 ಕೋಟಿ ಸೇರಿದಂತೆ ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಯಾಗಿದೆ ಎಂದರು.
ರೈತರು ಪ್ರತಿ ಹೆಕ್ಟೇರ್ ಅಡಿಕೆಗೆ ₹6,475 ಹಾಗೂ ಕಾಳುಮೆಣಸಿಗೆ ₹2,377ರಂತೆ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಬಜತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ₹45 ಸಾವಿರ ವಿಮಾ ಮೊತ್ತ ಪಾವತಿಸಿದ್ದರೂ ಕೆಲ ರೈತರಿಗೆ ಪ್ರತಿ ಹೆಕ್ಟೇರ್‌ಗೆ ಕನಿಷ್ಠ ₹10,800 ಮಾತ್ರ ಪರಿಹಾರ ದೊರೆತಿದೆ. ಅದೇ ಪ್ರದೇಶದ ಕೆಲವು ರೈತರ ಖಾತೆಗೆ ₹51,824 ಪರಿಹಾರ ಜಮೆಯಾಗಿರುವುದಾಗಿ ಅವರು ತಿಳಿಸಿದರು.
‘ರಾಜ್ಯ ಸರಕಾರ ರೈತ ವಿರೋಧಿ’
ಅಡಿಕೆ ಬೆಳೆಗಾರರು ವಿಮಾ ಮೊತ್ತ ಪಾವತಿಸಿದರೂ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ಮತ್ತೊಂದೆಡೆ ಅಡಿಕೆ ಧಾರಣೆಯಲ್ಲೂ ಕುಸಿತವಾಗಿದೆ. ಹಿಂದಿನ ಅವಧಿಯಲ್ಲಿ ರೈತರಿಗೆ ದೊರೆಯುತ್ತಿದ್ದ ಕಿಸಾನ್ ಸನ್ಮಾನ್ ಹಾಗೂ ವಿದ್ಯಾನಿಧಿ ಯೋಜನೆಗಳನ್ನು ಈಗಿನ ಸರಕಾರ ಸ್ಥಗಿತಗೊಳಿಸಿದೆ. ರೈತರಿಗೆ ಒಂದಲ್ಲೊಂದು ರೀತಿಯಲ್ಲಿ ತೊಂದರೆ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಠಂದೂರು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ಹಾಗೂ ರೈತ ಮೋರ್ಚಾ ಅಧ್ಯಕ್ಷ ಶರತ್ನಂದ ಬೈಪಾಡಿತ್ತಾಯ ಉಪಸ್ಥಿತರಿದ್ದರು.
ಅಂತರ ರಾಜ್ಯ
DK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.
ನವದೆಹಲಿ: ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ”ನನ್ನ ಬಳಿ “ಸ್ಟಿಂಗ್ ಆಪರೇಷನ್” ಬಗ್ಗೆ ಎಲ್ಲ ಮಾಹಿತಿ ಇದೆ. ನಾನು ಸಿಎಂ ಆದ ಬಳಿಕ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ ನೀಡುತ್ತೇನೆ, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ಗೊತ್ತಿದೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ.ನಾನು ಜವಾಬ್ದಾರಿಯುತ ಸ್ಥಾನದಲ್ಲಿರುವುದರಿಂದ ಸುಮ್ಮನೆ ಮಾತನಾಡುವುದಿಲ್ಲ. ಎಲ್ಲ ಸಾಕ್ಷ್ಯಾಧಾರಗಳು ಇವೆ” ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಫಾರ್ಮ್-7 ಮುದ್ರಣ
ಬಿಜೆಪಿ ಕಾರ್ಯಕರ್ತರು ಅಲ್ಪಸಂಖ್ಯಾಕರ ಮತಗಳನ್ನು ದೊಡ್ಡ ಪ್ರಮಾಣದಲ್ಲಿ ಅಳಿಸಲು, ಮತದಾರರ ವಿವರಗಳನ್ನು ಮೊದಲೇ ಭರ್ತಿ ಮಾಡಲಾಗಿರುವ ಫಾರ್ಮ್-7ಗಳನ್ನು ಮುದ್ರಿಸಿ ಬಳಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು.
ಮತದಾರರ ವಿವರಗಳನ್ನು ಮೊದಲೇ ನಮೂದಿಸಿರುವ ಫಾರ್ಮ್-7ಗಳನ್ನು ಪ್ರದರ್ಶಿಸಿದ ಅವರು, ಈ ಫಾರ್ಮ್‌ಗಳನ್ನು ಬಿಜೆಪಿಯವರು ಮತದಾರರ ಹೆಸರುಗಳನ್ನು ಅಳಿಸಲು ಬಳಸಿದ್ದಾರೆ ಎಂದು ಆರೋಪಿಸಿದರು.
