ಶಿಕ್ಷಣ
Ambika Vidyaalaya: ಯುವಕರು ಜಾಗೃತರಾದರೆ ಭಾರತವನ್ನು ತಡೆಯುವ ಮತ್ತೊಂದು ಶಕ್ತಿಯಿಲ್ಲ : ಸುಬ್ರಹ್ಮಣ್ಯ ನಟ್ಟೋಜ
ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ
ಪುತ್ತೂರು: ಸ್ವಾತಂತ್ರಾö್ಯನAತರದ ಏಳು ದಶಕಗಳ ಬಳಿಕವೂ ನಾವು ಬ್ರಿಟಿಷರ ಮಾನಸಿಕತೆಯಿಂದ ಹೊರಬಂದಿಲ್ಲ. ಅನೇಕರು ತಾವು ಭಾರತೀಯರು ಎಂಬ ಕಲ್ಪನೆಯನ್ನು ಬೆಳೆಸಿಕೊಳ್ಳುತ್ತಿಲ್ಲ. ಹಾಗಾಗಿಯೇ ಉತ್ಕೃಷ್ಟವಾದ ಭಾರತೀಯ ವಿಚಾರಧಾರೆಗಳು, ಪರಂಪರೆಗಳು ಕಣ್ಣ ಮುಂದಿದ್ದರೂ ವಿದೇಶೀ ವಿಚಾರಗಳೆಡೆಗೆ ಆಕರ್ಷಿತರಾಗುತ್ತಿದ್ದೇವೆ. ಯುವಮನಸ್ಸುಗಳಿಗೆ ಒಮ್ಮೆ ನಮ್ಮ ಪಾರಂಪರಿಕವಾದ ಸಂಗತಿಗಳ ಶ್ರೇಷ್ಟತೆ ಅರಿವಾದರೆ ಮತ್ತೆ ಭಾರತವನ್ನು ತಡೆಯುವ ಶಕ್ತಿ ಜಗತ್ತಿನಲ್ಲಿಲ್ಲ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಮಂಗಳವಾರ ವಿದ್ಯಾರ್ಥಿಗಳನ್ನುದ್ದೇಶಿಸಿ ‘ರಾಷ್ಟಿçÃಯ ಚಿಂತನೆಗಳು ಹಾಗೂ ಯುವಶಕ್ತಿ’ ವಿಚಾರವಾಗಿ ಮಾತನಾಡಿದರು.
ನಮ್ಮ ಋಷಿ ಮುನಿಗಳ ಕಾಲದಿಂದಲೂ ಸಾಧನೆಯೆಡೆಗಿನ ಹಾದಿಯ ಬಗೆಗೆ ಮಾರ್ಗದರ್ಶನಗಳು ನಿರಂತರವಾಗಿ ಒದಗಿ ಬಂದಿವೆ. ಭೋಗ ಸುಖಕ್ಕೆ ಆದ್ಯತೆ ನೀಡದೆ ಹಠ ಸಾಧನೆಗೆ ಮಹತ್ವ ನೀಡಲಾಗಿದೆ. ಮನುಷ್ಯನೊಳಗೆ ಒಮ್ಮೆ ಸಾಧಿಸುವ ಹಠ ಮೂಡಿದರೆ ಅದ್ಭುತವಾದದ್ದನ್ನು ಸಾಕಾರಗೊಳಿಸುವುದಕ್ಕೆ ಸಾಧ್ಯ. ನಮ್ಮ ದೇಹವನ್ನು ಸಾಧನಾಪಥಕ್ಕೆ ಹೇಗೆ ಒಗ್ಗಿಸಿಕೊಳ್ಳಬೇಕೆಂಬ ದಾರಿಯನ್ನು ನಮ್ಮ ಹಿರಿಯರೇ ಆಚರಿಸಿ ತೋರಿದ್ದಾರೆ. ಅವರ ಹಾದಿಯನ್ನು ಅನುಸರಿಸುವುದಷ್ಟೇ ನಮ್ಮ ಮುಂದಿರುವ ಜವಾಬ್ದಾರಿ ಎಂದರು.
ಯೋಗ – ಧ್ಯಾನಗಳಂತಹ ಮಹತ್ತರವಾದ ಕೊಡುಗೆಯನ್ನು ನಮ್ಮ ಪರಂಪರೆ ನಮಗೆ ನೀಡಿದೆ. ದಿನವೊಂದಕ್ಕೆ ಅದಕ್ಕಾಗಿ ಮೀಸಲಿಡುವ ಹತ್ತು – ಹದಿನೈದು ನಿಮಿಷಗಳು ನಮ್ಮನ್ನು ತೇಜಸ್ವೀ ಮನುಷ್ಯರನ್ನಾಗಿಸುತ್ತವೆ. ಹಿಂದೂ ಧರ್ಮ ನಮಗೆ ನೀಡಿರುವ ಮಹಾನ್ ವಿಚಾರಗಳನ್ನು ಬದುಕಿನಲ್ಲಿ ಅಳವಡಿಸುವ ಕಾರ್ಯ ಆಗಬೇಕಿದೆ. ಯಾರು ಧರ್ಮವನ್ನು ರಕ್ಷಿಸುತ್ತಾನೋ ಅಂಥಹವನನ್ನು ಧರ್ಮವೇ ರಕ್ಷಿಸುತ್ತದೆ ಎಂಬುದು ಬಾಯಿಮಾತಲ್ಲ. ಅದರ ಹಿಂದಿರುವ ಅರ್ಥಗಳನ್ನು ಗ್ರಹಿಸಿ ಕಾರ್ಯತತ್ಪರರಾಗಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಉಪನ್ಯಾಸಕರಾದ ಗಣೇಶ್ ಪ್ರಸಾದ್ ಎ, ಶಶಿಕಲಾ ವರ್ಕಾಡಿ, ಅನನ್ಯಾ ವಿ, ಜಯಂತಿ ಪಿ, ಸಂಧ್ಯಾ ಎಂ, ಗಿರೀಶ ಭಟ್ ಕುವೆತ್ತಂಡ, ಹರ್ಷಿತ್ ಪಿಂಡಿವನ, ವೀಣಾ ಶಾರದಾ, ಕಚೇರಿ ಉದ್ಯೋಗಿಗಳಾದ ಗಾಯತ್ರೀದೇವಿ ಹಾಗೂ ಪ್ರಮೋದ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಸ್ವಾಗತಿಸಿ, ಮನಃಶಾಸ್ತç ವಿಭಾಗದ ಮುಖ್ಯಸ್ಥ ಚಂದ್ರಕಾAತ ಗೋರೆ ವಂದಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ಸಭೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಹತ್ತನೆಯ ತರಗತಿಯ ವಿದ್ಯಾರ್ಥಿಯ ಪೋಷಕರದ ಪ್ರತಿಭಾರವರು ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಚೇತನ, ರವೀಂದ್ರ, ವಿದ್ಯಾ ಅವರುಗಳು ಆಯ್ಕೆಯಾದರು.
2025-2026 ನೇ ಸಾಲಿನ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ ಅವರು ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿ ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಭರವಸೆಯ ಮಾತುಗಳನ್ನಾಡಿದರು.
ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿಯ ಪ್ರತಿನಿಧಿಗಳು ಹಾಗೂ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
-
Uncategorized21 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್15 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು18 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ನಿಧನ ವಾರ್ತೆ19 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
Uncategorized19 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ20 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ18 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್19 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















