ರಾಜಕೀಯ
Local Body Election ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆಗೆ ದಿನಾಂಕ ಘೋಷಣೆ : ಪುತ್ತೂರು ನಗರ ಸಭೆಯಲ್ಲು 2 ಸ್ಥಾನಗಳಿಗೆ ನಡೆಯಲಿದೆ ಎಲೆಕ್ಷನ್- ಮತ್ತೊಮ್ಮೆ ರಾಜ್ಯದ ಗಮನ ಸೆಳೆಯಲಿದೆಯೇ ಈ ಚುನಾವಣೆ..?
ಪುತ್ತೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ತೆರವಾದ ಸ್ಥಾನಗಳಿಗೆ ಉಪ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ. ಡಿ 27 ರಂದು ಮತದಾನ ನಡೆಯಲಿದ್ದು, ಡಿ 8 ರಂದು ಆಯೋಗವು ಅಧಿಸೂಚನೆ ಹೊರಡಿಸಲಿದೆ. ಪುತ್ತೂರು ನಗರ ಸಭೆಯಲ್ಲಿ ಇಬ್ಬರು ಹಾಲಿ ಸದಸ್ಯರ ಆಕಾಲಿಕ ನಿಧನದಿಂದ ಎರಡು ಸ್ಥಾನ ಖಾಲಿಯಿದ್ದು, ಅದಕ್ಕೂ ಅದೇ ದಿನ ಚುನಾವಣೆ ನಡೆಯಲಿದೆ.
ಪುತ್ತೂರು ನಗರಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಸದಸ್ಯ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಸದಸ್ಯ ಶಕ್ತಿ ಸಿನ್ಹಾರವರ ಮೃತಪಟ್ಟ ಹಿನ್ನಲೆಯಲ್ಲಿ ಈ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಪ್ರಮುಖ ದಿನಾಂಕಗಳು
ಡಿ.8 :ಅಧಿಸೂಚನೆ ಪ್ರಕಟ
ಡಿ.15: ನಾಮಪತ್ರ ಸಲ್ಲಿಸಲು ಅಂತಿಮ ದಿನ
ಡಿ.16: ನಾಮಪತ್ರ ಪರಿಶೀಲನೆ
ಡಿ.18: ನಾಮಪತ್ರ ಹಿಂಪಡೆಯಲು ಅಂತಿಮ ದಿನ
ಡಿ.27: ಮತದಾನ
ಡಿ.30: ಮತ ಎಣಿಕೆ
ಡಿ.8ರಂದು ಜಿಲ್ಲಾಧಿಕಾರಿಗಳು ಅದಿಸೂಚನೆ ಪ್ರಕಟಗೊಳಿಸಲಿದ್ದು ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ. ಡಿ.27ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ.
ಅವಶ್ಯವಿದ್ದರೆ ಡಿ.29ರಂದು ಮರುಮತದಾನ ನಡೆದು ಡಿ.30ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ನಗರಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8ರಿಂದ 30ರ ತನಕ ಜಾರಿಯಲ್ಲಿರಲಿದೆ.
ರಾಜ್ಯದ ಗಮನ ಸೆಳೆಯಲಿದೆಯಾ ಪುತ್ತೂರು ?
ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಸ್ಫರ್ಧೆಯಿಂದ ಪುತ್ತೂರು ಕ್ಷೇತ್ರ ರಾಜ್ಯದ ಗಮನ ಸೆಳೆದಿತ್ತು. ಇದರಿಂದ ಬಿಜೆಪಿ ಮತ ವಿಭಜನೆಗೊಂಡು ಇಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿತ್ತು. ಆದಾದ ಬಳಿ ನಡೆದ ಎರಡು ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ತ್ರಿಕೋನ ಸ್ಫರ್ಧೆ ಮುಂದುವರಿದಿತ್ತು. ಕಾಂಗ್ರೆಸ್ ಬಿಜೆಪಿ ಜತೆ ಪುತ್ತಿಲ ಪರಿವಾರ ಕೂಡ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಇದರಲ್ಲಿ ಕಾಂಗ್ರೆಸ್ ಹಾಗೂ ಪುತ್ತಿಲ ಪರಿವಾರ ತಲಾ 1 ಸ್ಥಾನ ಗೆದ್ದಿತ್ತು. ಎರಡು ಸ್ಥಾನಗಳಲ್ಲೂ ಬಿಜೆಪಿ 3 ನೇ ಸ್ಥಾನಕ್ಕೆ ಕುಸಿದಿತ್ತು.
ಬಿಜೆಪಿ ಹಾಗೂ ಪುತ್ತಿಲ ಪರಿವಾರದ ನಡುವಿನ ತಿಕ್ಕಾಟ 6 ತಿಂಗಳು ಕಳೆದರೂ ಮುಗಿದಿಲ್ಲ . ಇತ್ತಂಡಗಳ ನಡುವೆ ಹಲವು ಸುತ್ತಿನ ಮಾತುಕತೆ ಕಂಡರೂ ತಾರ್ಕಿಕ ಅಂತ್ಯ ಕಂಡಿಲ್ಲ. ಇನ್ನೂ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪುತ್ತಿಲ ಪರಿವಾರ ಪರ್ಯಾಯ ರಾಜಕೀಯ ಶಕ್ತಿಯಾಗುವತ್ತ ಮುನ್ನಡಿ ಇಟ್ಟಿದೆ . ಹೀಗಾಗಿ ಮುಂಬರುವ ನಗರ ಸಭೆ ಚುನಾವಣೆಯಲ್ಲೂ ಪುತ್ತಿಲ ಪರಿವಾರ ತನ್ನ ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ ದಟ್ಟವಾಗಿದೆ.
ಮಂಗಳೂರು
D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ರಾಜಕೀಯ
Siddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿರುವ ಅರ್ಜಿಯಲ್ಲಿ ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು ಸೇರಿದಂತೆ ಒಟ್ಟು 42 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ನಡೆಯುತ್ತಿರುವುದು ನಿಜ. ಆದರೆ ಇದನ್ನು ಮಾಡಿಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಹೇಳಿದ್ದರು.
ಇದೀಗ ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
‘ಸುಳ್ಳು ಪ್ರಚಾರ ತಡೆಯಲು ತಡೆಯಾಜ್ಞೆ ಕೋರುತ್ತಿದ್ದೇವೆ’: ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್ ಆಪರೇಷನ್ ಕುರಿತು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸೋಮವಾರ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ತಾವು ಭಾಗವಹಿಸಬೇಕಿತ್ತು, ಆದರೆ ಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಹಾಗೂ ಮುಂದಿನ ಆದೇಶದತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.
ಮಂಗಳೂರು
Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.
ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.
ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.
“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು
-
ದಕ್ಷಿಣ ಕನ್ನಡ15 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ13 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಕಾರ್ಯಕ್ರಮಗಳು7 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ಸುಳ್ಯ15 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized13 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ಬಿಗ್ ನ್ಯೂಸ್14 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
-
ನಿಧನ ವಾರ್ತೆ13 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಮಂಗಳೂರು14 hours agoD.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ


