‘ಫಾರ್ಮ್-7 ದುರ್ಬಳಕೆಯನ್ನು ತಡೆಯಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಯಾವುದೇ ಕ್ರಮ ಕೈಗೊಂಡಿಲ್ಲ. ಇಡೀ ಜಗತ್ತು ಈ ಬೆಳವಣಿಗೆಯನ್ನು ಗಮನಿಸುತ್ತಿದೆ’ ಎಂದು ಶಿವಕುಮಾರ್ ಹೇಳಿದರು.
ಜಿಎಸ್‌ಟಿ ಮಂಡಳಿ ಸಭೆಗೆ ದೆಹಲಿಗೆ
ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿರುವುದಾಗಿ ತಿಳಿಸಿದ ಶಿವಕುಮಾರ್, ‘ಇಂದು ಕೆಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ’ ಎಂದರು.
ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡುತ್ತಿದ್ದಾರೆ
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ದೇಶಾದ್ಯಂತ ನಡೆದಿರುವ ಬೆಳವಣಿಗೆಗಳು ಈಗಾಗಲೇ ಬಹಿರಂಗಗೊಂಡಿವೆ. ಚುನಾವಣಾ ಆಯೋಗದ ಸದಸ್ಯರೂ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ನ್ಯಾಯಾಲಯಗಳೂ ಇದನ್ನು ಗಮನಕ್ಕೆ ತೆಗೆದುಕೊಂಡಿವೆ. ಸೂಕ್ತ ನಿರ್ದೇಶನ ನೀಡಿದ ನ್ಯಾಯಾಲಯಗಳಿಗೆ ನಾನು ಕೃತಜ್ಞನಾಗಿದ್ದೇನೆ’ ಎಂದರು.
‘ನನ್ನ ರಾಜ್ಯದಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಲಾಗುತ್ತಿದೆ. ಫಾರ್ಮ್-7 ಅರ್ಜಿಗಳನ್ನು ಬಿಜೆಪಿ ಕೇಂದ್ರ ಕಚೇರಿಯಲ್ಲೇ ಮುದ್ರಿಸಲಾಗಿದೆ ಎಂಬ ಆರೋಪವಿದೆ. ನಾವು ದೂರು ಸಲ್ಲಿಸಿದ ಬಳಿಕ ಅವರು ಕೂಡಲೇ ಹಲವು ಬಿಎಲ್‌ಒಗಳನ್ನು ಸಂಪರ್ಕಿಸಿ, ಆ ಫಾರ್ಮ್‌ಗಳನ್ನು ವಾಪಸ್ ಪಡೆದಿದ್ದಾರೆ. ಇದು ಅಪರಾಧವಲ್ಲವೇ? ತಡೆಯುವ ಮುನ್ನವೇ ಮತದಾರರ ಹೆಸರುಗಳನ್ನು ಅಳಿಸುವ ಪ್ರಯತ್ನ ನಡೆದಿತ್ತು’ ಎಂದು ಸಿಎಂ ಪ್ರಶ್ನಿಸಿದರು.
ಸ್ಟಿಂಗ್ ಆಪರೇಷನ್
ಡಿ.ಕೆ.ಶಿವಕುಮಾರ್ ಅವರೇ ಸಚಿವ ಸಂಪುಟ ಸಭೆಯಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಈ ಎಚ್ಚರಿಕೆ ನೀಡಿರುವುದು ಈಗ ತೀವ್ರ ಚರ್ಚೆಗೆ ಕಾರಣವಾಗಿದ್ದು, ವಿಪಕ್ಷಗಳಿಂದ ಕೆಲ ಸಚಿವರು ‘ಟಾರ್ಗೆಟ್’ ಆಗಿದ್ದು, ರಹಸ್ಯ ಕಾರ್ಯಾಚರಣೆ ನಡೆಸಲು ತಂಡಗಳನ್ನೇ ರಚನೆ ಮಾಡಲಾಗಿದೆ ಎಂಬುದಾಗಿ ಹೇಳಿದ್ದಾರೆನ್ನಲಾಗಿದೆ. ಈ ಬೆಳವಣಿಗೆ ಬಗ್ಗೆ ವಿಪಕ್ಷಗಳು ಖಾರವಾದ ಪ್ರತಿಕ್ರಿಯೆಯನ್ನೂ ನೀಡಿವೆ.
