ಕ್ರೈಂ
BJP Ticket Deal: ಹಿಂದೂತ್ವದ ಪ್ರಖರ ವಾಗ್ಮಿ ಚೈತ್ರಾ 84 ದಿನಗಳ ಬಳಿಕ ಜೈಲಿನಿಂದ ಬಿಡುಗಡೆ – ಜಾಮೀನು ಮಂಜೂರು
chaitra Got Bail ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ (BJP Ticket Deal) ಹೋಟೆಲ್ ಉದ್ಯಮಿ ಗೋವಿಂದಬಾಬು ಪೂಜಾರಿಗೆ (Govinda Babu poojary) ಕೋಟ್ಯಾಂತರ ರೂಪಾಯಿ ವಂಚಿಸಿ ಬಂಧನಕ್ಕೀಡಾಗಿದ್ದ ಹಿಂದೂತ್ವದ ಪ್ರಖರ ವಾಗ್ಮಿ ಚೈತ್ರಾ (Infamous Hindutva Orator) ಸಹಿತ ಇಬ್ಬರಿಗೆ ಕೊನೆಗೂ ಜಾಮೀನು (chaitra Got Bail) ಮಂಜೂರಾಗಿದೆ. ಇಬ್ಬರಿಗೂ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸರಿ ಸುಮಾರಿ 82 ದಿನಗಳ ಕಾಲ ಜೈಲು ವಾಸ ಅನುಭವಿಸಿದ ಚೈತ್ರಾ (chaitra) ಕೊನೆಗೂ ಡಿ 5 ರಂದು ಬಿಡುಗಡೆಯಾಗಲಿದ್ದಾರೆ
ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಈ ಪ್ರಕರಣದಲ್ಲಿ ಚೈತ್ರಾ ಪ್ರಥಮ ಆರೋಪಿಯಾಗಿದ್ದಾರೆ, ಹಾಲಶ್ರೀ ಸ್ವಾಮೀಜಿ ಮೂರನೇ ಆರೋಪಿಯಾಗಿದ್ದರು . ಹಾಲಶ್ರೀಗೆ ಕೆಲ ದಿನಗಳ ಹಿಂದೆಯೇ ಜಾಮೀನು ದೊರಕಿತ್ತು.
ಚೈತ್ರಾ ಹಾಗೂ ಸಹಚರರು ಒಟ್ಟು 5 ಕೋಟಿ ರೂಪಾಯಿಯಷ್ಟು ಹಣ ಪಡೆದು ಬಳಿಕ ವಂಚಿಸಿದ್ದರು ಎಂದು ಗೋವಿಂದ ಬಾಬು ಆರೋಪಿಸಿದ್ದರು. ಸೆ.8ರಂದು ಬಂಡೇಪಾಳ್ಯ ಠಾಣೆಯಲ್ಲಿ ಚೈತ್ರಾ ಮತ್ತು ಇತರೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಆಗಿತ್ತು. ಬಳಿಕ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಸೆ 12 ರಂದು ರಾತ್ರಿ ಚೈತ್ರಾ, ಗಗನ್ ಕಡೂರು ಬಂದಿಸಿದ್ದರು.
ಪ್ರಕರಣ ಬೆಳಕಿಗೆ ಬರುತ್ತಲೇ ತಲೆ ಮರೆಸಿಕೊಂಡಿದ್ದ ಹೊಸಪೇಟೆಯ ಸ್ವಾಮೀಜಿ ಹಾಲಶ್ರೀ ಸ್ವಾಮೀಜಿಯನ್ನು ವಾರಗಳ ಹುಡುಕಾಟದ ಬಳಿಕ ಒಡಿಸ್ಸಾದಲ್ಲಿ ಬಂಧಿಸಲಾಗಿತ್ತು. ಏತನ್ಮಧ್ಯೆ ಉಳಿದ ಆರೋಪಿಗಳಾದ ಚೈತ್ರಾ ಬರೆದ ಸ್ಕ್ರಿಪ್ಟ್ ನ ಪಾತ್ರದಾರಿಗಳಾದ ಚನ್ನನಾಯ್ಕ, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಸೇರಿ ಓಟ್ಟು 9 ಮಂದಿಯನ್ನು ಈ ಪ್ರಕರಣದಡಿ ಬಂಧಿಸಲಾಗಿತ್ತು.