ಅಂತರ ರಾಜ್ಯ
Rahul Gandhi-‘45 FIR ನನಗೆ ಪದಕವಿದ್ದಂತೆ, 100 FIR ನನ್ನ ಗುರಿ’-ರಾಹುಲ್ ಗಾಂಧಿ
ತಮ್ಮ ವಿರುದ್ಧ ದಾಖಲಾಗಿರುವ 45 ಎಫ್‌ಐಆರ್‌ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್‌ಐಆರ್ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗುವುದು ತಮ್ಮ ಗುರಿ ಎಂದೂ ಅವರು ಹೇಳಿದ್ದಾರೆ.
ಹೊಸದಿಲ್ಲಿ, ಅ.7: ತಮ್ಮ ವಿರುದ್ಧ ದಾಖಲಾಗಿರುವ 45 ಎಫ್‌ಐಆರ್‌ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್‌ಐಆರ್ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗುವುದು ತಮ್ಮ ಗುರಿ ಎಂದೂ ಅವರು ಹೇಳಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧವೂ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದರು. ಅವರ ಕಾರ್ಯವೈಖರಿ ಹಾಗೂ ಅಧೀನ ಅಧಿಕಾರಿಗಳೊಂದಿಗಿನ ಭಿನ್ನಮತದ ಕುರಿತು ಪ್ರತಿಪಕ್ಷಗಳು ಪ್ರಶ್ನೆಗಳನ್ನು ಎತ್ತುತ್ತಿರುವ ಹಿನ್ನೆಲೆಯಲ್ಲಿ ರಾಹುಲ್, ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ದೆಹಲಿಯ ಜಂತರ್ ಮಂತರ್‌ನಲ್ಲಿ ದಿಢೀರ್ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ ಅವರು, ಜ್ಞಾನೇಶ್ ಕುಮಾರ್ ಅವರನ್ನು ‘ಅಕ್ರಮ ಚುನಾವಣಾ ಆಯೋಗದ ಮುಖ್ಯಸ್ಥ’ ಎಂದು ಆರೋಪಿಸಿದರು.
“ನಾವು ಜಂತರ್ ಮಂತರ್‌ಗೆ ತೆರಳಿ ಒಟ್ಟಾಗಿ ಕುಳಿತು, ಕುಮಾರ್ ಈ ದೇಶದ ಕಾನೂನುಬದ್ಧ ಚುನಾವಣಾ ಆಯುಕ್ತರಲ್ಲ ಎಂಬುದನ್ನು ದೇಶಕ್ಕೆ ತಿಳಿಸುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧವೂ ಅವರು ಆರೋಪಗಳನ್ನು ಮಾಡಿದರು. ಈ ಮೂವರು ಜ್ಞಾನೇಶ್ ಕುಮಾರ್ ಅವರೊಂದಿಗೆ ಸೇರಿ ದೇಶದ ಪ್ರಜಾಪ್ರಭುತ್ವವನ್ನು ನಾಶಗೊಳಿಸಿದ್ದಾರೆ ಎಂದು ರಾಹುಲ್ ಗಾಂಧಿ ದೂರಿದರು.
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳ ಕುರಿತು ಮಾತನಾಡಿದ ಅವರು, “ನನ್ನ ವಿರುದ್ಧ 45 ಎಫ್‌ಐಆರ್‌ಗಳಿವೆ. 100 ಎಫ್‌ಐಆರ್‌ಗಳನ್ನು ಹೊಂದುವುದು ನನ್ನ ಗುರಿ. ಪ್ರತಿಯೊಂದು ಎಫ್‌ಐಆರ್ ನನಗೆ ಪದಕವಿದ್ದಂತೆ” ಎಂದು ಹೇಳಿದರು.
ಇದೇ ವೇಳೆ, ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಪಕ್ಷಗಳ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಮಂಗಳವಾರ ಪ್ರತಿಪಕ್ಷಗಳ ನಾಯಕರು ದಿನವಿಡೀ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದರು. ಚುನಾವಣಾ ಆಯುಕ್ತರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ತಿಳಿಸಿದೆ.
ಮತ್ತೊಂದೆಡೆ, ‘ಮತ ಕಳವು’ ಆರೋಪಕ್ಕೆ ಸಂಬಂಧಿಸಿ ದೆಹಲಿ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಪ್ರತಿಭಟನಾ ಜಾಥಾ ನಡೆಸಲು ಮುಂದಾದ ಆಮ್ ಆದ್ಮಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್‌ಗಳ ಮೂಲಕ ತಡೆದರು.
-
ಸ್ಥಳೀಯ7 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್7 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಂತರ ರಾಜ್ಯ24 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಪರಾಧ7 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಸಿನೆಮಾ5 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಅಪರಾಧ5 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಬಿಗ್ ನ್ಯೂಸ್5 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
-
ಮಂಗಳೂರು23 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