ಆರೋಪಿಗಳು ಅಕ್ರಮ ಹಣದಿಂದ ಸಂಪಾದಿಸಿದ್ದ ಲಕ್ಷಾಂತರ ರೂ. ನಗದು ಹಾಗೂ ಕೆಲ ಆಸ್ತಿಗಳ ಪತ್ರಗಳು ಸೇರಿ 4 ಕೋಟಿ ರೂ. ಅಧಿಕ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಚೈತ್ರಾ ಬಳಿ 81 ಲಕ್ಷ ರೂ. ನಗದು ಹಾಗೂ 23 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಸಹಕಾರಿ ಬ್ಯಾಂಕ್ನಲ್ಲಿ 1.08 ಕೋಟಿ ಮೌಲ್ಯದ ಭದ್ರತಾ ಠೇವಣಿ. ಇದರ ಜತೆಗೆ 12 ಲಕ್ಷ ರೂ. ಮೌಲ್ಯದ ಕಿಯಾ ಕಾರನ್ನು ವಶಪಡಿಸಿಕೊಂಡಿದ್ದರು.
ಇನ್ನು ಚೈತ್ರಾ ಸಹಚರರಾದ ಗಗನ್ ಕಡೂರ್, ಧನರಾಜ್ ರಮೇಶ್ ರಿಂದ 26 ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಅಭಿನವ ಹಾಲಾಶ್ರೀ ಬಳಿ 56 ಲಕ್ಷ ರೂ. ನಗದು, 25 ಲಕ್ಷ ರೂ. ಮೌಲ್ಯದ ಕಾರು ಜಪ್ತಿ ಮಾಡಲಾಗಿತ್ತು. ಅಲ್ಲದೆ, ತನಿಖೆ ಪೂರ್ಣಗೊಳಿಸಿ ಇತ್ತೀಚೆಗಷ್ಟೇ 9 ಮಂದಿ ಆರೋಪಿಗಳ ವಿರುದ್ಧ ಕೋರ್ಟ್ಗೆ ಸಿಸಿಬಿ ಆರೋಪಪಟ್ಟಿ ಕೂಡ ಸಲ್ಲಿಸಿತ್ತು.
ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಹಾಗೂ 7ನೇ ಆರೋಪಿ ಶ್ರೀಕಾಂತ್ಗೆ 3ನೇ ಎಸಿಎಂಎಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಮಂಗಳವಾರ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ.
ಸ್ಥಳೀಯ
Arrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
ಸುಮಾರು 1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯಲ್ಲಿ ನಡೆದಿದೆ. ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರಿಗೆ ಹೇಳಿಕೆ ನೀಡಿದ್ದ ಆಕೆಯ ಪ್ರಿಯಕರನನ್ನು ಅನುಮಾನಗಳ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಾಪುರ: ಸುಮಾರು 1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯಲ್ಲಿ ನಡೆದಿದೆ. ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರಿಗೆ ಹೇಳಿಕೆ ನೀಡಿದ್ದ ಆಕೆಯ ಪ್ರಿಯಕರನನ್ನು ಅನುಮಾನಗಳ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವತಿಯನ್ನು 23 ವರ್ಷದ ತರ್ರನ್ನುಮ್ ನಾಯ್ಕ ಎಂದು ಗುರುತಿಸಲಾಗಿದೆ. ಗರ್ಗೋತಿಯಲ್ಲಿ ಇಂಜಿನಿಯರಿಂಗ್ ಪದವಿಯ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕೆ, ಭುದರ್‌ಗಢ ತಾಲೂಕಿನ ನಾಯಕ್ವಾಡಿ ಜಲಪಾತದ ಕೆಳಭಾಗದಲ್ಲಿರುವ ಕಣಿವೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು.
ಯುವತಿಯ ಸಾವಿನ ಕುರಿತು ಪ್ರಿಯಕರ ಶ್ರೀಪಾದ್ ವದರ್ (25) ನೀಡಿದ ಹೇಳಿಕೆಗಳಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಭಾನುವಾರ ಬಂಧಿಸಿದ್ದಾರೆ.
ಬೇರೊಬ್ಬ ಯುವಕನೊಂದಿಗೆ ಮದುವೆ ನಿಗದಿಯಾಗಿತ್ತು
ತರ್ರನ್ನುಮ್‌ಳ ಕುಟುಂಬದವರು ಆಕೆಯನ್ನು ಬೇರೊಬ್ಬ ಯುವಕನೊಂದಿಗೆ ವಿವಾಹ ಮಾಡಲು ನಿರ್ಧರಿಸಿದ್ದರು ಎನ್ನಲಾಗಿದೆ. ನವೆಂಬರ್ 12ರಂದು ಆಕೆಯ ಮದುವೆ ನಿಗದಿಯಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಆಕೆಯ ಸಹೋದರನೊಂದಿಗೆ ಕೆಲಸ ಮಾಡುತ್ತಿದ್ದ ಗುತ್ತಿಗೆದಾರ ಶ್ರೀಪಾದ್ ವದರ್‌ನನ್ನು ಪೊಲೀಸರು ವಿಚಾರಣೆ ನಡೆಸಿದಾಗ, ತಾನು ಮತ್ತು ತರ್ರನ್ನುಮ್ ಸುಮಾರು ಐದೂವರೆ ವರ್ಷಗಳಿಂದ ಪ್ರೀತಿಸುತ್ತಿದ್ದುದಾಗಿ ಹೇಳಿದ್ದಾನೆ. ಕುಟುಂಬದವರು ಆಕೆಯ ಮದುವೆಯನ್ನು ಬೇರೊಬ್ಬ ಯುವಕನೊಂದಿಗೆ ನಿಶ್ಚಯಿಸಿದ್ದರಿಂದ ಇಬ್ಬರೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆವು ಎಂದು ತಿಳಿಸಿದ್ದಾನೆ.
ಶನಿವಾರ ಬೆಳಗ್ಗೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದ ಶ್ರೀಪಾದ್, ತರ್ರನ್ನುಮ್ ಪ್ರಪಾತಕ್ಕೆ ಬಿದ್ದು ಮೃತಪಟ್ಟಿದ್ದಾಳೆ ಎಂದು ಮಾಹಿತಿ ನೀಡಿದ್ದ. ಆಕೆ ಪ್ರಪಾತಕ್ಕೆ ಹಾರಿದರೂ, ಕೊನೆಯ ಕ್ಷಣದಲ್ಲಿ ತನಗೆ ಭಯವಾಗಿ ತಾನು ಹಾರಲಿಲ್ಲ ಎಂದು ಪೊಲೀಸರಿಗೆ ಹೇಳಿದ್ದ ಎನ್ನಲಾಗಿದೆ.
ಮೊಬೈಲ್ ಸಂದೇಶಗಳಿಂದ ಬಯಲಾದ ಅನುಮಾನ
ಆರಂಭದಲ್ಲಿ ಆತನ ಹೇಳಿಕೆಯ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 140(3) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಜೋಡಿಯ ನಡುವಿನ ಸಂಬಂಧ ಹಾಗೂ ಮೊಬೈಲ್ ಸಂಭಾಷಣೆಗಳನ್ನು ಪರಿಶೀಲಿಸಿದಾಗ ಶ್ರೀಪಾದ್ ನೀಡಿದ್ದ ಆತ್ಮಹತ್ಯೆಯ ಕಥೆಯ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಗಧಿಂಗ್ಲಾಜ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ವಿವೇಕ್ ಪಾಟೀಲ್, ಮೊಬೈಲ್ ಸಂಭಾಷಣೆಗಳು ಆರೋಪಿಯ ಆತ್ಮಹತ್ಯೆಯ ಹೇಳಿಕೆಯನ್ನು ಸಮರ್ಥಿಸಲಿಲ್ಲ ಎಂದು ತಿಳಿಸಿದ್ದಾರೆ. ತರ್ರನ್ನುಮ್‌ಳನ್ನು ಬೇರೊಬ್ಬನೊಂದಿಗೆ ವಿವಾಹ ಮಾಡಿಸುವ ಕುಟುಂಬದ ನಿರ್ಧಾರದ ಬಗ್ಗೆ ಶ್ರೀಪಾದ್ ಅಸಮಾಧಾನಗೊಂಡಿದ್ದುದನ್ನು ಆತನ ಸಂದೇಶಗಳು ಸೂಚಿಸಿದ್ದವು. ಈ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103ರ ಅಡಿಯಲ್ಲಿ ಹತ್ಯೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಮರಣೋತ್ತರ ಪರೀಕ್ಷಾ ವರದಿಗಾಗಿ ಕಾಯುತ್ತಿರುವ ಪೊಲೀಸರು
ತರ್ರನ್ನುಮ್ ತಾನಾಗಿಯೇ ಪ್ರಪಾತಕ್ಕೆ ಹಾರಿದ್ದಳೇ ಅಥವಾ ಯಾರಾದರೂ ಆಕೆಯನ್ನು ಕೆಳಕ್ಕೆ ತಳ್ಳಿದ್ದರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.
ಭಾನುವಾರ ಸ್ಥಳೀಯ ನ್ಯಾಯಾಲಯವು ಶ್ರೀಪಾದ್ ವದರ್‌ನನ್ನು ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ. ಹೆಚ್ಚಿನ ತನಿಖೆಗಾಗಿ ಇಬ್ಬರ ಮೊಬೈಲ್ ಫೋನ್‌ಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಯುವತಿಯ ಸಾವಿನ ನಿಖರ ಕಾರಣ ಹಾಗೂ ಘಟನೆಯ ಸಂಪೂರ್ಣ ವಿವರಗಳು ತನಿಖೆಯ ಬಳಿಕವಷ್ಟೇ ಸ್ಪಷ್ಟವಾಗಬೇಕಿದೆ.
ಮಂಗಳೂರು
Mangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉರುಂದಾಡಿಗುಡ್ಡೆಯಲ್ಲಿ ಮಹಿಳೆಯೊಬ್ಬರನ್ನು ಆಕೆಯ ಪತಿಯೇ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಪತ್ನಿಗೆ ಪರಪುರುಷನೊಂದಿಗೆ ಸಂಬಂಧವಿದೆ ಎಂಬ ಸಂಶಯವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉರುಂದಾಡಿಗುಡ್ಡೆಯಲ್ಲಿ ಮಹಿಳೆಯೊಬ್ಬರನ್ನು ಆಕೆಯ ಪತಿಯೇ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಪತ್ನಿಗೆ ಪರಪುರುಷನೊಂದಿಗೆ ಸಂಬಂಧವಿದೆ ಎಂಬ ಸಂಶಯವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯಾದ ಮಹಿಳೆಯನ್ನು ವಿಜಯಪುರ ಜಿಲ್ಲೆಯ ಸೊನಾಲಿ (30) ಎಂದು ಗುರುತಿಸಲಾಗಿದೆ. ಆಕೆಯ ಪತಿ ಶಿವಲಿಂಗಪ್ಪ ಮಾದರ (40) ಕೊಲೆ ಆರೋಪಿಯಾಗಿದ್ದಾನೆ.
ದಂಪತಿ ಕಾವೂರು ಉರುಂದಾಡಿಗುಡ್ಡೆಯ ಹರೀಶ್ ಕುಮಾರ್ ಎಂಬವರ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸೊನಾಲಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಸಂಬಂಧವಿದೆ ಎಂಬ ಅನುಮಾನ ಶಿವಲಿಂಗಪ್ಪನಿಗೆ ಇತ್ತು ಎನ್ನಲಾಗಿದೆ. ಈ ವಿಚಾರವಾಗಿ ದಂಪತಿ ನಡುವೆ ಹಲವು ಬಾರಿ ಜಗಳ ನಡೆದಿತ್ತು. ಭಾನುವಾರ ರಾತ್ರಿ ಕೂಡ ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಆಕ್ರೋಶಗೊಂಡ ಶಿವಲಿಂಗಪ್ಪ ಮನೆಯಲ್ಲಿದ್ದ ಚಾಕುವಿನಿಂದ ಪತ್ನಿಗೆ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯ
Kalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ.
ಆಕೆಯ ಪತಿ ಸೂರ್ಯಕಾಂತ್ ಹಡಪದ್ ಕೊಲೆ ಆರೋಪಿಯಾಗಿದ್ದು, ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಮಕ್ಕಳಾಗದಿರುವ ವಿಚಾರ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸಂಬಂಧಿಸಿ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಬಳಿಕ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
-
ನಿಧನ ವಾರ್ತೆ11 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ಸ್ಥಳೀಯ10 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು9 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ನಿಧನ ವಾರ್ತೆ6 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಸ್ಥಳೀಯ11 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
ಬಿಗ್ ನ್ಯೂಸ್6 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ರಾಜಕೀಯ10 hours agoSudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್
-
ಶಿಕ್ಷಣ5 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ


















